Connect with us

Uncategorized

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಾಮ ಭಟ್‌ರವರಿಗೆ ನುಡಿನಮನ

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಸಂಸ್ಥೆಗಳ ಸ್ಥಾಪನೆಗೆ ಮತ್ತು ಬೆಳವಣಿಗೆಗೆ ಬೆನ್ನೆಲುಬಾಗಿದ್ದ ಹಿರಿಯ ಮುತ್ಸದ್ದಿ ಬಿಜೆಪಿಯ ಭೀಷ್ಮ ಎಂದೇ ಪ್ರಖ್ಯಾತಿಯಾಗಿದ್ದ ರಾಮಭಟ್ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಗೋಪಾಲಕೃಷ್ಣ ಭಟ್ ಎಂ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget


ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಉರಿಮಜಲು ರಾಮ ಭಟ್ಟರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ರಾಮ ಭಟ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಅವರು ಮಾತಾಡಿದರು.
ರಾಮ ಭಟ್ ರವರ ಪಕ್ಷನಿಷ್ಠೆ, ಪ್ರಾಮಾಣಿಕತೆ, ಹಿಂದುತ್ವ, ಉತ್ತಮ ವ್ಯಕ್ತಿತ್ವ , ತತ್ವಾದರ್ಶ, ಧೈರ್ಯ, ಸಾಹಸ ಎಲ್ಲರಲ್ಲಿಯೂ ಜೀವಂತವಾಗಿರಬೇಕು. ಇದುವೇ ನಾವೆಲ್ಲರೂ ಅವರಿಗೆ ನೀಡುವ ಶ್ರದ್ಧಾಂಜಲಿ.

Ad Widget

Ad Widget <> Ad Widget

ಪುತ್ತೂರಿನ ಶಾಸಕರಾಗಿದ್ದ ಅವರು ಎಲ್ಲರಿಗೂ ಬೇಕಾದವರಾಗಿದ್ದು ಅಜಾತ ಶತ್ರು ಎನಿಸಿಕೊಂಡಿದ್ದರು. ತತ್ವ ಮತ್ತು ಸಿದ್ದಾಂತದ ಉಳಿವಿಗಾಗಿ ಹಗಲಿರುಳೂ ಶ್ರಮಿಸುತ್ತಿದ್ದರು ಎಂದರು.



Ad Widget

ಕಾಲೇಜಿನ ಆಂಗ್ಲ ವಿಭಾಗದ ಮುಖ್ಯಸ್ಥ ಪರಮೇಶ್ವರ ಶರ್ಮ ಮಾತನಾಡಿ ಜನರೊಂದಿಗೆ ಸ್ವಾಭಾವಿಕವಾಗಿ ಬೆರೆಯಬಲ್ಲವರಾಗಿ ನಿರಾಶೆಗೊಳಗಾದವರನ್ನು ಉದಾತ್ತ ದೃಷ್ಟಿಕೋನದತ್ತ ಕರೆದೊಯ್ದು ಅವರಲ್ಲಿ ಉನ್ನತ ಆದರ್ಶ ಮೂಡಿಸಬಲ್ಲ ಅಪರೂಪದ ವ್ಯಕ್ತಿ ರಾಮಭಟ್‌ರಾಗಿದ್ದರು. ÷ಸಮಾಜದ ವಿವಿಧ ಸ್ತರಗಳಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದ ರಾಮ ಭಟ್ ರವರ ಯೋಚನೆಗಳು ಮತ್ತು ಯೋಜನೆಗಳು ಅನುಕರಣೀಯವಾಗಿದೆ. ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಸಂದರ್ಭದಲ್ಲಿ ಅನೇಕ ನಾಯಕರನ್ನು ಬೆಳೆಸಿದ ಕೀರ್ತಿ ಅವರದ್ದು. ಅಂತಹ ಮಹಾನ್ ನಾಯಕನ ಆತ್ಮವು ಭಗವಂತನಲ್ಲಿ ಲೀನವಾಗಲಿ ಎಂದು ನುಡಿದರು. ಅವರ ಆತ್ಮಕ್ಕೆ ಚಿರ ಶಾಂತಿಯನ್ನು ಕೋರಿ ಒಂದು ನಿಮಿಷ ಮೌನ ಪ್ರಾರ್ಥನೆಯನ್ನು ನಡೆಸಲಾಯಿತು.

Ad Widget

Ad Widget


ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಕೃಷ್ಣ ಪ್ರಸಾದ ನಡುಸಾರು, ಸದಸ್ಯ ಕೆ.ಎನ್ ಸುಬ್ರಹ್ಮಣ್ಯ , ಪ್ರಾಂಶುಪಾಲ ಮಹೇಶ ನಿಟಿಲಾಪುರ , ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಭೀಮ ಭಾರದ್ವಾಜ್ ಕಾರ್ಯಕ್ರಮವನ್ನು ನಿರೂಪಿಸಿದರು. ಬಳಿಕ ಅತಿಥಿಗಳು ಹಾಗೂ ವಿದ್ಯಾರ್ಥಿಗಳಿಂದ ರಾಮ ಭಟ್ಟರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಯಿತು

Ad Widget
Click to comment

Leave a Reply

Uncategorized

Inspection-ರಾಜ್ಯದಲ್ಲಿ 80 ಸಿಹಿ ತಯಾರಿಕಾ ಘಟಕಗಳ ತಪಾಸಣೆ, 10 ಘಟಕಗಳಿಗೆ ನೋಟಿಸ್

Published

on



Ad Widget

Ad Widget

Ad Widget

Ad Widget

ರಾಜ್ಯಾದ್ಯಂತ ಸಿಹಿ ತಿಂಡಿ ತಯಾರಿಕಾ ಘಟಕಗಳು ಹಾಗೂ ಮಾರಾಟ ಮಳಿಗೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣಾ ಅಭಿಯಾನ ನಡೆಸಿದೆ. ಈ ವೇಳೆ ಒಟ್ಟು 125 ಆಹಾರ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 10 ಸಿಹಿ ತಯಾರಿಕಾ ಘಟಕಗಳು ಹಾಗೂ ಆಹಾರ ವಹಿವಾಟುದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ಅ.15: ರಾಜ್ಯಾದ್ಯಂತ ಸಿಹಿ ತಿಂಡಿ ತಯಾರಿಕಾ ಘಟಕಗಳು ಹಾಗೂ ಮಾರಾಟ ಮಳಿಗೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣಾ ಅಭಿಯಾನ ನಡೆಸಿದೆ. ಈ ವೇಳೆ ಒಟ್ಟು 125 ಆಹಾರ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 10 ಸಿಹಿ ತಯಾರಿಕಾ ಘಟಕಗಳು ಹಾಗೂ ಆಹಾರ ವಹಿವಾಟುದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಆಯುಕ್ತ ಕೆ. ಶ್ರೀನಿವಾಸ್ ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಆರೋಗ್ಯ ಸಚಿವರ ನಿರ್ದೇಶನದ ಮೇರೆಗೆ ರಾಜ್ಯದಾದ್ಯಂತ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Ad Widget

Ad Widget <> Ad Widget

ಅನೈರ್ಮಲ್ಯ, ಪರವಾನಗಿ ಕೊರತೆ ಪತ್ತೆ
ರಾಜ್ಯದ ವಿವಿಧೆಡೆ ಒಟ್ಟು 80 ಸಿಹಿ ತಯಾರಿಕಾ ಹಾಗೂ ಮಾರಾಟ ಘಟಕಗಳನ್ನು ಪರಿಶೀಲಿಸಲಾಗಿದೆ. ಈ ಸಂದರ್ಭದಲ್ಲಿ ಕೆಲವು ಘಟಕಗಳಲ್ಲಿ ಆಹಾರ ತಯಾರಿಕೆ ಮತ್ತು ಸಂಗ್ರಹಣಾ ಸ್ಥಳಗಳನ್ನು ಅನೈರ್ಮಲ್ಯಕರವಾಗಿ ನಿರ್ವಹಿಸುತ್ತಿರುವುದು ಪತ್ತೆಯಾಗಿದೆ.



