Uncategorized
ಚಿಕಿತ್ಸೆಗೆಂದು ಆಸ್ಫತ್ರೆಗೆ ಬಂದಿದ್ದ ಬಂಟ್ವಾಳದ ಬಿಜೆಪಿ ಮುಖಂಡ ವೈದ್ಯರ ಪರಿಶೀಲನೆಗೂ ಮೊದಲೇ ಕುಸಿದು ಬಿದ್ದು ಮೃತ್ಯು
ಮಂಗಳೂರು: ಚಿಕಿತ್ಸೆಗೆಂದು ಆಸ್ಪತ್ರೆಗೆ ಆಗಮಿಸಿದ ಜ್ವರಪೀಡಿತ ವ್ಯಕ್ತಿಯೊಬ್ಬರು ವೈದ್ಯರು ತಪಾಸಣೆಗೂ ಮುಂದಾಗುವ ಮೊದಲೇ ಕುಸಿದು ಮೃತಪಟ್ಟಿರುವ ಆಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಬಿಜೆಪಿ ಸ್ಥಳೀಯ ಮುಖಂಡರಾಗಿದ್ದ ಪ್ರಕಾಶ್ ಬೆಳ್ಳೂರು(43) ಮೃತಪಟ್ಟವರು.
ಪ್ರಕಾಶ್ ಅವರು ಸೋಮವಾರ ಬೆಳಗ್ಗೆ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಮತ್ತು ಔಷಧಕ್ಕಾಗಿ ಬಂದಿದ್ದರು. ಅವರಿನ್ನೂ ವೈದ್ಯರ ತಪಾಸಣೆಗೂ ತೆರಳುವ ಮೊದಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಾವಿಗೆ ಖಚಿತವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.
ಅವರ ಸಾವಿನ ಸುದ್ದಿ ತಲುಪುತ್ತಲೇ ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರೂ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಬಂಟ್ವಾಳ ಆಸ್ಪತ್ರೆಗೆ ಧಾವಿಸಿ ಬಂದಿದ್ದಾರೆ.
ಗಣ್ಯರಿಂದ ಕಂಬನಿ
ಪ್ರಕಾಶ್ ನಿಧನದ ಬಗ್ಗೆ ಫೇಸ್ ಬುಕ್ ಖಾತೆಯಲ್ಲಿ ಬರೆದಿರುವ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಬಿಜೆಪಿ ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಕಾಶ್ ಬೆಳ್ಳೂರು ನಮ್ಮನ್ನಗಲಿದ್ದು, ಮೃತರ ಕುಟುಂಬಕ್ಕೆ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ಕಂಬನಿ ಮಿಡಿದಿದ್ದಾರೆ.
Uncategorized
Inspection-ರಾಜ್ಯದಲ್ಲಿ 80 ಸಿಹಿ ತಯಾರಿಕಾ ಘಟಕಗಳ ತಪಾಸಣೆ, 10 ಘಟಕಗಳಿಗೆ ನೋಟಿಸ್
ರಾಜ್ಯಾದ್ಯಂತ ಸಿಹಿ ತಿಂಡಿ ತಯಾರಿಕಾ ಘಟಕಗಳು ಹಾಗೂ ಮಾರಾಟ ಮಳಿಗೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣಾ ಅಭಿಯಾನ ನಡೆಸಿದೆ. ಈ ವೇಳೆ ಒಟ್ಟು 125 ಆಹಾರ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 10 ಸಿಹಿ ತಯಾರಿಕಾ ಘಟಕಗಳು ಹಾಗೂ ಆಹಾರ ವಹಿವಾಟುದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಬೆಂಗಳೂರು, ಅ.15: ರಾಜ್ಯಾದ್ಯಂತ ಸಿಹಿ ತಿಂಡಿ ತಯಾರಿಕಾ ಘಟಕಗಳು ಹಾಗೂ ಮಾರಾಟ ಮಳಿಗೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣಾ ಅಭಿಯಾನ ನಡೆಸಿದೆ. ಈ ವೇಳೆ ಒಟ್ಟು 125 ಆಹಾರ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 10 ಸಿಹಿ ತಯಾರಿಕಾ ಘಟಕಗಳು ಹಾಗೂ ಆಹಾರ ವಹಿವಾಟುದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಆಯುಕ್ತ ಕೆ. ಶ್ರೀನಿವಾಸ್ ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಆರೋಗ್ಯ ಸಚಿವರ ನಿರ್ದೇಶನದ ಮೇರೆಗೆ ರಾಜ್ಯದಾದ್ಯಂತ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅನೈರ್ಮಲ್ಯ, ಪರವಾನಗಿ ಕೊರತೆ ಪತ್ತೆ
ರಾಜ್ಯದ ವಿವಿಧೆಡೆ ಒಟ್ಟು 80 ಸಿಹಿ ತಯಾರಿಕಾ ಹಾಗೂ ಮಾರಾಟ ಘಟಕಗಳನ್ನು ಪರಿಶೀಲಿಸಲಾಗಿದೆ. ಈ ಸಂದರ್ಭದಲ್ಲಿ ಕೆಲವು ಘಟಕಗಳಲ್ಲಿ ಆಹಾರ ತಯಾರಿಕೆ ಮತ್ತು ಸಂಗ್ರಹಣಾ ಸ್ಥಳಗಳನ್ನು ಅನೈರ್ಮಲ್ಯಕರವಾಗಿ ನಿರ್ವಹಿಸುತ್ತಿರುವುದು ಪತ್ತೆಯಾಗಿದೆ.
ಇದಲ್ಲದೆ, ಆಹಾರ ನಿರ್ವಹಣೆಯಲ್ಲಿ ತೊಡಗಿರುವ ಸಿಬ್ಬಂದಿ ವೈದ್ಯಕೀಯ ಪ್ರಮಾಣಪತ್ರಗಳನ್ನು ಹೊಂದಿರದಿರುವುದು ಹಾಗೂ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಪರವಾನಗಿ ಅಥವಾ ನೋಂದಣಿ ಪಡೆಯದಿರುವುದೂ ಕಂಡುಬಂದಿದೆ.
ಪ್ರಯೋಗಾಲಯಕ್ಕೆ 125 ಆಹಾರ ಮಾದರಿ
ತಪಾಸಣೆ ವೇಳೆ ಸಂಗ್ರಹಿಸಿದ 125 ಆಹಾರ ಮಾದರಿಗಳನ್ನು ಗುಣಮಟ್ಟ ಹಾಗೂ ಆಹಾರ ಸುರಕ್ಷತಾ ಮಾನದಂಡಗಳ ಪಾಲನೆಯನ್ನು ಪರಿಶೀಲಿಸಲು ಸರ್ಕಾರಿ ಆಹಾರ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.
ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ಸಂಬಂಧಿತ 2011ರ ನಿಯಮಾವಳಿಗಳ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು. ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸುವ ಸಿಹಿ ತಯಾರಿಕಾ ಘಟಕಗಳು ಮತ್ತು ಮಾರಾಟ ಮಳಿಗೆಗಳ ವಿರುದ್ಧ ನಿರಂತರ ತಪಾಸಣೆ ನಡೆಸಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆಯುಕ್ತ ಕೆ. ಶ್ರೀನಿವಾಸ್ ಎಚ್ಚರಿಕೆ ನೀಡಿದ್ದಾರೆ.
Uncategorized
Ambika Vidyalaya-ಅಂಬಿಕಾ ವಿದ್ಯಾಲಯ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ರಾಷ್ಟ್ರ ಮಟ್ಟದಲ್ಲಿ ಬಹುಮಾನ
ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ್ದಾರೆ.

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ್ದಾರೆ.
14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪೆರ್ನೆಯ ನಿವಾಸಿ ಗಿರೀಶ ಗೌಡ ಮತ್ತು ಸುಮಿತ್ರ ದಂಪತಿಯ ಪುತ್ರಿ 8ನೇ ತರಗತಿಯ ಸಾನ್ವಿ ಜಿ, ದರ್ಬೆಯ ನಿವಾಸಿ ಕೆ ಜಿ ಮುರಳೀಧರ ಮತ್ತು ಕೆ ಉಷಾ ಮುರಳೀಧರ ದಂಪತಿಯ ಪುತ್ರಿ 8ನೇ ತರಗತಿಯ ಕೆ ಎಂ ಶಮಿತ ಭಟ್ ಹಾಗೂ ಪಡೀಲ್ ನ ನಿವಾಸಿ ಸಂಜೀವ ರಂಜನ್ ಮತ್ತು ಅರ್ಪಣಾ ಕುಮಾರಿ ದಂಪತಿಯ ಪುತ್ರಿ 8ನೇ ತರಗತಿಯ ಶಾಂಭವಿ ರಂಜನ್,
ಸಂಪ್ಯದ ನಿವಾಸಿ ರವಿಕುಮಾರ ಕೆ ಮತ್ತು ಸುಮಿತ್ರ ಕೆ ದಂಪತಿಯ ಪುತ್ರಿ 8ನೇ ತರಗತಿಯ ನೈನಿಕ ಎ ಆರ್ ಪ್ರಥಮ ಸ್ಥಾನವನ್ನು ಗಳಿಸಿ, ಮಧ್ಯ ಪ್ರದೇಶದಲ್ಲಿ ನಡೆಯಲಿರುವ ಎಸ್ ಜಿ ಎಫ್ ಐ ( ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ) ಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.
14ರ ವಯೋಮಾನದ ಬಾಲಕರ ವಿಭಾಗದಲ್ಲಿ ಉಪ್ಪಿನಂಗಡಿ ನೆಕ್ಕಿಲಾಡಿಯ ನಿವಾಸಿ ಡಾ.ಸುಪ್ರೀತ್ ಜೋಯಲ್ ಲೋಬೋ ಮತ್ತು ಡಾ. ಶೈನಿ ಪಾಯಸ್ ದಂಪತಿಯ ಪುತ್ರ 7ನೇ ತರಗತಿಯ ಸಂಹಿತ್ ಜೊಸ್ಸಿ ಲೋಬೋ, ಕಾಣಿಯೂರಿನ ನಿವಾಸಿ ಅರವಿಂದ ಕುಮಾರ್ ಕೆ ಮತ್ತು ಜ್ಯೋತಿ ಕುಮಾರಿ ಕೆ ದಂಪತಿಯ ಪುತ್ರ 7ನೇ ತರಗತಿಯ ರತುಲ್ ಅದ್ವೈತ್, ಕುಂಜುರ್ ಪಂಜದ ನಿವಾಸಿ ಶ್ರೀನಿವಾಸ ಮಯ್ಯ ಡಿ ಮತ್ತು ಜಯಲಕ್ಷ್ಮೀ ಎಸ್ ಮಯ್ಯ ದಂಪತಿಯ ಪುತ್ರ 7ನೇ ತರಗತಿಯ ಮಯೂರ್ ಎಸ್ ಮಯ್ಯ ಹಾಗೂ ಕಲ್ಲಾರೆಯ ನಿವಾಸಿ ಪ್ರವೀಣ್ ರೈ ಸಿ ಮತ್ತು ತೃಪ್ತಿ ರೈ ದಂಪತಿಯ ಪುತ್ರ 7ನೇ ತರಗತಿಯ ತ್ರಿನಯ್ ರೈ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ.
Uncategorized
Kumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ಗಳ ಹೆಸರಿನಲ್ಲಿ ರಾಜಕೀಯ ನಾಯಕರು ಹಾಗೂ ಅವರ ಕುಟುಂಬಗಳನ್ನು ಗುರಿಯಾಗಿಸಲಾಗುತ್ತಿದೆ ಎಂಬ ಆರೋಪಗಳ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಈ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ಗಳ ಹೆಸರಿನಲ್ಲಿ ರಾಜಕೀಯ ನಾಯಕರು ಹಾಗೂ ಅವರ ಕುಟುಂಬಗಳನ್ನು ಗುರಿಯಾಗಿಸಲಾಗುತ್ತಿದೆ ಎಂಬ ಆರೋಪಗಳ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಈ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚಿಸುವುದರ ಜೊತೆಗೆ ದೂರು ಸಲ್ಲಿಸುವುದಾಗಿಯೂ ಅವರು ತಿಳಿಸಿದ್ದಾರೆ.
ಬೆಂಗಳೂರಿನ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸ್ಟಿಂಗ್ ಆಪರೇಷನ್ಗಳ ಹಿಂದೆ ಯಾರಿದ್ದಾರೆ, ಅವುಗಳನ್ನು ಯಾರು ನಡೆಸಿದ್ದಾರೆ ಮತ್ತು ಇದರಲ್ಲಿ ಯಾರ ಪಾತ್ರವಿದೆ ಎಂಬುದನ್ನು ತನಿಖೆಯ ಮೂಲಕ ಪತ್ತೆಹಚ್ಚಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಿದ್ದರಾಮಯ್ಯ ಮೌನವಾಗಿರಬಾರದು: ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧ ನಡೆಯುತ್ತಿದೆ ಎನ್ನಲಾದ ಷಡ್ಯಂತ್ರಕ್ಕೆ ಹೆದರುವ ಅಗತ್ಯವಿಲ್ಲ ಎಂದು ಹೇಳಿದ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರು ತಮ್ಮ ಹಿಂದಿನ ಹೋರಾಟದ ಮನೋಭಾವದೊಂದಿಗೆ ಮಾತನಾಡಬೇಕು. ಇಂತಹ ಬೆಳವಣಿಗೆಗಳ ಬಗ್ಗೆ ಮೌನ ವಹಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ಹಿಂದೆ ಮಾಜಿ ಮುಖ್ಯಮಂತ್ರಿಯೊಬ್ಬರ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸಲಾಗಿತ್ತು. ಬಳಿಕ ರಮೇಶ್ ಜಾರಕಿಹೊಳಿ ಹಾಗೂ ಕೆ.ಎನ್. ರಾಜಣ್ಣ ಅವರ ವಿಚಾರಗಳೂ ಮುನ್ನೆಲೆಗೆ ಬಂದವು. ಇದೀಗ ಸಿದ್ದರಾಮಯ್ಯ ಅವರ ಸರದಿ ಬಂದಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.
ಸದಾಶಿವನಗರದಲ್ಲಿ ನಿಗಾ ವ್ಯವಸ್ಥೆ ಇದೆ ಎಂಬ ಆರೋಪ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸದಲ್ಲಿ ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳನ್ನು ನೇಮಿಸಿಕೊಂಡು, ಅತ್ಯಾಧುನಿಕ ಉಪಕರಣಗಳ ಮೂಲಕ ಸಚಿವರು ಹಾಗೂ ಇತರರ ಮಾತುಕತೆಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂಬ ಮಾಹಿತಿ ತಮಗೆ ಲಭಿಸಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.
ರಾಜಕೀಯ ನಾಯಕರು ಹಾಗೂ ಸಚಿವರ ಫೋನ್ಗಳನ್ನು ಕದ್ದಾಲಿಸಲಾಗುತ್ತಿದೆ ಎಂಬ ಆರೋಪ ಗಂಭೀರವಾಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆಯಲ್ಲೂ ಚರ್ಚೆಯಾಗುತ್ತಿದೆ ಎಂಬ ಮಾಹಿತಿ ಬಂದಿದೆ ಎಂದು ಅವರು ಹೇಳಿದರು.
ಆದರೆ, ಮುಖ್ಯಮಂತ್ರಿ ಸ್ವತಃ ಇಂತಹ ಚಟುವಟಿಕೆಗಳಿಗೆ ಆದೇಶ ನೀಡಿದ್ದಾರೆ ಎಂದು ತಾನು ಹೇಳುತ್ತಿಲ್ಲ. ಇಲಾಖೆಯಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸಮಗ್ರ ತನಿಖೆಯ ಮೂಲಕ ಪರಿಶೀಲಿಸಬೇಕು ಎಂದು ಸ್ಪಷ್ಟಪಡಿಸಿದರು.
ಪೆನ್ಡ್ರೈವ್ ಪ್ರಕರಣದ ಬಗ್ಗೆಯೂ ಪ್ರಶ್ನೆ
2024ರ ಲೋಕಸಭಾ ಚುನಾವಣೆಗೆ ಎರಡು ದಿನ ಬಾಕಿ ಇರುವಾಗ ಮಂಡ್ಯ ಮತ್ತು ಹಾಸನ ಭಾಗಗಳಲ್ಲಿ ವಿಡಿಯೊಗಳನ್ನು ಪೆನ್ಡ್ರೈವ್ಗಳಲ್ಲಿ ಹಂಚಲಾಗಿದೆ ಎಂದು ಹೇಳಿದ ಕುಮಾರಸ್ವಾಮಿ ಅವರು, ವಿಡಿಯೋಗಳಲ್ಲಿ ಇದ್ದ ಮಹಿಳೆಯರ ಮುಖಗಳನ್ನು ಮರೆಮಾಚಲಿಲ್ಲ. ಲೋಕಸಭೆಯ ಇವತ್ತಿನ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ನಾನೂರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿದ್ದರು. ಆ ನಾನೂರು ಜನ ಮಹಿಳೆಯರಲ್ಲಿ ಎಷ್ಟು ಜನ ಬಂದು ಕೇಸು ದಾಖಲು ಮಾಡಿದ್ದಾರೆ? ಎಂದು ಪ್ರಶ್ನಿಸಿದರು.
ಆ ವಿಡಿಯೊಗಳನ್ನು ಸಿದ್ಧಪಡಿಸಿದವರು ಯಾರು, ಅವುಗಳನ್ನು ಯಾವ ಸ್ಥಳದಲ್ಲಿ ಸಿದ್ಧಪಡಿಸಲಾಯಿತು ಮತ್ತು ಹಂಚಿದವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಪ್ರಶ್ನೆಗಳಿಗೆ ರಾಜ್ಯ ಸರ್ಕಾರ ಉತ್ತರಿಸಬೇಕು ಎಂದು ಆಗ್ರಹಿಸಿದರು.
ತಮ್ಮ ಕುಟುಂಬದವರ ಬಗ್ಗೆಯೂ ಅವಹೇಳನಕಾರಿ ಸುದ್ದಿಗಳನ್ನು ಪ್ರಸಾರ ಮಾಡಲಾಗಿತ್ತು. ತಮ್ಮ ತಾಯಿಯ ವಿರುದ್ಧವೂ ಆರೋಪಗಳು ಮತ್ತು ಸುದ್ದಿಗಳನ್ನು ಹರಡಲಾಗಿತ್ತು. ಇಂತಹ ಸಂದರ್ಭಗಳಲ್ಲಿಯೂ ತಮ್ಮ ಕುಟುಂಬ ನ್ಯಾಯಾಲಯದ ಮೊರೆ ಹೋಗಿರಲಿಲ್ಲ ಎಂದು ಅವರು ಹೇಳಿದರು.
ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿರುವುದಕ್ಕೆ ಆಕ್ಷೇಪ
ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ ಎಂಬ ವರದಿಗಳನ್ನು ಉಲ್ಲೇಖಿಸಿದ ಕುಮಾರಸ್ವಾಮಿ, ಯಾವುದೇ ಪ್ರಕರಣದಲ್ಲಿಯೂ ಸತ್ಯಾಸತ್ಯತೆ ನ್ಯಾಯಾಂಗದ ಮೂಲಕ ಹೊರಬರಬೇಕು. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆಬಾಗಬೇಕು ಎಂಬುದು ತಮ್ಮ ನಿಲುವು ಎಂದು ತಿಳಿಸಿದರು.
ಸುದೀರ್ಘ ರಾಜಕೀಯ ಅನುಭವ ಹೊಂದಿರುವ ಸಿದ್ದರಾಮಯ್ಯ ಅವರು ನ್ಯಾಯಾಲಯದ ತಡೆಯಾಜ್ಞೆ ಪಡೆಯುವ ಬದಲು ದಿಟ್ಟವಾಗಿ ನಿಂತು ಇಂತಹ ಬೆಳವಣಿಗೆಗಳನ್ನು ಎದುರಿಸಬೇಕು ಎಂದು ಅವರು ಮನವಿ ಮಾಡಿದರು.
ಸಿಬಿಐ ತನಿಖೆಗೆ ಮತ್ತೆ ಒತ್ತಾಯ
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸಿರುವುದನ್ನು ತಾವು ವಿರೋಧಿಸಿಲ್ಲ ಎಂದ ಕುಮಾರಸ್ವಾಮಿ, ಇದೇ ರೀತಿಯ ಗಂಭೀರತೆಯನ್ನು ಇತರ ಪ್ರಕರಣಗಳಲ್ಲಿಯೂ ತೋರಿಸಬೇಕು ಎಂದು ಹೇಳಿದರು.
ಸ್ಟಿಂಗ್ ಆಪರೇಷನ್ಗಳ ಹಿಂದೆ ಇರುವವರನ್ನು ಪತ್ತೆಹಚ್ಚಿ, ಆರೋಪಗಳ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಲು ಸಿಬಿಐ ತನಿಖೆ ಅಗತ್ಯವಿದೆ. ಈ ಕುರಿತು ಅಮಿತ್ ಶಾ ಅವರನ್ನು ಭೇಟಿಯಾಗಿ ದೂರು ಸಲ್ಲಿಸುವುದಾಗಿ ಪುನರುಚ್ಚರಿಸಿದರು.
-
ರಾಜಕೀಯ19 hours agoH.D. Kumaraswamy-ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ : ಬಾಂಬ್ ಸಿಡಿಸಿದ ಎಚ್.ಡಿ. ಕುಮಾರಸ್ವಾಮಿ – ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಷಡ್ಯಂತ್ರದಲ್ಲಿ ಕೃಪಾ ಆಳ್ವ..! ಗಂಭೀರ ಆರೋಪ
-
ಅಪರಾಧ20 hours agoPuttur-ಪುತ್ತೂರಿನಲ್ಲಿ ಅಕ್ರಮ ಲಾಟರಿ ಮಾರಾಟ: ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು
-
ಮಂಗಳೂರು20 hours agoSudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!
-
ರಾಜಕೀಯ24 hours agoAmal Ramachandra-ಒಳ್ಳೆಯ ರೀತಿಯಲ್ಲಿ ಬೆಳೆವಿಮೆ ಬಂದರೆ ಮೋದಿಯಿಂದಾಗಿ ಎಂದು ಬೊಬ್ಬೆ ಹಾಕುತ್ತಿದ್ದ ಬಿಜೆಪಿ ಈಗ ಕಾಂಗ್ರೆಸ್ ನ್ನು ದೂರುತ್ತಿದೆ..! ಟರ್ಮ್ ಶೀಟ್ ಬದಲಾವಣೆ ಮಾಡಿದ್ದು ಬಿಜೆಪಿ ಈ ಬಗ್ಗೆ ದಾಖಲೆಯಿದೆ; ಅಶೋಕ್ ರೈ ಹುಟ್ಟಿಸಿದ ಲಿಸ್ಟ್ ಕೊಡ್ತೇನೆ 8 ವರ್ಷಗಳಲ್ಲಿ ಬೆಳ್ತಂಗಡಿಯಲ್ಲಿ ಪೂಂಜಾ ಹುಟ್ಟಿಸಿದ್ದೇನೂ..? ಪುಡಾ ಅಧ್ಯಕ್ಷ ಅಮಳ ರಾಮಚಂದ್ರ
-
ಕಾರ್ಯಕ್ರಮಗಳು20 hours agoPiligobbu-ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ
-
ಅಪರಾಧ20 hours agoBantwal-ಬಂಟ್ವಾಳ: 18 ತಿಂಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಕೇರಳದಲ್ಲಿ ಬಂಧನ
-
ನಿಧನ ವಾರ್ತೆ2 hours agoಪುತ್ತೂರು: ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕ ಶಿವಪ್ರಸಾದ್ ಜಿ.ಎಸ್. ನಿಧನ
-
ಅಂತರ ರಾಜ್ಯ2 hours agoBJP minister-ಪತಿ ಎರಡು ಮದುವೆಯಾಗಿದ್ದರೆಂದು ದೂರು ದಾಖಲಿಸಿದ ಬಿಜೆಪಿ ಸಚಿವೆ..!


















