Uncategorized
ಶಾಸಕ ಅಶೋಕ್ ಕುಮಾರ್ ರೈಯವರ ನೂತನ ಕಛೇರಿ ಉದ್ಘಾಟನೆ
ಪುತ್ತೂರು: ಆ. 28 ರಂದು ಪುತ್ತೂರಿನಲ್ಲಿ ಶಾಸಕ ಅಶೋಕ್ ರೈಯವರ ನೂತನ ಶಾಸಕರ ಕಛೇರಿ ಉದ್ಘಾಟನೆಗೊಂಡಿತ್ತು. ಅಶೋಕ್ ಕುಮಾರ್ ರೈ ಮತ್ತು ಅವರ ಪತ್ನಿ ಸುಮಾ ಅಶೋಕ್ ಕುಮಾರ್ ರೈಯವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಅದಕ್ಕೂ ಮೊದಲು ಕಛೇರಿಯಲ್ಲಿ ವೈದಿಕ ವಿಧಿ ವಿಧಾನವನ್ನು ನೆರವೇರಿಸಲಾಯಿತು.
ಬಳಿಕ ಮಾತನಾಡಿದ ಅವರು “ನಾನು ಬಡತನದಿಂದ ಮೇಲೆ ಬಂದವ, ಬಡತನ ಏನೆಂಬುದು ನನಗೆ ಗೊತ್ತಿದೆ ಈ ಕಾರಣ ನಾನು ಹಸಿವನ್ನು ಚೆನ್ನಗಿ ಬಲ್ಲೆ, ನಾನು ಈಗ ಶಾಸಕನಾಗಿದ್ದೇನೆ ನನ್ನ ಕ್ಷೇತ್ರದಲ್ಲಿ ಒಬ್ಬನೇ ಒಬ್ಬ ವ್ಯಕ್ತಿ ಹಸಿವಿನಿಂದ ಮಲಗಬಾರದು, ಸೂರು, ಕುಡಿಯುವ ನೀರು ಮತ್ತು ಕರೆಂಟ್ ಎಲ್ಲರಿಗೂ ಸಿಗುವಂತಾಗಬೇಕಂಬುದೇ ನನ್ನ ಉದ್ದೇಶವಾಗಿದೆ ನನ್ನ ಅಧಿಕಾರದ ಅವಧಿಯಲ್ಲಿ ಬಡವರಿಗೆ ಇವೆಲ್ಲವನ್ನೂ ನೀಡಿಯೇ ಸಿದ್ದ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.
94ಸಿ ಮತ್ತು 94 ಸಿಸಿ ಇದು ಇಲ್ಲಿನ ಬಡವರ ಹಕ್ಕು. ಯಾರೆಲ್ಲಾ ಸರಕಾರಿ ಜಾಗದಲ್ಲಿ ಮನೆ ಮಾಡಿಕೊಂಡಿದ್ದಾರೆ, ಅವರು ಮನೆ ಕಟ್ಟಿರುವ ಜಾಗ ಕಾನೂನು ಪ್ರಕಾರ ಸರಕಾರಕ್ಕೆ ಸೇರಿದ್ದೇ ಅದಲ್ಲಿ ಅವರಿಗೆ ಹಕ್ಕು ಪತ್ರ ಕೊಟ್ಟೇ ಕೊಡ್ತೇನೆ. ಅಕ್ರಮ ಸಕ್ರಮ ಅರ್ಜಿಗಳನ್ನು ಕೆಲವೇ ತಿಂಗಳಲ್ಲಿ ಪೂರ್ಣಗೊಳಿಸಲಿದ್ದು ನಯಾ ಪೈಸೆ ಲಂಚ ಕೊಡದೆ ಅಕ್ರಮಸಕ್ರಮ ಕಡತವನ್ನು ವಿಲೇವಾರಿ ಮಾಡಿಸುತ್ತೇನೆ ಎಂದರು.

ಮನೆ ಕಟ್ಟಲು ಜಾಗವೇ ಇಲ್ಲದವರಿಗೆ 3 ಸೆಂಟ್ಸ್ ಜಾಗವನ್ನು ನೀಡಿ ಅವರಿಗೆ ಸೂರು ಕಲ್ಪಿಸುವ ಯೋಜನೆ ಇದೆ ಇದಕ್ಕಾಗಿ ವಿಟ್ಲದಲ್ಲಿ 7 ಎಕ್ರೆ ಜಾಗ ಮತ್ತು ಕುಂಬ್ರ ಸಮೀಪ ಸ್ವಂತ ಹಣದಿಂದ ಜಾಗವನ್ನು ಖರೀದಿ ಮಾಡಿದ್ದೇನೆ. ಈಗಾಗಲೇ ಜಾಗವೇ ಇಲ್ಲದ 600 ಮಂದಿ ನಿವೇಶನಕ್ಕಾಗಿ ಅರ್ಜಿ ಕೊಟ್ಟಿದ್ದಾರೆ ಎಂದರು.
ವಿಧವೆಯವರಿಗೆ , ಅನಾಥರಿಗೆ, ನಿರ್ಗತಿಕರಿಗೆ ಮೊದಲ ಆದ್ಯತೆ ಮೇರೆಗೆ ಜಾಗವನ್ನು ಕೊಡಲಿದ್ದೇನೆ ಮತ್ತು ಪ್ರತೀ ಗ್ರಾಮದಲ್ಲಿ ಸರಕಾರಿ ಜಾಗವನ್ನು ಗುರುತಿಸಿ ಅದನ್ನು ಕಾನೂನಾತ್ಮಕವಾಗಿ ಬಡವರಿಗೆ ಹಂಚುವ ಕೆಲಸವನ್ನು ಮಾಡುತ್ತೇನೆ. ನಾನು ಚುನಾವಣೆಗೆ ಮುಂಚೆ ನಿಮಗೆ ಕೊಟ್ಟ ಭರವಸೆಯನ್ನು ಮರೆತಿಲ್ಲ ಎಂದು ಹೇಳಿದ ಶಾಸಕರು ಕ್ಷೇತ್ರದ ಅಭಿವೃದ್ದಿಗೆ ಜನರ ಸಹಕಾರವನ್ನು ಕೋರಿದರು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
-
ಮಂಗಳೂರು22 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ21 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಕಾರ್ಯಕ್ರಮಗಳು22 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ16 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
Uncategorized23 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
-
ಶಿಕ್ಷಣ21 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
ಶಿಕ್ಷಣ23 hours agoPhilomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
-
ಮಂಗಳೂರು17 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

