Ad Widget

ಇದಲ್ಲದೆ, ಆಹಾರ ನಿರ್ವಹಣೆಯಲ್ಲಿ ತೊಡಗಿರುವ ಸಿಬ್ಬಂದಿ ವೈದ್ಯಕೀಯ ಪ್ರಮಾಣಪತ್ರಗಳನ್ನು ಹೊಂದಿರದಿರುವುದು ಹಾಗೂ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಪರವಾನಗಿ ಅಥವಾ ನೋಂದಣಿ ಪಡೆಯದಿರುವುದೂ ಕಂಡುಬಂದಿದೆ.

Ad Widget

Ad Widget

ಪ್ರಯೋಗಾಲಯಕ್ಕೆ 125 ಆಹಾರ ಮಾದರಿ
ತಪಾಸಣೆ ವೇಳೆ ಸಂಗ್ರಹಿಸಿದ 125 ಆಹಾರ ಮಾದರಿಗಳನ್ನು ಗುಣಮಟ್ಟ ಹಾಗೂ ಆಹಾರ ಸುರಕ್ಷತಾ ಮಾನದಂಡಗಳ ಪಾಲನೆಯನ್ನು ಪರಿಶೀಲಿಸಲು ಸರ್ಕಾರಿ ಆಹಾರ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.

ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ಸಂಬಂಧಿತ 2011ರ ನಿಯಮಾವಳಿಗಳ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು. ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸುವ ಸಿಹಿ ತಯಾರಿಕಾ ಘಟಕಗಳು ಮತ್ತು ಮಾರಾಟ ಮಳಿಗೆಗಳ ವಿರುದ್ಧ ನಿರಂತರ ತಪಾಸಣೆ ನಡೆಸಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆಯುಕ್ತ ಕೆ. ಶ್ರೀನಿವಾಸ್ ಎಚ್ಚರಿಕೆ ನೀಡಿದ್ದಾರೆ.

Ad Widget
Continue Reading

Uncategorized

Ambika Vidyalaya-ಅಂಬಿಕಾ ವಿದ್ಯಾಲಯ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ರಾಷ್ಟ್ರ ಮಟ್ಟದಲ್ಲಿ‌ ಬಹುಮಾನ

Published

on



Ad Widget

Ad Widget

Ad Widget

Ad Widget

ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪೆರ್ನೆಯ ನಿವಾಸಿ ಗಿರೀಶ ಗೌಡ ಮತ್ತು ಸುಮಿತ್ರ ದಂಪತಿಯ ಪುತ್ರಿ 8ನೇ ತರಗತಿಯ ಸಾನ್ವಿ ಜಿ, ದರ್ಬೆಯ ನಿವಾಸಿ ಕೆ ಜಿ ಮುರಳೀಧರ ಮತ್ತು ಕೆ ಉಷಾ ಮುರಳೀಧರ ದಂಪತಿಯ ಪುತ್ರಿ 8ನೇ ತರಗತಿಯ ಕೆ ಎಂ ಶಮಿತ ಭಟ್ ಹಾಗೂ  ಪಡೀಲ್ ನ ನಿವಾಸಿ ಸಂಜೀವ ರಂಜನ್ ಮತ್ತು ಅರ್ಪಣಾ ಕುಮಾರಿ ದಂಪತಿಯ ಪುತ್ರಿ 8ನೇ ತರಗತಿಯ ಶಾಂಭವಿ ರಂಜನ್,

Ad Widget

Ad Widget <> Ad Widget

ಸಂಪ್ಯದ ನಿವಾಸಿ ರವಿಕುಮಾರ ಕೆ ಮತ್ತು ಸುಮಿತ್ರ ಕೆ ದಂಪತಿಯ ಪುತ್ರಿ 8ನೇ ತರಗತಿಯ ನೈನಿಕ ಎ ಆರ್ ಪ್ರಥಮ ಸ್ಥಾನವನ್ನು ಗಳಿಸಿ, ಮಧ್ಯ ಪ್ರದೇಶದಲ್ಲಿ ನಡೆಯಲಿರುವ ಎಸ್ ಜಿ  ಎಫ್ ಐ ( ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ) ಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.



Ad Widget

14ರ ವಯೋಮಾನದ ಬಾಲಕರ ವಿಭಾಗದಲ್ಲಿ ಉಪ್ಪಿನಂಗಡಿ  ನೆಕ್ಕಿಲಾಡಿಯ ನಿವಾಸಿ ಡಾ.ಸುಪ್ರೀತ್ ಜೋಯಲ್ ಲೋಬೋ ಮತ್ತು ಡಾ. ಶೈನಿ ಪಾಯಸ್  ದಂಪತಿಯ ಪುತ್ರ 7ನೇ ತರಗತಿಯ ಸಂಹಿತ್ ಜೊಸ್ಸಿ ಲೋಬೋ, ಕಾಣಿಯೂರಿನ ನಿವಾಸಿ ಅರವಿಂದ ಕುಮಾರ್ ಕೆ ಮತ್ತು ಜ್ಯೋತಿ ಕುಮಾರಿ ಕೆ ದಂಪತಿಯ ಪುತ್ರ 7ನೇ ತರಗತಿಯ ರತುಲ್ ಅದ್ವೈತ್, ಕುಂಜುರ್ ಪಂಜದ ನಿವಾಸಿ ಶ್ರೀನಿವಾಸ ಮಯ್ಯ ಡಿ  ಮತ್ತು ಜಯಲಕ್ಷ್ಮೀ ಎಸ್ ಮಯ್ಯ ದಂಪತಿಯ ಪುತ್ರ 7ನೇ ತರಗತಿಯ ಮಯೂರ್ ಎಸ್ ಮಯ್ಯ ಹಾಗೂ ಕಲ್ಲಾರೆಯ ನಿವಾಸಿ ಪ್ರವೀಣ್ ರೈ ಸಿ ಮತ್ತು ತೃಪ್ತಿ ರೈ ದಂಪತಿಯ ಪುತ್ರ 7ನೇ ತರಗತಿಯ ತ್ರಿನಯ್ ರೈ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ.

Continue Reading

Uncategorized

Kumaraswamy-ಸ್ಟಿಂಗ್ ಆಪರೇಷನ್‌ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ

Published

on



Ad Widget

Ad Widget

Ad Widget

Ad Widget

ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್‌ಗಳ ಹೆಸರಿನಲ್ಲಿ ರಾಜಕೀಯ ನಾಯಕರು ಹಾಗೂ ಅವರ ಕುಟುಂಬಗಳನ್ನು ಗುರಿಯಾಗಿಸಲಾಗುತ್ತಿದೆ ಎಂಬ ಆರೋಪಗಳ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಈ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್‌ಗಳ ಹೆಸರಿನಲ್ಲಿ ರಾಜಕೀಯ ನಾಯಕರು ಹಾಗೂ ಅವರ ಕುಟುಂಬಗಳನ್ನು ಗುರಿಯಾಗಿಸಲಾಗುತ್ತಿದೆ ಎಂಬ ಆರೋಪಗಳ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಈ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚಿಸುವುದರ ಜೊತೆಗೆ ದೂರು ಸಲ್ಲಿಸುವುದಾಗಿಯೂ ಅವರು ತಿಳಿಸಿದ್ದಾರೆ.

Ad Widget

Ad Widget <> Ad Widget

ಬೆಂಗಳೂರಿನ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸ್ಟಿಂಗ್ ಆಪರೇಷನ್‌ಗಳ ಹಿಂದೆ ಯಾರಿದ್ದಾರೆ, ಅವುಗಳನ್ನು ಯಾರು ನಡೆಸಿದ್ದಾರೆ ಮತ್ತು ಇದರಲ್ಲಿ ಯಾರ ಪಾತ್ರವಿದೆ ಎಂಬುದನ್ನು ತನಿಖೆಯ ಮೂಲಕ ಪತ್ತೆಹಚ್ಚಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.



Ad Widget

ಸಿದ್ದರಾಮಯ್ಯ ಮೌನವಾಗಿರಬಾರದು: ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧ ನಡೆಯುತ್ತಿದೆ ಎನ್ನಲಾದ ಷಡ್ಯಂತ್ರಕ್ಕೆ ಹೆದರುವ ಅಗತ್ಯವಿಲ್ಲ ಎಂದು ಹೇಳಿದ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರು ತಮ್ಮ ಹಿಂದಿನ ಹೋರಾಟದ ಮನೋಭಾವದೊಂದಿಗೆ ಮಾತನಾಡಬೇಕು. ಇಂತಹ ಬೆಳವಣಿಗೆಗಳ ಬಗ್ಗೆ ಮೌನ ವಹಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

Ad Widget

Ad Widget

ಹಿಂದೆ ಮಾಜಿ ಮುಖ್ಯಮಂತ್ರಿಯೊಬ್ಬರ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸಲಾಗಿತ್ತು. ಬಳಿಕ ರಮೇಶ್ ಜಾರಕಿಹೊಳಿ ಹಾಗೂ ಕೆ.ಎನ್. ರಾಜಣ್ಣ ಅವರ ವಿಚಾರಗಳೂ ಮುನ್ನೆಲೆಗೆ ಬಂದವು. ಇದೀಗ ಸಿದ್ದರಾಮಯ್ಯ ಅವರ ಸರದಿ ಬಂದಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ಸದಾಶಿವನಗರದಲ್ಲಿ ನಿಗಾ ವ್ಯವಸ್ಥೆ ಇದೆ ಎಂಬ ಆರೋಪ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸದಲ್ಲಿ ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳನ್ನು ನೇಮಿಸಿಕೊಂಡು, ಅತ್ಯಾಧುನಿಕ ಉಪಕರಣಗಳ ಮೂಲಕ ಸಚಿವರು ಹಾಗೂ ಇತರರ ಮಾತುಕತೆಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂಬ ಮಾಹಿತಿ ತಮಗೆ ಲಭಿಸಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ರಾಜಕೀಯ ನಾಯಕರು ಹಾಗೂ ಸಚಿವರ ಫೋನ್‌ಗಳನ್ನು ಕದ್ದಾಲಿಸಲಾಗುತ್ತಿದೆ ಎಂಬ ಆರೋಪ ಗಂಭೀರವಾಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆಯಲ್ಲೂ ಚರ್ಚೆಯಾಗುತ್ತಿದೆ ಎಂಬ ಮಾಹಿತಿ ಬಂದಿದೆ ಎಂದು ಅವರು ಹೇಳಿದರು.

ಆದರೆ, ಮುಖ್ಯಮಂತ್ರಿ ಸ್ವತಃ ಇಂತಹ ಚಟುವಟಿಕೆಗಳಿಗೆ ಆದೇಶ ನೀಡಿದ್ದಾರೆ ಎಂದು ತಾನು ಹೇಳುತ್ತಿಲ್ಲ. ಇಲಾಖೆಯಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸಮಗ್ರ ತನಿಖೆಯ ಮೂಲಕ ಪರಿಶೀಲಿಸಬೇಕು ಎಂದು ಸ್ಪಷ್ಟಪಡಿಸಿದರು.

ಪೆನ್‌ಡ್ರೈವ್ ಪ್ರಕರಣದ ಬಗ್ಗೆಯೂ ಪ್ರಶ್ನೆ
2024ರ ಲೋಕಸಭಾ ಚುನಾವಣೆಗೆ ಎರಡು ದಿನ ಬಾಕಿ ಇರುವಾಗ ಮಂಡ್ಯ ಮತ್ತು ಹಾಸನ ಭಾಗಗಳಲ್ಲಿ ವಿಡಿಯೊಗಳನ್ನು ಪೆನ್‌ಡ್ರೈವ್‌ಗಳಲ್ಲಿ ಹಂಚಲಾಗಿದೆ ಎಂದು ಹೇಳಿದ ಕುಮಾರಸ್ವಾಮಿ ಅವರು, ವಿಡಿಯೋಗಳಲ್ಲಿ ಇದ್ದ ಮಹಿಳೆಯರ ಮುಖಗಳನ್ನು ಮರೆಮಾಚಲಿಲ್ಲ. ಲೋಕಸಭೆಯ ಇವತ್ತಿನ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ನಾನೂರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿದ್ದರು. ಆ ನಾನೂರು ಜನ ಮಹಿಳೆಯರಲ್ಲಿ ಎಷ್ಟು ಜನ ಬಂದು ಕೇಸು ದಾಖಲು ಮಾಡಿದ್ದಾರೆ? ಎಂದು ಪ್ರಶ್ನಿಸಿದರು.

ಆ ವಿಡಿಯೊಗಳನ್ನು ಸಿದ್ಧಪಡಿಸಿದವರು ಯಾರು, ಅವುಗಳನ್ನು ಯಾವ ಸ್ಥಳದಲ್ಲಿ ಸಿದ್ಧಪಡಿಸಲಾಯಿತು ಮತ್ತು ಹಂಚಿದವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಪ್ರಶ್ನೆಗಳಿಗೆ ರಾಜ್ಯ ಸರ್ಕಾರ ಉತ್ತರಿಸಬೇಕು ಎಂದು ಆಗ್ರಹಿಸಿದರು.

ತಮ್ಮ ಕುಟುಂಬದವರ ಬಗ್ಗೆಯೂ ಅವಹೇಳನಕಾರಿ ಸುದ್ದಿಗಳನ್ನು ಪ್ರಸಾರ ಮಾಡಲಾಗಿತ್ತು. ತಮ್ಮ ತಾಯಿಯ ವಿರುದ್ಧವೂ ಆರೋಪಗಳು ಮತ್ತು ಸುದ್ದಿಗಳನ್ನು ಹರಡಲಾಗಿತ್ತು. ಇಂತಹ ಸಂದರ್ಭಗಳಲ್ಲಿಯೂ ತಮ್ಮ ಕುಟುಂಬ ನ್ಯಾಯಾಲಯದ ಮೊರೆ ಹೋಗಿರಲಿಲ್ಲ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿರುವುದಕ್ಕೆ ಆಕ್ಷೇಪ
ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ ಎಂಬ ವರದಿಗಳನ್ನು ಉಲ್ಲೇಖಿಸಿದ ಕುಮಾರಸ್ವಾಮಿ, ಯಾವುದೇ ಪ್ರಕರಣದಲ್ಲಿಯೂ ಸತ್ಯಾಸತ್ಯತೆ ನ್ಯಾಯಾಂಗದ ಮೂಲಕ ಹೊರಬರಬೇಕು. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆಬಾಗಬೇಕು ಎಂಬುದು ತಮ್ಮ ನಿಲುವು ಎಂದು ತಿಳಿಸಿದರು.
ಸುದೀರ್ಘ ರಾಜಕೀಯ ಅನುಭವ ಹೊಂದಿರುವ ಸಿದ್ದರಾಮಯ್ಯ ಅವರು ನ್ಯಾಯಾಲಯದ ತಡೆಯಾಜ್ಞೆ ಪಡೆಯುವ ಬದಲು ದಿಟ್ಟವಾಗಿ ನಿಂತು ಇಂತಹ ಬೆಳವಣಿಗೆಗಳನ್ನು ಎದುರಿಸಬೇಕು ಎಂದು ಅವರು ಮನವಿ ಮಾಡಿದರು.

ಸಿಬಿಐ ತನಿಖೆಗೆ ಮತ್ತೆ ಒತ್ತಾಯ
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸಿರುವುದನ್ನು ತಾವು ವಿರೋಧಿಸಿಲ್ಲ ಎಂದ ಕುಮಾರಸ್ವಾಮಿ, ಇದೇ ರೀತಿಯ ಗಂಭೀರತೆಯನ್ನು ಇತರ ಪ್ರಕರಣಗಳಲ್ಲಿಯೂ ತೋರಿಸಬೇಕು ಎಂದು ಹೇಳಿದರು.

ಸ್ಟಿಂಗ್ ಆಪರೇಷನ್‌ಗಳ ಹಿಂದೆ ಇರುವವರನ್ನು ಪತ್ತೆಹಚ್ಚಿ, ಆರೋಪಗಳ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಲು ಸಿಬಿಐ ತನಿಖೆ ಅಗತ್ಯವಿದೆ. ಈ ಕುರಿತು ಅಮಿತ್ ಶಾ ಅವರನ್ನು ಭೇಟಿಯಾಗಿ ದೂರು ಸಲ್ಲಿಸುವುದಾಗಿ ಪುನರುಚ್ಚರಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading