Uncategorized
ವೈದಿಕ ಪರಂಪರೆ ಉಳಿಸುವುದು ಸಮಾಜಕ್ಕೆ ನೀಡುವ ಬಹು ದೊಡ್ಡ ಕೊಡುಗೆ, ಅದನ್ನು ಎಡನೀರು ಮಠದ ಪೂಜ್ಯ ಸಚ್ಚಿದಾನಂದಭಾರತೀ ಸ್ವಾಮಿಗಳು ಮಾಡುತ್ತಿದ್ದಾರೆ – ಒಡಿಯೂರು ಶ್ರೀ

ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ತೃತೀಯ ಚಾತುರ್ಮಾಸ್ಯ ವೃತಾಚರಣೆ ಇಂದು ಸಮಾಪ್ತಿಯಾಗಿದೆ.ಪೂಜ್ಯ ಶ್ರೀಗಳು ಸಂಕಲ್ಪದಂತೆ ಈ ಬಾರಿಯ ಚಾತುರ್ಮಾಸ್ಯ ಜುಲೈ ತಿಂಗಳ 07 ರಿಂದ ಸೆಪ್ಟಂಬರ್ 29 ರ ವರೆಗೆ ಪ್ರತಿನಿತ್ಯ ಹಲವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಬಹು ವಿಜೃಂಭಣೆಯಿಂದ ನಡೆದಿದೆ.
ಶ್ರೀಗಳ ಚಾತುರ್ಮಾಸ್ಯ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಶ್ರೀಗಳ ಜತೆಗೆ ವೇದಿಕೆಯಲ್ಲಿ ಒಡಿಯೂರು ಸಂಸ್ಥಾನದ ಪರಮ ಪೂಜ್ಯ ಗುರುದೇವಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯವಹಿಸಿದ್ದರು .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟಿ. ಶ್ಯಾಮ್ ಭಟ್ ವಹಿಸಿದ್ದರು.ಒಡಿಯೂರು ಶ್ರೀಗಳು ಆಶೀರ್ವಚನ ನೀಡಿ ಪೂರ್ವಾಶ್ರಮದಲ್ಲಿ ಈ ಹಿಂದಿನ ಪೂಜ್ಯ ಶ್ರೀಗಳ ನೆರಳಿನಂತೆ ಇದ್ದು ಮಠದ ಆಡಳಿತ ನಡೆಸಿದ ಅನುಭವ ಪಡೆದು ಬಳಿಕ ಸನ್ಯಾಸ ಸ್ವೀಕರಿಸಿ ಸ್ವಾಮಿಗಳಾಗಿರುವ ಪೂಜ್ಯ ಸಚಿದಾನಂದಭಾರತೀ ಶ್ರೀಗಳು ದೂರದೃಷ್ಟಿಯ ಹಲವು ಯೋಜನೆಗೆ ಮುನ್ನುಡಿ ಹಾಕಿದ್ದಾರೆ. ಅದರಲ್ಲಿ ಅತೀ ಶ್ರೇಷ್ಟವಾದ ವೈದಿಕ ಪರಂಪರೆ ಉಳಿಸುವ ಕಾರ್ಯ ಮಾಡುತ್ತಿದ್ದಾರೆ. ವೇದ ಪಾಠ ಶಾಲೆ ನಡೆಸುವುದು ಈ ಕಾಲದಲ್ಲಿ ಅಷ್ಟು ಸುಲಭದ ಕೆಲಸವಲ್ಲ. ಆದರೆ ಶ್ರೀಗಳು ಆ ಕಾರ್ಯ ಕೈಗೊಂಡು ಧರ್ಮ ಉಳಿಸುವಲ್ಲಿ ಬಹು ದೊಡ್ಡ ಕೊಡುಗೆ ನೀಡುತ್ತಿದ್ದಾರೆ ಎಂದರು. ಎಡನೀರು ಮಠಕ್ಕೆ ಬರುವುದು ಎಂದರೆ ತಾಯಿ ಮನೆಗೆ ಬಂದ ಅನುಭವ ನೀಡುತ್ತದೆ. ಇಲ್ಲಿನ ಆತಿಥ್ಯ ಆ ರೀತಿಯಲ್ಲಿ ಇರುತ್ತದೆ. ಒಡಿಯೂರು ಮತ್ತು ಎಡನೀರು ಮಠಗಳ ನಡುವೆ ಅತ್ಯಂತ ಸ್ನೇಹ ಪ್ರೀತಿಯ ಸಂಬಂಧವಿದೆ, ಶ್ರೀಗಳ ಪ್ರೀತಿಯ ಕರೆಗೆ ಓಗೊಟ್ಟು ಆಗಮಿಸಿದ್ದೇನೆ ಎಂದರು.

ಪುಸ್ತಕ ಬಿಡುಗಡೆ: ಹಿರಣ್ಯ ವೆಂಕಟೇಶ್ವರ ಭಟ್ ಸಂಪಾದಕತ್ವದಲ್ಲಿ ರಚಿತವಾದಹಿರಿಯ ನ್ಯಾಯವಾದಿ ಶ್ರೀ ಐ ವಿ ಭಟ್ ಅಭಿನಂದನಾ ಕೃತಿ ಸ್ಥಿತ ಪ್ರಜ್ಞ ಎಂಬ ಪುಸ್ತಕವನ್ನು ಸಚ್ಚಿದಾನಂದ ಭಾರತೀ ಶ್ರೀಗಳು ಬಿಡುಗಡೆ ಗೊಳಿಸಿದರು.
ಪರಮಪೂಜ್ಯ ಶ್ರೀಗಳು ಆಶೀರ್ವಚನ ನೀಡಿ ಚಾತುರ್ಮಾಸ್ಯ ವೃತ ಆಚರಣೆಯ ಯಶಸ್ಸಿಗೆ ಶ್ರಮಿಸಿದವರಿಗೆ, ಭಾಗವಹಿಸಿದ ಎಲ್ಲಾ ಶ್ರೀ ಮಠದ ಭಕ್ತರಿಗೆ ಶ್ರೀ ಗೋಪಾಲಕೃಷ್ಣ ದೇವರು ಹರಸಲಿ ಎಂದರು.
ಶ್ರೀ ಮಠದ ಯಶಸ್ಸಿಗೆ ಸ್ವಾಮಿಗಳ ಸಮಯ ಪರಿಪಾಲನೆಯೇ ಕಾರಣ. ಸ್ವಾಮಿಗಳ ದಿನಚರಿ ನೋಡಿಯೇ ಈಗ ಸಮಯ ಎಷ್ಟು ಎಂದು ಹೇಳಬಹುದು. ಅಷ್ಟರ ಮಟ್ಟಿಗೆ ಸ್ವಾಮಿಗಳು ಸಮಯಕ್ಕೆ ಮಹತ್ವ ನೀಡುತ್ತಾರೆ. ಭಕ್ತರು ಯಾರೇ ಕರೆದರೂ ಸ್ವಾಮಿಗಳು ಅವರ ಕರೆಯನ್ನು ಮನ್ನಿಸಿ ಭೇಟಿ ನೀಡುತ್ತಾರೆ. ಅದು ಅವರ ಕೀರ್ತಿಯನ್ನು ಎತ್ತರಕ್ಕೆ ಏರಿಸಿದೆ. ಉಡುಪಿಯ ಮಾದರಿಯಲ್ಲಿಯೇ ಎಡನೀರು ಕೂಡಾ ಧಾರ್ಮಿಕ ಮತ್ತು ಸಾಂಸ್ಕೃತಿಕ ಕ್ಷೇತ್ರವಾಗಿ ಹೊರಹೊಮ್ಮಿದೆ. ಈ ಎಲ್ಲಾ ಯಶಸ್ಸಿಗೆ ಶ್ರೀಗಳವರ ದೂರ ದೃಷ್ಟಿಯೇ ಕಾರಣವಾಗಿದೆ.ಯೋಜನೆಗಳನ್ನು ಪ್ರಾರಂಭಿಸುವ ಮೊದಲು ಆದನ್ನು ಪೂರ್ಣ ಗೊಳಿಸುವ ಬಗ್ಗೆ ಯೋಚಿಸಿಯೇ ನಿರ್ಧಾರ ತೆಗೆದುಕೊಳ್ಳುತ್ತಾರೆ ಮತ್ತು ಅದು ಶಾಶ್ವತವಾಗಿ ನಡೆಯಲು ಏನೇನೂ ಬೇಕೋ ಅದೆಲ್ಲವನ್ನೂ ಮಾಡಿಯೇ ಪ್ರಾರಂಭ ಮಾಡುತ್ತಾರೆ. ಇದು ನನ್ನ ಸಹಿತ ಮಠದ ಎಲ್ಲಾ ಭಕ್ತರಿಗೂ ಅತ್ಯಂತ ಸಂತಸ ತಂದಿದೆ. ಶ್ರೀಗಳ ಚಾತುರ್ಮಸ್ಯ ವೃತಾಚಾರಣೆ ಅತ್ಯಂತಈ ಯಶಸ್ವಿಯಾಗಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಜತೆಗೆ ಸಮಪ್ತಿಯಾಗಿದೆ. ಕಲಾ ಪೋಷಕರಾಗಿ ಕಲಾವಿದರಿಗೆ ವೇದಿಕೆ ನೀಡಿ ಹರಸಿದ್ದು ಕಲಾವಿದರಿಗೆ ವರವಾಗಿಟ್ ಪರಿಣಮಿಸಿದೆ. ಜತೆಗೆ ಪ್ರತಿ ದಿನದ ಕಾರ್ಯಕ್ರಮಗಳನ್ನು ಮಾಧ್ಯಮ ಮುಖೇನ LIVE ನೀಡಿದ್ದು ದೇಶ ವಿದೇಶಗಳ ಜನರಿಗೆ ವೀಕ್ಷಣೆಗೆ ಸಹಕಾರಿಯಾಗಿದೆ. ಇದೆಲ್ಲ ಶ್ರೀಗಳ ದೂರದೃಷ್ಟಿಯ ಫಲ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಟಿ. ಶ್ಯಾಮ್ ಭಟ್ ಹೇಳಿದರು. ಹಿರಣ್ಯ ವೆಂಕಟೇಶ್ವರ ಭಟ್ ಕಾರ್ಯಕ್ರಮ ನಿರೂಪಿಸಿದರು.
