ಮಂಗಳೂರು
ಮಂಗಳೂರು : ಠಾಣೆ ಮುಂಭಾಗ ಕಂದಮ್ಮಗಳ ಕೊಲೆಗೆ ಯತ್ನಿಸಿದ ತಂದೆ – ಕೈಯಲ್ಲಿದ್ದಒಂದೂವರೆ ವರ್ಷದ ಮಗಳನ್ನು ಗೋಡೆಗೆ ಬಿಸಾಡಲು ನೋಡಿದ.!
ಮಂಗಳೂರು : ಪತಿ ಮತ್ತು ಪತ್ನಿ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಪಾನಮತ್ತ ತಂದೆ ಪೊಲೀಸ್ ಠಾಣೆಯಲ್ಲಿ ಪೊಲೀಸರ ಸಮ್ಮುಖವೇ ಇಬ್ಬರು ಮಕ್ಕಳ ಕೊಲೆಗೆ ಯತ್ನಿಸಿದ ಬಗ್ಗೆ ಮಂಗಳೂರು ನಗರದ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಾಸನಗರ ವಿಶ್ವಾಸ್ ಅನ್ಮೋಲ್ ಅಪಾಟ್‌ರ್ಮೆಂಟ್ ನಿವಾಸಿ ಮಹೇಶ್ ಮಕ್ಕಳ ಕೊಲೆಗೆ ಯತ್ನಿಸಿದ ಪಾಪಿ ತಂದೆ. ಸೆಪ್ಟೆಂಬರ್ 24ರಂದು ರಾತ್ರಿ ಮಹೇಶ್ ಹಾಗೂ ಆತನ ಪತ್ನಿ ಮಧ್ಯೆ ಜಗಳವಾಗಿದೆ. ವಿಪರೀತ ಕುಡಿತದ ಚಟ ಹೊಂದಿರುವ ಮಹೇಶ್ ಪ್ರತಿನಿತ್ಯ ಪತ್ನಿ ಮತ್ತು ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ.
ಮೊನ್ನೆಯೂ ಗಲಾಟೆ ತಾರಕಕ್ಕೆ ಏರಿದ ವೇಳೆ ಪತ್ನಿ ಮತ್ತು ಮಕ್ಕಳನ್ನು ಬೆಂಕಿ ಹಚ್ಚಿ ಕೊಲ್ಲುತ್ತೇನೆ ಎಂದು ಬೆದರಿಸಿ, ಹಲ್ಲೆ ನಡೆಸಲು ಯತ್ನಿಸಿದ್ದಾನೆ. ಈ ಸಂದರ್ಭ ಆತನ ಪತ್ನಿ ತಪ್ಪಿಸಿಕೊಂಡು ಹತ್ತಿರದಲ್ಲಿರುವ ಕದ್ರಿ ಠಾಣೆಗೆ ಬಂದು ದೂರು ನೀಡಿದ್ದಾರೆ. ಕುಡಿದ ಮತ್ತಿನಲ್ಲಿ ವಿಪರೀತ ವ್ಯಾಘ್ರನಾಗಿರುವ ಗಂಡ ಮಕ್ಕಳನ್ನು ಕೊಲ್ಲು ಮುಂದಾಗಿದ್ದಾನೆ ಅವರನ್ನು ರಕ್ಷಿಸಿ ಎಂದು ಆಕೆ ಪೊಲೀಸರ ಮುಂದೆ ಮೊರೆಯಿಟ್ಟಿದ್ದಾರೆ.
ಅದೇ ವೇಳೆ ಆರೋಪಿ ಮಹೇಶ ತನ್ನ 6 ವರ್ಷದ ಗಂಡು ಮಗು ಮತ್ತು ಒಂದೂವರೆ ವರ್ಷದ ಹೆಣ್ಣು ಮಗುವಿನೊಂದಿಗೆ ಠಾಣೆಗೆ ಎಂಟ್ರಿ ಕೊಟ್ಟವನೇ ರಂಪಾಟ ಶುರು ಇಟ್ಟುಕೊಂಡಿದ್ದಾನೆ. ಪತ್ನಿ ತನಗೆ ಹೊಡೆದಿರುವುದಾಗಿ ಪೊಲೀಸರ ಮುಂದೆ ದೂರು ನೀಡಿದ್ದಾನೆ. ದೂರನ್ನು ಲಿಖಿತವಾಗಿ ನೀಡಲು ಹೇಳಿದಾಗ ಜೋರಾಗಿ ಕಿರುಚಾಡಿದ ಆತ ಯಾರನ್ನೂ ಬಿಡುವುದಿಲ್ಲ ಎಂದು ದಮ್ಕಿ ಹಾಕಿ ಇಬ್ಬರು ಮಕ್ಕಳನ್ನು ಎಳೆದುಕೊಂಡು ಠಾಣೆಯಿಂದ ಹೊರಗೆ ಹೋಗಿದ್ದಾನೆ.
ಆಗ ಠಾಣೆಯೊಳಗಿದ್ದ ಆತನ ಪತ್ನಿ ಹೊರಗೆ ಬಂದಿದ್ದು , ಆಕೆಯನ್ನು ನೋಡಿ ಮಹೇಶ ಮತ್ತಷ್ಟು ಜೋರಾಗಿ ಕಿರುಚಿದ್ದಾನೆ. ತನ್ನ ಕೈಯಲ್ಲಿದ್ದ ಮಗಳನ್ನು ಗೋಡೆಗೆ ಬಿಸಾಡಿ ಕೊಲ್ಲುತ್ತೇನೆಂದು ಬೆದರಿಸಿದ್ದಾನೆ. ಪೊಲೀಸರು ಮಗುವನ್ನು ಬಿಡುವಂತೆ ಹೇಳಿದ್ದು, ಈ ವೇಳೆ ಆತ ಮಗುವಿನ ಕುತ್ತಿಗೆಯನ್ನು ತಿರುಗಿಸಿ ಕೈ ಹಿಡಿದು ಎಳೆದಾಡಿ ಮಗುವನ್ನು ಎತ್ತಿ ನೆಲಕ್ಕೆ ಎಸೆಯಲು ಪ್ರಯತ್ನಿಸಿದ್ದಾನೆ.
ಇದರಿಂದ ನೋವಾದ ಮಗು ಜೋರಾಗಿ ಕೂಗಲಾರಂಭಿಸಿದೆ. ಈ ಸಮಯಕ್ಕೆ ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಠಾಣಾ ಪಿಎಸ್‌ಐ ಪ್ರತಿಭಾ ಕೂಡಲೇ ಮಗುವನ್ನು ಎತ್ತಿಕೊಂಡು ಮಗುವಿನ ತಾಯಿ ಹಾಗೂ ಬಾಲಕನನ್ನು ಕರೆದುಕೊಂಡು ಇಲಾಖಾ ವಾಹನದಲ್ಲಿ ಚಿಕಿತ್ಸೆಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಠಾಣೆಯ ಪ್ರಭಾರ ಕರ್ತವ್ಯದಲ್ಲಿದ್ದ ಹೆಡ್ ಕಾನ್‌ಸ್ಟೇಬಲ್ ಶರತ್ ಕುಮಾರ್ ಅವರು ಮಗುವಿನ ಜೀವರಕ್ಷಣೆ ಬಗ್ಗೆ ಪ್ರಯತ್ನಿಸಿದಾಗ ಆರೋಪಿಯು ಸರಕಾರಿ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
-
ಬಿಗ್ ನ್ಯೂಸ್24 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ನಿಧನ ವಾರ್ತೆ7 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು5 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ6 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ6 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ6 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ7 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?
-
Uncategorized8 hours agoCJP protest-ಇಂದು CJP ಪ್ರತಿಭಟನೆ : ದೆಹಲಿಗೆ ಬರಬೇಕಾಗಿದ್ದ 250 ರೈಲು ರದ್ದು, ಹಲವು ರೈಲಿನ ವೇಳಾಪಟ್ಟಿ ಬದಲಾವಣೆ : ಮೆಟ್ರೋ ಸಂಚಾರ ಸ್ಥಗಿತ – ಇಂಟರ್ ನೆಟ್ ಬಂದ್..! ‘ಹೆದರಿದ್ರಾ ಮೋದಿಜೀ..?’ ಎಂದ CJP


















