ದಕ್ಷಿಣ ಕನ್ನಡ
ಪ್ರಪಾತಕ್ಕೆ ಉರುಳಿತು ವಾಹನ – ಮರ ಉಳಿಸಿತು ಪ್ರಾಣ : ಚಾರ್ಮಾಡಿ ಘಾಟ್ ನಲ್ಲಿ 100 ಅಡಿ ಕಂದಕಕ್ಕೆ ಬಿದ್ದ ಪುತ್ತೂರಿನಿಂದ ತೆರಳಿದ್ದ ಲಾರಿ
ಚಿಕ್ಕಮಗಳೂರು, ಸೆ.16: ಆಗಷ್ಟ್ ತಿಂಗಳಿನಲ್ಲಿ ತೆರೆಮರೆಗೆ ಸರಿದಿದ್ದ ಮಳೆರಾಯ ಸೆಪ್ಟಂಬರ್ ತಿಂಗಳಿನಲ್ಲಿ ಮತ್ತೆ ಕರಾವಳಿ ಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿ ತನ್ನ ಪ್ರತಾಪ ತೋರಿಸುತ್ತಿದೆ. ಮಳೆ ಹಿನ್ನಲೆ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಆವರಿಸಿದ್ದು, ತತ್ಪರಿಣಾಮ ಸಮರ್ಪಕವಾಗಿ ರಸ್ತೆ ಕಾಣಿಸದೆ ಶುಕ್ರವಾರ ರಾತ್ರಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ನೂರು ಅಡಿ ಪ್ರಪಾತಕ್ಕೆ ಉರುಳಿಬಿದ್ದಿದೆ.
ಅಪಘಾತಕ್ಕಿಡಾದ ಲಾರಿ ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲ್ ಹೇರಿಕೊಂಡು ಹೋಗುತ್ತಿತ್ತು.
ಚಾರ್ಮಾಡಿ ಘಾಟಿಯ ಸೋಮನಕಾಡು ಎಂಬಲ್ಲಿ ಈ ಘಟನೆ ನಡೆದಿದ್ದು ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಸಣ್ಣಪುಟ್ಟ ಗಾಯಗಳಾಗಿವೆ.ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.
ಚಾರ್ಮಾಡಿ ಘಾಟಿಯಲ್ಲಿ ಆವರಿಸಿದ ದಟ್ಟ ಮಂಜಿನಿಂದ ದಾರಿ ಕಾಣದೆ ಲಾರಿಯು ಮೊದಲಿಗೆ ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದಿದೆ. ಬಳಿಕ ಅಲ್ಲಿಂದ 100 ಅಡಿ ಪ್ರಪಾತಕ್ಕೆ ಉರುಳಿದೆ. ಈ ವೇಳೆ ಲಾರಿ ಅಲ್ಲಿದ್ದ ಭಾರೀ ಮರವೊಂದರಲ್ಲಿ ಸಿಲುಕಿಕೊಂಡಿದೆ. ಇಲ್ಲವಾಗಿದ್ದಲ್ಲಿ ಮರವು ಸಾವಿರ ಅಡಿ ಪ್ರಪಾತಕ್ಕೆ ಉರುಳಿಬಿದ್ದು, ಭಾರೀ ದುರಂತ ಸಂಭವಿಸುತ್ತಿತ್ತು ಎನ್ನಲಾಗಿದೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.




















