ಮಂಗಳೂರು
Eid Milad Holiday Controversy : ದಕ್ಕೆಯಲ್ಲಿ ಈದ್ ಮಿಲಾದ್‌ಗೆ ರಜೆ ಘೋಷಿಸಿ ಎಚ್ಚರಿಕೆ ಬ್ಯಾನರ್ ವಿವಾದ – ಹಿಂದೂತ್ವವಾದಿ, ಎಡ ಪರ ಸಂಘಟನೆ ಹಾಗೂ ಮೀನುಗಾರರ ಸಂಘ ಹೇಳಿದ್ದೇನು ?
ಮಂಗಳೂರು: ವಿವಾದ ಸೃಷ್ಟಿಸಿರುವ ಮಂಗಳೂರಿನ ಮೀನುಗಾರಿಕೆ ದಕ್ಕೆಯಲ್ಲಿ ಈದ್ ಮಿಲಾದ್ ರಜೆಯ ಕುರಿತು ಅಳವಡಿಸಿದ ಬ್ಯಾನರ್ ವಿಚಾರದಲ್ಲಿ ಪರ ವಿರೋಧ ಚರ್ಚೆ ತಾರಕಕ್ಕೆರಿದೆ. ಹಿಂದೂತ್ವವಾದಿ ಸಂಘಟನೆಗಳು ಈ ಬ್ಯಾನರ್ ಗೆ ಆಕ್ಷೇಪ ವ್ಯಕ್ತಪಡಿಸಿವೆ. ಇದಕ್ಕೆ ತದ್ವಿರುದ್ದವಾಗಿ ಎಡ ಪರ ಸಂಘಟನೆಗಳು ಹಾಗೂ ಮೀನು ಮಾರಾಟಗಾರರ ಸಂಘಟನೆ ರಜೆ ನೀಡುವ ಪ್ರಕ್ರಿಯೆ ಹಿಂದಿನಿಂದಲೂ ಇದೆ ಎಂದು ಸ್ಪಷ್ಟನೆ ನೀಡಿವೆ ಹಾಗೂ ಇದಕ್ಕೆ ಮತೀಯ ಬಣ್ಣ ಬಳಿಯದಂತೆ ಮನವಿ ಮಾಡಿವೆ.
ಬ್ಯಾನರ್ ನಲ್ಲಿ ಏನಿದೆ ?
ಈದ್ ಮಿಲಾದ್ ಹಿನ್ನೆಲೆಯಲ್ಲಿ ವ್ಯಾಪಾರಸ್ಥರ ಸಂಘದ ನಿರ್ಧಾರದಂತೆ ಸೆ. 28ರಂದು ಮುಂಜಾನೆ 3.45ರ ಅನಂತರ ಹಸಿ ಮೀನು ವ್ಯಾಪಾರಿಗಳು ವ್ಯಾಪಾರ ಮಾಡದೆ ಕಡ್ಡಾಯವಾಗಿ ರಜೆ ಮಾಡಬೇಕು. ರಜೆ ಮಾಡದೆ ಕಾನೂನು ಉಲ್ಲಂಘಿಸಿದರೆ 1 ತಿಂಗಳ ಕಾಲ ವ್ಯಕ್ತಿಯು ಬಂದರು ದಕ್ಕೆಯಲ್ಲಿ ವ್ಯಾಪಾರ ಮಾಡದಂತೆ ಸಂಘ ಕಾನೂನು ಕ್ರಮ ಕೈಗೊಳ್ಳುವುದರೊಂದಿಗೆ ದಂಡನೆ ವಿಧಿಸಬೇಕಾಗುತ್ತದೆ’ ಎಂಬದಾಗಿ ದಕ್ಕೆಯಲ್ಲಿ ಬ್ಯಾನರ್ ಅಳವಡಿಸಲಾಗಿದ್ದು ಈ ರೀತಿ ಪ್ಲೆಕ್ಸ್ ಆಳವಡಿಸಿರುವುದು ಇದೆ ಮೊದಲ ಬಾರಿ ಎಂದು ತಿಳಿದು ಬಂದಿದೆ.
ವಿಹಿಂಪ ಖಂಡನೆ
“ಬೆದರಿಕೆಯ ತಂತ್ರಗಳಿಗೆ ಹಿಂದೂ ಮೀನುಗಾರರು ಮಣಿಯಬಾರದು. ದಕ್ಕೆಯಲ್ಲಿ ಷರಿಯಾ ಕಾನೂನು ಜಾರಿಯಲ್ಲಿದೇಯೆ ? ಈ ಬಗ್ಗೆ ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕು. ’ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಒತ್ತಾಯಿಸಿದ್ದಾರೆ.
ಶ್ರೀರಾಮಸೇನೆ ವಿರೋಧ
ಇನ್ನೊಂದು ಧರ್ಮದ ಮೀನುಗಾರರನ್ನು ಕೆರಳಿಸುವ ರೀತಿಯಲ್ಲಿ ಪ್ರಚೋದನೆ ನೀಡಿರುವುದು ಖಂಡನೀಯ ಎಂದು ಶ್ರೀರಾಮಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ ಅಡ್ಯಾರ್ ತಿಳಿಸಿದ್ದಾರೆ.
“ಬ್ಯಾನರ್‌ನಿಂದ ಗೊಂದಲವಾಗಿಲ್ಲ – ಅನ್ಯೋನ್ಯತೆಯಿಂದ ಇದ್ದೇವೆ’
ಬ್ಯಾನರ್ ಅಳವಡಿಸಿರುವುದರಿಂದ ಮೀನು ಗಾರರಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ. ಎಲ್ಲ ಧರ್ಮಗಳ ಹಬ್ಬಗಳಿಗೂ ರಜೆ ನಿಗದಿಗೊಳಿಸಿ ನಿರ್ಣಯಿಸಲಾಗಿದೆ. ರಜೆಯ ಸಂದರ್ಭ ಮುಂಜಾನೆ 3.45ರ ನಂತರ ಹಸಿಮೀನು ವ್ಯಾಪಾರಸ್ಥರು ವ್ಯಾಪಾರ ನಡೆಸುವಂತಿಲ್ಲ. ಆದರೆ ಕೆಲವು ಮೀನು ವ್ಯಾಪಾರಸ್ಥರು ಬೆಳಗ್ಗೆ ಗಂಟೆಯ ನಂತರ ರಜೆ ಎಂದು ತಿಳಿದು ವ್ಯಾಪಾರ ಮಾಡುತ್ತಾರೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಹಾಗೂ ಗೊಂದಲಕ್ಕೆ ತೆರೆ ಎಳೆಯಲು ಬ್ಯಾನರ್ ಅಳವಡಿಸಲಾಗಿದೆ. ಇದು ಸಂಘದ ಎಲ್ಲ ಸಮುದಾಯದ ಮೀನು ವ್ಯಾಪಾರಸ್ಥರು ಸೇರಿಕೊಂಡು ತೆಗೆದುಕೊಂಡ ನಿರ್ಣಯವಾಗಿದೆ ಎಂದು ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಉಮೇಶ್ ಟಿ. ಕರ್ಕೇರಾ ಹೇಳಿದ್ದಾರೆ.
ಆದರೆ ಕೆಲವರು ರಜೆ ಇದ್ದರೂ, ಬೆಳಗ್ಗೆ 6 ಗಂಟೆಯವರೆಗೂ ಕೆಲಸ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಹಸಿ ಮೀನು ವ್ಯಾಪಾರಸ್ಥರ ಸಂಘದವರು ಬ್ಯಾನರ್ ಹಾಕಿರಬಹುದು. ಎಲ್ಲರೂ ಅನ್ಯೋನ್ಯತೆಯಿಂದ ಮೀನುಗಾರಿಕೆ ನಡೆಸುತ್ತಿದ್ದಾರೆ ಎಂದು ಕರ್ಕೇರ ಮತ್ತು ಮೊಗವೀರ ವ್ಯವಸ್ಥಾಪಕ ಮಂಡಳಿಯ ಕಾರ್ಯಾಧ್ಯಕ್ಷ ಭರತ್ ಕುಮಾರ್ ಉಳ್ಳಾಲ್ ಪ್ರತಿಕ್ರಿಯಿಸಿದ್ದಾರೆ.
“ಸಂಘಗಳಲ್ಲಿ ನಿರ್ಣಯಿಸಿದಂತೆ ಬ್ಯಾನರ್’
ಸಂಘಗಳ ನಿರ್ಣಯದಂತೆ ಪೂರ್ವ ನಿರ್ಧರಿತ ಪದ್ಧತಿಯಂತೆ ಸೆ. 28ರಂದು ಈದ್ ಮಿಲಾದ್ ಪ್ರಯುಕ್ತ ಕಡ್ಡಾಯ ರಜೆ ಪಾಲಿಸುವ ಬಗ್ಗೆ ಫ್ಲೆಕ್ಸ್ ಅಳವಡಿಸಲಾಗಿದೆ. ಬಾರ್ಕೂರು ಪೂಜೆ, ಉಚ್ಚಿಲ ಪೂಜೆ, ಗಣೇಶ ಚತುರ್ಥಿ, ಈದ್ ಉಲ್ ಫಿತರ್, ಬಕ್ರೀದ್, ಈದ್ ಮಿಲಾದ್, ಗುಡ್ ಫ್ರೈಡೇ ಮತ್ತು ಕ್ರಿಸ್ಮಸ್ ಎಂಬಿತ್ಯಾದಿ ಶುಭ ದಿನಗಳಲ್ಲಿ ಕೂಡಾ ಸಂಘಗಳ ನಿರ್ಣಯದಂತೆ ಮಾರಾಟಗಾರರು ಕಡ್ಡಾಯ ರಜೆ ಹೊಂದಿ ಆ ದಿನ ಮೀನು ಮಾರಾಟ ಚಟುವಟಿಕೆ ಸ್ಥಗಿತಗೊಳಿಸುವುದು ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿದೆ. ಕೆಲವರು ತಪ್ಪು ಗ್ರಹಿಕೆಯ ಮಾಹಿತಿ ಹಂಚುತ್ತಿದ್ದಾರೆ ಎಂದು ಮಂಗಳೂರು ದಕ್ಕೆ ಹಸಿಮೀನು ಮಾರಾಟಗಾರರ, ಕಮಿಷನ್ ಏಜೆಂಟರ ಸಂಘದ ಅಧ್ಯಕ್ಷ ಕೆ. ಅಶ್ರಫ್ ತಿಳಿಸಿದ್ದಾರೆ.
ಮತೀಯ ಬಣ್ಣ ಕಟ್ಟಬೇಡಿ:ಡಿವೈಎಫ್‌ಐ
ಗಣೇಶ ಚತುರ್ಥಿ, ಬಾರ್ಕೂರು (ಮೊಗವೀರರ ಕುಲದೇವತೆ) ಜಾತ್ರೆ, ಉಚ್ಚಿಲ (ಮೊಗವೀರರ ಪ್ರಧಾನ ದೇವರ) ದೇವಸ್ಥಾನದ ಜಾತ್ರೆ, ಈದ್ ಮಿಲಾದ್, ರಮ್ಯಾನ್, ಬಕ್ರೀದ್, ಕ್ರಿಸ್ ಮಸ್, ಗುಡ್ ಪ್ರೈಡೆ ಹಬ್ಬಗಳ ದಿನ ಮಂಗಳೂರಿನ ಮೀನುಗಾರಿಕಾ ಬಂದರಿಗೆ ಕಡ್ಡಾಯ ರಜೆ ಇದು ಮೀನುಗಾರಿಕಾ ಬಂದರಿನ ಎಲ್ಲ ವಿಭಾಗದ . ಮೀನುಗಾರರು ಒಟ್ಟಾಗಿ ಕಳೆದ 15 ವರ್ಷಗಳಿಂದ ಅನುಸರಿಸುತ್ತಿರುವ ನಿಯಮ. ಹಬ್ಬದ ದಿನ ಅರ್ಧದಷ್ಟು ವ್ಯಾಪಾರಿಗಳು, ಮೀನುಗಾರರು ರಜೆ ಹಾಕಿದರೆ ಮೀನು ವ್ಯಾಪಾರದಲ್ಲಿ ಏರುಪೇರು ಉಂಟಾಗಿ ಆ ದಿನಗಳಂದು ಮೀನುಗಾರರು ದೊಡ್ಡ ನಷ್ಟ ಅನುಭವಿಸುವಂತಾಗುತ್ತಿತ್ತು. ಅದಕ್ಕಾಗಿ ಮೀನುಗಾರಿಕೆಯ ಎಲ್ಲಾ ವಿಭಾಗದವರು ಒಂದಾಗಿ ತೆಗೆದುಕೊಂಡ ನಿರ್ಧಾರ. ಇದೀಗ ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವವರಿಗೆ ಇದು ಗೊತ್ತಿದ್ದೂ ಉದ್ದೇಶ ಪೂರ್ವಕವಾಗಿ ಮಾಡುತ್ತಿದ್ದಾರೆ ಎಂದು ಡಿವೈಎಫ್‌ಐ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
ಚೌತಿಯಂದು ನಿಯಮ ಮೀರಿದ್ದಾರೆ
ಪ್ರತಿಕ್ರಿಯಿಸಿರುವ ಹಸಿ ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಇಸ್ಲಾಯಿಲ್, ಈ ಬಾರಿ ಚೌತಿ ಹಬ್ಬಕ್ಕೆ ನಿಯದು ಇದ್ದರೂ ಮೀನು ತೆಗೆದಿದ್ದಾರೆ. ಹಾಗಾಗಿ ಎಲ್ಲರೂ ನಿಯಮ ಪಾಲಿಸಲಿ ಎಂಬ ಉದ್ದೇಶದಿಂದ ಬ್ಯಾನರ್ ಹಾಕಿದ್ದೇವೆ. ಇದರಲ್ಲಿ ಜಾತಿ ಧರ್ಮ ಎನ್ನುವ ಪ್ರಶ್ನೆ ಬರಲ್ಲ . ಈ ಹಿಂದೆ ಹಬ್ಬದ ಪ್ರಯುಕ್ತ ರಜೆ ಇದೆ ಎನ್ನುವ ಬ್ಯಾನರ್ ಹಾಕುತ್ತಿದ್ದವು, ಆದರೆ ಈ ಬಾರಿ ಕಂಡೀಶನ್ ಹಾಕಿದ್ದೇವೆ. ಎಲ್ಲರಿಗೂ ಬಂದ್ ಮಾಡಿ ಅಂತ ಹೇಳಿದ್ದರೂ ಕೆಲವರು ಚೌತಿಗೆ ಮೀನು ತೆಗೆದು ನಿಯಮ ಉಲ್ಲಂಘಿಸಿದ್ದಾರೆ. ಹೀಗಾಗಿ ಬ್ಯಾನರ್ ಹಾಕಿ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
-
ನಿಧನ ವಾರ್ತೆ14 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು12 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು10 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ14 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ14 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ13 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ13 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ15 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















