Connect with us

ದಕ್ಷಿಣ ಕನ್ನಡ

ಶಾರದಾ ಭಜನಾ ಮಂದಿರದಲ್ಲಿ ಈ ಬಾರಿ ವೈಭವದ ‘ಪುತ್ತೂರು ಶಾರದೋತ್ಸವ” – ಅದ್ದೂರಿ ಶೋಭಾಯತ್ರೆ ; ಹಿಂದೊಮ್ಮೆ ಪುತ್ತೂರನ್ನು ಬಾಧಿಸಿದ ಮಹಾರೋಗ ನಿವಾರಿಸಿದ ಪ್ರತಿತಿಯುಳ್ಳ ಪ್ರಾಚೀನ ಮಂದಿರದ ಐತಿಹ್ಯ ಇಲ್ಲಿದೆ

Published

on



Ad Widget

Ad Widget

Ad Widget

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಪ್ರಾಚೀನ ಹಿನ್ನಲೆಯಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಈ ಬಾರಿ ವೈಭವದ ‘ಪುತ್ತೂರು ಶಾರದೋತ್ಸವ” ನಡೆಯಲಿದೆ.
89ನೇ ವರ್ಷದ ಶಾರದೋತ್ಸವ ಇದಾಗಿದ್ದು 9 ದಿನವು ಸಾಂಸ್ಕೃತಿಕ, ಸಭಾ ಕಾರ್ಯಕ್ರಮ ಇರಲಿದೆ ಹಾಗೂ ಅದ್ದೂರಿ ಶೋಭಾಯತ್ರೆ ಈ ಬಾರಿಯ ವಿಶೇಷತೆ ಎಂದು ಶಾರದೋತ್ಸವ ಸಮಿತಿ ಅಧ್ಯಕ್ಷ ರಾಜೇಶ್ ಬನ್ನೂರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು “ಶ್ರೀ ಶಾರದೆಯ ಹೆಸರಿನಲ್ಲಿ ಪುತ್ತೂರಿನಲ್ಲಿ ನವರಾತ್ರಿ ಸಂದರ್ಭ ಯಾರೆಲ್ಲಾ ವೇಷ ಹಾಕುತ್ತಾರೆ ಅವರೆಲ್ಲಾ ಭಜನಾ ಮಂದಿರದಲ್ಲಿ ನಡೆಯುವ ಶಾರದೋತ್ಸವದ ಪ್ರತೀ ಕಾರ್ಯಕ್ರಮ ಸಹಿತ ಶಾರದೋತ್ಸವ ಶೋಭಾಯಾತ್ರೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಇತ್ತೀಚೆಗೆ ಪಯ್ಯನ್ನೂರಿನಲ್ಲಿ ಜ್ಯೋತಿಷ್ಯರಲ್ಲಿ ನಡೆಸಿದ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಿದೆ ಎಂದರು

Ad Widget

Ad Widget

Ad Widget alt="Ad Widget"/>

Ad Widget

ವೇಷಧಾರಿಗಳಿಗೆ ಕೆರೆಯ ತೀರ್ಥ ಪ್ರೋಕ್ಷಣೆ

Ad Widget

Ad Widget <> Ad Widget

ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳುವ ವೇಷಧಾರಿಗಳಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯ ತೀರ್ಥ ತಂದು ಪ್ರೋಕ್ಷಣೆ ಮಾಡಲಾಗುವುದು. ಬೇರೆ ಜಿಲ್ಲೆಗಳಿಗೆ ದಸರಾ ಉತ್ಸವ ನೋಡಲು ತೆರಳುವ ಜನರು ಈ ಬಾರಿ ಬೇರೆಡೆ ಹೋಗದೆ ಶ್ರೀ ಭಜನಾ ಮಂದಿರದ ಶಾರದೋತ್ಸವವನ್ನು ಕಣ್ತುಂಬಿಕೊಳ್ಳಬೇಕು. ಅಲ್ಲದೆ ಶೋಭಾಯಾತ್ರೆಗೆ ದಿನ ಹಿಂದೂ ಬಾಂಧವರು ತಮ್ಮ ಅಂಡಿಗಳನ್ನು ವಿದ್ಯುತ್ ದೀಪ, ತಳಿರು-ತೋರಣಗಳಿಂದ ಅಲಂಕೃತಗೊಳಿಸಬೇಕು ಎಂದು ಅವರು ವಿನಂತಿಸಿದರು.



Ad Widget

ಮಹಾರೋಗ ನಿವಾರಿಸಿದ ಕೀರ್ತಿ

Ad Widget

Ad Widget

ಶ್ರೀ ಶಾರದಾ ಭಜನಾ ಮಂದಿರ ಹಾಗೂ ಬಲ್ನಾಡು ಶ್ರೀ ಉಳ್ಳಾಲ್ತಿ ದೈವಸ್ಥಾನ ಅವಿನಾಭಾವ ಸಂಬಂಧ ಹೊಂದಿದೆ. ಹಿಂದೊಮ್ಮೆ ಯಾವುದೋ ಮಹಾರೋಗ ಪುತ್ತೂರನ್ನು ಬಾಧಿಸಿದ ಸಂದರ್ಭ ಸುಬ್ರಾಯ ಕಲ್ಲೂರಾಯ ಹಾಗೂ ಮಂಜುನಾಥ ಆಚಾರ್ಯ ಎಂಬವರು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಮೊರೆ ಹೋಗಿದ್ದರು. ಈ ಸಂದರ್ಭ ಭಜನಾ ಮಂದಿರದಲ್ಲಿ ಪ್ರತಿನಿತ್ಯ ಭಜನೆ ನಡೆಸಬೇಕು. ಅಲ್ಲದೆ ಶೃಂಗೇರಿ ಶಾರದೆಯ ಫೋಟೊವನ್ನು ಕುತ್ತಿಗೆಗೆ ಕಟ್ಟಿ ಪ್ರತೀ ಮನೆಗಳಿಗೆ ಭಜನೆ ಮೂಲಕ ತೆರಳಿ ಪ್ರಸಾದ ನೀಡಬೇಕು ಎಂದು ತಿಳಿಸಿದ್ದರಂತೆ. ಅದರಂತೆ ಕೈಗೊಂಡಾಗ ರೋಗ ಸಂಪೂರ್ಣ ವಾಸಿಯಾಗಿತ್ತು. ಅದರಂತೆ ಈಗಲೂ ಜನವರಿ 16 ರಂದು ಮಕರ ಸಂಕ್ರಮಣದಂದು ಈ ರೀತಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪ್ರತೀ ದಿನ ಸಾಂಸ್ಕೃತಿಕ ಕಾರ್ಯಕ್ರಮ:

ಪುತ್ತೂರು ಶಾರದೋತ್ಸವ ಸಮಿತಿ ಸಂಚಾಲಕ ಪಿ.ಜಿ.ಜಗನ್ನಿವಾಸ ರಾವ್ ಮಾತನಾಡಿ, ಒಂಭತ್ತು ದಿನಗಳ ಕಾಲ ನಡೆಯುವ ಶ್ರೀ ಶಾರದೋತ್ಸವದಲ್ಲಿ ಪ್ರತೀ ದಿನ ಸಾಂಸ್ಕೃತಿಕ, ಭಜನೆ ಕಾರ್ಯಕ್ರಮಗಳು ಸೇವಾ ರೂಪದಲ್ಲಿ ನಡೆಯಲಿದೆ. ಸಂಜೆ 7 ರಿಂದ 8.30 ರ ತನಕ ಭಜನೆ ನಡೆಯಲಿದೆ ಇದಕ್ಕಾಗಿ ಈಗಾಗಲೇ 16 ತಂಡ ನೋಂದಾವಣೆ ಮಾಡಿಕೊಂಡಿದೆ.

ಸ್ತಬ್ದ ಚಿತ್ರಕ್ಕೆ ಬಹುಮಾನ

ಶೋಭಾಯಾತ್ರೆ ಸಂಚಾಲಕ ಸೀತಾರಾಮ ರೈ ಕೆದಂಬಾಡಿಗುತ್ತು ಮಾತನಾಡಿ, ಜಿಲ್ಲೆಯ ನಾನಾ ಭಾಗಗಳಿಂದ ಪಾಲ್ಗೊಳ್ಳುವ ತಂಡಗಳಿಗೆ ಮುಕ್ತ ಅವಕಾಶ ಮಾಡಲಾಗಿದ್ದು ಶಿಸ್ತುಬದ್ಧವಾಗಿ ಪ್ರದರ್ಶನ ಮಾಡುವ ಸ್ತಬ್ದಚಿತ್ರಕ್ಕೆ ಬಹುಮಾನ ನೀಡಲಾಗುವುದು. ಪ್ರಥಮ ಬಹುಮಾನವಾಗಿ ಒಂದು ಲಕ್ಷ ರೂ., ದ್ವಿತೀಯ 50 ಸಾವಿರ ರೂ. ಬಹುಮಾನ ನೀಡಲಾಗುವುದು. ಪುತ್ತೂರು ಶಾರದೋತ್ಸವದ ಆಮಂತ್ರಣ ಪತ್ರಿಕೆ ಸೆ.29 ರಂದು ಬಿಡೆಗಡೆಗೊಳ್ಳಲಿದೆ ಎಂದು ತಿಳಿಸಿದರು.

ವಿಜೃಂಭಣೆ

ಸಮಿತಿ ಕಾರ್ಯದರ್ಶಿ ಮುರಳೀಕೃಷ್ಣ ಹಸಂತಡ್ಕ ಮಾತನಾಡಿ, ಪ್ರಾಚೀನ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಈ ಬಾರಿ ನಡೆಯುವ ಪುತ್ತೂರು ಶಾರದೋತ್ಸವ ಇತಿಹಾಸ ನಿರ್ಮಿಸಲಿದೆ. ಸುಮಾರು 40 ರಿಮದ 50 ಭಜನಾ ತಂಡಗಳ ಸಾವಿರಕ್ಕೂ ಅಧಿಕ ಭಜನಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ನಮ್ಮ ಸಂಸ್ಕೃತಿ, ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ಪುತ್ತೂರು ಶಾರದೋತ್ಸವ ನಡೆಯಲಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಕಾರ್ಯದರ್ಶಿ ಅಜಿತ್ ರೈ ಹೊಸಮನೆ, ಭಜನಾ ಮಂದಿರದ ಅಧ್ಯಕ್ಷ ಸಾಯಿರಾಂ, ಕೋಶಾಧಿಕಾರಿ ತಾರನಾಥ ಎಚ್‍., ಕಾರ್ಯದರ್ಶಿ ಜಯಂತ ಉರ್ಲಾಂಡಿ ಉಪಸ್ಥಿತರಿದ್ದರು.

Ad Widget
Click to comment

Leave a Reply

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading