Connect with us

Uncategorized

Vivekananda Vidyavardhaka sangha ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ಮತ್ತೊಂದು ಗರಿ – ಬಿ ಫಾರ್ಮ್ ಕಾಲೇಜು ಆರಂಭಿಸಲು ಸರ್ಕಾರದ ಮಾನ್ಯತೆ- ಸೆ.4ರಂದು ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ಬಿ ಫಾರ್ಮಾ ಕಾಲೇಜನ್ನು ಆರಂಭಿಸಲು ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್‌ಗೆ ಸರಕಾರದಿಂದ ಮಾನ್ಯತೆ ದೊರೆತಿದ್ದು , ಕಾಲೇಜಿನ ಕೇಶವ ಸಂಕಲ್ಪ ಸಭಾಭವನದಲ್ಲಿ ಸೆ 4 ರಂದು ಇದರ ಉದ್ಘಾಟನೆ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕೆ.ಪ್ರಭಾಕರ ಭಟ್ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಕಾರ್ಯಕ್ರಮದ ಉದ್ಘಾಟಕರಾಗಿ ಭಾರತ ಸರಕಾರದ ಆರೋಗ್ಯ ರಾಜ್ಯ ಸಚಿವೆ ಡಾ.ಭಾರತಿ ಪ್ರವೀಣ್ ಪವಾರ್, ಅಧ್ಯಕ್ಷರಾಗಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕೆ.ಪ್ರಭಾಕರ ಭಟ್, ಮುಖ್ಯ ಅತಿಥಿಗಳಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ನಳಿನ್ ಕುಮಾರ್ ಕಟೀಲ್, ಪಿಸಿಐ ಸದಸ್ಯರು ಹಾಗೂ ರಾಜೀವ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್, ಬೆಂಗಳೂರು ಇದರ ಸಿಂಡಿಕೇಟ್ ಸದಸ್ಯರು ಆಗಿರುವ ಡಾ.ಎಸ್.ರಾಮಚಂದ್ರ ಸೆಟ್ಟಿ. ಹಾಗೂ ಭಟ್ ಬಯೋ-ಟೆಕ್ ಇಂಡಿಯಾ ಪೈಲಿ, ಬೆಂಗಳೂರು ಸಂಸ್ಥೆಯ ಅಧ್ಯಕ್ಷ ಮತ್ತೂರಿನ ಪ್ರವರ್ತಕ ಡಾ.ಶಾಮ ಭಟ್‌ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಯಂ. ಕೃಷ್ಣ ಭಟ್  ಭಾಗವಹಿಸಲಿದ್ದಾರೆ.

Ad Widget

Ad Widget alt="Ad Widget"/>

Ad Widget

ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ಸಂಸ್ಥೆಯು ವಿವೇಕಾನಂದ ವಿದ್ಯಾವರ್ಧಕ ಸಂಘದ 80 ನೇ ಸಂಸ್ಥೆಯಾಗಿದೆ. ಈಗಾಗಲೇ ಬಿ ಫಾರ್ಮಾ ತರಗತಿಗಳಿಗೆ ದಾಖಲಾತಿ ಆರಂಭಗೊಂಡಿದೆ. ಈಗಾಗಲೇ ಶೇ 70 ದಾಖಲಾತಿ ಪೂರ್ಣಗೊಂಡಿದೆ ಎಂದು ಭಟ್‌ ತಿಳಿಸಿದರು.

Ad Widget

Ad Widget <> Ad Widget

1965ರಲ್ಲಿ ವಿವೇಕಾನಂದ ಕಾಲೇಜಿನ ಆರಂಭದೊಂದಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆಯನ್ನು ಆರಂಭಿಸಿದ ವಿವೇಕಾನಂದ ವಿದ್ಯಾಸಂಸ್ಥೆ 2009ರಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ಎಂದು ಮರು ನಾಮಕರಣಗೊಂಡಿತ್ತು.

ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ಇದರ ಆಶ್ರಯದಲ್ಲಿ ಪ್ರಾರಂಭಗೊಳ್ಳಲಿರುವ ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್‌ಗೆ ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯ, ನವದೆಹಲಿ ಹಾಗೂ ಕರ್ನಾಟಕ ಸರ್ಕಾರದಿಂದ ಅಧಿಕೃತವಾಗಿ ಮಾನ್ಯತೆಯೂ ಈಗಾಗಲೇ ದೊರಕಿದೆ. ಇದಕ್ಕೆ ಸಂಬಂಧಿಸಿ ರಾಜೀವ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್, ಬೆಂಗಳೂರು ಇದರ ಅಡಿಯಲ್ಲಿ ಪ್ರಾರಂಭಿಸಲು ಕರ್ನಾಟಕ ಸರಕಾರ ಹಾಗೂ ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದಿಂದ ಕೂಡಾ ಅಧಿಕೃತವಾಗಿ ಒಪ್ಪಿಗೆ ದೊರೆತಿದ್ದು ಪ್ರಸಕ್ತ ವರ್ಷದಿಂದ ಬಿ.ಫಾರ್ಮಾ ಕೋರ್ಸುಗಳು ವಿವೇಕಾನಂದ ಕ್ಯಾಂಪಸ್ಸಿನಲ್ಲಿ ಆರಂಭಗೊಳ್ಳಲಿದೆ.

Ad Widget

Ad Widget

ಪುತ್ತೂರಿನ ಮೊದಲ ಬಿ ಫಾರ್ಮಾ ಕಾಲೇಜು

ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಪುತ್ತೂರು ತಾಲೂಕಿಗೆ ಬಿ ಫಾರ್ಮಾ ಕಾಲೇಜು ಕೂಡಾ ಒಂದು ಹೆಮ್ಮೆಯ ವಿಷಯವಾಗಿದೆ. ಫಾರ್ಮೆಸಿ ಕೋರ್ಸುಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮಂಗಳೂರನ್ನು ಅವಲಂಭಿಸಬೇಕಾದ ಅನಿವಾರತೆ ಇರುವುದನ್ನು ಕಂಡು ಗ್ರಾಮೀಣ ವಿದ್ಯಾರ್ಥಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಹುಟ್ಟಿಕೊಂಡ ವಿವೇಕಾನಂದ ವಿದ್ಯಾವರ್ಧಕ ಸಂಘದ ಇನ್ನೊಂದು ಕೂಸು ಈ ಫಾರ್ಮಸಿ ಕಾಲೇಜು. ಜೊತೆಗೆ ಮತ್ತೂರು ತಾಲೂಕಿನ ಮೊದಲ ಫಾರ್ಮಸಿ ಕಾಲೇಜು ಎಂಬುವುದು ಕೂಡಾ ಅತ್ಯಂತ ಗಮನಾರ್ಹ ಸಂಗತಿ.

ಕೋರ್ಸುಗಳು:

ಸ್ಪರ್ಧಾತ್ಮಕ ಕಾಲಘಟ್ಟದಲ್ಲಿ ವಿದ್ಯಾಭ್ಯಾಸ ಸಮರ್ಪಕವಾದ ಉದ್ಯೋಗ ಗಿಟ್ಟಿಸಿಕೊಳ್ಳುವುದು ವಿದ್ಯಾರ್ಥಿಗಳಿಗೆ ಒಂದು ಸವಾಲು ಇದ್ದಂತೆ. ಇಂತಹ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಬಳಿಕ ವಿದ್ಯಾರ್ಥಿಗಳು ಬಹು ಬೇಡಿಕೆಯ ಈ ಬಿ.ಫಾರ್ಮಾ ಕೋರ್ಸನ್ನು ಆಯ್ದುಕೊಳ್ಳಬಹುದು. ಇದರಲ್ಲಿ ಹೂಮನ್ ಪಿಸಿಯೋಲಾಜಿ, ಮೆಡಿಸಿನಲ್ ಕೆಮೆಸ್ಟ್ರಿ, ಫಾರ್ಮಕೋಲಾಜಿ, ಹರ್ಬಲ್ ಡ್ರಗ್ಸ್, ಬಯೋ ಕೆಮೆಸ್ಟ್ರಿ, ಪಾರ್ಮಾಸ್ಯುಟಿಕ್ಸ್ ಮುಂತಾದ ವಿಷಯಗಳನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡಬಹುದು.

ಪುತ್ತೂರಿನ ನೆಹರೂ ನಗರದಲ್ಲಿರುವ ವಿವೇಕಾನಂದ ಕ್ಯಾಂಪಸ್‌ನಲ್ಲಿ ಈಗಾಗಲೇ ಫಾರ್ಮೆಸಿ ಕಾಲೇಜನ್ನು ಆರಂಭಿಸಲು ಅಗತ್ಯವಿರುವ ಕಟ್ಟಡಗಳ ಕೆಲಸ ಪೂರ್ಣಗೊಂಡಿದೆ. ಅತ್ಯಾಧುನಿಕ ಸಲಕರಣೆಗಳನ್ನು ಒಳಗೊಂಡ ಸುಸಜ್ಜಿತ ಪ್ರಯೋಗಾಲಯ, ಅನುಭವಸ್ತ್ರ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಗಳು ಪೂರ್ಣಗೊಂಡಿದೆ. ಜೊತೆಗೆ ವಿದ್ಯಾರ್ಥಿಗಳ ಅನೂಕೂಲಕ್ಕೆ ತಕ್ಕಂತೆ ಹಸಿರು ವಾತಾವರಣವನ್ನು ಕಲ್ಪಿಸಿದ್ದು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ವೈಜ್ಞಾನಿಕ ಪತ್ರಿಕೆ ಹಾಗೂ ಕೋರ್ಸುಗಳಿಗೆ ಸಂಬಂಧಿಸಿದ ಪುಸ್ತಕಗಳನ್ನು ಒಳಗೊಂಡ ಗ್ರಂಥಾಲಯ ಹಾಗೂ ಡಿಜಿಟಲ್ ಗ್ರಂಥಾಲಯವೂ ಇದೆ. ಅಲ್ಲದೇ ಔಷಧೀಯ ಸಸ್ಯಗಳನ್ನು ಒಳಗೊಂಡ ಸಸ್ಯ ಶಾಸ್ತ್ರೀಯ ಉದ್ಯಾನ, ಜಿಮ್ ಹಾಗೂ ಕ್ರೀಡೆಗೆ ಸಂಬಂಧಿಸಿದ ಸೌಲಭ್ಯಗಳೂ ಇವೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ, ಎಟಿಎಂ ಬ್ಯಾಂಕ್, ಕೋ ಆಪರೇಟಿವ್‌ ಸೊಸೈಟಿ, ಕೆಫೆಟೇರಿಯಾ ಹಾಗೂ ಬಸ್ ವ್ಯವಸ್ಥೆಗಳೂ ಲಭ್ಯವಿದೆ.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಯಂ. ಕೃಷ್ಣ ಭಟ್ ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ಸಂಸ್ಥೆಯ ಅಧ್ಯಕ್ಷ ಎಂ ಗೋಪಿನಾಥ್‌ ಶೆಟ್ಟಿ , ಸಂಚಾಲಕ ಗೋವಿಂದ ಪ್ರಕಾಶ್‌ ಸಾಯ, ಪ್ರಾಂಶುಪಾಲ ಡಾ| ಗುರುರಾಜ ಎಂ .ಪಿ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು

Ad Widget
Click to comment

Leave a Reply

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!