ಬೆಂಗಳೂರು
Mahesh Vikram Hegde | ಕಟೀಲ್ ಕೈನಲ್ಲೂ ಏನೂ ಮಾಡಲ್ಲಾಗಿಲ್ಲ – ಕೇಂದ್ರವೇ ನಮ್ಮ ಕೈಯಲ್ಲಿದೆ ಸೌಜನ್ಯಳಿಗಾದ ಗತಿ ನಿನ್ನ ಮಗಳಿಗೂ ಆಗ್ತದೆ : ಪೋಸ್ಟ್ ಕಾರ್ಡ್ ನ ಮಹೇಶ್ ವಿಕ್ರಮ್ ಹೆಗ್ಡೆ ವಿರುದ್ಧ ದೂರು ದಾಖಲು
ಬೆಂಗಳೂರು (ಸೆ.18): ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೋರ್ವರಿಗೆ ಬೆದರಿಕೆ ಮಾನಹಾನಿಕಾರ ಕಾಮೆಂಟ್ ಹಾಕಿದ ಆರೋಪ ಹಿನ್ನೆಲೆ ಪೋಸ್ಟ್ ಕಾರ್ಡ್ ಸ್ಥಾಪಕ ಮಹೇಶ್ ವಿಕ್ರಮ್ ಹೆಗಡೆ (Mahesh Vikram Hegde) ವಿರುದ್ಧ ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ದೂರುದಾರ ಸುರೇಶ್ ಬಾಬು ಮತ್ತು ಆತನ ಮಗಳ ಬಗ್ಗೆ ವಿಕ್ರಮ್ ಹೆಗಡೆ ಟಿವಿ ವಿಕ್ರಮ್ ಅಧಿಕೃತ ಪೇಜ್ನಲ್ಲಿ ಮಾನಹಾನಿಯಾಗುವ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಹೀಗಾಗಿ ಆರೋಪಿ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ದೂರದಾರ ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದಾರೆ.
ದೂರುದಾರರಿಗೆ ಕರೆ ಮಾಡಿರುವ ಮಹೇಶ್ ವಿಕ್ರಮ್ ಹೆಗಡೆ, ನಾವು ಸೌಜನ್ಯಳನ್ನೇ ಬಿಟ್ಟಿಲ್ಲ. ಅಂತಹ ಕಟೀಲ್ ಕೈನಲ್ಲೂ ಏನೂ ಮಾಡಲು ಆಗಿಲ್ಲ. ಇನ್ನು ನೀನು ಏನ್ ಕಿತ್ಕೊಳ್ತಿಯಾ? ಎಂದು ಬೆದರಿಕೆ ಹಾಕಿದ್ದಲ್ಲದೇ, ಕೇಂದ್ರ ಸರ್ಕಾರ ನಮ್ಮ ಕೈಯಲ್ಲಿದೆ ಸೌಜನ್ಯಳಿಗೆ ಆದ ಗತಿಯೇ ನಿನ್ನ ಮಗಳಿಗೆ ಆಗುತ್ತೆ ಎಂಬ ರೀತಿ ದೂರುದಾರರಿಗೆ ಬೆದರಿಕೆಯೊಡ್ಡಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಹೀಗಾಗಿ ಆರೋಪಿ ವಿರುದ್ಧ ಸೂಕ್ತ ಕ್ರಮಕ್ಕೆ ದೂರುದಾರ ಸುರೇಶ ಬಾಬು ಎಂಬುವವರಿಂದ ದೂರು ದಾಖಲು ಮಾಡಲಾಗಿದೆ.
ರಾಜಕೀಯ
Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.
1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಅಪರಾಧ
Gym protein powder-ಸ್ಟೆರಾಯ್ಡ್, ಹಾನಿಕಾರಕ ರಾಸಾಯನಿಕ ಬೆರೆಸಿರುವ ಶಂಕೆ; ಜಿಮ್ ಪ್ರೊಟೀನ್ ಪೌಡರ್ ಗುಣಮಟ್ಟ ಪರೀಕ್ಷೆಗೆ ಸರ್ಕಾರ ಸಿದ್ಧತೆ
ಜಿಮ್ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು, ನ.25: ಜಿಮ್ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜಿಮ್ಗೆ ಹೋಗುವವರು ಸೇವಿಸುವ ಪ್ರೊಟೀನ್ ಉತ್ಪನ್ನಗಳ ಮೇಲೆ ಆರೋಗ್ಯ ಇಲಾಖೆ ನಿಗಾ ಇರಿಸಲಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಕೆಲವು ಪ್ರೊಟೀನ್ ಉತ್ಪನ್ನಗಳು ಗುಣಮಟ್ಟದಿಂದ ಕೂಡಿದ್ದರೆ, ಇನ್ನು ಕೆಲವು ಉತ್ಪನ್ನಗಳು ಎಲ್ಲಿಂದ ಪೂರೈಕೆಯಾಗುತ್ತವೆ ಎಂಬುದೇ ಸ್ಪಷ್ಟವಾಗಿಲ್ಲ. ಹೀಗಾಗಿ ರಾಜ್ಯಾದ್ಯಂತ ಮಾರಾಟವಾಗುತ್ತಿರುವ ಪ್ರೊಟೀನ್ ಪೌಡರ್ ಮತ್ತು ಸಪ್ಲಿಮೆಂಟ್ಗಳನ್ನು ಪರೀಕ್ಷಿಸಲು ನಿರ್ಧರಿಸಲಾಗಿದೆ. ಮೆಡಿಕಲ್ ಸ್ಟೋರ್ಗಳು, ಜಿಮ್ ಕೇಂದ್ರಗಳು ಸೇರಿದಂತೆ ವಿವಿಧೆಡೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
ಯಾಕೆ ಈ ಪರೀಕ್ಷೆ?
ಮಾರುಕಟ್ಟೆಯಲ್ಲಿ ಅನಧಿಕೃತವಾಗಿ ಮಾರಾಟವಾಗುವ ಕೆಲವು ಪ್ರೊಟೀನ್ ಪೌಡರ್ಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪ್ರೊಟೀನ್ ಅಂಶವಿರುವುದು ಹಾಗೂ ಅವುಗಳಿಗೆ ಸ್ಟೆರಾಯ್ಡ್ಗಳು ಮತ್ತು ಹಾನಿಕಾರಕ ರಾಸಾಯನಿಕಗಳನ್ನು ಬೆರೆಸುವ ಸಾಧ್ಯತೆಗಳ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ಈ ಹಿಂದೆಯೇ ಕಳವಳ ವ್ಯಕ್ತಪಡಿಸಿತ್ತು.
ಅಲ್ಲದೆ, ಅಗತ್ಯ ಪರವಾನಗಿ ಇಲ್ಲದೆ ಜಿಮ್ಗಳಲ್ಲಿ ನೇರವಾಗಿ ಸಪ್ಲಿಮೆಂಟ್ಗಳನ್ನು ಮಾರಾಟ ಮಾಡುವುದು ಕಾನೂನುಬಾಹಿರವಾಗಿದೆ. ಹಲವು ಪ್ರೊಟೀನ್ ಸಪ್ಲಿಮೆಂಟ್ಗಳ ಪ್ಯಾಕೆಟ್ಗಳ ಮೇಲೆ ನಮೂದಿಸಿರುವ ಪ್ರೊಟೀನ್ ಪ್ರಮಾಣಕ್ಕೂ, ಉತ್ಪನ್ನದಲ್ಲಿರುವ ನೈಜ ಪ್ರಮಾಣಕ್ಕೂ ವ್ಯತ್ಯಾಸವಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಉತ್ಪನ್ನಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಪರಿಶೀಲಿಸಲು ಸರ್ಕಾರ ಮುಂದಾಗಿದೆ.
ಬಿಗ್ ನ್ಯೂಸ್
Tulu language-ತುಳು ಭಾಷೆ ಅನುಷ್ಠಾನಕ್ಕೆ ಸರ್ಕಾರದಿಂದ ಅಧಿಕೃತ ಆದೇಶ; ಸರ್ಕಾರಿ ಕಚೇರಿಗಳಲ್ಲೂ ತುಳುವಿಗೆ ಮನ್ನಣೆ..!
