Connect with us

ಬಿಗ್ ನ್ಯೂಸ್

Amit Shah | ಅಮಿತ್ ಶಾ ರವರ ಮಹತ್ವಾಕಾಂಕ್ಷೆಯ ಸಹಕಾರಿ ನಿಯಮ ತಿದ್ದುಪಡಿ ವಿರುದ್ಧವೇ ಬಂಡಾಯವೆದ್ದ ಕರಾವಳಿ ಬಿಜೆಪಿ ..! ಗ್ರಾ.ಪಂ ಗೊಂದು ಪ್ರತ್ಯೇಕ ಸೊಸೈಟಿ ಆದೇಶದ ವಿರುದ್ಧ ಹೈಕೋರ್ಟ್ ತಡೆಯಾಜ್ಞೆ ತಂದ ಉಪ್ಪಿನಂಗಡಿ ಸೊಸೈಟಿ

Published

on

Ad Widget

Ad Widget

Ad Widget

Ad Widget

ಪುತ್ತೂರು: ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರದಲ್ಲಿ ಪ್ರಾರಂಭವಾದ ಸಹಕಾರಿ ಇಲಾಖೆಯ ಕೇಂದ್ರ ಸಹಕಾರಿ ಸಚಿವ ಅಮಿತ್ ಶಾ(Amit Shah) ರವರ ಸಹಕಾರಿ ತತ್ವದ (Co-operative Rules) ಭಾರಿ ತಿದ್ದುಪಡಿ ನಿಯಮಕ್ಕೆ ಕರಾವಳಿಯ ಬಿಜೆಪಿಯಲ್ಲೇ ವಿರೋಧ ವ್ಯಕ್ತವಾಗಿದೆ. ಅಮಿತ್ ಶಾ ಮೊದಲ ಪ್ರಯತ್ನಕ್ಕೆ ಬಿಜೆಪಿ ಆಡಳಿತದ ಸಹಕಾರಿ ಸಂಘವೇ ಹೈಕೋರ್ಟ್ ತಡೆಯಾಜ್ಞೆ ತಂದಿದ್ದು ಚರ್ಚೆಗೆ ಗ್ರಾಸವಾಗಿದೆ.

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳ ಮೂಲಕವೇ ಅತೀ ಹೆಚ್ಚಿನ ವ್ಯವಹಾರ ನಡೆಯುತ್ತಿದೆ. ಇಲ್ಲಿ ಹೆಚ್ಚಿನ ಕೃಷಿ ಪತ್ತಿನ ಸಹಕಾರಿ ಸಂಘಗಳು ಬಿಜೆಪಿಯ ಸಹಕಾರ ಭಾರತಿ ಆಡಳಿತವೇ ಹೊಂದಿದ್ದರೂ ಅಮಿತ್ ಷಾ ರ ಹೊಸ ನಿಯಮಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ.

Ad Widget

Ad Widget alt="Ad Widget"/>

Ad Widget

ವಿವಿಧೋದ್ದೇಶದ ಪ್ರಾಥಮಿಕ ಸಹಕಾರ ಸಂಘಗಳು ಅಥವಾ ಡೇರಿ, ಮೀನುಗಾರಿಕೆಗೆ ಪ್ರಾಥಮಿಕ ಸಹಕಾರ ಸಂಘಗಳು ಇಲ್ಲದಿರುವ ಪಂಚಾಯಿತಿ ಅಥವಾ ಗ್ರಾಮಗಳಲ್ಲಿ ಹೊಸ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು (ಪಿಎಸಿಎಸ್) ಆರಂಭಿಸಲು ಕೇಂದ್ರ ಸಹಕಾರ ಸಚಿವಾಲಯದ ಸೂಚನೆ ಮೇರೆಗೆ ರಾಜ್ಯ ಸಹಕಾರ ಇಲಾಖೆಯು ಕ್ರಮಕೈಗೊಳ್ಳುತ್ತಿದೆ.

