ದಕ್ಷಿಣ ಕನ್ನಡ
Rain Alert ಕರಾವಳಿಗೆ ಮಳೆ ಅಲರ್ಟ್ – ಏನು ಹೇಳುತ್ತೆ ಹವಮಾನ ಇಲಾಖೆ ವರದಿ ?
ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಸೆ. 28ರಂದು ಉತ್ತರ ಒಳನಾಡಿನ ಬೀದರ್, ಬೆಳಗಾವಿ, ವಿಜಯನಗರ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಸಂಭವ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಒಂದಷ್ಟು ದಿನ ತೆರೆಮರೆಗೆ ಸರಿದಿದ್ದ ಮಳೆ ಸೆ 26ರಿಂದ ಮತ್ತೆ ಕರಾವಳಿ ಪ್ರದೇಶದಲ್ಲಿ ಆರ್ಭಟಿಸುತ್ತಿವೆ. ಸೆ. 27ರಂದು ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಸೆ. 28ರಂದು ಮತ್ತೆ ಅತ್ತಿತ್ತ ಹರಿದಾಡಿರುವ ಮುಂಗಾರು ಮಾರುತಗಳು, ಕರಾವಳಿ ಹಾಗೂ ಉತ್ತರ – ಮಧ್ಯ ಹಾಗೂ ದಕ್ಷಿಣ ಕರ್ನಾಟಕಗಳಲ್ಲಿ ಉತ್ತಮ ಮಳೆ ತರಲಿವೆ ಎಂದು ಉಪಗ್ರಹ ಆಧಾರಿತ ಚಿತ್ರಗಳು ಹೇಳಿವೆ.
ಬೆಳಗಾವಿಯ ಪಶ್ಚಿಮ ಭಾಗ, ಉತ್ತರ ಕನ್ನಡ, ಉಡುಪಿ, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರಿನ ಪಶ್ಚಿಮ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ. ತಜ್ಞರ ಅಂದಾಜಿನ ಪ್ರಕಾರ, ಈ ಜಿಲ್ಲೆಗಳಲ್ಲಿ 90ರಿಂದ 250 ಮಿ.ಮೀ. ಮಳೆಯಾಗಬಹುದುರಲ್ಲೂ ವಿಶೇಷವಾಗಿ ಸಮುದ್ರ ತೀರದ ಜಿಲ್ಲೆಗಳಾದ ಕಾರವಾರ, ಉಡುಪಿ, ಮಂಗಳೂರಿಗೆ ಗರಿಷ್ಠ ಮಟ್ಟದಲ್ಲಿ (250 ಮಿ.ಮೀ. ವರೆಗೆ) ಮಳೆಯಾಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗಿದೆ.
ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಕರ್ನಾಟಕದಲ್ಲಿ ಮಳೆಯ ಅರ್ಭಟ ಮುಂದುವರಿಯಲಿದೆ ಎಂದು ಹವಮಾನ ಇಲಾಖೆ ಅನುಮಾನ ವ್ಯಕ್ತಪಡಿಸಿದೆ. ಹಾಗಾಗಿಯೂ, ಈ ಮಳೆಗಾಳದಲ್ಲಿ ಈವರೆಗೆ ವಾಡಿಕೆಗಿಂತ ಕಡಿಮೆ ಮಳೆ ಕರಾವಳಿ ಭಾಗದಲ್ಲಿ ಬಿದ್ದಿದ್ದು, ರೈತಾಪಿ ವರ್ಗ ಆತಂಕದಲ್ಲಿದೆ. ಮುಂದಿನ ಒಂದು ತಿಂಗಳು ನಿರಂತರ ಮಳೆ ಸುರಿದರೆ ಈ ಬಾರಿಯ ಬೇಸಿಗೆಯನ್ನು ತಕ್ಕಮಟ್ಟಿಗೆ ಸುಧಾರಿಸಬಹುದು. ಇಲ್ಲದಿದ್ದಲ್ಲಿ ಏಪ್ರಿಲ್ ಮೇ ತಿಂಗಳಿನಲ್ಲಿ ಕರಾವಳಿ ಭಾಗದಲ್ಲಿ ನಿರಿಗೆ ಹಾಹಾಕಾರ ಎಳಬಹುದು ಎಂಬ ಅಭಿಪ್ರಾಯ ಜನ ವ್ಯಕ್ತಪಡಿಸುತ್ತಿದ್ದಾರೆ
ಮಂಗಳೂರು
Soujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್‌ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರು: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣದ ಸೂಕ್ಷ್ಮತೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖಾಧಿಕಾರಿಗಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಕರಣ ನಡೆದು ಸುಮಾರು 14 ವರ್ಷಗಳಾಗಿವೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೊರತರುವುದಕ್ಕೆ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರ ಅಗತ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪತ್ರ ಬರೆದು ಕೆಲವು ವಿಚಾರಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಆ ಮಾಹಿತಿಗಳನ್ನು ತನಿಖೆಗೆ ನೀಡಲಾಗಿದೆ ಎಂದು ಹೇಳಿದರು.
ಇದೇ ವೇಳೆ, ಕೆಲವು ಯೂಟ್ಯೂಬ್ ಚಾನೆಲ್‌ಗಳು ಪ್ರಕರಣದ ಕುರಿತು ತಾವೇ ತೀರ್ಮಾನಗಳನ್ನು ಪ್ರಕಟಿಸುತ್ತಿರುವಂತೆ ಕಾಣುತ್ತಿದೆ. ಅವರಿಗೆ ಮಾಹಿತಿ ಎಲ್ಲಿಂದ ಬರುತ್ತಿದೆ ಎಂಬುದು ತಿಳಿದಿಲ್ಲ. ಕೆಲವು ಚಾನೆಲ್‌ಗಳು ಸುದ್ದಿಗಳಿಗೆ ಮಿರ್ಚಿ ಮಸಾಲೆ ಸೇರಿಸಿ ಪ್ರಸಾರ ಮಾಡುತ್ತಿವೆ ಎಂದು ಅವರು ಟೀಕಿಸಿದರು.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ: ವೃತ್ತಿವಾದ ಮತ್ತು ಆದರ್ಶವಾದ: ಸು.ರಾಮಣ್ಣ ಅವರಿಂದ ಉಪನ್ಯಾಸ ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಮಾತಾಡಿದರು.
ಪುತ್ತೂರು: ಮನುಷ್ಯನ ಜೀವನದ ಗುರಿ ವ್ಯಕ್ತಿಗತವಾಗಿರಬಾರದು. ಸಮಾಜಕ್ಕೆ, ದೇಶಕ್ಕೆ ಏನಾದರೂ ಮಾಡಬೇಕೆನ್ನುವುದು ನಮ್ಮ ಗುರಿಯಾಗಬೇಕು. ಅದಕ್ಕೆ ವಿವಿಧ ಬಗೆಯ ಜನರ ನಡುವೆ ಕಾರ್ಯನಿರ್ವಹಿಸಬೇಕು. ಆಗ ನಿಜವಾದ ಆವಶ್ಯಕತೆ ಏನೆಂದು ಅರಿವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಓದು, ಜ್ಞಾನಸಂಗ್ರಹ ನಮ್ಮ ಸಾಧನೆಯ ಮೊದಲನೇ ಘಟ್ಟ. ಇದು ಇಲ್ಲದಿದ್ದರೆ ನಾವು ಸಣ್ಣವರಾಗುತ್ತೇವೆ. ವಿದ್ಯಾರ್ಥಿ ದೆಸೆಯಲ್ಲಿಯೇ ದೀರ್ಘವಾದ ಗುರಿಯನ್ನು ಇಟ್ಟುಕೊಳ್ಳಲೇಬೇಕು ಎಂದರು. ಜೀವನದಲ್ಲಿ ಕನಸು ಕಾಣಬೇಕು. ದೇವರು ಕೊಟ್ಟ ಬುದ್ಧಿ ಶಕ್ತಿ ಮತ್ತು ವ್ಯಕ್ತಿತ್ವವನ್ನು ಬಳಸಿಕೊಂಡು ದೊಡ್ಡವರಾಗಿ ಎನ್ನುವ ಅಬ್ದುಲ್ ಕಲಾಂ ಅವರ ಮಾತುಗಳನ್ನು ನೆನಪಿಸಿದ ಅವರು ದೇಶದ ಜೀವಿತೋದ್ದೇಶವನ್ನು ಉನ್ನತೀಕರಿಸುವುದರ ಜತೆಯಲ್ಲಿ ಸೃಷ್ಟಿಯ ಹಿತಕ್ಕೋಸ್ಕರ ಬದುಕಬೇಕು ಎಂದರು. ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸ್ವಾಮಿ ವಿವೇಕಾನಂದರು, ಸಾವರ್ಕರ್, ಅಂಬೇಡ್ಕರ್ ಇವರ ಜೀವನವು ನಮಗೆ ದಾರಿದೀಪವಾಗಲಿ ಎಂದರು. ಮಾನವತೆಯನ್ನು ಉಳಿಸುವುದಕ್ಕಾಗಿ ಅತ್ಯಂತ ಘೋರ ಸಂಕಟದ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಂಡ ಪೈಲೆಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ನಿಜವಾದ ಸಾಧಕ ಎಂದು ಹೇಳಿದರು. ಕೋಟ್ಯಂತರ ರೂಪಾಯಿ ವೇತನ ಪಡೆಯುವ ತಂತ್ರಜ್ಞರಾಗುವುದಲ್ಲ ಬದಲಾಗಿ ಸರ್.ಎಂ.ವಿಶ್ವೇಶ್ವರಯ್ಯರಾಗಿ ಎಂದು ಹಿತ ನುಡಿದರು.

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮತ್ತು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ, ನಿರ್ದೇಶಕರಾದ ಮನೋಜ್ ಕುಮಾರ, ಸುಜಿತ್ ಕುಮಾರ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ಸಿಬಿಎಸ್‌ಸಿ ಶಾಲೆಯ ಸಂಚಾಲಕ ರವಿನಾರಾಯಣ, ವಿವೇಕಾನಂದ ವಸತಿ ನಿಲಯಗಳ ನಿರ್ದೇಶಕ ರಾಜಗೋಪಾಲ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಅ.ನಾ.ರವಿ ಸಮಾರಂಭದಲ್ಲಿ ಹಾಜರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಖುಷಿ ಕೆ.ಎಂ. ರಾಷ್ಟ್ರ ಮಟ್ಟದಲ್ಲಿ ಸಾಧನೆ
ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.
ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.
ಇವರು ಬೆಳ್ಳಿಪಾಡಿ ಗ್ರಾಮದ ಶಂಕರನಾರಾಯಣ ನಿವಾಸಿ ಕೆ. ವಿ ಮಂಜುನಾಥ ಮತ್ತು ಭವ್ಯ ದಂಪತಿಯ ಪುತ್ರಿಯಾಗಿರುತ್ತಾರೆ.
ಇವರು ಕಾಲೇಜಿನ ಧೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ , ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ , ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
-
Uncategorized21 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ಕ್ರೈಂ8 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ8 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು7 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಬಿಗ್ ನ್ಯೂಸ್8 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ6 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಕ್ರೀಡೆ7 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ
-
ಅಪರಾಧ2 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ

















