Connect with us

ಬೆಂಗಳೂರು

Mahesh Vikram Hegde | ನಮ್ಮ ಟಿವಿ ವಿಕ್ರಮದ ಮುಮ್ತಾಜ್ ಬಗ್ಗೆ ಸುರೇಶ್ ಕೆಟ್ಟದಾಗಿ ಕಮೆಂಟ್ ಹಾಕಿದ್ದ : ದೂರು ದಾಖಲಾಗುತ್ತಿದ್ದಂತೆ ಮಹೇಶ್ ವಿಕ್ರಮ್ ಹೆಗ್ಡೆ ಪ್ರತಿಕ್ರಿಯೆ

Published

on



Ad Widget

Ad Widget

Ad Widget

Ad Widget

ಪೋಸ್ಟ್ ಕಾರ್ಡ್ ನ ಮಹೇಶ್ ವಿಕ್ರಮ್ ಹೆಗ್ಡೆ (Mahesh Vikram Hegde) ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ. ಸುರೇಶ್ ಎಂಬವರು ತನ್ನ ಮಗಳಿಗೆ ಅವಹೇಳನ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದು, ಈ ಬಗ್ಗೆ ಮಹೇಶ್ ಪ್ರತಿಕ್ರಿಯಿಸಿದ್ದು, ಸರಕಾರ ಇದೆ ಎಂಬ ಮಾತ್ರಕ್ಕೆ ಈ ಮಟ್ಟಕ್ಕೆ ಸುಳ್ಳು ಹೇಳಿಕೆಗಳೇ? ಕೇಸು ಎಫ್‌ಐ‌ಆರ್ ಗಳೇ?

Ad Widget

Ad Widget

Ad Widget

Ad Widget

ಕೆಲ ದಿನಗಳ ಹಿಂದೆ‌ ನನ್ನ ಫೇಸ್‌ಬುಕ್‌ ವಾಲ್‌ನಲ್ಲಿ ಬಂದು ನಮ್ಮ ಟಿವಿ ವಿಕ್ರಮದ ಮುಮ್ತಾಜ್ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಹಾಕಿದ ವ್ಯಕ್ತಿ, ಕೆಲ ವರ್ಷಗಳ ಹಿಂದೆ ಆತನ ಅಕ್ಕನ ಮಗಳ ವಿಚಾರದಲ್ಲಿ ನನ್ನ ಬಳಿ‌ ಸಹಾಯಕ್ಕೆ ಅಂಗಲಾಚಿದ್ದ. ಅಂದು ನಾನು ಆತ ಕಾಂಗ್ರೆಸ್ ಅಥವಾ ಯಾರೋ ಎಂದು ನೋಡದೆ ಹೆಣ್ಣು ಮಗಳ ವಿಚಾರಕ್ಕಾಗಿ ಸಹಾಯ ಮಾಡಿದ್ದೆ ಮತ್ತು ಕಾನೂನು ಪ್ರಕಾರವೇ ಆತನ ಸಹಾಯಕ್ಕೆ ನಿಂತಿದ್ದೆ. ಅಂದು ಕಣ್ಣೀರು ಸುರಿಸಿದ್ದ ವ್ಯಕ್ತಿ ಇಂದು ನನ್ನ ಮೇಲೆ ಸುಳ್ಳು ಹೇಳಿಕೆ ನೀಡಿ ಕೇಸ್ ಹಾಕಿದ್ದಾನೆ.
ಪರವಾಗಿಲ್ಲ ಕೇಸ್ ಕೋರ್ಟ್ ನನಗೆ ಹೊಸದೇನಲ್ಲ, ಆದರೆ ಈ ಮಟ್ಟಕ್ಕೆ ಸುಳ್ಳು ಹೇಳಿ ಕೇಸ್???

Ad Widget

Ad Widget

Ad Widget alt="Ad Widget"/>

Ad Widget

ಈ ಕೆಳಗಿನ Screen shot ನಲ್ಲಿ ಎಲ್ಲವೂ ಸ್ಪಷ್ಟವಾಗಿ ಇದೆ, ಇದು ಹತ್ತು ದಿನಗಳ ಹಿಂದಿನ ಘಟನೆ. ಸರಿಯಾಗಿ ಗಮನಿಸಿ ಯಾವುದು ಸತ್ಯ ಎಂಬುದನ್ನು.

