Connect with us

ಮಂಗಳೂರು

ಚೈತ್ರಾ ಕುಂದಾಪುರಗೂ ವಿಹಿಂಪ ಬಜರಂಗದಳಕ್ಕೂ ಸಂಬಂಧವಿಲ್ಲ : ಶರಣ್‌ ಪಂಪ್‌ವೆಲ್‌

Published

on



Ad Widget

Ad Widget

Ad Widget

Ad Widget

ಮಂಗಳೂರು: ಹಿಂದೂ ಪರ ಸಂಘಟನೆಗಳ ನೆಚ್ಚಿನ ಭಾಷಣಗಾರ್ತಿ ಚೈತ್ರಾ ಕುಂದಾಪುರಗೂ ಬಜರಂಗದಳಕ್ಕೂ ಸಂಬಂಧವಿಲ್ಲ. ಆಕೆ ನಮ್ಮ ಸಂಘಟನೆಯ ಸದಸ್ಯೆ ಅಲ್ಲ’ ಎಂದು ವಿಎಚ್‌ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ತಿಳಿಸಿದ್ದಾರೆ

Ad Widget

Ad Widget

Ad Widget

Ad Widget

‘ಬಿಜೆಪಿ ಟಿಕೆಟ್‌ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚಿಸಿ ಸಿಸಿಬಿ ಪೊಲೀಸರಿಂದ ಬಂಧಿತಳಾಗಿರುವ ಪ್ರಕರಣದ ಆರೋಪಿ ಚೈತ್ರಾ ಕುಂದಾಪುರ ಈ ಹಿಂದೆ ವಿಹಿಂಪ ಹಾಗೂ ಬಜರಂಗದಳದ ಕಾರ್ಯಕ್ರಮಗಳಲ್ಲಿ ವೇದಿಕೆ ಹಂಚಿಕೊಳ್ಳುತ್ತಿದ್ದ ಚೈತ್ರಾ ಕುಂದಾಪುರ ಕುಂದಾಪುರ ಕುರಿತಾಗಿ ಪತ್ರಕರ್ತರು ಅವರನ್ನು ಪ್ರಶ್ನಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಪ್ರತಿಕ್ರಿಯಿಸಿದ ಅವರು, ‘ಆಕೆ ಉತ್ತಮ ಭಾಷಣ ಮಾಡುತ್ತಿದ್ದರು. ಸಾಕಷ್ಟು ಓದಿಕೊಂಡಿದ್ದರು. ಒಳ್ಳೆ ತಿಳುವಳಿಕೆ ಹೊಂದಿದ್ದರು. ಈ ಎಲ್ಲ ಕಾರಣಗಳಿಂದ ಬಜರಂಗ ದಳದ ಕಾರ್ಯಕ್ರಮಗಳಿಗೆ ಅವರನ್ನು ಆಹ್ವಾನಿಸಿದ್ದು ನಿಜ. ಅವರು ತಪ್ಪು ಮಾಡಿದ್ದರೆ ಅದಕ್ಕೆ ಶಿಕ್ಷೆ ಆಗಲಿ. ನಮ್ಮ ಸಂಘಟನೆ ಇಂತಹ ಅಕ್ರಮಗಳಿಗೆ ಆಸ್ಪದ ನೀಡುವುದಿಲ್ಲ. ಇಂತಹ ಪ್ರಕರಣಗಳು ಮರುಕಳಿಸಬಾರದು. ಈ ಪ‍್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರನ್ನು ಶಿಕ್ಷೆಗೆ ಒಳಪಡಿಸಬೇಕು’ ಎಂದರು.

Ad Widget

Ad Widget <> Ad Widget

‘ಈ ವಂಚನೆ ಪ್ರಕರಣದ ಬಗ್ಗೆ ಗುರುಪುರ ವಜ್ರದೇಹಿ ಮಠದ ಸ್ವಾಮೀಜಿ ಎರಡು ತಿಂಗಳ ಹಿಂದೆ ನನ್ನ ಗಮನಕ್ಕೆ ತಂದಿದ್ದು ನಿಜ. ನೀವು ತಪ್ಪು ಮಾಡಿಲ್ಲವಾದರೆ ತಲೆಕೆಡಿಸಿಕೊಳ್ಳಬೇಡಿ ಎಂದು ಧೈರ್ಯ ಹೇಳಿದ್ದೆ’ ಎಂದರು.



Ad Widget

ಬಜರಂಗದಳದಿಂದ ಶೌರ್ಯ ಜಾಗರಣ ರಥಯಾತ್ರೆ

Ad Widget

Ad Widget

‘ವಿಶ್ವ ಹಿಂದೂ ಪರಿಷತ್‌ಗೆ 2024ಕ್ಕೆ 60 ವರ್ಷ ತುಂಬಲಿದ್ದು, ಈ ಪ್ರಯುಕ್ತ ಬಜರಂಗದಳವು ಇದೇ 25ರಿಂದ ರಾಜ್ಯದಾದ್ಯಂತ ‘ಶೌರ್ಯ ಜಾಗರಣ ರಥಯಾತ್ರೆ”ಯನ್ನು ಹಮ್ಮಿಕೊಳ್ಳಲಿದೆ’ ಎಂದು ಶರಣ್‌ ಪಂಪ್‌ವೆಲ್‌ ತಿಳಿಸಿದರು.

‘ಎರಡೂವರೆ ಸಾವಿರ ವರ್ಷಗಳಿಂದಲೂ ನಮ್ಮ ರಾಷ್ಟ್ರದ ಮೇಲೆ ಪರಕೀಯರಿಂದ ದಾಳಿಗಳು ನಡೆಯುತ್ತಾ ಬಂದಿವೆ. ಅವುಗಳೆಲ್ಲವನ್ನು ಎದುರಿಸಿ ಸನಾತನ ಧರ್ಮವನ್ನು ಸಂರಕ್ಷಿಸುವಲ್ಲಿ ಲಕ್ಷಾಂತರ ವೀರ ಪರಾಕ್ರಮಿಗಳು ಬಲಿದಾನ ಮಾಡಿದ್ದಾರೆ. ಇಂದಿನ ಯುವ ಪೀಳಿಗೆಯು ಈ ಬಲಿದಾನಗಳನ್ನು ಸ್ಮರಿಸುವಂತೆ ಮಾಡಲು ಈ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.

‘ರಾಜ್ಯದಲ್ಲಿ ಬಜರಂಗ ದಳದ 2000 ಶಾಖೆಗಳಿವೆ. ಇದನ್ನು 2024ರ ವೇಳೆಗೆ 5 ಸಾವಿರಕ್ಕೆ ಹೆಚ್ಚಿಸುವ ಗುರಿಯನ್ನು ಹೊಂದಿದ್ದೇವೆ. ಪಾಶ್ಚಾತ್ಯ ಸಂಸ್ಕೃತಿಯಿಂದ , ದುಶ್ಚಟಗಳಿಂದ ಮುಕ್ತಿ ಪಡೆದು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವಂತೆ ಯುವಪೀಳಿಗೆಯನ್ನು ಪ್ರೇರೇಪಿಸುವುದೂ ಈ ರಥಯಾತ್ರೆಯ ಉದ್ದೇಶ. ಲವ್ ಜಿಹಾದ್‌, ಮತಾಂತರ ಹಾಗೂ ಗೋಹತ್ಯೆ ತಡೆಯ ಬಗ್ಗೆಯೂ ಜಾಗೃತಿ ಮೂಡಿಸಲಿದ್ದೇವೆ’ ಎಂದರು.

‘ಚಿತ್ರದುರ್ಗದಲ್ಲಿ ಇದೇ 25ರಂದು ರಥಯಾತ್ರೆಗೆ ಚಾಲನೆ ನೀಡಲಾಗುತ್ತದೆ. ದಾವಣಗೆರೆ, ಶಿವಮೊಗ್ಗ, ಸಾಗರ, ಶೃಂಗೇರಿ, ಬಾಳೆಹೊನ್ನೂರು, ಚಿಕ್ಕಮಗಳೂರು, ಹಾಸನ, ತುಮಕೂರು, ಚಿಕ್ಕಬಳ್ಳಾ‍ಪುರ, ದೊಡ್ಡಬಳ್ಳಾಪುರ, ಮಂಡ್ಯ, ಮೈಸೂರು, ಕೊಡಗು, ಸುಳ್ಯ, ಪುತ್ತೂರು, ಮಂಗಳೂರು, ಮೂಲಕ ಸಾಗುವ ಈ ಯಾತ್ರೆಯು ಉಡುಪಿಯಲ್ಲಿ ಅ.10ರಂದು ಸಮಾರೋಪಗೊಳ್ಳಲಿದೆ. ಆ ಪ್ರಯುಕ್ತ ಹಿಂದೂ ಸಮಾಜೋತ್ಸವವನ್ನು ಏರ್ಪಡಿಸಲಿದ್ದು, 25 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ’ ಎಂದರು.

‘ರಥಯಾತ್ರೆಯು ಅ. 6ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯವನ್ನು ಪ್ರವೇಶಿಸಲಿದೆ. ಅ. 7ರಂದು ಪುತ್ತೂರಿನಲ್ಲಿ, ಅ. 9ರಂದು ಮಂಗಳೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ಏರ್ಪಡಿಸಲಿದ್ದೇವೆ’ ಎಂದು ತಿಳಿಸಿದ ಅವರು ‘ಈ ರಥಯಾತ್ರೆಗೂ 2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಗೂ ಯಾವುದೇ ಸಂಬಂಧ ಇಲ್ಲ’ ಎಂದು ಪ್ರತಿಕ್ರಿಯಿಸಿದರು.

ಸುದ್ದಿಗೋಷ್ಠಿಯಲ್ಲಿ ಬಜರಂಗದಳದ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಕೆ.ಪುರುಷೋತ್ತಮ, ವಿಭಾಗ ಸಂಯೋಜಕ ಭುಜಂಗ ಕುಲಾಲ್‌, ಜಿಲ್ಲಾ ಸಂಚಾಲಕ ನವೀನ್‌ ಮೂಡುಶೆಡ್ಡೆ, ವಿಭಾಗ ಸಹಸಂಚಾಲಕ ಪುನೀತ್‌ ಅತ್ತಾವರ ಇದ್ದರು.

Ad Widget
Click to comment

Leave a Reply

ಮಂಗಳೂರು

Sudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!

Published

on



Ad Widget

Ad Widget

Ad Widget

Ad Widget

“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಖಾಕಿ ತೊಡುವಾಗಲೇ ದೇಶದ ರಕ್ಷಣೆಗಾಗಿ ಪಣ ತೊಡುತ್ತೇವೆ. ಆದರೆ, ದೇಶಪ್ರೇಮ ಹಾಗೂ ‘ಭಾರತ್ ಮಾತಾ ಕೀ ಜೈ’ ಘೋಷಣೆಯನ್ನು ಗುರಾಣಿಯನ್ನಾಗಿ ಹಿಡಿದು ಯಾರು ಕೂಡ ಕಾನೂನು ವಿರೋಧಿ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, “ದೇಶದ ಪರ ಜೈಕಾರ ಹಾಕುವುದು ಹಾಗೂ ಆ ಮೂಲಕ ತಾವು ಮಾಡಿರುವ ತಪ್ಪನ್ನು ಮುಚ್ಚಿಹಾಕಲು ಯತ್ನಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯುವುದರಿಂದ ದೇಶಕ್ಕೆ ಯಾವುದೇ ಗೌರವ ಸಲ್ಲಿಸಿದಂತಾಗುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ. ಪ್ರತಿಭಟನೆ ನಡೆಸುವುದಕ್ಕೆ ನಾವು ಯಾವುದೇ ನಿಷೇಧ ಹೇರಿರಲಿಲ್ಲ. ಬದಲಿಗೆ ಸ್ಥಳದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕೆಲವು ಕಡ್ಡಾಯ ಷರತ್ತುಗಳನ್ನು ವಿಧಿಸಿದ್ದೆವು. ಆದರೆ ಸಂಬಂಧಪಟ್ಟ ವಿದ್ಯಾರ್ಥಿಗಳು ಪ್ರತಿಭಟನೆಗೆ ಪೂರ್ವಾನುಮತಿ ತೆಗೆದುಕೊಂಡಿರಲಿಲ್ಲ. ಅಥವಾ ಪೊಲೀಸರಿಗೆ ಯಾವುದೇ ಅಧಿಕೃತ ಮಾಹಿತಿಯನ್ನೂ ನೀಡಿರಲಿಲ್ಲ. ಆದರೂ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವರ ವಿರುದ್ಧ ಯಾವುದೇ ಕಠಿಣ ಕ್ರಮ ಜರುಗಿಸಿರಲಿಲ್ಲ ಎಂದು ತಿಳಿಸಿದ್ದಾರೆ.

Ad Widget

Ad Widget <> Ad Widget

“ಆದರೆ ಸ್ಥಳೀಯರಲ್ಲದೆ ಹೊರಗಡೆಯಿಂದ ಬಂದ ವ್ಯಕ್ತಿಗಳು ಪ್ರತಿಭಟನೆಗೆ ಇಳಿದಾಗ ಮತ್ತು ಕಾಲೇಜು ಆಡಳಿತ ಮಂಡಳಿಯಿಂದ ಈ ಬಗ್ಗೆ ದೂರು ಬಂದಾಗ ಪೊಲೀಸರು ಸುಮ್ಮನಿರಲು ಸಾಧ್ಯವಿಲ್ಲ. ಸ್ಥಳದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಬರುವ ಆತಂಕವಿದ್ದ ಕಾರಣ ಅಲ್ಲಿದ್ದ ಕೆಲವರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಮುಂದೆಯೂ ಇಂತಹ ಕೃತ್ಯಗಳಲ್ಲಿ ತೊಡಗಬಾರದೆಂದು ಮುನ್ನೆಚ್ಚರಿಕೆಗಾಗಿ ಬಾಂಡ್ ಬರೆದುಕೊಡುವಂತೆ ಕೋರಲಾಗಿತ್ತು. ಆದರೆ ವಿದ್ಯಾರ್ಥಿಗಳ ಮನವಿ ಹಾಗೂ ಅವರ ಶೈಕ್ಷಣಿಕ ಭವಿಷ್ಯಕ್ಕೆ ಯಾವುದೇ ಅಡಚಣೆಯಾಗಬಾರದೆಂಬ ಕಾರಣಕ್ಕೆ ಅಂತಿಮವಾಗಿ ಆ ರೀತಿಯ ಯಾವುದೇ ಬಾಂಡ್ ಪಡೆದಿರಲಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.



Ad Widget
Ad Widget
Continue Reading

ಮಂಗಳೂರು

D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ

Published

on



Ad Widget

Ad Widget

Ad Widget

Ad Widget

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.

Ad Widget

Ad Widget <> Ad Widget

ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಮಂಗಳೂರು

Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.

Ad Widget

Ad Widget <> Ad Widget

ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.



Ad Widget

ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು

Ad Widget

Ad Widget
  1. ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
  2. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
  3. ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading