Connect with us

Uncategorized

ಪುತ್ತೂರು : ಗುಡ್ಡದಲ್ಲಿ ಮಹಿಳೆಯರಿಬ್ಬರ ಮೇಲೆ ಮಾರಣಾಂತಿಕ ಹಲ್ಲೆ – ಸಂಬಂದಿಕನಿಂದಲೇ ಕೃತ್ಯ ಶಂಕೆ

Published

on



Ad Widget

Ad Widget

Ad Widget

Ad Widget

ಪುತ್ತೂರು: ಮಹಿಳೆಯರಿಬ್ಬರಿಗೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ನೇರೋಳ್ತಡ್ಕ ಮೂಲೆತ್ತಂಡ ಎಂಬಲ್ಲಿ ಮಂಗಳವಾರ ಅಪರಾಹ್ನ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಪುತ್ತೂರಿನ ಖಾಸಗಿ ಆಸ್ಫತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

Ad Widget

Ad Widget

Ad Widget

Ad Widget

ಮೂಲೆತ್ತಂಡ ಎಂಬಲ್ಲಿನ ಮನೆಯ ಯಜಮಾನಿ ಸುರೇಖಾ ಹಾಗೂ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಗೋಳಿತ್ತೊಟ್ಟು ನಿವಾಸಿ ಗಿರಿಜಾ ಹಲ್ಲೆಗೊಳಗಾದವರು. ಸುರೇಖಾ ಅವರ ಸಂಬಂಧಿ ಸುಳ್ಯ ಮೂಲದ ವ್ಯಕ್ತಿ ಈ ಹಲ್ಲೆ ನಡೆಸಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸುತ್ತಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸುಲೇಖ ಅವರು ಮಗನ ಜೊತೆ ವಾಸವಿದ್ದಾರೆ. ಗಿರಿಜಾ ಅವರು ಸುರೇಖಾ ಅವರ ಮನೆಯಲ್ಲಿದ್ದುಕೊಂಡು ಕೆಲಸ ಮಾಡುತ್ತಿದ್ದರು. ಸುರೇಖಾ ಅವರ ಸಂಬಂಧಿಯೂ ಆಗಿರುವ ಹಲ್ಲೆ ಮಾಡಿದ ವ್ಯಕ್ತಿ ಕೆಲವು ಸಮಯಗಳಿಂದ ಅವರ ಜತೆಗೆ ಮನೆಯಲ್ಲಿದ್ದ ಎನ್ನಲಾಗಿದೆ. ಪ್ರಸ್ತುತ ಸುಲೇಖರವರು ಹೊಸ ಮನೆ ನಿರ್ಮಿಸುತ್ತಿದ್ದು, ಅದರ ಕೆಲಸ ಪ್ರಗತಿಯಲ್ಲಿದೆ.

Ad Widget

Ad Widget <> Ad Widget

ಸ್ಥಳೀಯ ಮೂಲಗಳ ಪ್ರಕಾರ, ಮನೆ ಸಮೀಪದ ಗುಡ್ಡೆಯಲ್ಲಿ ಕೆಲಸ ಮಾಡುತ್ತಿದ್ದ ಕೆಲಸದಾಕೆ ಗಿರಿಜಾ ಅವರಿಗೆ ದುಷ್ಕರ್ಮಿ ಹಲ್ಲೆ ನಡೆಸಿದ್ದಾನೆ. ಬಳಿಕ ಆತನೇ ಗಿರಿಜಾ ಅವರಿಗೆ ಅಪಾಯವಾಗಿದೆ ಎಂದು ಮನೆಯೊಡತಿ ಸುರೇಖಾ ಅವರನ್ನು ಗುಡ್ಡೆಗೆ ಕರೆದೊಯ್ದಿದ್ದಾನೆ. ನಂತರ ಅವರಿಗೂ ಆಯುಧದಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.



