Uncategorized
ನೇತ್ರಾವತಿ ನದಿ ತೀರಕ್ಕೆ ಬಂದಿಳಿದ ಸೌಜನ್ಯ ತಾಯಿ – ಧರ್ಮಸ್ಥಳದ ಅಣ್ಣಪ್ಪ ಸ್ವಾಮಿ ಬೆಟ್ಟದ ಬಳಿ ಪೊಲೀಸ್ ಸರ್ಪಗಾವಲು – ಎಸ್ಪಿ ದೌಡು | ನಡೆಯುತ್ತಾ ಅಣೆ ಪ್ರಮಾಣ ? ಸಿಗುತ್ತಾ ತಾರ್ಕಿಕ ಅಂತ್ಯ?
ದಿನಕ್ಕೊಂದು ತಿರುವು ಪಡೆಯುತ್ತಿರುವ 11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಹೋರಾಟದಲ್ಲಿಂದು ಮತ್ತೊಂದು ಮಹತ್ವದ ಬೆಳವಣಿಗೆ ನಡೆಯುವ ಸಾಧ್ಯತೆ ಗೋಚರಿಸಿದೆ . ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳವು ನೇತ್ರಾವತಿ ನದಿಯಿಂದ ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ಸಾಮೂಹಿಕ ಪ್ರಾರ್ಥನೆ ಆಯೋಜಿಸಿದೆ. ಈ ಪಾದಯಾತ್ರೆ ಆರಂಭಗೊಂಡಿದ್ದು ಸೌಜನ್ಯ ತಾಯಿ ಕುಸುಮಾವತಿ ಹಾಗೂ ಅವರ ಕುಟುಂಬದ ಮಹಿಳಾ ಸದಸ್ಯರು ಭಾಗಿಯಾಗಿದ್ದಾರೆ.
ಇದೇ ವೇಳೆ ಸೌಜನ್ಯಳ ತಾಯಿ ಆರೋಪ ಮಾಡಿರುವ ಧೀರಜ್ ಕೆಲ್ಲ, ಮಲ್ಲಿಕ್ ಜೈನ್ ಮತ್ತು ಉದಯ್ ಜೈನ್ ಸಾಮಾಜಿಕ ಜಾಲತಾಣದಲ್ಲಿ ನಾವು ನಿಮ್ಮಗಾಗಿ ಅಣ್ಣಪ್ಪ ಬೆಟ್ಟದ ಬಳಿ ಕಾಯುತ್ತಿರುತ್ತೇವೆ ಎಂಬ ಸಂದೇಶ ಹಾಕಿ, ಈ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲವೆಂದು ಅಣ್ಣಪ್ಪ ಸ್ವಾಮಿಯ ಮುಂದೆ ಅಣೆ ಪ್ರಮಾಣ ಮಾಡುವುದಾಗಿ ತಿಳಿಸಿದ್ದಾರೆ.
ಹೀಗಾಗಿ ಇಂದಿನ ಪಾದಯಾತ್ರೆ ಧರ್ಮಸ್ಥಳದ ನಾಗರೀಕರಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಅಣ್ಣಪ್ಪ ಬೆಟ್ಟದ ಮುಂಭಾಗ ಧರ್ಮಸ್ಥಳದ ನಾಗರೀಕರು ಹಾಗೂ ಭಕ್ತರು ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದಾರೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬೇಟ್ಟದ ಸುತ್ತ ಸರ್ಪಗಾವಲು ಹಾಕಿದ್ದಾರೆ. ಘಟನೆಯ ಗಂಭೀರತೆಯನ್ನು ಅರಿತಿರುವ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ರಿಶ್ಯಂತ್ ಅವರು ಸ್ವತ: ಫೀಲ್ಡ್ ಗಿಳಿದಿದ್ದು ಧರ್ಮಸ್ಥಳಕ್ಕೆ ದೌಡಯಿಸಿ ಕಾನೂನು ಸುವ್ಯವಸ್ಥೆಯ ಮೇಲುಸ್ತುವಾರಿ ವಹಿಸಿಕೊಂಡಿದ್ದಾರೆ.
ಈಗಾಗಲೇ ಧರ್ಮಸ್ಥಳ ದ ಪ್ರಮುಖರ ಜೊತೆ ಎಸ್ಪಿ ಮಾತುಕತೆ ನಡೆಸಿದ್ದಾರೆ. ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಹೈ ಸೆಕ್ಯುರಿಟಿ ನಿಯೋಜಿಸಿದ್ದಾರೆ. ಅಣ್ಣಪ್ಪ ಸ್ವಾಮಿ ಬೆಟ್ಟ ದ ಮುಂಭಾಗ ಬ್ಯಾರಿಕೇಡ್ ಅಳವಡಿಸಲಾಗಿದೆ. ಸೌಜನ್ಯ ತಾಯಿ ಅಣ್ಣಪ್ಪ ಸ್ವಾಮಿ ಬೆಟ್ಟದ ಬಳಿ ಬರುವಾಗ ಗೊಂದಲ ಆಗದಂತೆ ಎಲ್ಲ ಮುನ್ನೆಚ್ಚರಿಕೆಯನ್ನು ವಹಿಸಲಾಗಿದೆ. ಇದೆ ವೇಳೆ ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಸಾವಿರಾರು ಜನರು ಜಮಾಯಿಸಿದ್ದಾರೆ. ಧ್ವನಿವರ್ದಕದ ಮೂಲಕ ಬೆಟ್ಟದ ಮುಂಭಾಗದಿಂದ ದೂರ ಸರಿಯುವಂತೆ ಪೊಲೀಸರು ಜನರಲ್ಲಿ ವಿನಂತಿಸುತ್ತಿದ್ದಾರೆ
ನೇತ್ರಾವತಿ ಯಿಂದ ಧರ್ಮಸ್ಥಳ ದ ವರೆಗೆ ವಿಹಿಂಪ,ಬಜರಂಗಳ ಕಾರ್ಯಕರ್ತರ ಪಾದಯಾತ್ರೆ ಈಗಾಗಲೇ ಆರಂಭಗೊಂಡಿದೆ. ನೇತ್ರಾವತಿ ನದಿ ತೀರಕ್ಕೆ ಆಗಮಿಸಿದ ಸೌಜನ್ಯ ತಾಯಿ ಕುಸುಮಾವತಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು ಅಣ್ಣಪ್ಪ ಬೆಟ್ಟದತ್ತ ಮೆರವಣಿಗೆಯಲ್ಲಿ ಬರುತ್ತಿದ್ದಾರೆ.ಇಂದು ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಆಣೆ ಪ್ರಮಾಣ ಸಾಧ್ಯತೆಯಿದ್ದು ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗಲಿದೆಯೇ ಎಂಬುವುದು ಸದ್ಯದ ಕುತೂಹಲ.
Uncategorized
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ಕೈಗೊಂಡಿದ್ದ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ, ಆಕಾಶವಾಣಿ ಭವನದ ಆವರಣದಲ್ಲಿ ಎಂಟು ತಾಸಿಗೂ ಹೆಚ್ಚು ಕಾಲ ಧರಣಿ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಸುಮಾರು 250 ಮಂದಿಯನ್ನು ದೆಹಲಿ ಪೊಲೀಸರು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದವರಲ್ಲಿ ಸುಮಾರು 50 ಸಂಸದರೂ ಸೇರಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರತಿಭಟನಾಕಾರರನ್ನು ಕಿಂಗ್ಸ್‌ವೇ ಕ್ಯಾಂಪ್‌ನಲ್ಲಿರುವ ನ್ಯೂ ಪೊಲೀಸ್ ಲೈನ್ಸ್‌ಗೆ ಕರೆದೊಯ್ಯಲಾಗಿದೆ.
ಆಕಾಶವಾಣಿ ಭವನದ ಆವರಣವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ ಪೊಲೀಸರು, ರಾಹುಲ್ ಗಾಂಧಿ ಅವರೊಂದಿಗೆ ಕೆ.ಸಿ. ವೇಣುಗೋಪಾಲ್, ಪವನ್ ಖೇರಾ, ಕೆ. ಸುರೇಶ್, ಅಮರಿಂದರ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ಸಂಸದರು ಮತ್ತು ಮುಖಂಡರನ್ನು ಬಲವಂತವಾಗಿ ಅಲ್ಲಿಂದ ತೆರವುಗೊಳಿಸಿದರು.
ಸಂಸತ್ ಭವನದ ರಸ್ತೆಯಲ್ಲಿರುವ ಆಕಾಶವಾಣಿ ಭವನದಿಂದ ಕೇವಲ 300 ಮೀಟರ್ ದೂರದಲ್ಲಿರುವ ಚುನಾವಣಾ ಆಯೋಗದ ಕಚೇರಿಯತ್ತ ವಿರೋಧ ಪಕ್ಷಗಳ ಸಂಸದರು ನಡೆಸುತ್ತಿದ್ದ ಮೆರವಣಿಗೆಯನ್ನು ಪೊಲೀಸರು ತಡೆದಿದ್ದರು.
ಇದರಿಂದಾಗಿ ರಾಹುಲ್ ಗಾಂಧಿ ಮತ್ತು ಇತರ ಮುಖಂಡರು ಆಕಾಶವಾಣಿ ಭವನದ ಆವರಣ ಪ್ರವೇಶಿಸಿ ಅಲ್ಲಿಯೇ ಧರಣಿ ಕುಳಿತಿದ್ದರು.
Uncategorized
Puttur Piligobbu Season-4 : ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಶ್ರೀ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
Uncategorized
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ

ಮಂಗಳೂರು, ಅ. 6: ನ್ಯಾಯಾಲಯದ ದಸ್ತಗಿರಿ ವಾರೆಂಟ್ ಜಾರಿಯಾಗಿದ್ದ ಶಿಕ್ಷೆಗೆ ಗುರಿಯಾಗಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪುತ್ತೂರು ತಾಲ್ಲೂಕಿನ ನೆಕ್ಕಿಲಾಡಿ ಗ್ರಾಮದ ಮೊಹಮ್ಮದ್ ಮುಸ್ತಫಾ ಅಲಿಯಾಸ್ ಮುಸ್ತಫಾ (36) ಬಂಧಿತ ಆರೋಪಿ.
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 394 ಜೊತೆಗೆ 34ರ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಆರೋಪಿಗೆ ಶಿಕ್ಷೆಯಾಗಿತ್ತು. ಈ ತೀರ್ಪಿನ ವಿರುದ್ಧ ಅರೋಪಿಯು ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಅಪೀಲು ಹಾಕಿದ್ದರು .
ಈ ಅಪೀಲು ದಾಖಲಿಸಿದ ಬಳಿಕ ಆರೋಪಿಯು ನ್ಯಾಯಾಲಯಕ್ಕೆ ನಿರಂತರವಾಗಿ ಗೈರು ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ದಸ್ತಗಿರಿ ವಾರೆಂಟ್ ಜಾರಿಗೊಳಿಸಿತ್ತು.ವಾರೆಂಟ್ ಆಧರಿಸಿ ಮಂಗಳವಾರ ಬೆಳಿಗ್ಗೆ ಪುತ್ತೂರು ತಾಲ್ಲೂಕಿನ 34ನೇ ನೆಕ್ಕಿಲಾಡಿ ಗ್ರಾಮದ ಸುಭಾಷ್‌ನಗರದಲ್ಲಿರುವ ಆರೋಪಿಯ ಮನೆಗೆ ತೆರಳಿದ ಪೊಲೀಸರು ಅವರನ್ನು ಬಂಧಿಸಿದರು.
ಮಂಗಳೂರು ದಕ್ಷಿಣ ವಿಭಾಗದ ಎಸಿಪಿ ವಿಜಯ ಕ್ರಾಂತಿ ಅವರ ನಿರ್ದೇಶನದಂತೆ, ಮಂಗಳೂರು ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಡಿ.ಆರ್. ಮಂಜಪ್ಪ ಅವರ ನೇತೃತ್ವದಲ್ಲಿ ಪಿಎಸ್‌ಐ ಅರುಣ್ ಕುಮಾರ್ ಡಿ. ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಉಪ್ಪಿನಂಗಡಿ ಠಾಣೆಯ ಸಿಬ್ಬಂದಿಯೂ ಸಹಕರಿಸಿದರು.
-
ದಕ್ಷಿಣ ಕನ್ನಡ15 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
Uncategorized21 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ಸಿನೆಮಾ22 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ23 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ಅಪರಾಧ22 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಅಪರಾಧ15 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಬಿಗ್ ನ್ಯೂಸ್21 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ಮಂಗಳೂರು22 hours agoPandamburu-ಪಣಂಬೂರು ಬೀಚ್ನಲ್ಲಿ ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ನೀರುಪಾಲು




















