ಮಂಗಳೂರು
Mangalore | ಮಂಗಳೂರು: ವೇಗವಾಗಿ ತಿರುವು ಪಡೆಯುತಿದ್ದ ಖಾಸಗಿ ಬಸ್ ನಿಂದ ಹೊರಗೆಸೆಯಲ್ಪಟ್ಟು ಕಂಡಕ್ಟರ್ ಮೃತ್ಯು – ವಿಡಿಯೋ ವೈರಲ್
ಮಂಗಳೂರು: ವೇಗವಾಗಿ ತಿರುವು ಪಡೆಯುತಿದ್ದ ಮಂಗಳೂರಿನ (Mangalore) ಸಿಟಿ ಬಸ್ ನಲ್ಲಿ ಕಂಡಕ್ಟರ್ ಬಸ್ಸಿನ ಎದುರು ಬಾಗಿಲಿನಿಂದ ಬಿದ್ದು ಮೃತ ಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ಆ.29ರ ಮಧ್ಯಾಹ್ನ ಸಿಟಿ ಬಸ್ ಪದುವದಿಂದ ಶಿವಭಾಗ್ ಕಡೆ ಹೋಗುವ ಸಂಧರ್ಭ ನಂತೂರು ವೃತ್ತ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಬಸ್ಸಿನ ಎದುರು ಬಾಗಿಲ ಬಳಿ ನಿಂತಿದ್ದ ಈರಯ್ಯ(23) ಎಂಬವರು ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಅರಸು ಬಸ್ ವೇಗವಾಗಿ ತಿರುವು ಪಡೆದಾಗ ಕಂಡಕ್ಟರ್ ಎದುರು ಬಾಗಿಲಿನಿಂದ ರಸ್ತೆಗೆ ಎಸೆಯಲ್ಪಟ್ಟರು. ಕೈಯಲ್ಲಿ ಇದ್ದ ಹಣ ರಸ್ತೆಯಲ್ಲಿ ಚೆಲ್ಲಪಿಲ್ಲಿಯಾಗಿತ್ತು. ಕೂಡಲೇ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸ್ ಒಬ್ಬರು ಬಿದ್ದವನ ಸಹಾಯಕ್ಕೆ ಧಾವಿಸಿ ಮಾನವೀಯತೆ ಮೆರೆದರು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
-
Uncategorized16 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized18 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized17 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized18 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized20 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized17 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |
-
ಸ್ಥಳೀಯ2 hours agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ
-
ಬಿಗ್ ನ್ಯೂಸ್2 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ


