Uncategorized
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿಗೆ ‘ಅಂಬಿಯೋರ- 2026’; ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ
ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ ‘ಅಂಬಿಯೋರ- 2026’ ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ ‘ಅಂಬಿಯೋರ- 2026’ ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.
ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸ್ವಿನಿಕಾ ವಿಯೋಲಾ ಕ್ರಾಸ್ತಾ ಹಾಗೂ ಧ್ಯಾನ್ ಬಿ ಪ್ರಥಮ, ಪ್ರಾಡಕ್ಟ್ ಇನ್ನೊವೇಟಿವ್ ಚಾಲೆಂಜ್ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶಿವಾನಿ ಹಾಗೂ ಗಾನವಿ ಪ್ರಥಮ, ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಅದ್ವಿತಿ ಜಿ ಹಾಗೂ ಎ ಜಿ ಕೃತಿಕಾ ಪ್ರಥಮ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ವೇದಿತಾ ಕೆ ಮತ್ತು ತನುಶ್ರೀ ಬಿ ದ್ವಿತೀಯ, ಬಿಸ್ನೆಸ್ ಮಾಡೆಲ್ ಸ್ಪರ್ಧೆಯಲ್ಲಿ ಹೆಫ್ಜಿಬಾ ಎಂ ರಿನ್ಸಾನ್ ಹಾಗೂ ಪ್ರೀತಾ ಎ ದ್ವಿತೀಯ, ಬೆಸ್ಟ್ ಔಟ್ ಆಫ್ ವೇಸ್ಟ್ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸಜ್ನಾಜ್ ಮತ್ತು ಹಲೀಮತ್ ಸೌಧ ದ್ವಿತೀಯ ಹಾಗೂ ಮಿನಿ ಮಿಲಿಟಿಯ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶಹಾದ್ ಅಜಾರ್ ಮತ್ತು ಮೊಹಮ್ಮದ್ ರಫಾಜ್ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.
Uncategorized
Vivekananda-ವಿವೇಕಾನಂದ ಪದವಿ ಕಾಲೇಜಿನಲ್ಲಿ ‘ಸ್ವಾದಸಂಭ್ರಮ-2026’ ಆಹಾರ ಮೇಳ
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಮಾತನಾಡಿದರು.

ಪುತ್ತೂರು: ಆಹಾರ ಮೇಳ ಕೇವಲ ಆಹಾರ ಮಾರಾಟದ ಬಗ್ಗೆ ಮಾತ್ರವಲ್ಲ. ಇಲ್ಲಿ ವಿದ್ಯಾರ್ಥಿಗಳು ಉದ್ಯಮ ನಡೆಸುವಾಗ ಇರಬೇಕಾದ ಕೌಶಲ್ಯಗಳು, ಗ್ರಾಹಕರ ಮನಸ್ಥಿತಿ ಮತ್ತು ಅವರೊಂದಿಗೆ ವ್ಯವಹರಿಸಬೇಕಾದ ರೀತಿಯನ್ನು ಮೇಳಗಳಿಂದ ತಿಳಿದುಕೊಳ್ಳಬಹುದು. ಇದರ ನಡುವೆ ಬರುವ ಸೋಲು-ಗೆಲುವುಗಳನ್ನು ವಿದ್ಯಾರ್ಥಿಗಳು ಸಮನಾಗಿ ಸ್ವೀಕರಿಸಬೇಕು ಎಂದು ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಗೌರವ ಅತಿಥಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಮಾತನಾಡಿ, ಉದ್ದಿಮೆಯ ಬಗ್ಗೆ ಸೈದ್ಧಾಂತಿಕವಾಗಿ ಕಲಿತ ವಿಚಾರಗಳು ಇಲ್ಲಿ ಪ್ರಾಯೋಗಿಕವಾಗಿ ನಡೆಯುತ್ತಿದೆ. ಒಂದು ಉದ್ದಿಮೆಯನ್ನು ನಡೆಸಬೇಕಾದರೆ ಅದರಲ್ಲಿರುವಂತಹ ಕಷ್ಟ-ಸುಖಗಳನ್ನು ಅರಿಯಲು ಇಂತಹ ಮೇಳಗಳು ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ರೇಖಾ ಪಿ. ಉಪಸ್ಥಿತರಿದ್ದರು.
ಸ್ವಾದಸಂಭ್ರಮ ಆಹಾರ ಮೇಳ-2026ರ ವಿಜೇತರು:
ವ್ಯವಹಾರ ಅಧ್ಯಯನ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಒಟ್ಟು 14 ತಂಡಗಳು ಭಾಗವಹಿಸಿದ್ದು ಫ್ರೋಜನ್ ಡಿಲೈಟ್ ತಂಡ ಪ್ರಥಮ ಸ್ಥಾನ, ಬೈಟ್ ಬೈ ಬೈಟ್ ದ್ವಿತೀಯ ಸ್ಥಾನ ಪಡೆದುಕೊಂಡಿತು. ಉತ್ತಮ ನೈರ್ಮಲ್ಯ ಕಾಪಾಡುವಿಕೆ ವಿಭಾಗದಲ್ಲಿ ಸ್ವದೇಶೀ ಸ್ವಾದ್ ತಂಡ, ಗ್ರಾಹಕರೊಂದಿಗೆ ಉತ್ತಮ ಸಂವಹನ ವಿಭಾಗದಲ್ಲಿ ಫ್ಲೇವರ್ ತಂಡ, ಉತ್ತಮ ಪೋಸ್ಟರ್ ವಿಭಾಗದಲ್ಲಿ ಫ್ಲೇವರ್ ಹಂಟರ್ಸ್ ತಂಡ ಹಾಗೂ ಉತ್ತಮ ರೀಲ್ಸ್ ವಿಭಾಗದಲ್ಲಿ ಸ್ವದ್ಘಾಮ್ ತಂಡ ಪ್ರಶಸ್ತಿ ಪಡೆದಿಕೊಂಡಿದೆ.
ಕಾರ್ಯಕ್ರಮವನ್ನು ತೃತೀಯ ಕಲಾ ವಿಭಾಗದ ಕೆ. ಕೃತಿಕಾ ನಿರ್ವಹಿಸಿದರು.
Uncategorized
Ashok Rai-ಬದ್ಯಾರ್‌ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು ಕರೆಸಿ ಮಾತುಕತೆ ನಡೆಸಿದರು. ಒಂದು ಹಂತದಲ್ಲಿ ಮಾತುಕತೆ ಸಫಲವಾದರೂ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. ಬಳಿಕ ಎರಡನೇ ಸುತ್ತಿನ ಮಾತುಕತೆಯ ವೇಳೆ ಜಾಗದ ಮಾಲಿಕರು ರಸ್ತೆ ನಿರ್ಮಾಣಕ್ಕೆ ಒಪ್ಪಿಗೆಯನ್ನು ನೀಡಿದ್ದರು. ಒಪ್ಪಿಗೆ ಸೂಚಿತವಾದ ಬಳಿಕ ಅನುದಾನವನ್ನು ಇಟ್ಟು ಅಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕಳೆದ ವಾರ ಮಾಡಿ ಮುಗಿಸಲಾಗಿದೆ.