Ad Widget

Ad Widget <> Ad Widget

ಒಂದಕ್ಕಿಂತ ಹೆಚ್ಚು ಗ್ರಾಮಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವಿಭಜನೆಗೆ ಕಾರಣವಾಗುವ ಈ ನಿರ್ಧಾರವು ಸಹಕಾರ ಸಂಸ್ಥೆಗಳನ್ನು ಬಲಪಡಿಸುವ ಬದಲು, ಅವುಗಳ ಅಸ್ತಿತ್ವಕ್ಕೇ ಧಕ್ಕೆ ತರಲಿದೆ ಎಂದು ಸಹಕಾರ ರಂಗದ ಮುಖಂಡರು ಕಳವಳ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿ ಅವರು 2023ದ ಮಾರ್ಚ್ 17ರಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು, ‘ದೇಶದಲ್ಲಿ ಸಹಕಾರ ಚಳವಳಿಯನ್ನು ಬಲಪಡಿಸಬೇಕು. ಕೆಳಹಂತದ ಎಲ್ಲಾ ವರ್ಗದ ಜನರಿಗೆ ಸಹಕಾರ ತತ್ತ್ವ, ಅದರ ಮಹತ್ವ ಮತ್ತು ಚಳವಳಿಯನ್ನು ತಲುಪಿಸಲು ನೆರವಾಗಬೇಕು. ಈ ಸಲುವಾಗಿ ವಿವಿಧೋದ್ದೇಶದ ಪ್ರಾಥಮಿಕ ಸಹಕಾರ ಸಂಘಗಳು ಅಥವಾ ಡೇರಿ, ಮೀನುಗಾರಿಕೆಗೆ ಸಂಬಂಧಿಸಿದ ಪ್ರಾಥಮಿಕ ಸಹಕಾರ ಸಂಘಗಳು ಇಲ್ಲದಿರುವ ಪಂಚಾಯಿತಿ ಅಥವಾ ಗ್ರಾಮಗಳಲ್ಲಿ ನೂತನ ಸಂಘಗಳನ್ನು ಸ್ಥಾಪಿಸಬೇಕು. ಕೇಂದ್ರ ಸರ್ಕಾರದ ಯೋಜನೆಗಳಡಿ ಈ ಸಂಘಗಳನ್ನು ಬಲಪಡಿಸಬೇಕು’ ಎಂದು ಸೂಚಿಸಿದ್ದರು.

Ad Widget

Ad Widget

ಕೇಂದ್ರ ಸರ್ಕಾರದ ಸೂಚನೆಯಂತೆ ಈ ಯೋಜನೆಯನ್ನು ಜಾರಿಗೊಳಿಸಲು ರಾಜ್ಯ ಮಟ್ಟದ ಸಹಕಾರ ಅಭಿವೃದ್ಧಿ ಸಮಿತಿ (ಎಸ್‌ಸಿಡಿಸಿ) ಹಾಗೂ ಜಿಲ್ಲಾ ಮಟ್ಟದ ಸಹಕಾರ ಸಮಿತಿಗಳನ್ನು (ಡಿಸಿಡಿಸಿ) ರಚಿಸಿ ರಾಜ್ಯ ಸರ್ಕಾರವು 2023ರ ಜೂನ್ 2ರಂದು ಆದೇಶ ಹೊರಡಿಸಿತ್ತು

ಬೇರೆ–ಬೇರೆ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಕಾರ ಸಂಘಗಳನ್ನು ಒಗ್ಗೂಡಿಸಿ ಬಹುರಾಜ್ಯ ಸಹಕಾರ ಸಂಘಗಳನ್ನು ರಚಿಸುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಇಂತಹ ಬಹುರಾಜ್ಯ ಸಹಕಾರ ಸಂಘಗಳ ರಚನೆಯ ನಂತರ, ಸಹಕಾರ ಸಂಘಗಳ ಕಾರ್ಯನಿರ್ವಹಣೆಯಲ್ಲಿ ಭಾಗಿಯಾಗಲು ಕೇಂದ್ರ ಸರ್ಕಾರಕ್ಕೆ ಈ ತಿದ್ದುಪಡಿಯು ಅವಕಾಶ ಮಾಡಿಕೊಡುತ್ತದೆ. ಕೇಂದ್ರ ಸರ್ಕಾರಕ್ಕೆ ಈವರೆಗೆ ಇಲ್ಲದೇ ಇದ್ದ ಅಧಿಕಾರಗಳನ್ನು ಈ ತಿದ್ದುಪಡಿಯು ನೀಡುತ್ತದೆ. ಗುಜರಾತಿನ ಅಮೂಲ್‌ ಮತ್ತು ಕರ್ನಾಟಕದ ಕೆಎಂಎಫ್‌ ಒಟ್ಟಿಗೆ ಕೆಲಸ ಮಾಡುತ್ತವೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯು, ಈ ತಿದ್ದುಪಡಿ ಮಸೂದೆಯ ಕಾರಣದಿಂದ ಮಹತ್ವ ಪಡೆದಿದೆ.

ಉಪ್ಪಿನಂಗಡಿ ಸೊಸೈಟಿಯಿಂದ ಹೈಕೋರ್ಟ್ ತಡೆಯಾಜ್ಞೆ :

ಸಹಕಾರ ಸಂಘಗಳ ಜಂಟಿ ನಿರ್ದೇಶಕರ ಕಚೇರಿ ಮೈಸೂರು ಪ್ರಾಂತ ಇವರ ಜುಲೈ 28 ರ ಆದೇಶದಂತೆ ಮೈಸೂರು ಪ್ರಾಂತದ ದ.ಕ. ಜಿಲ್ಲೆಯನ್ನೂ ಒಳಗೊಂಡಂತೆ 8 ಜಿಲ್ಲೆಗಳ 646 ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಪ್ರತ್ಯೇಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ರಚಿಸುವ ಕುರಿತಾದ ಆದೇಶದ ವಿರುದ್ಧ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘವು ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯವು ಸದ್ರಿ ಆದೇಶಕ್ಕೆ ತಡೆಯಾಜ್ಞೆ ನೀಡಿದೆ ಎಂದು ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕೆ.ವಿ. ಪ್ರಸಾದ್ ತಿಳಿಸಿದ್ದಾರೆ.

ಈಗಾಗಲೇ ಸಹಕಾರಿ ಇಲಾಖಾ ಅಧಿಕಾರಿಗಳು ಹೊರಡಿಸಿದ ಆದೇಶದನ್ವಯ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಗ್ರಾಮಗಳನ್ನು ಬಿಡುಗಡೆ ಮಾಡಲು 2023 ರ ಅಗಸ್ಟ್ 25 ನೇ ತಾರೀಕನ್ನು ನಿಗದಿ ಪಡಿಸಲಾಗಿತ್ತು. ಗ್ರಾಮವಾರು ನೂತನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ರಚನೆಯ ಸಂಬಂಧ ಷೇರು ಸಂಗ್ರಹಣೆಗೆ ಪ್ರಸ್ತಾವನೆಯನ್ನು ಪಡೆದು ಅನುಮತಿ ನೀಡಲು ಕೊನೆಯ ದಿನಾಂಕವನ್ನು 2023 ರ ಸೆಪ್ಟೆಂಬರ್ 6 ರಂದು ನಿಗದಿಪಡಿಸಲಾಗಿದೆ.

ನೋಂದಣಿ ಸಂಬಂಧ ಪ್ರಸ್ತಾವೆಯನ್ನು ಪಡೆದು ಸಂಘವನ್ನು ನೋಂದಾಯಿಸಲು ಕೊನೆಯ ದಿನಾಂಕವಾಗಿ 2023ರ ಸೆಪ್ಟೆಂಬರ್ 16 ನೇ ತಾರೀಕನ್ನು ನಿಗದಿಗೊಳಿಸಲಾಗಿದೆ. ನೂತನವಾಗಿ ರಚನೆಯಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿಯನ್ನು ರಚಿಸಲು 2023ರ ಅಕ್ಟೋಬರ್ 31ನ್ನು ಕೊನೆಯ ದಿನಾಂಕವಾಗಿ ನಿಗದಿ ಪಡಿಸಲಾಗಿತ್ತು.

