Connect with us

ದಕ್ಷಿಣ ಕನ್ನಡ

ಪುತ್ತೂರು : ತಾಯಿ ಮತ್ತು ಮಗನನ್ನು ಕಟ್ಟಿ ಹಾಕಿ ಮಾರಕಾಯುಧ ಪ್ರದರ್ಶಿಸಿ ದರೋಡೆ ಪ್ರಕರಣ – ಕೇರಳದಲ್ಲಿ ಓರ್ವ ಪೊಲೀಸ್‌ ವಶ ?

Published

on



Ad Widget

Ad Widget

Ad Widget

Ad Widget

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಕರ್ನಾಟಕ ಪೊಲೀಸರು ಕೇರಳದಲ್ಲಿ ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ. ಕಾಸರಗೋಡು ಜಿಲ್ಲೆಯ ಸೀತಾಂಗೋಳಿ ಸಮೀಪ ಬಾಡೂರು ಸಮೀಪದ ನಿವಾಸಿಯನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.

Ad Widget

Ad Widget

Ad Widget

Ad Widget

ಶಂಕಿತ ಆರೋಪಿ ಬಾಡೂರು ಬಳಿ ಸಾರ್ವಜನಿಕ ಸಂಸ್ಥೆಯೊಂದರಲ್ಲಿ ಕುಳಿತುಕೊಂಡಿದ್ದ ವೇಳೆ ಕರ್ನಾಟಕ ಪೊಲೀಸರ ತಂಡ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೂರು ವಾರಗಳ ಹಿಂದೆ ತಡ ರಾತ್ರಿ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಕುದ್ಕಾಡಿ ತೋಟದಮೂಲೆ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ್ದ 5 ಕ್ಕಿಂತ ಹೆಚ್ಚು ಜನರಿದ್ದ ದರೋಡೆಕೋರರ ತಂಡ ಮನೆಯಲ್ಲಿದ್ದ ತಾಯಿ ಮತ್ತು ಮಗನನ್ನು ಕಟ್ಟಿ ಹಾಕಿ 30 ಸಾವಿರ ರೂಪಾಯಿ ನಗದು ಹಾಗೂ ಅಂದಾಜು ಎರಡು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದರೋಡೆ ನಡೆಸಿದ್ದರು.

Ad Widget

Ad Widget <> Ad Widget

ಇದನ್ನೂ ಓದಿ :ಪುತ್ತೂರು : ಮಾರಕಾಯುಧ ತೋರಿಸಿ ಬೆದರಿಸಿ ಮನೆಯವರ ಕೈ ಕಾಲು ಕಟ್ಟಿ ಚಿನ್ನಾಭರಣ ನಗದು ದರೋಡೆ – ರಾತ್ರಿ ನಡೆದದ್ದೇನು ? ಕೃತ್ಯ ಹುಟ್ಟು ಹಾಕಿರುವ ಅನುಮಾನಗಳೇನು ? ಇಲ್ಲಿದೆ ಪ್ರಕರಣದ ಇಂಚಿಂಚು ವಿವರ



Ad Widget

ತೋಟದಮೂಲೆ ನಿವಾಸಿ ಕಸ್ತೂರಿ ರೈ ಹಾಗೂ ಅವರ ಪುತ್ರ ಗುರು ಪ್ರಸಾದ್‌ ರೈಯವರನ್ನು ಕಟ್ಟಿ ಹಾಕಿ ಕೃತ್ಯ ನಡೆಸಲಾಗಿತ್ತು. ತಡ ರಾತ್ರಿ 2 ಗಂಟೆಗೆ ಮನೆಗೆ ನುಗ್ಗಿದ್ದ ದರೋಡೆಕೋರರ ತಂಡ ಸರಿ ಸುಮಾರು ಎರಡೂವರೆ ಗಂಟೆ ಕಾಲ ಮನೆಯನ್ನು ಜಾಲಾಡಿ ಕೃತ್ಯ ನಡೆಸಿತ್ತು. ದರೋಡೆಕೋರರು ಕೈ ಯಲ್ಲಿ ಮಾರಾಕಾಯುದ್ದಗಳನ್ನು ಹಿಡಿದುಕೊಂಡಿದ್ದರು ಹಾಗೂ ಮನೆಯಲ್ಲಿದ್ದ ಮೊಬೈಲ್‌ ಪೋನ್‌ ಗಳನ್ನು ನೀರಲ್ಲಿ ಹಾಕಿ, ಬೈಕ್‌ ನ ಕೀ ಹಾಗೂ ಟಾರ್ಚ್‌ ಹಿಡಿದುಕೊಂಡು ಪರಾರಿಯಾಗಿದ್ದರು.

Ad Widget

Ad Widget

ಈ ಪ್ರಕರಣ ಪುತ್ತೂರು ತಾಲೂಕಿನಾದ್ಯಂತ ಬಾರಿ ಸಂಚಲನ ಸೃಷ್ಟಿಸಿತ್ತು. ದರೋಡೆ ಕೃತ್ಯದಲ್ಲಿ ಕೇರಳದ ತಂಡದ ಕೈವಾಡ ಇರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು . ಪೊಲೀಸರ ಒಂದು ತಂಡ 2-3 ಬಾರಿ ಕಾಸರಗೋಡಿಗೆ ತೆರಳಿ ತನಿಖೆ ನಡೆಸಿತ್ತು. ಪ್ರಕರಣದ ಓರ್ವ ಆರೋಪಿ ಸೀತಾಂಗೋಳಿ ಸಮೀಪ ಬಾಡೂರು ಎಂಬಲ್ಲಿ ಇರುವ ಖಚಿತ ಮಾಹಿತಿ ದೊರೆತ ಮೇರೆಗೆ ಪೊಲೀಸರ ತಂಡ ಅಲ್ಲಿಗೆ ತೆರಳಿ ಓರ್ವನನ್ನು ವಶಕ್ಕೆ ಪಡೆದಿದೆ ಎಂದು ವರದಿಯಾಗಿದೆ. ಆರೋಪಿ ಕೇರಳದ ಸಂಘಟನೆಯೊಂದರ ಸದಸ್ಯ ಎಂದು ತಿಳಿದು ಬಂದಿದೆ.

Ad Widget
Click to comment

Leave a Reply

ಮಂಗಳೂರು

Mangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉರುಂದಾಡಿಗುಡ್ಡೆಯಲ್ಲಿ ಮಹಿಳೆಯೊಬ್ಬರನ್ನು ಆಕೆಯ ಪತಿಯೇ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಪತ್ನಿಗೆ ಪರಪುರುಷನೊಂದಿಗೆ ಸಂಬಂಧವಿದೆ ಎಂಬ ಸಂಶಯವೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉರುಂದಾಡಿಗುಡ್ಡೆಯಲ್ಲಿ ಮಹಿಳೆಯೊಬ್ಬರನ್ನು ಆಕೆಯ ಪತಿಯೇ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಪತ್ನಿಗೆ ಪರಪುರುಷನೊಂದಿಗೆ ಸಂಬಂಧವಿದೆ ಎಂಬ ಸಂಶಯವೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕೊಲೆಯಾದ ಮಹಿಳೆಯನ್ನು ವಿಜಯಪುರ ಜಿಲ್ಲೆಯ ಸೊನಾಲಿ (30) ಎಂದು ಗುರುತಿಸಲಾಗಿದೆ. ಆಕೆಯ ಪತಿ ಶಿವಲಿಂಗಪ್ಪ ಮಾದರ (40) ಕೊಲೆ ಆರೋಪಿಯಾಗಿದ್ದಾನೆ.

Ad Widget

Ad Widget <> Ad Widget

ದಂಪತಿ ಕಾವೂರು ಉರುಂದಾಡಿಗುಡ್ಡೆಯ ಹರೀಶ್ ಕುಮಾರ್ ಎಂಬವರ ಮನೆಯಲ್ಲಿ ಬಾಡಿಗೆಗೆ ವಾಸವಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.



Ad Widget

ಸೊನಾಲಿಗೆ ಬೇರೊಬ್ಬ ವ್ಯಕ್ತಿಯೊಂದಿಗೆ ಸಂಬಂಧವಿದೆ ಎಂಬ ಅನುಮಾನ ಶಿವಲಿಂಗಪ್ಪನಿಗೆ ಇತ್ತು ಎನ್ನಲಾಗಿದೆ. ಈ ವಿಚಾರವಾಗಿ ದಂಪತಿ ನಡುವೆ ಹಲವು ಬಾರಿ ಜಗಳ ನಡೆದಿತ್ತು. ಭಾನುವಾರ ರಾತ್ರಿ ಕೂಡ ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ಆಕ್ರೋಶಗೊಂಡ ಶಿವಲಿಂಗಪ್ಪ ಮನೆಯಲ್ಲಿದ್ದ ಚಾಕುವಿನಿಂದ ಪತ್ನಿಗೆ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಮಂಗಳೂರು

Mangalore Dasara-ಮಂಗಳೂರು ದಸರಾಕ್ಕೆ ಚಾಲನೆ: ಸಿಎಂ ಆಗಮನ ಮುಂದೂಡಿಕೆ

Published

on



Ad Widget

Ad Widget

Ad Widget

Ad Widget

ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ ದೇವಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ ದೇವಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಬೆಳಗ್ಗೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ ಹಾಗೂ ನವಕಲಶಾಭಿಷೇಕ ನೆರವೇರಿತು. ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಶ್ರೀ ಮಹಾಗಣಪತಿ, ಶ್ರೀ ಶಾರದಾ ಮಾತೆ, ಆದಿಶಕ್ತಿ ಹಾಗೂ ಸ್ಕಂದಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ ಮತ್ತು ಕೂಷ್ಮಾಂಡಿನಿ ದೇವಿಯರ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಯಿತು.

Ad Widget

Ad Widget <> Ad Widget

ರವಿವಾರದ ರಜೆಯ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯರ ವಿಗ್ರಹಗಳ ಪ್ರತಿಷ್ಠಾಪನೆಯ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.



Ad Widget

ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹಾಗೂ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

Ad Widget

Ad Widget

ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕಾರ್ಯದರ್ಶಿ ಬಿ. ಮಾಧವ ಸುವರ್ಣ, ಕ್ಷೇತ್ರಾಡಳಿತ ಮಂಡಳಿಯ ಟ್ರಸ್ಟಿಗಳು, ಕ್ಷೇತ್ರ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.

ಈ ಬಾರಿ ಮಹಿಳಾ ದಸರಾ ವಿಶೇಷ ಆಕರ್ಷಣೆ
ಕ್ಷೇತ್ರದ ಖಜಾಂಚಿ ಪದ್ಮರಾಜ್ ಆರ್. ಪೂಜಾರಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿ. ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಆಡಳಿತ ಮಂಡಳಿ ಹಾಗೂ ಅಭಿವೃದ್ಧಿ ಸಮಿತಿಯ ಸಹಯೋಗದೊಂದಿಗೆ ಈ ಬಾರಿಯ ಮಂಗಳೂರು ದಸರಾ ನಡೆಯುತ್ತಿದೆ ಎಂದು ತಿಳಿಸಿದರು.

ಕಳೆದ ವರ್ಷ ಆರಂಭಿಸಿದ್ದ ಮಕ್ಕಳ ದಸರಾ ಮತ್ತು ಕಿನ್ನಿಪಿಲಿ ಕಾರ್ಯಕ್ರಮಗಳನ್ನು ಈ ಬಾರಿಯೂ ಮುಂದುವರಿಸಲಾಗುವುದು. ಇದೇ ಮೊದಲ ಬಾರಿಗೆ ಮಹಿಳಾ ದಸರಾ ಆಯೋಜಿಸಲಾಗುತ್ತಿದ್ದು, ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳು ಹಾಗೂ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಭಕ್ತರ ಬೇಡಿಕೆಯಂತೆ ಅಕ್ಟೋಬರ್ 20ರಂದು ಅಕ್ಷರಾಭ್ಯಾಸ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ. ಈ ಬಾರಿ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಶೇ. 25ರಿಂದ 30ರಷ್ಟು ಹೆಚ್ಚಾಗುವ ನಿರೀಕ್ಷೆಯಿದ್ದು, ವ್ಯವಸ್ಥಿತ ನಿರ್ವಹಣೆಗಾಗಿ ಒಂದು ಸಾವಿರಕ್ಕೂ ಹೆಚ್ಚು ಸ್ವಯಂಸೇವಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಆಗಮನ ಮುಂದೂಡಿಕೆ
ಸೋಮವಾರ ಸಂಜೆ 6.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರು ದಸರಾ ಮಹೋತ್ಸವವನ್ನು ಉದ್ಘಾಟಿಸಬೇಕಿತ್ತು. ಆದರೆ ತುರ್ತು ಕಾರಣದಿಂದ ದೆಹಲಿಗೆ ತೆರಳಬೇಕಾದ ಹಿನ್ನೆಲೆಯಲ್ಲಿ ಅವರ ಪ್ರವಾಸ ರದ್ದಾಗಿದೆ. ಅಕ್ಟೋಬರ್ 15 ಅಥವಾ 16ರಂದು ಮುಖ್ಯಮಂತ್ರಿ ಕ್ಷೇತ್ರಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಪದ್ಮರಾಜ್ ಆರ್. ಪೂಜಾರಿ ತಿಳಿಸಿದರು.

Ad Widget
Continue Reading

ಬಿಗ್ ನ್ಯೂಸ್

Golithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ

Published

on



Ad Widget

Ad Widget

Ad Widget

Ad Widget

ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು, ಅ.11: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ಕಾಂಚನ ಕ್ರಾಸ್ ಸಮೀಪದ ತೋಡಿನ ನೀರಿನಲ್ಲಿ ಸಣ್ಣಪುಟ್ಟ ಮೀನುಗಳು ಏಕಾಏಕಿ ಸತ್ತು ಬಿದ್ದಿರುವುದು ಕಂಡುಬಂದಿದೆ. ತೋಡಿನಲ್ಲಿ ಸಾಕಷ್ಟು ದೂರದವರೆಗೆ ಮೀನುಗಳು ಸತ್ತಿರುವುದು ಸ್ಥಳೀಯರು ಚಿತ್ರೀಕರಿಸಿದ ವಿಡಿಯೋದಲ್ಲಿ ಕಾಣಿಸಿಕೊಂಡಿದೆ.

Ad Widget

Ad Widget <> Ad Widget

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದ್ದು, ಘಟನೆ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.



Ad Widget

ಮೀನುಗಳ ಸಾವಿಗೆ ಯಾರಾದರೂ ರಾಸಾಯನಿಕ ಬಳಕೆ ಮಾಡಿರುವುದು ಕಾರಣವೇ ಅಥವಾ ನೀರಿನಲ್ಲಿ ವಿಷಕಾರಿ ಅಂಶ ಬೆರೆತಿರುವುದರಿಂದ ಈ ಘಟನೆ ಸಂಭವಿಸಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ನೀರಿನ ಮಾದರಿಯನ್ನು ಪರೀಕ್ಷಿಸುವ ಮೂಲಕ ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading