ಅಪರಾಧ
ಜಿಲ್ಲಾ ಉಸ್ತುವಾರಿ ಸಚಿವರನ್ನು ದಿಢೀರ್ ಭೇಟಿಯಾಗಿ 3 ಬೇಡಿಕೆಯಿಟ್ಟ ಸೌಜನ್ಯ ತಾಯಿ ಕುಸುಮಾವತಿ
ಮಂಗಳೂರು: 11 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ, ಉಜಿರೆಯ ಎಸ್ ಡಿ ಎಂ ಕಾಲೇಜ್ ವಿದ್ಯಾರ್ಥಿನಿ ಕು ಸೌಜನ್ಯ ಪ್ರಕರಣದ ಮರು ತನಿಖೆ ನಡೆಸಬೇಕು, ಈ ಹಿಂದೆ ತನಿಖೆ ನಡೆದ ವೇಳೆ ಪ್ರಭಾವಿಗಳ ಒತ್ತಡಕ್ಕೆ ಒಳಗಾಗಿ ಸಾಕ್ಷ್ಯ ನಾಶ ಮಾಡಿದ ಪೊಲೀಸ್ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿ ವಿರುದ್ದ ಕ್ರಮ ಕೈಗೊಳ್ಳಬೇಕು. ಹಾಗೂ ಸೌಜನ್ಯ ನ್ಯಾಯಕ್ಕಾಗಿ ಈಗ ನಡೆಯುತ್ತಿರುವ ಹೋರಾಟವನ್ನು ಹತ್ತಿಕ್ಕುವ ಉದ್ದೇಶದಿಂದ ಹೋರಾಟಗಾರರಿಗೆ ಕಿರುಕುಳ ನೀಡುತ್ತಿದ್ದಾರೆ. ಹೋರಾಟಕ್ಕೆ ಪೊಲೀಸ್ ಇಲಾಖೆಯಿಂದ ಯಾವುದೇ ಕಿರುಕುಳ ಆಗದಂತೆ ರಕ್ಷಣೆ ಒದಗಿಸಬೇಕು ಎಂದು ಸೌಜನ್ಯಾಳ ತಾಯಿ ಕುಸುಮಾವತಿ ಗೌಡ ಅವರು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಬುಧವಾರ ಮಂಗಳೂರಿನಲ್ಲಿ ಮನವಿ ಮಾಡಿದರು.
‘ನನ್ನ ಮಗಳು ಸೌಜನ್ಯಾ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ನಡೆಸಿದ ಪ್ರಕರಣವನ್ನು ನ್ಯಾಯಾಂಗದ ಸುಪರ್ದಿಯಲ್ಲಿ ಮರು ತನಿಖೆ ನಡೆಸಬೇಕು. ನೈಜ ಆರೋಪಿಗಳ ಪತ್ತೆಗೆ ಅಗತ್ಯ ಕಾನೂನುಕ್ರಮ ಕೈಗೊಳ್ಳಬೇಕು’ ಎಂದು ಅವರು ಈ ಸಂದರ್ಭ ಸಚಿವರನ್ನು ಒತ್ತಾಯಿಸಿ
‘ಈ ಪ್ರಕರಣದ ಸಾಕ್ಷ್ಯಗಳನ್ನು ನಾಶ ಮಾಡುವ ಮೂಲಕ ನೈಜ ಆರೋಪಿಗಳು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳು ಹಾಗೂ ವೈದ್ಯರು ಸಹಕರಿಸಿದ್ದಾರೆ. ಅವರ ವಿರುದ್ಧವೂ ತನಿಖೆ ನಡೆಸಬೇಕು. ಆರೋಪಿಗಳ ಹೆಸರನ್ನು ನಮೂದಿಸಿ ಹಿಂದೆಯೇ ದೂರು ನೀಡಿದ್ದರೂ ಅವರನ್ನು ತನಿಖೆಗೆ ಒಳಪಡಿಸಿಲ್ಲ’ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಪ್ರಭಾವಿಗಳ ಒತ್ತಡದಿಂದ ಸಾಕ್ಷ್ಯ ನಾಶ
‘ಅಗತ್ಯ ಸೌಲಭ್ಯಗಳಿಲ್ಲದ ಬೆಳ್ತಂಗಡಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯನ್ನೂ ಪ್ರಭಾವಿಗಳ ಒತ್ತಡದ ಮೇರೆಗೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಒತ್ತಡದಿಂದಾಗಿ ಸಾಕ್ಷ್ಯ ನಾಶ ಮಾಡಿದ್ದಾರೆ. ಶವದ ಮೈ ಮೇಲೆಲ್ಲಾ ಕೊಲೆ ಪಾತಕಿಗಳು ಕಚ್ಚಿದ ಗಾಯಗಳಿದ್ದರೂ ವೈದ್ಯರು ಉದ್ದೇಶಪೂರ್ವಕವಾಗಿ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಅದನ್ನು ನಮೂದಿಸಿರಲಿಲ್ಲ. ಮೃತದೇಹದ ಗುಪ್ತಾಂಗದಿಂದ ಸಂಗ್ರಹಿಸಿರುವ ದ್ರವ ಅತ್ಯಾಚಾರ ನಡೆಸಿದ ಆರೋಪಿಗಳನ್ನು ವೈಜ್ಞಾನಿಕವಾಗಿ ಪತ್ತೆ ಹಚ್ಚಲು ಅತೀ ಅಗತ್ಯವಿದ್ದರೂ ವೈದ್ಯರು ಉದ್ದೇಶ ಪೂರ್ವಕವಾಗಿ ಅವುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸದಂತೆ ನೋಡಿಕೊಂಡು ನೈಜ ಆರೋಪಿಗಳು ತಪ್ಪಿಸಿಕೊಳ್ಳಲು ಸಹಕರಿಸಿರುತ್ತಾರೆ’ ಎಂದೂ ಅವರು ಆರೋಪಿಸಿದ್ದಾರೆ.
ಕಿರುಕುಳ
‘ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆ ಹಚ್ಚುವಂತೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟಗಳನ್ನು ಹತ್ತಿಕ್ಕಲು ಪ್ರಯತ್ನಗಳು ನಡೆದಿವೆ. ಹೊರಾಟದಲ್ಲಿ ಮುಂಚೂಣಿಯಲ್ಲಿರುವವರನ್ನು ಹೆಸರಿಸಿ ಉಜಿರೆಯ ವ್ಯಕ್ತಿಯೊಬ್ಬರು ತನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂದು ಆರೋಪಿಸಿ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಬಂಟ್ವಾಳದ ಈಗಿನ ಡಿವೈಎಸ್‌ಪಿ ಅವರು ಹೋರಾಟಗಾರರನ್ನು ಅನಗತ್ಯವಾಗಿ ಠಾಣೆಗೆ ಕರೆಯಿಸಿ ಕಿರುಕುಳ ನೀಡುತ್ತಿದ್ದಾರೆ’ ಎಂದು ಕುಸುಮಾವತಿ ಆರೋಪಿಸಿದ್ದಾರೆ.
ಸೂಕ್ತ ರಕ್ಷಣೆಗೆ ಆಗ್ರಹ
‘ಈ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟಕ್ಕೆ ಪೊಲೀಸ್ ಇಲಾಖೆಯಿಂದ ಯಾವುದೇ ಕಿರುಕುಳ ಆಗದಂತೆ ರಕ್ಷಣೆ ಒದಗಿಸಬೇಕು’ ಎಂದು ಒತ್ತಾಯಿಸಿ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಇನ್ನೊಂದು ಮನವಿ ಸಲ್ಲಿಸಿದ್ದಾರೆ.
‘ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹಸಚಿವರೊಂದಿಗೆ ಮಾತನಾಡುತ್ತೇನೆ’ ಎಂದು ಸಚಿವರು ಭರವಸೆ ನೀಡಿದರು.
ಅಪರಾಧ
Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.
ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.
ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
ಅಪರಾಧ
Vittal Police raid :ಕೋಳಿ ಅಂಕಕ್ಕೆ ವಿಟ್ಲ ಪೊಲೀಸ್ ದಾಳಿ – ನಾಲ್ವರು ವಶಕ್ಕೆ

ವಿಟ್ಲ: ಪೆರುವಾಯಿ ಗ್ರಾಮದ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ, ನಾಲ್ವರನ್ನು ವಶಕ್ಕೆ ಪಡೆದ ಘಟನೆ ಅಕ್ಟೋಬರ್ 2ರಂದು ನಡೆದಿದೆ.
ಪೆರುವಾಯಿ ಗ್ರಾಮದ ಸಾರ್ವಜನಿಕ ಜಾಗದಲ್ಲಿ ಜೂಜು ಕಟ್ಟಿ ಕೋಳಿ ಅಂಕ ಆಡಿಸುತ್ತಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಖಚಿತ ಮಾಹಿತಿ ಲಭಿಸಿತ್ತು. ಇದರನ್ವಯ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಆಡಿಸುತ್ತಿರುವುದು ಕಂಡು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ದಾಳಿಯ ವೇಳೆ ಕೃಷಪ್ಪ (59), ಲಕ್ಷ್ಮಣ ನಾಯ್ಕ್ (38), ಶೋಬಿತ್ ರಾಜ್ (29) ಹಾಗೂ ಯುವರಾಜ್ (46) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. . ಸ್ಥಳದಲ್ಲಿದ್ದ ಕೋಳಿಗಳು, ಕೋಳಿ ಅಂಕಕ್ಕೆ ಬಳಸಲಾಗಿದ್ದ 3,050 ರೂಪಾಯಿ ನಗದು ಹಾಗೂ ಕತ್ತಿಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆ ಹಾಗೂ ಇನ್ನಿತರ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಸ್ಥಳೀಯ
Kollur-ಕೊಲ್ಲೂರು: ದನವನ್ನು ಕಾರಿಗೆ ತುಂಬಿಸಿಕೊಂಡು ಪರಾರಿಯಾಗಿದ್ದ ಆರೋಪಿಯ ಬಂಧನ
ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಸಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸಿ ಮೊಹಮ್ಮದ್ ಸಿನಾನ್ (20) ಎಂದು ಗುರುತಿಸಲಾಗಿದೆ.
ಕೊಲ್ಲೂರು: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಸಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸಿ ಮೊಹಮ್ಮದ್ ಸಿನಾನ್ (20) ಎಂದು ಗುರುತಿಸಲಾಗಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೆ.29ರಂದು ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಅಪರಿಚಿತರು ಕಾರಿನಲ್ಲಿ ಬಂದು ರಸ್ತೆ ಬದಿಯಲ್ಲಿದ್ದ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾಗಿದ್ದರು. ಘಟನೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಈ ಕುರಿತು ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಪತ್ತೆಹಚ್ಚಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಇನ್ನಿಬ್ಬರಿಗಾಗಿ ಶೋಧ
ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳು ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದ್ದು, ಅವರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ಮೊಹಮ್ಮದ್ ಸಿನಾನ್ ಕುಂದಾಪುರ ಉಪವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿರುವ ಐದು ದನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸ್ ಕಾರ್ಯಾಚರಣೆ
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಉಸ್ತುವಾರಿಯಲ್ಲಿ ಕೊಲ್ಲೂರು ಠಾಣೆ ಉಪನಿರೀಕ್ಷಕ ವಿನಯ್ ಎಂ. ಕೊರ್ಲಹಳ್ಳಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
ಹೆಡ್‌ಕಾನ್‌ಸ್ಟೆಬಲ್ ನಾಗೇಂದ್ರ, ಕಾನ್‌ಸ್ಟೆಬಲ್‌ಗಳಾದ ರುದ್ರೇಶ, ನವೀನ್ ಕುಮಾರ್, ವಿಲಾಸ್ ರಾಠೋಡ ಹಾಗೂ ನಾಗರಾಜ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
-
Uncategorized7 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized6 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ
-
ದಕ್ಷಿಣ ಕನ್ನಡ14 minutes ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು


