Ad Widget

ಸ್ಥಳೀಯ ನಿವಾಸಿಗಳು ಮಹಿಳೆಯರಿಬ್ಬರು ಗುಡ್ಡೆಯಲ್ಲಿ ಕಿರುಚಾಡುವುದನ್ನು ಗಮನಿಸಿದ ಸ್ಥಳೀಯರು ಬಂದು ನೋಡಿ ಸುರೇಖಾ ಅವರ ಮಗನಿಗೆ ಮಾಹಿತಿ ನೀಡಿದ್ದಾರೆ. ಆತ ಗಂಭೀರ ಗಾಯಗೊಂಡ ಅವರಿಬ್ಬರನ್ನು ಮಹಿಳೆಯರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆ ತಂದಿದ್ದು ಇಬ್ಬರಿಗೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸ್‌ ಠಾಣೆಯಲ್ಲಿ ಇನ್ನಷ್ಟೆ ಪ್ರಕರಣ ದಾಖಲಾಗಬೇಕಿದೆ ಎಂದು ತಿಳಿದು ಬಂದಿದೆ.

Click to comment

Leave a Reply

Uncategorized

Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ

Published

on



Ad Widget

Ad Widget

Ad Widget

Ad Widget

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ಕೈಗೊಂಡಿದ್ದ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ, ಆಕಾಶವಾಣಿ ಭವನದ ಆವರಣದಲ್ಲಿ ಎಂಟು ತಾಸಿಗೂ ಹೆಚ್ಚು ಕಾಲ ಧರಣಿ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಸುಮಾರು 250 ಮಂದಿಯನ್ನು ದೆಹಲಿ ಪೊಲೀಸರು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ವಶಕ್ಕೆ ಪಡೆದವರಲ್ಲಿ ಸುಮಾರು 50 ಸಂಸದರೂ ಸೇರಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರತಿಭಟನಾಕಾರರನ್ನು ಕಿಂಗ್ಸ್‌ವೇ ಕ್ಯಾಂಪ್‌ನಲ್ಲಿರುವ ನ್ಯೂ ಪೊಲೀಸ್ ಲೈನ್ಸ್‌ಗೆ ಕರೆದೊಯ್ಯಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಆಕಾಶವಾಣಿ ಭವನದ ಆವರಣವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ ಪೊಲೀಸರು, ರಾಹುಲ್ ಗಾಂಧಿ ಅವರೊಂದಿಗೆ ಕೆ.ಸಿ. ವೇಣುಗೋಪಾಲ್, ಪವನ್ ಖೇರಾ, ಕೆ. ಸುರೇಶ್, ಅಮರಿಂದರ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ಸಂಸದರು ಮತ್ತು ಮುಖಂಡರನ್ನು ಬಲವಂತವಾಗಿ ಅಲ್ಲಿಂದ ತೆರವುಗೊಳಿಸಿದರು.

Ad Widget

Ad Widget <> Ad Widget

ಸಂಸತ್ ಭವನದ ರಸ್ತೆಯಲ್ಲಿರುವ ಆಕಾಶವಾಣಿ ಭವನದಿಂದ ಕೇವಲ 300 ಮೀಟರ್ ದೂರದಲ್ಲಿರುವ ಚುನಾವಣಾ ಆಯೋಗದ ಕಚೇರಿಯತ್ತ ವಿರೋಧ ಪಕ್ಷಗಳ ಸಂಸದರು ನಡೆಸುತ್ತಿದ್ದ ಮೆರವಣಿಗೆಯನ್ನು ಪೊಲೀಸರು ತಡೆದಿದ್ದರು.



Ad Widget

ಇದರಿಂದಾಗಿ ರಾಹುಲ್ ಗಾಂಧಿ ಮತ್ತು ಇತರ ಮುಖಂಡರು ಆಕಾಶವಾಣಿ ಭವನದ ಆವರಣ ಪ್ರವೇಶಿಸಿ ಅಲ್ಲಿಯೇ ಧರಣಿ ಕುಳಿತಿದ್ದರು.

Ad Widget

Ad Widget

ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಎಸ್‌ಐಆರ್‌ನಲ್ಲಿ ಅಕ್ರಮಗಳು ನಡೆದಿವೆ ಎಂಬ ಮಾಧ್ಯಮ ವರದಿಗಳ ಆಧಾರದಲ್ಲಿ, ‘ವೋಟ್ ಚೋರಿ’ ಆರೋಪಿಸಿ ವಿರೋಧ ಪಕ್ಷಗಳ ಸಂಸದರು ಈ ಪ್ರತಿಭಟನೆ ಹಮ್ಮಿಕೊಂಡಿದ್ದರು.

ಸುಮಾರು ಎಂಟು ಗಂಟೆಗಳಿಗೂ ಹೆಚ್ಚು ಕಾಲ ಮುಂದುವರಿದ ಧರಣಿಯ ಬಳಿಕ, ಪೊಲೀಸರು ಸ್ಥಳ ತೆರವುಗೊಳಿಸಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

Ad Widget
Continue Reading

Uncategorized

Puttur Piligobbu Season-4 : ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.

Ad Widget

Ad Widget <> Ad Widget

ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.



Ad Widget

ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಶ್ರೀ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Continue Reading

Uncategorized

ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ

Published

on



Ad Widget

Ad Widget

Ad Widget

Ad Widget

ಮಂಗಳೂರು, ಅ. 6: ನ್ಯಾಯಾಲಯದ ದಸ್ತಗಿರಿ ವಾರೆಂಟ್‌ ಜಾರಿಯಾಗಿದ್ದ ಶಿಕ್ಷೆಗೆ ಗುರಿಯಾಗಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು ತಾಲ್ಲೂಕಿನ ನೆಕ್ಕಿಲಾಡಿ ಗ್ರಾಮದ ಮೊಹಮ್ಮದ್ ಮುಸ್ತಫಾ ಅಲಿಯಾಸ್ ಮುಸ್ತಫಾ (36) ಬಂಧಿತ ಆರೋಪಿ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 394 ಜೊತೆಗೆ 34ರ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಆರೋಪಿಗೆ ಶಿಕ್ಷೆಯಾಗಿತ್ತು. ಈ ತೀರ್ಪಿನ ವಿರುದ್ಧ ಅರೋಪಿಯು ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಅಪೀಲು ಹಾಕಿದ್ದರು .

Ad Widget

Ad Widget <> Ad Widget

ಈ ಅಪೀಲು ದಾಖಲಿಸಿದ ಬಳಿಕ ಆರೋಪಿಯು ನ್ಯಾಯಾಲಯಕ್ಕೆ ನಿರಂತರವಾಗಿ ಗೈರು ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ ದಸ್ತಗಿರಿ ವಾರೆಂಟ್‌ ಜಾರಿಗೊಳಿಸಿತ್ತು.ವಾರೆಂಟ್‌ ಆಧರಿಸಿ ಮಂಗಳವಾರ ಬೆಳಿಗ್ಗೆ ಪುತ್ತೂರು ತಾಲ್ಲೂಕಿನ 34ನೇ ನೆಕ್ಕಿಲಾಡಿ ಗ್ರಾಮದ ಸುಭಾಷ್‌ನಗರದಲ್ಲಿರುವ ಆರೋಪಿಯ ಮನೆಗೆ ತೆರಳಿದ ಪೊಲೀಸರು ಅವರನ್ನು ಬಂಧಿಸಿದರು.



Ad Widget

ಮಂಗಳೂರು ದಕ್ಷಿಣ ವಿಭಾಗದ ಎಸಿಪಿ ವಿಜಯ ಕ್ರಾಂತಿ ಅವರ ನಿರ್ದೇಶನದಂತೆ, ಮಂಗಳೂರು ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್‌ ಡಿ.ಆರ್. ಮಂಜಪ್ಪ ಅವರ ನೇತೃತ್ವದಲ್ಲಿ ಪಿಎಸ್‌ಐ ಅರುಣ್ ಕುಮಾರ್ ಡಿ. ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಉಪ್ಪಿನಂಗಡಿ ಠಾಣೆಯ ಸಿಬ್ಬಂದಿಯೂ ಸಹಕರಿಸಿದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading