ಉಡುಪಿ
Mullugadde Koragajja ಕಾಡಿನಲ್ಲಿ ಕಳೆದು ಹೋಗಿ 8 ದಿನಗಳ ಬಳಿಕ ಮರಳಿದ ಮನೆ ಮಗ – ಅಭಯ ನೀಡಿದ ಮುಳ್ಳುಗುಡ್ಡೆ ಕೊರಗಜ್ಜ ಸನ್ನಿಧಾನದಲ್ಲಿ ಯುವಕನ ಜತೆ ಪ್ರಾರ್ಥನೆ ಸಲ್ಲಿಸಿದ ಕುಟುಂಬಸ್ಥರು
ಹೆಬ್ರಿ: ಮನೆ ಮಗ ನಾಪತ್ತೆಯಾಗಿ 3- 4 ದಿನ ಕಳೆದರೂ ವಾಪಸ್ಸು ಬಾರದೇ ಇದ್ದಾಗ ಮನೆಯವರು ಎಲ್ಲ ಕಡೆ ಹುಡುಕಾಡಿ ಸೋತು, ಕೊರಗಜ್ಜ ಸನ್ನಿಧಾನಕ್ಕೆ ಬಂದು ಪ್ರಾಥ೯ನೆ ಸಲ್ಲಿಸಿದ್ದರು. ಪವಾಡ ಎಂಬಂತೆ ಪ್ರಾರ್ಥನೆ ಸಲ್ಲಿಸಿದ ಬಳಿಕ ಯುವಕ ಪತ್ತೆಯಾಗಿದ್ದಾನೆ . ಈ ಘಟನೆ ಹೆಬ್ರಿ ತಾಲೂಕಿನ ಮುಚ್ಚಟ್ಟು ಗ್ರಾಮದಲ್ಲಿ ನಡೆದಿದೆ.
ಮುಚ್ಚಟ್ಟು ಗ್ರಾಮದ ತೊಂಬಟ್ಟು ಇಕಿ೯ಗದ್ದೆ ನಿವಾಸಿ ವಿವೇಕಾನಂದ ಎಂಬ ಯುವಕ ಸೆ.16ರಂದು ಮನೆಯಿಂದ ನಾಪತ್ತೆಯಾಗಿದ್ದ. ಮನೆಯವರು ಹುಡುಕಾಡಿ ಸಿಗದ ಬಳಿಕ ಮುಳ್ಳುಗುಡ್ಡೆ ಕೊರಗಜ್ಜ ಸನ್ನಿಧಾನಕ್ಕೆ ಬಂದು ಪ್ರಾಥ೯ನೆ ಸಲ್ಲಿಸಿದರು. ಸೆ 23 ರಂದು ಯುವಕ ಮರಳಿ ಮನೆ ಸೇರಿದ್ದಾನೆ. ಈ ಹಿನ್ನಲೆಯಲ್ಲಿ ಮುಳ್ಳುಗುಡ್ಧೆ ಕೊರಗಜ್ಜದ ದೈವದ ಅಭಯದಂತೆ ಸೆ.24ರಂದು ಮನೆಯವರು ಯುವಕನ ಸಮೇತ ಸನ್ನಿಧಾನಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದರು.
ಹಂದಿಯೊಂದನ್ನು ಓಡಿಸಿಕೊಂಡು ಹೋಗಿ ದಾರಿ ತಪ್ಪಿದ್ದಾನೆ.ಹಕ್ಕಿಯೊಂದು ದಾರಿ ತೋರಿಸಿದೆ.ಹಳದಿ ಬಣ್ಣದ ಅಂಗಿ ಹಾಕಿ ಕಾಡಿನಲ್ಲಿ ಅಡಗಿ ಕುಳಿತ್ತಿದ್ದಾನೆ. 5 ಜನ ಸೇರಿ ಅಲ್ಲಿ ಹೋಗಿ ಹುಡುಕಿ. ಆಗಲಿಲ್ಲವಾದರೆ ಇನ್ನು ಎರಡು ದಿನದ ಒಳಗೆ ಆತ ಮನೆಗೆ ಬರುತ್ತಾನೆ ಎಂದು ಯುವಕ ನಾಪತ್ತೆಯಾಗಿದ್ದ ವೇಳೆ ಮನೆಯವರು ಬಂದು ಪ್ರಾರ್ಥನೆ ಸಲ್ಲಿಸಿದ ವೇಳೆ ಕ್ಷೇತ್ರದ ಧಮ೯ದಶಿ೯ ಪುನೀತ್ ಅವರು ಹೇಳಿದ್ದರು.
ಅದರಂತೆ ಆತನ ಜತೆಯಲ್ಲಿ ಹೋದ ನಾಯಿಯೊಂದಿಗೆ ವಾಪಾಸು ಆಗಿದ್ದಾನೆ. ಅಲ್ಲದೆ 8 ದಿನಗಳ ಕಾಲ ಕೇವಲ ನೀರಿನಿಂದ ಬದುಕಿ ಉಳಿದಿರುವುದು ಅಜ್ಜನ ಪವಾಡ ಎಂದು ಮನೆಯವರು ಹೇಳುತ್ತಾರೆ.
ಮನೆಗೆ ಬಂದೊಡನೆ ಮುಳ್ಳು ಗುಡ್ಡೆ ಕ್ಷೇತ್ರಕ್ಕೆ ಬರುವಂತೆ ಸೂಚಿಸಿದ ಹಿನ್ನಲೆಯಲ್ಲಿ ಮನೆಮಂದಿ ಬಂದು ಪ್ರಾರ್ಥನೆ ಸಲ್ಲಿಸಿದರು. ಚಿಕ್ಕಂದಿನಿಂದಲೂ ಅನಾರೋಗ್ಯದಿಂದ ಇದ್ದ ವಿವೇಕಾನಂದನ ಚಿಕಿತ್ಸೆ ಸುಮಾರು 25ಲಕ್ಷ ಖಚು೯ ಮಾಡಿದ್ದರು. ಮತ್ತೆ ಆತ ನಾಪತ್ತೆಯಾಗಿದ್ದರಿಂದ ನೋವಿನಲ್ಲಿದ್ದ ತಂದೆಗೆ ಮಗ ಮರಳಿ ಬಂದಿರುವುದರಿಂದ ಖೂಷಿಗೆ ಪಾರವೇ ಇಲ್ಲದಂತಾಗಿದೆ.
ನಿಧನ ವಾರ್ತೆ
Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.
ಅಪರಾಧ
Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
-
ನಿಧನ ವಾರ್ತೆ16 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಬಿಗ್ ನ್ಯೂಸ್10 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಅಪರಾಧ15 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಂತರ ರಾಜ್ಯ16 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ15 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ಬಿಗ್ ನ್ಯೂಸ್10 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ರಾಜಕೀಯ16 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಅಪರಾಧ13 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು















