ದಕ್ಷಿಣ ಕನ್ನಡ
Soujanya Case | ಸೌಜನ್ಯ ಪ್ರಕರಣ: ಆ.27 ಆದಿತ್ಯವಾರ ಬಿಜೆಪಿ ವತಿಯಿಂದ ಬೆಳ್ತಂಗಡಿಯ ಮಿನಿವಿಧಾನಸೌಧದ ಎದುರು ಎರಡು ಜಿಲ್ಲೆಗಳ ಶಾಸಕರು ಸೇರಿ ಪ್ರತಿಭಟನೆ – ಸೌಜನ್ಯರ ತಾಯಿಗೆ ಆಹ್ವಾನ
ಬೆಳ್ತಂಗಡಿ: ಸೌಜನ್ಯಾ(Soujanya Case) ನ್ಯಾಯಕ್ಕಾಗಿ ಆಗ್ರಹಿಸಿ ಆ.27 ಆದಿತ್ಯವಾರದಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಲಿದ್ದು ಈ ಪ್ರತಿಭಟನೆಗೆ ಸೌಜನ್ಯ ತಾಯಿ ಕುಸುಮಾವತಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಹ್ವಾನ ನೀಡಿದ್ದಾರೆ.
ಆ.27 ಆದಿತ್ಯವಾರದಂದು ಬೆಳಗ್ಗೆ 10.30ಕ್ಕೆ ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ. ಸೌಜನ್ಯಗೆ ನ್ಯಾಯ ಸಿಕ್ಕಿಲ್ಲ ಎನ್ನುವ ಜನಾಭಿಪ್ರಾಯ ಏನಿದೆಯೋ ಇದಕ್ಕೆ ಪೂರಕವಾಗಿ ಬಿಜೆಪಿ ವತಿಯಿಂದಲೂ ಸೌಜನ್ಯಾಗೆ ನ್ಯಾಯ ಸಿಗಬೇಕು ಎನ್ನುವ ನೆಲೆಯಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಜಿಲ್ಲಾಧ್ಯಕ್ಷ ಸುದರ್ಶನ್ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಎರಡೂ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಪ್ರತಿಭಟನೆ ಮೂಲಕ ಕಾರ್ಯಕ್ರಮ ಆಯೋಜನೆಯಾಗಿದೆ. ಮುಂದೆ ರಾಜ್ಯಾಧ್ಯಕ್ಷರು, ಶಾಸಕರ ನಿರ್ಧಾರದಂತೆ ಮುಖ್ಯ ಮಂತ್ರಿಗಳನ್ನು ಭೇಟಿ ಮಾಡುವುದು, ರಾಜ್ಯಪಾಲರನ್ನು ಭೇಟಿ ಮಾಡುವುದು ಇತ್ಯಾದಿ ಮುಂದಿನ ಕೆಲಸಗಳನ್ನು ಪಕ್ಷದ ವರಿಷ್ಠರು ಮಾಡಲಿದ್ದಾರೆ ಎಂದು ಸುದರ್ಶನ್ ವಿವರಿಸಿದರು.
ಈ ಪ್ರತಿಭಟನೆಗೆ ಸೌಜನ್ಯ ಮನೆಗೆ ತೆರಳಿ ತಾಯಿ ಕುಸುಮಾವತಿಯವರನ್ನು ಶಾಸಕ ಹರೀಶ್ ಪೂಂಜಾ ಆಹ್ವಾನಿಸಿದ್ದಾರೆ.
ಆ.27ರಂದು ಬೆಳಗ್ಗೆ 10.30ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದೆ. ಯಾವುದೇ ಮೆರವಣಿಗೆ ಹಮ್ಮಿಕೊಂಡಿಲ್ಲ. ಎಲ್ಲರೂ ಅಲ್ಲೇ ಸೇರಿ ಪ್ರತಿಭಟನಾ ಸಭೆ ನಡೆಸುತ್ತೇವೆ. ಸಾವಿರಾರು ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ. ಎಲ್ಲಾ ಕ್ಷೇತ್ರಗಳಲ್ಲಿ ಸಭೆ ನಡೆಯುತ್ತಿದೆ. ಶಾಸಕರೆಲ್ಲರೂ ತೆಲಂಗಾಣದಲ್ಲಿ ಚುನಾವಣಾ ಪೂರ್ವಭಾವಿ ಪ್ರಚಾರದಲ್ಲಿ ನಿರತರಾಗಿದ್ದು, ಆದಿತ್ಯವಾರ ಎಲ್ಲರೂ ಬರುತ್ತಾರೆ. ಅವರ ನೇತೃತ್ವದಲ್ಲಿ ಎಲ್ಲಾ ಕಾರ್ಯಕರ್ತರು ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸುದರ್ಶನ್ ಎಂ. ಹೇಳಿದರು.
ಪುತ್ತೂರು
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು

ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್‌ಮ್ಯಾನ್‌ವೊಬ್ಬರು ಮೃತಪಟ್ಟ ಘಟನೆ ಅ.3ರಂದು ನಡೆದಿದೆ.
ಮೃತರನ್ನು ಕೆಮ್ಮಾಯಿ ನಿವಾಸಿ ದಿ. ಗುಡ್ಡಪ್ಪ ಗೌಡರವರ ಪುತ್ರ ರವಿ ಗೌಡ ಎಂದು ಗುರುತಿಸಲಾಗಿದೆ. ಇವರು ಮೆಸ್ಕಾಂ ಬಂಟ್ವಾಳ ತಾಲೂಕಿನ ಮಾಣಿ ಸೆಕ್ಷನ್ ನಲ್ಲಿ ಪವರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮೂಲಗಳ ಪ್ರಕಾರ, ಎಚ್‌ಟಿ (ಹೈಟೆನ್ಶನ್) ವಿದ್ಯುತ್ ಲೈನ್‌ನ ಜಿಒಎಸ್ (ಗ್ಯಾಂಗ್ ಆಪರೇಟಿಂಗ್ ಸ್ವಿಚ್) ತೆರೆಯುವ ಸಂದರ್ಭದಲ್ಲಿ ಅರ್ಥ್ ಆಗಿ ವಿದ್ಯುತ್ ಪ್ರವಹಿಸಿ ರವಿ ಗೌಡ ಅವರಿಗೆ ವಿದ್ಯುತ್ ಸ್ಪರ್ಶಿಸಿದೆ ಎನ್ನಲಾಗಿದೆ.
ಕೆದಿಲ ಪಾಟ್ರಕೋಡಿ, ಮಿತ್ತೂರು ಹಾಗೂ ಗಡಿಯಾರ ಭಾಗಗಳಲ್ಲಿ ಪವರ್‌ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಗೌಡ ಅವರು, ತಮ್ಮ ಸೇವಾ ಮನೋಭಾವದಿಂದ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಅಪರಾಧ
Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.
ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.
ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
ಶಿಕ್ಷಣ
Narendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.
ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.
ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.
-
ಪುತ್ತೂರು20 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್23 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು23 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್22 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ23 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ಅಪರಾಧ21 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ22 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
-
ಶಿಕ್ಷಣ23 hours agoVivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ


