ಈಗಾಗಲೇ ಸಹಕಾರಿ ಸಂಘಗಳೇ ಇಲ್ಲದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೊಸದಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ರಚಿಸಲು ಈ ಕಾಲಮಿತಿ ಸೂಕ್ತವಾಗಿದೆಯಾದರೂ, ಜಿಲ್ಲೆಯ ಕೃಷಿಕರ ಜೀವನದೊಂದಿಗೆ ಬೆರೆತುಕೊಂಡಿರುವ ದ.ಕ ಜಿಲ್ಲೆಯಂತಹ ಪ್ರದೇಶಗಳಲ್ಲಿನ ಬಹುತೇಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಲವು ಗ್ರಾಮಗಳನ್ನು ಒಳಗೊಂಡು ಕಾರ್ಯನಿರ್ವಹಿಸುತ್ತಿದ್ದು, ಚಿನ್ನಾಭರಣಗಳ ಸಾಲ ಸೌಲಭ್ಯವೂ ಸೇರಿದಂತೆ ಸಮಾನಾಂತರ ಬ್ಯಾಂಕಿಂಗ್ ಸೇವೆ ಒದಗಿಸುತ್ತಿವೆ.

ನೂತನ ಆದೇಶದ ಅನ್ವಯ ಇನ್ನು ಮುಂದೆ ಪ್ರತಿ ಗ್ರಾಮಗಳಲ್ಲಿಯೂ 13 ಮಂದಿ ಆಡಳಿತ ಸದಸ್ಯರನ್ನು ಒಳಗೊಂಡ ಸ್ವಾಯತ್ತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರಚನೆಯಾಗಬೇಕಾಗಿದ್ದು, ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಸಂಘಗಳ ಆಸ್ತಿಯನ್ನು ವಿಂಗಡಿಸುವ ಬಗ್ಗೆ ಬಹಳಷ್ಟು ಗೊಂದಲಗಳು ಮೂಡಲಿದೆ. ಮಾತ್ರವಲ್ಲದೆ ಕೆಲವೊಂದು ಗ್ರಾಮಗಳು ವ್ಯವಹಾರಾತ್ಮಕವಾಗಿ ದುರ್ಬಲವಾಗಿದ್ದು, ಅಲ್ಲಿ ಸುದೃಢವಾದ ಕಟ್ಟಡದ ನಿರ್ಮಾಣವಾಗಬೇಕಾಗಿದ್ದು, ಸುಲಲಿತ ವ್ಯವಹಾರಕ್ಕೆ ಹಾಗೂ ಸುರಕ್ಷತಾ ವ್ಯವಹಾರಕ್ಕೆ ಪೂರಕವಾದ ಸಿಬ್ಬಂದಿಯನ್ನೂ ಹೊಂದಬೇಕಾಗಿದೆ.

ಗ್ರಾಮ – ಗ್ರಾಮದಲ್ಲಿ ಪ್ರತ್ಯೇಕ ಸಂಘ ನಿರ್ಮಾಣವಾಗುವುದರಿಂದ ವ್ಯವಹಾರವೂ ಕಿರಿದಾಗಿ ಲಾಭ ಕಡಿತಗೊಳ್ಳುವ ಅಪಾಯವೂ ಎದುರಾಗಲಿದೆ. ಈ ಎಲ್ಲಾ ಅಂಶಗಳನ್ನು ಆಧರಿಸಿ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘವು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ರಿಟ್ ಸಂಖ್ಯೆ : ಡಬ್ಲ್ಯೂಪಿ 17673/ 2023 ರ ವಿಚಾರಣೆ ನಡೆಸಿದ ಆರ್. ದೇವದಾಸ್ ರವರ ಏಕ ಸದಸ್ಯ ಪೀಠ ಸಹಕಾರ ಸಂಘಗಳ ಜಂಟಿ ನಿರ್ದೇಶಕರ ಕಚೇರಿ ಮೈಸೂರು ಪ್ರಾಂತ ಇವರ ಜುಲೈ 28 ರ ಆದೇಶಕ್ಕೆ ಮಂಗಳವಾರದಂದು ತಡೆಯಾಜ್ಞೆ ವಿಧಿಸಿದೆ ಎಂದು ಕೆ.ವಿ. ಪ್ರಸಾದ್ ತಿಳಿಸಿದರು.

ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಹಕಾರಿ ತತ್ವದ ಅಡಿಯಲ್ಲಿ ಜನರು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕೆಂಬ ಸರಕಾರದ ನಿಲುವು ಸ್ವಾಗಾತಾರ್ಹ. ಆದರೆ ಈಗಾಗಲೇ ಸುಸ್ಥಿತಿಯಲ್ಲಿ ನಡೆಯುತ್ತಿರುವ 5 ಗ್ರಾಮ ಪಂಚಾಯತ್ ವ್ಯಾಪ್ತಿಯನ್ನು ಹೊಂದಿರುವ ನಮ್ಮಂತಹ ಸಹಕಾರಿ ಸಂಘಗಳು 5 ಪ್ರತ್ಯೇಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಾಗಿ ವಿಭಜನೆಗೊಂಡಾಗ ಎಲ್ಲಾ ವ್ಯವಹಾರಗಳು ದುರ್ಬಲಗೊಳ್ಳುವ ಸಾಧ್ಯತೆ ಕಾಣಿಸಿದೆ. ಇಡೀ ಉತ್ತಮ ವ್ಯವಸ್ಥೆ ಬುಡಮೇಲುಗೊಳ್ಳುವ ಸಾಧ್ಯತೆ ಇರುವುದರಿಂದ ಈಗಾಗಲೇ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುವ ಸಹಕಾರಿ ವ್ಯವಸ್ಥೆಗೆ ಅಡಚನೆಯಾಗದಿರಲಿ ಎಂಬ ಕಾರಣಕ್ಕೆ ನ್ಯಾಯಾಲಯದಲ್ಲಿ ರಿಟ್ ಸಲ್ಲಿಸಿದ್ದೆವು. ಖ್ಯಾತ ನ್ಯಾಯವಾದಿ ಅಗರ್ತ ಕೇಶವ ಭಟ್‌ರವರ ವಾದ ಮಂಡನೆಯನ್ನು ಆಲಿಸಿದ ನ್ಯಾಯಾಲಯವು ಸರಕಾರದ ಆದೇಶಕ್ಕೆ ತಡೆಯಾಜ್ಞೆ ವಿಧಿಸಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ ಎಂದು ಬಿಜೆಪಿ ನೇತೃತ್ವದ ಸಹಕಾರ ಭಾರತಿಯ ಆಡಳಿತ ಹೊಂದಿರುವ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕೆ.ವಿ. ಪ್ರಸಾದ್ ಮಾಧ್ಯಮ ಪ್ರತಿನಿಧಿಗಳಲ್ಲಿ ತಿಳಿಸಿದ್ದಾರೆ.

Ad Widget
Click to comment

Leave a Reply

ಮಂಗಳೂರು

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

Published

on

Ad Widget

Ad Widget

Ad Widget

Ad Widget

ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.

Ad Widget

Ad Widget

ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

Ad Widget
Continue Reading

ಅಂತರ ರಾಜ್ಯ

Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್‌ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!

Published

on

Ad Widget

Ad Widget

Ad Widget

Ad Widget

ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Ad Widget

Ad Widget alt="Ad Widget"/>

Ad Widget

ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.

Ad Widget

Ad Widget <> Ad Widget

ಸಿಬಿಐ ಇನ್ಸ್‌ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.

ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.

Ad Widget

Ad Widget

ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್‌ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.

ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ

Published

on

Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget alt="Ad Widget"/>

Ad Widget

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.

Ad Widget

Ad Widget <> Ad Widget

ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

Ad Widget

Ad Widget

ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.

ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!