ಪುತ್ತೂರು: ಈ ಭಾಗದ ಜನರು ರಸ್ತೆಯಿಲ್ಲದೆ ಸುಮಾರು 50 ವರ್ಷಗಳಿಂದ ತೊಂದರೆಯಲ್ಲಿದ್ದರು, ಇಲ್ಲಿ ಸುಮಾರು ಹತ್ತು ಮನೆಗಳಿದೆ, ಮನೆ ಕಟ್ಟುವಾಗ ಇವರೆಲ್ಲಾ ಕಲ್ಲನ್ನು ಕಾಲು ದಾರಿಯ ಮೂಲಕ ಹೊತ್ತುಕೊಂಡೇ ಹೋಗಿದ್ದು, ವಾಹನ ಹತ್ತ ಬೇಕಾದರೆ ಒಂದಷ್ಟು ದೂರ ನಡೆದುಕೊಂಡೇ ಬರಬೇಕಾದ ಸ್ಥಿತಿ. ಇದು ಪೆರುವಾಯಿ ಗ್ರಾಮದ ಬದ್ಯಾರಿನ ಕಥೆ.
ಇವರು ರಸ್ತೆಗಾಗಿ ಮನವಿ ಹಾಗೂ ಹೋರಾಟವನ್ನು ಮಾಡುತ್ತಲೇ ಇದ್ದರು. ಆದರೆ ರಸ್ತೆ ನಿರ್ಮಾಣವಾಗುವಲ್ಲಿ ಖಾಸಗಿ ಜಾಗದ ತಕರಾರಿತ್ತು. ಈ ವಿವಾದವನ್ನು ಮಾತುಕತೆ ಮೂಲಕ ಇತ್ಯರ್ಥಪಡಿಸಲು ಅನೇಕ ಜನಪ್ರತಿನಿಧಿಗಳು ಪ್ರಯತ್ನ ಮಾಡಿದ್ದರು ಆದರೆ ಯಾರಿದಂಲೂ ಸಾಧ್ಯವಾಗಿಲ್ಲ, ಕೆಲವರು ಭರವಸೆಯನ್ನು ಮಾತ್ರ ಕೊಟ್ಟಿದ್ದರು.
ಶಾಸಕ ಅಶೋಕ್ ರೈ ಭೇಟಿ
ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು ಕರೆಸಿ ಮಾತುಕತೆ ನಡೆಸಿದರು. ಒಂದು ಹಂತದಲ್ಲಿ ಮಾತುಕತೆ ಸಫಲವಾದರೂ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. ಬಳಿಕ ಎರಡನೇ ಸುತ್ತಿನ ಮಾತುಕತೆಯ ವೇಳೆ ಜಾಗದ ಮಾಲಿಕರು ರಸ್ತೆ ನಿರ್ಮಾಣಕ್ಕೆ ಒಪ್ಪಿಗೆಯನ್ನು ನೀಡಿದ್ದರು. ಒಪ್ಪಿಗೆ ಸೂಚಿತವಾದ ಬಳಿಕ ಅನುದಾನವನ್ನು ಇಟ್ಟು ಅಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕಳೆದ ವಾರ ಮಾಡಿ ಮುಗಿಸಲಾಗಿದೆ.
ಶಾಸಕರಿಗೆ ಸನ್ಮಾನ
ವಿವಾದ ಇತ್ಯರ್ಥಪಡಿಸಿ ೫೦ ವರ್ಷಗಳ ಹಿಂದಿನ ಬಹುದೊಡ್ಡ ಬೇಡಿಕೆಯನ್ನು ಈಡೇರಿಸಿದ ಶಾಸಕರಿಗೆ ಬದ್ಯಾರು ರಸ್ತೆ ಫಲಾನುಭವಿಗಳು ಸನ್ಮಾನವನ್ನು ಮಾಡಿದ್ದಾರೆ.
ಬದ್ಯಾರ್‌ನಿವಾಸಿಗಳು ತಮ್ಮ ಕಷ್ಟವನ್ನು ನನ್ನಲ್ಲಿ ಹೇಳಿಕೊಂಡಿದ್ದರು. ರಸ್ತೆ ಇಲ್ಲದೆ ಹತ್ತು ಕುಟುಂಬಗಳು ಸಂಕಷ್ಟದಲ್ಲಿತ್ತು ಮಾತ್ರವಲ್ಲದೆ ಪಕ್ಕದಲ್ಲೇ ಒಂದು ದೇವಸ್ಥಾನದ ಕಾಮಗಾರಿಯೂ ಅರ್ಧಕ್ಕೆ ನಿಂತಿತ್ತು. ಜಾಗ ಖಾಸಗಿ ವ್ಯಕ್ತಿಗೆ ಸೇರಿದ್ದರಿಂದ ರಸ್ತೆ ನಿರ್ಮಾಣಕ್ಕೆ ತೊಂದರೆಯಾಗಿತ್ತು. ಜಾಗದ ಮಾಲಿಕರನ್ನು ಕರೆಸಿ ಮಾತುಕತೆ ನಡೆಸಿದಾಗ ಅವರು ಮಾನವೀಯ ನೆಲೆಯಲ್ಲಿ ಒಪ್ಪಿಕೊಂಡು ರಸ್ತೆ ನಿರ್ಮಾಣಕ್ಕೆ ಅನುವು ಮಾಡಿಕೊಡುವ ಮೂಲಕ ದೊಡ್ಡ ಪುಣ್ಯದ ಕೆಲಸವನ್ನು ಮಾಡಿದ್ದಾರೆ. ಬೇಡಿಕೆ ಈಡೇರಿಸಿದ್ದೇನೆ, ಅನುದಾನವನ್ನು ನೀಡಿದ್ದೇನೆ ಮುಂದೆ ಅವರೆಲ್ಲರೂ ನನ್ನ ಜೊತೆ ಇರುತ್ತಾರೆ ಎಂಬ ನಂಬಿಕೆಯೂ ಇದೆ
ಅಶೋಕ್ ರೈ, ಶಾಸಕರು ಪುತ್ತೂರು
ರಸ್ತೆ ಸಂಪರ್ಕ ಇಲ್ಲದೆ 50 ವರ್ಷದಿಂದ ಪರದಾಡುತ್ತಿದ್ದೇವೆ, ನಾವು ಬಿಜೆಪಿ ಶಾಸಕರಿಗೆ, ಮುಖಂಡರಿಗಳಿಗೆ ಮನವಿ ಮಾಡಿದ್ದೆವು, ನಾವು ಬಿಜೆಪಿ ಕಾರ್ಯಕರ್ತರಾದರೂ ನಮ್ಮ ಬೇಡಿಕೆಯನ್ನು ಅವರು ಈಡೇರಿಸಿರಲಿಲ್ಲ. ನಾವು ಶಾಸಕ ಅಶೋಕ್ ರೈ ಕಚೇರಿಗೆ ಈ ವಿಚಾರವನ್ನು ತಿಳಿಸಲು ಹೋದಾಗ ಕೆಲವರು ನಮ್ಮನ್ನು ಛೇಡಿಸಿದ್ದರು. ನೀವು ಬಿಜೆಪಿ ಕಾರ್ಯಕರ್ತರಾದ ಕಾರಣ ನಿಮ್ಮ ಕೆಲಸ ಶಾಸಕರು ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ ಶಾಸಕರು ಪಕ್ಷ ರಾಜಕೀಯ ಮಾಡದೆ ನಮ್ಮ ಬೇಡಿಕೆಯನ್ನು ಈಡೇರಿಸಿದ್ದಾರೆ, ನಾವು ಮುಂದೆ ಅಶೋಕ್ ರೈ ಜೊತೆ ಇರುತ್ತೇವೆ, ಶಾಸಕರು ಮಾಡಿದ ಈ ಉಪಕಾರವನ್ನು ಮರೆಯುವುದೇ ಇಲ್ಲ.
ಜಯರಾಮ, ಬದ್ಯಾರ್ ಫಲಾನುಭವಿ
ಯಾವ ಜನಪ್ರತಿನಿಧಿಯಿಂದಲೂ ಮಾಡಲಾಗದ ಕೆಲಸವನ್ನು ಶಾಸಕ ಅಶೋಕ್ ರೈ ಮಾಡಿದ್ದಾರೆ. ಪಕ್ಷ ಬೇದವಿಲ್ಲದೆ ಬೇಡಿಕೆಯನ್ನು ಈಡೇರಿಸಿದ್ದಾರೆ, ಇವರು ಮುಂದೆಯೂ ಶಾಸಕರಾಗಿ ಆಯ್ಕೆಯಾಗುವಲ್ಲಿ ನಾವು ಖಂಡಿತಾ ಕೆಲಸ ಮಾಡುತ್ತೇವೆ.
ಶೀಲಾ ರೈ , ಫಲಾನುಭವಿ
-
ಬಿಗ್ ನ್ಯೂಸ್24 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ24 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ23 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ23 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಸ್ಥಳೀಯ5 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಅಪರಾಧ5 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಬಿಗ್ ನ್ಯೂಸ್5 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಮಂಗಳೂರು22 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ




