Ad Widget

Ad Widget <> Ad Widget

“ನೀನು ಕಾಂಗ್ರೆಸಿಗನಾದರೂ ನಿನ್ನ ಮನೆಯ ಹೆಣ್ಣು ಮಗಳಿಗೆ ನ್ಯಾಯ ಕೊಡಿಸಿದ ನಾನು ಬೇರೆ ಹೆಣ್ಣು ಮಕ್ಕಳನ್ನು ಬಿಟ್ಟು ಬಿಡುತ್ತೇನೆಯೇ!” ಎಂದು ನಾನು‌ ಹಾಕಿದ್ದ ಕಾಮೆಂಟ್‌ಗೆ ಆತ ಬೇರೆಯೇ ಅರ್ಥ ಕಲ್ಪಿಸಿ ಕೇಸ್ ನೀಡಿದ್ದಾನೆ.



Ad Widget

ನೀನು ನೀಡಿದ ದೂರಿನಲ್ಲಿ ಇರುವಂತೆ ನಾನು ಆ ರೀತಿ ಹೇಳಿಕೆ ನೀಡಿದ್ದೇನೆ ಎಂಬ ಒಂದೇ ಒಂದು ಸಾಕ್ಷಿ ತೋರಿಸಿದರೆ ಇದೇ ಪೋಸ್ಟ್‌ಕಾರ್ಡ್ ಸಂಸ್ಥೆಯನ್ನು ಇಂದೇ ಮುಚ್ಚುತ್ತೇನೆ… ನಾನು ಸತ್ಯದ ಪರ ಇರುವಾಗ ನಿನ್ನಂತಹ ಸುಳ್ಳುಕೋರರ ಆರೋಪ/ಕೇಸ್‌ಗೆ ಖಂಡಿತವಾಗಿಯೂ ಹೆದರಿ ಕುಗ್ಗುವವನು ನಾನಲ್ಲ!

Ad Widget

Ad Widget

ಪರವಾಗಿಲ್ಲ, ಕಾನೂನು ಮೂಲಕವೇ ಹೋರಾಟಕ್ಕೆ ಹೆಜ್ಜೆ ಇಡುತ್ತೇನೆ, ಅಂದು ಬೇಡಿಕೊಂಡ‌ ಕೈಗಳಿಂದಲೇ ಮತ್ತೆ ನಮಸ್ಕಾರ ಮಾಡಿಸಿಕೊಳ್ಳುತ್ತೇನೆ!

ಕೆಳಗಿನ ಲಿಂಕ್ ಓದಿ

Ad Widget
Click to comment

Leave a Reply

ರಾಜಕೀಯ

Siddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ

Published

on



Ad Widget

Ad Widget

Ad Widget

Ad Widget

ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿರುವ ಅರ್ಜಿಯಲ್ಲಿ ಖಾಸಗಿ ಸುದ್ದಿ ವಾಹಿನಿಗಳು ಹಾಗೂ ಪತ್ರಿಕೆಗಳು ಸೇರಿದಂತೆ ಒಟ್ಟು 42 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಸ್ಟಿಂಗ್ ಆಪರೇಷನ್ ನಡೆಯುತ್ತಿರುವುದು ನಿಜ. ಆದರೆ ಇದನ್ನು ಮಾಡಿಸುತ್ತಿರುವವರು ಯಾರು ಎಂಬುದು ಬಹಿರಂಗವಾಗಬೇಕು ಎಂದು ಹೇಳಿದ್ದರು.



Ad Widget

ಇದೀಗ ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ಕೋರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Ad Widget

Ad Widget

‘ಸುಳ್ಳು ಪ್ರಚಾರ ತಡೆಯಲು ತಡೆಯಾಜ್ಞೆ ಕೋರುತ್ತಿದ್ದೇವೆ’: ಸಿದ್ದರಾಮಯ್ಯ
ಸಾಮಾಜಿಕ ಜಾಲತಾಣಗಳಲ್ಲಿ ಸ್ಟಿಂಗ್ ಆಪರೇಷನ್ ಕುರಿತು ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮುಂದಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೋಮವಾರ ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ತಾವು ಭಾಗವಹಿಸಬೇಕಿತ್ತು, ಆದರೆ ಹೋಗಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.

ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಹಾಗೂ ಮುಂದಿನ ಆದೇಶದತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.

Ad Widget
Continue Reading

ರಾಜಕೀಯ

Vijayendra-ಚುನಾವಣೆ ನಡೆದರೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿ ಸೇರುವ ಸಾಧ್ಯತೆ-ವಿಜಯೇಂದ್ರ

Published

on



Ad Widget

Ad Widget

Ad Widget

Ad Widget

ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸದಸ್ಯರು ಸೇರಿದಂತೆ ಕಾಂಗ್ರೆಸ್‌ನ 25 ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸದಸ್ಯರು ಸೇರಿದಂತೆ ಕಾಂಗ್ರೆಸ್‌ನ 25 ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಶಂಭುಲಿಂಗೇಗೌಡ ಹಲಗೇರಿ ನೇತೃತ್ವದಲ್ಲಿ ನಿವೃತ್ತ ಶಿಕ್ಷಕರು ಬಿಜೆಪಿಗೆ ಸೇರ್ಪಡೆಯಾದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯೇಂದ್ರ, ರಾಜ್ಯದ ರಾಜಕೀಯ ವಾತಾವರಣ ಬದಲಾಗುತ್ತಿದೆ ಎಂದು ಹೇಳಿದರು.

Ad Widget

Ad Widget <> Ad Widget

ಕಳೆದ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ಬಹುಮತ ನೀಡಿದ್ದರೂ, ಮುಂದಿನ ಚುನಾವಣೆಯಲ್ಲಿ ಇದೇ ಪರಿಸ್ಥಿತಿ ಮರುಕಳಿಸುವುದಿಲ್ಲ. ರಾಹುಲ್ ಗಾಂಧಿ ಅವರ ನಾಯಕತ್ವದಿಂದ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ಇನ್ನಷ್ಟು ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಅವರು ಅಭಿಪ್ರಾಯಪಟ್ಟರು.



Ad Widget

ಸರ್ಕಾರ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ: ವಿಜಯೇಂದ್ರ
ರಾಜ್ಯದಲ್ಲಿ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದರೂ ಘೋಷಿಸಿದ ಪರಿಹಾರವನ್ನು ಸಮರ್ಪಕವಾಗಿ ನೀಡಿಲ್ಲ ಎಂದು ವಿಜಯೇಂದ್ರ ಆರೋಪಿಸಿದರು. ರೈತರಿಗೆ ಪರಿಹಾರ ಒದಗಿಸಲು ಸಾಧ್ಯವಾಗದ ಸರ್ಕಾರ, ಸ್ಟಿಂಗ್ ಆಪರೇಷನ್ ವಿಚಾರವನ್ನು ಮುನ್ನೆಲೆಗೆ ತಂದು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು ಟೀಕಿಸಿದರು.

Ad Widget

Ad Widget

ರಾಜ್ಯ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ. ಆದರೆ, ಈ ವಾಸ್ತವವನ್ನು ಒಪ್ಪಿಕೊಳ್ಳುವ ಧೈರ್ಯ ಮುಖ್ಯಮಂತ್ರಿ ಮತ್ತು ಸರ್ಕಾರಕ್ಕಿಲ್ಲ. ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದೇ ರಾಜ್ಯ ಸರ್ಕಾರದ ಕೆಲಸವಾಗಿದೆ ಎಂದು ದೂರಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಮನೆ ಕಳೆದುಕೊಂಡವರಿಗೆ ₹5 ಲಕ್ಷ ಪರಿಹಾರ ಹಾಗೂ ಮನೆ ಬಳಕೆಯ ಪಾತ್ರೆಗಳಿಗೆ ₹10 ಸಾವಿರ ನೀಡಲಾಗಿತ್ತು ಎಂದು ಅವರು ಸ್ಮರಿಸಿದರು.