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯಾಗಿ ಪರಿಗಣಿಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಷ್ಠಾನಕ್ಕೆ ಅಧಿಕೃತ ಆದೇಶ ಹೊರಡಿಸಿದೆ.
ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯಾಗಿ ಪರಿಗಣಿಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಷ್ಠಾನಕ್ಕೆ ಅಧಿಕೃತ ಆದೇಶ ಹೊರಡಿಸಿದೆ.
ಕಳೆದ ತಿಂಗಳು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ರಾಜ್ಯದ ಎರಡನೇ ಭಾಷೆಯ ಸ್ಥಾನಮಾನ ನೀಡಲು ಅನುಮೋದನೆ ನೀಡಲಾಗಿತ್ತು. ಇದರ ಮುಂದುವರಿದ ಭಾಗವಾಗಿ ಬುಧವಾರ ಸರ್ಕಾರ ಅನುಷ್ಠಾನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಹೊಸ ಆದೇಶದ ಪ್ರಕಾರ, ತುಳು ಭಾಷೆಯನ್ನು ಕನ್ನಡ ಲಿಪಿಯಲ್ಲಿ ಬಳಸಬೇಕಾಗಿದೆ. ಜಿಲ್ಲಾಡಳಿತ ಕಚೇರಿಗಳಲ್ಲಿ ತುಳು ಭಾಷೆ ಅನುಷ್ಠಾನಕ್ಕಾಗಿ ಪ್ರತ್ಯೇಕ ಘಟಕ ಸ್ಥಾಪಿಸುವುದರ ಜೊತೆಗೆ ತುಳು ಭಾಷಾಂತರಕಾರರನ್ನು ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ.
ಇದಲ್ಲದೆ, ಸಾರ್ವಜನಿಕರು ಸಲ್ಲಿಸುವ ಮನವಿ ಹಾಗೂ ಅರ್ಜಿಗಳನ್ನು ತುಳು ಭಾಷೆಯಲ್ಲಿಯೂ ಸ್ವೀಕರಿಸಬೇಕು. ಅವುಗಳಿಗೆ ನೀಡುವ ಉತ್ತರಗಳನ್ನು ಕನ್ನಡದ ಜೊತೆಗೆ ತುಳು ಭಾಷೆಯಲ್ಲಿಯೂ ಒದಗಿಸಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.
-
Uncategorized8 hours ago
ಪುತ್ತೂರು : ಅಡಿಕೆ ತೆಗೆಯುವಾಗ ಕಂಗಿನಿಂದ ಬಿದ್ದು ಗಂಭೀರ ಗಾಯ: ಚಿಕಿತ್ಸೆಗೆ ₹8 ಲಕ್ಷದ ಅಗತ್ಯ; ದಾನಿಗಳ ನೆರವಿನ ನಿರೀಕ್ಷೆಯಲ್ಲಿ ಬಡ ಕುಟುಂಬ
-
Uncategorized14 hours ago
ಕಾರ್ಯಕರ್ತರ ಶ್ರಮದಲ್ಲಿ ನೆಲಪ್ಪಾಲು ವೀರಾಂಜನೇಯ ಕ್ಷೇತ್ರ ನಿರ್ಮಾಣ: ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ | ಶ್ರೀ ಪಂಚಮುಖಿ ಆಂಜನೇಯ ಯಾಗದ ಅಂಗವಾಗಿ ಧರ್ಮಸಭೆ
-
Uncategorized7 hours ago
ಗ್ರಾಮೀಣ ವಿದ್ಯಾರ್ಥಿಗಳಿಗೆ ಮಡಿಯಾಲದಲ್ಲಿ ಉಚಿತ ಎಐ ಪದವಿ ಶಿಕ್ಷಣ ಕೇಂದ್ರ; ನ. 30ರಂದು ನಾರಾಯಣ ಭಟ್ ಜನ್ಮಶತಾಬ್ದಿ ಸ್ಮರಣಾರ್ಥ ಭೂಮಿಪೂಜೆ; 2027–28ರಿಂದ 30 ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಯೋಜನೆ

















