ದಕ್ಷಿಣ ಕನ್ನಡ
ವಿಟ್ಲ : ವ್ಯಕ್ತಿಯ ಮೃತ ದೇಹ ಕೆರೆಯಲ್ಲಿ ಪತ್ತೆ
ವಿಟ್ಲ: ಪುಣಚ ಗ್ರಾಮದ ಮಲೆತ್ತಡ್ಕದ ತೋಟದ ಕೆರೆಯಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಗುರುವಾರ ಪತ್ತೆಯಾಗಿದೆ.ಪುಣಚ ಗ್ರಾಮದ ಮಲೆತ್ತಡ್ಕ ನಿವಾಸಿ ಜಯರಾಮ ಭಟ್. ಇವರು ಬುಧವಾರದಿಂದ ನಾಪತ್ತೆಯಾಗಿದ್ದರು.
ಜಯರಾಮ ಭಟ್ ರವರು ಬುಧವಾರ ಬೆಳಗ್ಗೆ ಮಗುವನ್ನು ಶಾಲೆ ಬಿಟ್ಟು, ಬಳಿಕ ವಾಪಸ್ಸು ಮನೆಗೆ ಹೋಗಿರಲಿಲ್ಲ. ಹೀಗಾಗಿ ಮನೆಯವರು ಹುಡುಕಾಟ ನಡೆಸಿದ್ದಾರೆ. ಆದರೇ ಪತ್ತೆಯಾಗಿರಲಿಲ್ಲ . ಆದರೇ ಇಂದು ಅವರ ಮೃತ ದೇಹ ಕೆರೆಯಲ್ಲಿ ಪತ್ತೆಯಾಗಿದೆ.
ತೋಟದಲ್ಲಿ ನಡೆದು ಹೋಗುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಜಾರಿ ಬಿದ್ದು ಜಯರಾಮ ಭಟ್ ಮೃತ ತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ವಿಟ್ಲ ಠಾಣಾ ಪೊಳೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ .
ಮಂಗಳೂರು
Soujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್‌ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು.
ಐಪಿಎಸ್ ಅಧಿಕಾರಿಗಳಾದ ನಿಶಾ ಜೇಮ್ಸ್, ಲೋಕೇಶ್ ಜಗಲ್ಸಾರ್ ಹಾಗೂ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಎಸ್‌ಐಟಿ ಕಚೇರಿಗೆ ಆಗಮಿಸಿದ್ದು, ಈಗಾಗಲೇ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮುಂದಿನ ಎರಡು ದಿನಗಳಲ್ಲಿ ಎಸ್‌ಐಟಿ ತಂಡ ಬೆಳ್ತಂಗಡಿಗೆ ಭೇಟಿ ನೀಡುವ ಸಾಧ್ಯತೆಯಿದ್ದು, ಸೌಜನ್ಯ ಅವರ ಮನೆ ಹಾಗೂ ಕೊಲೆ ನಡೆದ ಸ್ಥಳವನ್ನು ಪರಿಶೀಲಿಸಲಿದೆ. ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಅಧಿಕಾರಿಗಳು ಸೇರಿದಂತೆ ಹಲವು ಮಂದಿಯನ್ನು ವಿಚಾರಣೆಗೊಳಪಡಿಸಲು ತಂಡ ಮುಂದಾಗಿದೆ. ಅಲ್ಲದೆ, ಸೌಜನ್ಯ ಅವರ ಪೋಷಕರು ಆರೋಪಿಸಿರುವ ವ್ಯಕ್ತಿಗಳನ್ನೂ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಪ್ರಕರಣದ ಮರುತನಿಖೆ ನಡೆಸಿ 90 ದಿನಗಳೊಳಗೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆಗೆ ಮಹತ್ವ ಬಂದಿದೆ. ಸುಮಾರು 14 ವರ್ಷಗಳ ಹಿಂದೆ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
ಶಿಕ್ಷಣ
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ದಸರಾ ನೃತ್ಯ ವೈಭವದಲ್ಲಿ ಪ್ರಥಮ ಸ್ಥಾನ
ದಸರಾ ಮಹೋತ್ಸವದ ಸಂಭ್ರಮದ ಪ್ರಯುಕ್ತ ಅಕ್ಟೋಬರ್ 9ರಂದು ಸುದ್ಧಿ ನ್ಯೂಸ್ ಚಾನೆಲ್ ವತಿಯಿಂದ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಹಾಗೂ ತಮ್ಮನ್ನಿ ಸಿಲ್ಕ್ಸ್ ಅಂಡ್ ಸ್ಯಾರೀಸ್ ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ “ದಸರಾ ನೃತ್ಯ ವೈಭವ – 2026” ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ತಂಡವು ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ದಸರಾ ಮಹೋತ್ಸವದ ಸಂಭ್ರಮದ ಪ್ರಯುಕ್ತ ಅಕ್ಟೋಬರ್ 9ರಂದು ಸುದ್ಧಿ ನ್ಯೂಸ್ ಚಾನೆಲ್ ವತಿಯಿಂದ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಹಾಗೂ ತಮ್ಮನ್ನಿ ಸಿಲ್ಕ್ಸ್ ಅಂಡ್ ಸ್ಯಾರೀಸ್ ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ “ದಸರಾ ನೃತ್ಯ ವೈಭವ – 2026” ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ತಂಡವು ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ಆಹ್ವಾನಿತ ತಂಡಗಳಿಗಾಗಿ ಆಯೋಜಿಸಲಾದ ಶಾಸ್ತ್ರೀಯ ಮತ್ತು ಅರೆಶಾಸ್ತ್ರೀಯ ವಿಭಾಗಗಳಲ್ಲಿ ವೈಯಕ್ತಿಕ ಹಾಗೂ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಈ ಅದ್ಭುತ ಸಾಧನೆ ಮಾಡುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಸಾಮೂಹಿಕ ವಿಭಾಗದಲ್ಲಿ ನವದುರ್ಗಾರಾಧನೆಯ ವಿಷಯದಲ್ಲಿ ನೃತ್ಯ ಪ್ರದರ್ಶನವನ್ನು ನೀಡಿದರು.
ಈ ಅಮೋಘ ಸಾಧನೆ ಮಾಡಿದ ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯಗುರುಗಳು, ಆಡಳಿತ ಮಂಡಳಿ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಅವರ ಮುಂದಿನ ಸಾಧನೆಗಳಿಗೆ ಶುಭ ಹಾರೈಸಿದ್ದಾರೆ.
ಕಾರ್ಯಕ್ರಮಗಳು
Saptaka Foundation-ಬೆಂಗಳೂರಿನ ಸಪ್ತಕ ಸಂಸ್ಥೆ ವತಿಯಿಂದ ವಿಟ್ಲ ಬಸ್ ನಿಲ್ದಾಣದಲ್ಲಿ ಕುಡಿಯುವ ತಂಪು ನೀರಿನ ವ್ಯವಸ್ಥೆ ಉದ್ಘಾಟನೆ; ಅಳಿಕೆ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ
ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.

ವಿಟ್ಲ: ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.
ನೂತನ ವ್ಯವಸ್ಥೆಯನ್ನು ಸಪ್ತಕ ಸಂಸ್ಥೆಯ ಜಿ.ಎಸ್. ಹೆಗಡೆ ಅವರು ಉದ್ಘಾಟಿಸಿದರು. ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ಹಾಗೂ ವಿಟ್ಲದ ಸಾರ್ವಜನಿಕರಿಗೆ ಈ ವ್ಯವಸ್ಥೆಯಿಂದ ಅನುಕೂಲವಾಗಲಿದೆ.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ರಮಾನಾಥ್ ವಿಟ್ಲ, ರಾಮದಾಸ್ ಶೆಣೈ, ರವೀಶ್ ವಿಟ್ಲ, ಅಶ್ರಫ್, ಚಿರಂತನದ ಭಾರವಿ ದೇರಾಜೆ ಹಾಗೂ ಶಿವಾನಂದ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅಳಿಕೆಯ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ
ಇದೇ ವೇಳೆ, ಬೆಂಗಳೂರಿನ ಸಪ್ತಕ ಸಂಸ್ಥೆಯ ವತಿಯಿಂದ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಅಳಿಕೆಯ ಶ್ರೀ ಸತ್ಯ ಸಾಯಿ ಆಸ್ಪತ್ರೆಗೆ ಬಿಸಿ ನೀರು ಹಾಗೂ ತಂಪು ನೀರಿನ ಡಿಸ್ಪೆನ್ಸರ್‌ಗಳನ್ನು ಒದಗಿಸಲಾಗಿದೆ.
-
ಮಂಗಳೂರು21 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಬಿಗ್ ನ್ಯೂಸ್22 hours agoGolithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
-
Uncategorized17 hours ago
Digitel Arrest ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ
-
ಮಂಗಳೂರು22 hours agoABVP protest-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ
-
ನಿಧನ ವಾರ್ತೆ4 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
ಕ್ರೀಡೆ21 hours agoMCC:ಎಂಸಿಸಿಯಿಂದ ಕ್ರಿಕೆಟ್ ನಿಯಮಗಳ ಪರಿಷ್ಕರಣೆ: ಅ.1ರಿಂದ ಹೊಸ ಬದಲಾವಣೆಗಳು ಜಾರಿ
-
ಮಂಗಳೂರು21 hours agoMangalore Dasara-ಮಂಗಳೂರು ದಸರಾಕ್ಕೆ ಚಾಲನೆ: ಸಿಎಂ ಆಗಮನ ಮುಂದೂಡಿಕೆ
-
ಸ್ಥಳೀಯ3 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!






