ತೈಲ ಕಂಪನಿಗಳಿಗೆ ಬಾಕಿ ಪಾವತಿಸದ ಕಾರಣ ಸಾರಿಗೆ ಬಸ್‌ಗಳು ಡಿಪೊಗಳಲ್ಲೇ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದ ವಿಜಯೇಂದ್ರ, ಹಣಕಾಸಿನ ಸಮಸ್ಯೆಯ ನಡುವೆಯೂ ತಾಲೂಕುಗಳಲ್ಲಿ ರಿಂಗ್ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ಉದ್ದೇಶದ ಬಗ್ಗೆಯೂ ಪ್ರಶ್ನೆ ಎತ್ತಿದರು. ಈ ಯೋಜನೆಗಳ ಮೂಲಕ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ವಿರುದ್ಧ ಅರಾಜಕತೆ ಆರೋಪ
ಎಸ್‌ಐಆರ್ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿರುವಾಗ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಭೇಟಿ ಮಾಡಲು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಮನವಿ ಮಾಡಿರುವುದು ಸರಿಯಲ್ಲ ಎಂದು ವಿಜಯೇಂದ್ರ ಟೀಕಿಸಿದರು.

ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಬಾಂಗ್ಲಾದೇಶ ಮತ್ತು ಶ್ರೀಲಂಕಾದಲ್ಲಿ ನಡೆದ ಘಟನೆಗಳ ಮಾದರಿಯಲ್ಲಿ ಭಾರತದಲ್ಲಿಯೂ ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗಳು ಆತಂಕಕಾರಿ ಎಂದು ಹೇಳಿದರು.

ಕಾಂಗ್ರೆಸ್‌ಗೆ ಜನರ ವಿಶ್ವಾಸ ಗಳಿಸಿ ಅಧಿಕಾರಕ್ಕೆ ಬರುವ ಸಾಮರ್ಥ್ಯವಿದ್ದರೆ ಅದನ್ನು ಸಾಧಿಸಲಿ. ಸುಳ್ಳುಗಳನ್ನು ಪದೇಪದೆ ಹೇಳಿ ಗೊಂದಲ ಸೃಷ್ಟಿಸುವುದರಿಂದ ಯಾವುದೇ ಸಾಧನೆ ಸಾಧ್ಯವಿಲ್ಲ ಎಂದು ಟೀಕಿಸಿದರು.

ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಕಾರಜೋಳ, ಶಾಸಕ ದೊಡ್ಡನಗೌಡ ಪಾಟೀಲ್, ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಎನ್. ರವಿಕುಮಾರ್ ಉಪಸ್ಥಿತರಿದ್ದರು.

Ad Widget
Continue Reading

ರಾಜಕೀಯ

Siddaramaiah-ವಿಡಿಯೋ ಮೂಲಕ ತೇಜೋವಧೆ ಆರೋಪ; ಸೈಬರ್ ಕ್ರೈಂ ಪೊಲೀಸರಿಗೆ ಸಿದ್ದರಾಮಯ್ಯ ದೂರು

Published

on



Ad Widget

Ad Widget

Ad Widget

Ad Widget

ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸೃಷ್ಟಿಸಿ, ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸೃಷ್ಟಿಸಿ, ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಿದ್ದರಾಮಯ್ಯ ಅವರು ತಮ್ಮ ಆಪ್ತರ ಮೂಲಕ ದೂರು ಸಲ್ಲಿಸಿದ್ದು, ಈ ಸಂಬಂಧ ಈಗಾಗಲೇ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಯೂಟ್ಯೂಬ್ ಚಾನೆಲ್‌ವೊಂದರಲ್ಲಿ ತಮ್ಮ ಕುರಿತ ವಿಡಿಯೋವನ್ನು ಸೃಷ್ಟಿಸಿ ಪ್ರಸಾರ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸಿದ್ಧಪಡಿಸಿ, ಅವುಗಳನ್ನು ಹರಡುವ ಮೂಲಕ ತಮ್ಮ ತೇಜೋವಧೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಸಿದ್ದರಾಮಯ್ಯ ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.



Ad Widget

ಸ್ಪಿಂಗ್ ಆಪರೇಷನ್‌ಗೆ ತಡೆಯಾಜ್ಞೆ ಕೋರಿ ಅರ್ಜಿ
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಸಿಸಿಎಚ್-18ನೇ ನ್ಯಾಯಾಲಯದಲ್ಲಿ ‘ಸ್ಪಿಂಗ್ ಆಪರೇಷನ್’ಗೆ ಸಂಬಂಧಿಸಿ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಕುರಿತು ನ್ಯಾಯಾಲಯ ನಾಳೆ ಆದೇಶ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading