Connect with us

ದಕ್ಷಿಣ ಕನ್ನಡ

ಸುಳಿವುಗಳಿಲ್ಲದೇ ಸವಾಲಾಗಿದ್ದ ಕುದ್ಕಾಡಿ ಒಂಟಿ ಮನೆ ದರೋಡೆ ಪ್ರಕರಣ : ಪೆರೋಲ್ ಹಾಗೂ ಬೇಲ್‌ ಮೇಲೆ ಬಂದ ಭಯಾನಕ ಕ್ರಿಮಿನಲ್‌ ಗಳ ಕೃತ್ಯ – ಇಲ್ಲಿದೆ ಕಂಪ್ಲಿಟ್‌ ಡಿಟೈಲ್‌

Published

on



Ad Widget

Ad Widget

Ad Widget

Ad Widget

ಪುತ್ತೂರು: ತಡರಾತ್ರಿ ಮಾರಕಾಯುಧಗಳಿಂದ ಆಗಮಿಸಿ ಮನೆಯಲ್ಲಿದ್ದ ತಾಯಿ ಮತ್ತು ಮಗನನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣ ಗ್ರಾಮೀಣ ಭಾಗದಲ್ಲಿ ಆತಂಕ ಸೃಷ್ಟಿಸಿತ್ತು. ಅಲ್ಲದೇ ದರೋಡೆಕೋರರ ತಂಡವು ಸಾಕ್ಷಿ ಸಿಗದ ರೀತಿ ಅತ್ಯಂತ ಚಾಣಕ್ಷ್ಯತನದಿಂದ ಕೃತ್ಯ ಎಸಗಿದ್ದು ಪೊಲೀಸ್‌ ಇಲಾಖೆಗೂ ಸವಾಲನ್ನು ಒಡ್ಡಿತ್ತು. ಈ ಎಲ್ಲ ಹಿನ್ನಲೆಯಲ್ಲಿ ಪುತ್ತೂರು ಡಿವೈಎಸ್ಪಿ ನೇತೃತ್ವದಲ್ಲಿ ಅಪರಾಧ ಪತ್ತೆ ಕಾರ್ಯದಲ್ಲಿ ನೈಪುಣ್ಯತೆಯನ್ನು ಹೊಂದಿದ್ದ ಜಿಲ್ಲೆಯ ಅತ್ಯುತ್ತಮ ಸಿಬಂದಿಗಳ ತಂಡ ರಚಿಸಿ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ಮಾಡಲಾಗಿದೆ ಎಂದು ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ. ಹೇಳಿದರು.

Ad Widget

Ad Widget

Ad Widget

Ad Widget

ಮುಸುಕುಧಾರಿ ದರೋಡೆಕೋರರ ತಂಡವೊಂದು ಸೆ.೬ರಂದು ತಡರಾತ್ರಿ ವೇಳೆ ಬಡಗನ್ನೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಕಾಂಗ್ರೆಸ್ ಮುಖಂಡ ಗುರುಪ್ರಸಾದ್ ರೈ ಅವರ ಕುದ್ಕಾಡಿ ತೋಟದಮೂಲೆ ಎಂಬಲ್ಲಿರುವ ಮನೆಯ ಹಿಂಬದಿಯ ಬಾಗಿಲು ಒಡೆದು ಒಳನುಗ್ಗಿ ಗುರುಪ್ರಸಾದ್ ಅವರನ್ನು ಕಟ್ಟಿಹಾಕಿ, ಅವರ ತಾಯಿ ಕಸ್ತೂರಿ ರೈ ಅವರಿಗೆ ಮಾರಕಾಯುಧಗನ್ನು ಹಿಡಿದು ಬೆದರಿಸಿ ಸೋಫಾದಲ್ಲಿ ಕುಳ್ಳಿರಿಸಿ, ಚಿನ್ನದ ಸರ, 4 ಚಿನ್ನದ ಬಳೆಗಳ ಸಹಿತ ಒಟ್ಟು ರೂ.2.40 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ರೂ.30 ಸಾವಿರ ನಗದು ದರೋಡೆ ಮಾಡಿತ್ತು. ಈ ಪ್ರಕರಣದ ಎಲ್ಲ 6 ಆರೋಪಿಗಳನ್ನು ಬಂಧಿಸಿದ ಬಳಿಕ ಎಸ್ಪಿ ರಿಷ್ಯಂತ್‌ ಮಾದ್ಯಮಗಳಿಗೆ ಮಾಹಿತಿ ನೀಡಿದರು.

Ad Widget

Ad Widget

Ad Widget alt="Ad Widget"/>

Ad Widget

ಚಾಣಕ್ಷ್ಯ ತಂಡ

Ad Widget

Ad Widget <> Ad Widget

ದರೋಡೆಕೋರರು ವಾಹನವನ್ನು ಮನೆಯಿಂದ ತುಂಬಾ ದೂರದಲ್ಲಿ ನಿಲ್ಲಿಸಿ ಶಬ್ದವಾಗದಂತೆ ಎಚ್ಚರ ವಹಿಸಿದ್ದಾರೆ. ಬಳಿಕ ಮನೆಯ ಬಾಗಿಲನ್ನು ಮುರಿದು ಒಳ ನುಗ್ಗಿ ಮನೆಯಲ್ಲಿದ್ದವರನ್ನು ತಾವೇ ತಂದ ದಾರ ಹಾಗೂ ಬಟ್ಟೆಯಲ್ಲಿ ಕಟ್ಟಿ ಹಾಕಿದ್ದಾರೆ. ಅಕ್ಕಪಕ್ಕದ ಮನೆಗಳಿಗೆ ಕೃತ್ಯದ ಸುಳಿವು ಸಿಗಬಾರದೆಂಬ ಉದ್ದೇಶದಿಂದ ಮನೆಯ ದೀಪವನ್ನು ಸ್ವತ: ಆರಿಸಿ ಮನೆಯನ್ನು ಜಾಲಾಡುವ ಕಾರ್ಯ ಮಾಡಿದ್ದಾರೆ.



Ad Widget

ಸಾಕ್ಷ್ಯ ನಾಶ

Ad Widget

Ad Widget

ಅಲ್ಲದೇ ಮನೆಯವರ ಬಳಿಯಿದ್ದ ಫೋನ್ ಹಾಗೂ ಟಾರ್ಚ್‌ಗಳನ್ನು ಬೆದರಿಸಿ ಪಡೆದುಕೊಂಡು ಖಾಲಿ ಬಕೇಟ್‌ಗೆ ನೀರು ತುಂಬಿಸಿ ಅದರಲ್ಲಿ ಹಾಕಿದ್ದಾರೆ. ತಮ್ಮ ಜತೆ ಕೃತ್ಯ ಎಸಗಲು ತಂದಿದ್ದ ಸಾಮಾಗ್ರಿಗಳನ್ನು ಒಂಚೂರು ಬಿಡದೆ ದರೋಡೆಯ ಬಳಿಕ ಜಾಗೂರುಕತೆಯಿಂದ ತೆಗೆದುಕೊಂಡು ಹೋಗಿದ್ದಾರೆ. ಹೀಗೆ ಆರೋಪಿಗಳು ಯಾವುದೇ ಸುಳಿವು ಬಿಡದೆ ಅತ್ಯಂತ ಬುದ್ದಿವಂತಿಕೆ ಉಪಯೋಗಿಸಿ ಎಸಗಿದ ಕ್ಲಿಷ್ಟಕರ ಪ್ರಕರಣವನ್ನು ಪತ್ತೆ ಮಾಡುವಲ್ಲಿ ತನಿಖಾ ತಂಡ ಸಾಕಷ್ಟು ಶ್ರಮವನ್ನು ವಹಿಸಿದೆ ಎಂದು ಪುತ್ತೂರು ಉಪಧೀಕ್ಷಕರ ಕಛೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಅವರು ತಿಳಿಸಿದರು.

ಬಂಧಿತರು ಹಾಗೂ ಅವರ ಅಪರಾಧ ಹಿನ್ನಲೆ

ಪೆರುವಾಯಿ ನಿವಾಸಿ ಸುದೀರ್ ಕುಮಾರ್ ಕೆ. (38) ಮೇಲೆ ಕಾಳು ಮೆಣಸು ದರೋಡೆ ಸಹಿತ 2 ಪ್ರಕರಣ, ಪೈವಳಿಕೆ ಅಟ್ಟೆಗೋಳಿ ನಿವಾಸಿ ಕಿರಣ್ ಟಿ. (29) ಮೇಲೆ ಸುಲಿಗೆ ಹಾಗೂ ಗಾಂಜಾ ಸೇರಿ 3 ಪ್ರಕರಣ, ಕಾಂಞಂಗಾಡು ನಿವಾಸಿ ಸನಾಲ್ ಕೆ.ವಿ. (34) ಮೇಲೆ ಕೇರಳದ ವಿವಿಧ ಭಾಗದಲ್ಲಿ 15 ಪ್ರಕರಣ, ಸೀತಂಗೋಳಿ ನಿವಾಸಿ ಮಹಮ್ಮದ್ ಫೈಝಲ್ (37 ) ಮೇಲೆ ಚೈನ್ ಎಳೆದ, ಕುದ್ದುಪದವು ಪೆಟ್ರೋಲ್ ಪಂಪ್ ದರೋಡೆ ಸೇರಿ 3 ಪ್ರಕರಣ, ಸೀತಂಗೋಳಿ ನಿವಾಸಿ ಅಬ್ದುಲ್ ನಿಝಾರ್ (21) ಮೇಲೆ ಚೈನ್ ಹಾಗೂ ಕುದ್ದುಪದವು ಪೆಟ್ರೋಲ್ ಪಂಪ್ ದರೋಡೆ ಸೇರಿ 2 ಪ್ರಕರಣ, ಶೇಣಿ ನಿವಾಸಿ ವಸಂತ ಎಂ.(31) ಮೇಲೆ ಕುಂಬಳೆ ಠಾಣೆಯಲ್ಲಿ 4 ಪ್ರಕರಣಗಳಿವೆ. ಈ ಎಲ್ಲಾ ಆರೋಪಿಗಳು ಪದೇಪದೇ ವಿವಿಧ ಕೃತ್ಯದಲ್ಲಿ ಭಾಗಿಯಾದ ಹಳೆಯ ಆರೋಪಿಗಳು ಎಂದರು

ಪೆರೋಲ್ ಮೇಲೆ ಹೊರ ಬಂದು ಕೃತ್ಯ ಎಸಗಿದ್ದ

ಕೆಲವು ವರ್ಷಗಳ ಹಿಂದೆ ಇಡೀ ಕರಾವಳಿ ಮತ್ತು ಕಾಸರಗೋಡು ಜಿಲ್ಲೆಗಳನ್ನೇ ಬೆಚ್ಚಿ ಬೀಳಿಸಿದ ಪೆರ್ಲ ಜಬ್ಬಾರ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪಚ್ಚಂಬಳ ರವಿ ಜೀವಾವಧಿ ಶಿಕ್ಷೆಗೆ ಒಳಪಟ್ಟು ಕೇರಳದ ಕಣ್ಣೂರು ಸೆಂಟ್ರಲ್ ಜೈಲ್ ನಲ್ಲಿದ್ದ. ಇತ್ತೀಚೆಗೆ ಪೆರೋಲ್ ಮೇಲೆ ಹೊರ ಬಂದು ಈ ಕೃತ್ಯವನ್ನು ನಡೆಸಿಬಳಿಕ ಮತ್ತೆ ಜೈಲಿನೊಳಗೆ ಸೇರಿಕೊಂಡಿದ್ದ ಎಂದು ತಿಳಿದು ಬಂದಿದೆ. ಈತ ಸುಮಾರು 5 ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಈ ಪ್ರಕರಣದಲ್ಲಿ ಈತನನ್ನು ಇನ್ನಷ್ಟೇ ವಶಕ್ಕೆ ಪಡೆಯಬೇಕಾಗಿದೆ. ಈತ ಸೇರಿದಂತೆ ಒಟ್ಟು ಏಳು ಮಂದಿ ಸೇರಿ ದರೋಡೆ ಎಸಗಿದ್ದು ಈ ಪೈಕಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮನೆಯನ್ನು ದರೋಡೆಗೆ ಆಯ್ಕೆ ಮಾಡಿದ್ದು ಹೀಗೆ

ಆರೋಪಿಗಳು ಜೈಲಿನಲ್ಲಿ ಒಬ್ಬರಿಗೊಬ್ಬರು ಪರಿಚಯವಾಗಿದ್ದು, ಕೆಲವು ಮಂದಿ ಹೊರಗಡೆ ಪರಿಚಯವಾಗಿದ್ದಾರೆ. ಕುದ್ಕಾಡಿ ತರವಾಡಿನ ದೈವಗಳ ನೇಮೋತ್ಸವಕ್ಕೆ ಕೇರಳದಿಂದ ಕುಟುಂಬವೊಂದು ಬಂದಿದ್ದು ಅದರ ಕಾರು ಚಾಲಕನಾಗಿ ಸುಧೀರ್ ಮಣಿಯಾಣಿ ಬಂದಿದ್ದ. ಈ ಸಂದರ್ಭ ಗುರುಪ್ರಸಾದ್ ರೈ ಮನೆಯ ಸಮಗ್ರ ಮಾಹಿತಿ ಸಂಗ್ರಹಿಸಿದ್ದ. ಸಾಕಷ್ಟು ಜಮೀನು ಹೊಂದಿರುವ ಈ ಮನೆ ದರೋಡೆ ಮಾಡಿದ್ರೆ ತುಂಬಾ ಹಣ ಚಿನ್ನಾಭರಣ ಇರಬಹುದೆಂದು ಶಂಕಿಸಿದ ಆತ ದರೋಡೆ ತಂಡಕ್ಕೆ ಮಾಹಿತಿ ನೀಡಿದ್ದ. ಅದರಂತೆ ತಂಡ ಈ ಮನೆಯನ್ನು ದರೋಡೆಗೆ ಆಯ್ಕೆ ಮಾಡಿತ್ತು.

ಬೇಲ್‌ ಮೇಲೆ ಬಂದವರು ಮತ್ತೆ ಜೈಲು ಪಾಲಾದರು:

ವರ್ಷದ ಹಿಂದೆ ರೆಂಜ-ಮುಡ್ಪಿನಡ್ಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ನಿಡ್ಪಳ್ಳಿಯ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಬೈಕ್‌ ನಲ್ಲಿ ಬಂದ ಇಬ್ಬರು ಎಗರಿಸಿದ್ದರು. ಈ ಪ್ರಕರಣದ ಆರೋಪಿಗಳಾದ ಫೈಝಲ್ ಮತ್ತು ಅಬ್ದುಲ್ ಸಿಸಾರ್ ಅವರನ್ನು ಪೊಲೀಸರು ಬಂಧಿಸಿದ್ದು ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ತದ ನಂತರ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ಈ ಪೈಕಿ ಅಬ್ದುಲ್ ನಿಸಾರ್‌ನನ್ನು ಸಂಪ್ಯ ಪೊಲೀಸರು ಜುಲೈ 5 ರಂದು ಕುಂಬ್ಳೆಯಲ್ಲಿ ಪತ್ತೆ ಮಾಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

ಆರೋಪಿ ಫೈಝಲ್ ಕುಂಬ್ಳೆ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣವೊಂದಕ್ಕೆ ಸಂಬಂಧಿಸಿ ಆ ಸಂದರ್ಭಲ್ಲಿ ಜೈಲಿನಲ್ಲಿದ್ದ. ನ್ಯಾಯಾಲಯದಿಂದ ಜಾಮೀನು ಪಡೆದು ಹೊರ ಬಂದ ಈ ಇಬ್ಬರು ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ಮತ್ತೆ ಜೈಲು ಸೇರುವಂತಾಗಿದೆ.

ಆರೋಪಿಗಳ ಬಳಿಯಿಂದ ದರೋಡೆ ಮಾಡಿದ ಚಿನ್ನಾಭರಣ, ನಗದು ವಶಕ್ಕೆ ಪಡೆಯಲಾಗಿದೆ. ಇದರ ಜತೆಗೆ ಕೃತ್ಯಕ್ಕೆ ಬಳಸಿದ ಮಾರಕಾಯುದ್ದ ವಾಹನ ಜಪ್ತಿ ಮಾಡಲಾಗಿದೆ

ಪೊಲೀಸ್‌ ತಂಡ

ಪೊಲೀಸ್ ಉಪ ಅಧೀಕ್ಷಕಿ ಡಾ. ಗಾನ ಪಿ. ಕುಮಾರ್ ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ. ಎಸ್. ನೇತೃತ್ವದಲ್ಲಿ ಪುತ್ತೂರು ಸಂಚಾರ ಪೊಲೀಸ್ ಠಾಣಾ ಉಪನಿರೀಕ್ಷಕ ಉದಯರವಿ ಎಂ. ವೈ., ಪುತ್ತೂರು ಗ್ರಾಮಾಂತರ ಠಾಣಾ ಉಪನಿರೀಕ್ಷಕ ಧನಂಜಯ ಬಿ. ಸಿ., ಉಪ್ಪಿನಂಗಡಿ ಠಾಣಾ ಉಪನಿರೀಕ್ಷಕ ರುಕ್ಮ ನಾಯ್ಕ, ಉಪ್ಪಿನಂಗಡಿ ಠಾಣಾ ಹೆಚ್ ಸಿ ಹರೀಶ್ಚಂದ್ರ, ವೇಣೂರು ಠಾಣಾ ಹೆಚ್ ಸಿ ಪ್ರವೀಣ್ ಮೂರುಗೋಳಿ, ವಿಟ್ಲ ಪೊಲೀಸ್ ಠಾಣಾ ಹೆಚ್ ಸಿ ಉದಯ ರೈ, ಪುತ್ತೂರು ಗ್ರಾಮಾಂತರ ವೃತ್ತ ಕಛೇರಿಯ ಹೆಚ್ ಸಿ ಅಬ್ದುಲ್ ಸಲೀಂ, ಪಿಸಿ ಜಗದೀಶ್ ಅತ್ತಾಜೆ, ಎ.ಹೆಚ್.ಸಿ ಹರೀಶ್, ಪುತ್ತೂರು ಗ್ರಾಮಾಂತರ ಠಾಣಾ ಎ.ಎಸ್.ಐ ಮುರುಗೇಶ್, ಹೆಚ್.ಸಿ. ಪ್ರವೀಣ್ ರೈ, ಹೆಚ್.ಸಿ. ಅದ್ರಾಮ್, ಹೆಚ್.ಸಿ. ಬಾಲಕೃಷ್ಣ, ಹೆಚ್.ಸಿ. ಹರೀಶ್, ಹೆಚ್.ಸಿ. ಪ್ರಶಾಂತ್, ಪಿ.ಸಿ. ಮುನಿಯ ನಾಯ್ಕ, ಪುತ್ತೂರು ಸಂಚಾರ ಠಾಣಾ ಹೆಚ್.ಸಿ. ಪ್ರಶಾಂತ್ ರೈ, ಪುತ್ತೂರು ನಗರ ಠಾಣಾ ಪಿಸಿ ವಿನಾಯಕ ಎಸ್. ಬಾರ್ಕಿ, ಪಿಸಿ ಶರಣಪ್ಪ ಪಾಟೀಲ್, ಬಂಟ್ವಾಳ ಸಂಚಾರ ಠಾಣಾ ಪಿಸಿ ವಿವೇಕ್, ಪಿಸಿ ಕುಮಾರ್ ಕೆ., ಜಿಲ್ಲಾ ಗಣಕಯಂತ್ರ ವಿಭಾಗದ ಎಹೆಚ್.ಸಿ ಸಂಪತ್ ಕುಮಾರ್, ಸಿಪಿಸಿ ದಿವಾಕರ್, ವಾಹನ ಚಾಲಕ ಪ್ರವೀಣ್ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ತಂಡಕ್ಕೆ ನಗದು ಬಹುಮಾನ:

ಪೊಲೀಸ್ ತಂಡದಲ್ಲಿ ಕಾರ್ಯ ನಿರ್ವಹಿಸಿದ ಸಿಬ್ಬಂದಿಗಳು ಪ್ರೋತ್ಸಾಹಿಸುವ ಹಾಗೂ ಇನ್ನಷ್ಟು ಪತ್ತೆಕಾರ್ಯದಲ್ಲಿ ಹುರಿದುಂಬಿಸುವ ನಿಟ್ಟಿನಲ್ಲಿ ನಗದು ಬಹುಮಾನವನ್ನು ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ. ಅವರು ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ. ಎಸ್. ನೇತೃತ್ವದಲ್ಲಿ ಅವರಿಗೆ ಹಸ್ತಾಂತರಿಸಿದರು.

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ

Published

on



Ad Widget

Ad Widget

Ad Widget

Ad Widget

ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಉತ್ತರ ಭಾಗದಲ್ಲಿ ಪೂರ್ವ-ಪಶ್ಚಿಮ ದಿಕ್ಕಿನಲ್ಲಿ 30 ಅಡಿ ಅಗಲ ಹಾಗೂ ಸುಮಾರು 1,000 ಮೀಟರ್ ಉದ್ದದ ಸಾರ್ವಜನಿಕ ರಸ್ತೆ ನಿರ್ಮಿಸುವ ಯೋಜನೆಗೆ ಸಂಬಂಧಿಸಿ ಭಕ್ತರು ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

Ad Widget

Ad Widget <> Ad Widget

ಈ ಅರ್ಜಿಯ ವಿಚಾರವಾಗಿ ಸೆ.10ರಂದು ನೀಡಿದ ಆದೇಶದಲ್ಲಿ, ಅರ್ಜಿದಾರರ ಆಕ್ಷೇಪಗಳನ್ನು ಆಲಿಸಿ ನಿಯಮಾನುಸಾರ ವಿಚಾರಣೆ ನಡೆಸಿ ಮುಂದಿನ ಆದೇಶ ಹೊರಡಿಸುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಆಯುಕ್ತರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.



Ad Widget

ರಸ್ತೆ ನಿರ್ಮಾಣಕ್ಕೆ ಇಲಾಖೆಯ ಆಯುಕ್ತರು ದೇವಸ್ಥಾನದ ಸಮಿತಿ ಅಥವಾ ಕಾರ್ಯನಿರ್ವಹಣಾಧಿಕಾರಿಗೆ ಈವರೆಗೆ ಅನುಮತಿ ನೀಡಿಲ್ಲ. ಆದರೂ, ದೇವಸ್ಥಾನದ ಬಳಿಯ ಹಿಂದಿನ ಗಣೇಶ್ ಪ್ರಸಾದ್ ಹೋಟೆಲ್‌ನಿಂದ ಮಡಿವಾಳಕಟ್ಟೆಯವರೆಗಿನ ನೂತನ ಕಾಂಕ್ರೀಟ್ ರಸ್ತೆಗೆ ಪೂರಕವಾಗಿ ನಿರ್ವಾತ ತಂತ್ರಜ್ಞಾನದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ನಗರಸಭೆ ಟೆಂಡರ್ ಪ್ರಕಟಿಸಿದೆ ಎಂದು ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ.

Ad Widget

Ad Widget

ದೇವಸ್ಥಾನದ ಜಮೀನಿನಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಲು ಇಲಾಖೆಯ ಆಯುಕ್ತರ ಅನುಮತಿ ಕಡ್ಡಾಯವಾಗಿದ್ದು, ಈ ಸಂಬಂಧ ಭಕ್ತರ ಆಕ್ಷೇಪಗಳು ಹಾಗೂ ನ್ಯಾಯಾಲಯದ ನಿರ್ದೇಶನಗಳು ಇರುವಾಗ ಟೆಂಡರ್ ಪ್ರಕ್ರಿಯೆ ಮುಂದುವರಿಸುವುದು ಸರಿಯಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.

ರಸ್ತೆ ನಿರ್ಮಾಣದ ಕುರಿತ ಸಾರ್ವಜನಿಕ ದೂರು ಮತ್ತು ಆಕ್ಷೇಪಗಳ ವಿಚಾರಣೆ ಇಲಾಖೆಯ ಆಯುಕ್ತರ ಮುಂದೆ ಇತ್ಯರ್ಥವಾಗುವವರೆಗೆ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ದೇವಸ್ಥಾನದ ಸಂರಕ್ಷಣಾ ವೇದಿಕೆ ಪುತ್ತೂರು ನಗರಸಭೆ ಪೌರಾಯುಕ್ತರನ್ನು ಒತ್ತಾಯಿಸಿದೆ. ನ್ಯಾಯಾಲಯದ ನಿರ್ದೇಶನ ಉಲ್ಲಂಘಿಸಿ ಕಾಮಗಾರಿ ಮುಂದುವರಿಸಿದರೆ ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದೂ ಎಚ್ಚರಿಸಿದೆ.

Ad Widget
Continue Reading

ಶಿಕ್ಷಣ

Vidyamata-ಕರಾವಳಿಯ ಯುವಜನತೆಯ ಉದ್ಯೋಗ ಸ್ವಪ್ನಕ್ಕೆ ‘ವಿದ್ಯಾಮಾತಾ’ ಆಸರೆ: ಬರಿ ಅಂಕಗಳಷ್ಟೇ ಅಲ್ಲ, ಬದುಕನ್ನು ಗೆಲ್ಲುವ ಕೌಶಲ್ಯವೇ ನಿಜವಾದ ಶಕ್ತಿ

Published

on



Ad Widget

Ad Widget

Ad Widget

Ad Widget

ಸ್ಪರ್ಧಾತ್ಮಕ ಜಾಗೃತಿಯಿಲ್ಲದ ಇಂತಹ ವಾತಾವರಣದಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಎಪಿಎಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ‘ವಿದ್ಯಾಮಾತಾ ಅಕಾಡೆಮಿ’ ನೂತನ ಪ್ರಯೋಗಗಳ ಮೂಲಕ ಯಶಸ್ಸು ಕಂಡು ಕರಾವಳಿಯಲ್ಲೇ ಪ್ರಥಮವೆನಿಸಿದೆ. ಇತ್ತೀಚೆಗೆ ಪ್ರಖ್ಯಾತ ‘Times of India’ ಇಂಗ್ಲಿಷ್ ದಿನಪತ್ರಿಕೆಯೂ ಸಹ ವಿದ್ಯಾಮಾತಾ ಅಕಾಡೆಮಿಯ ಈ ಶೈಕ್ಷಣಿಕ ಬದಲಾವಣೆಯ ಹಾದಿಯನ್ನು ವಿಶೇಷವಾಗಿ ಶ್ಲಾಘಿಸಿ ವರದಿ ಮಾಡಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಕರಾವಳಿ ಭಾಗದಲ್ಲಿ ಪದವೀಧರರ ಮಹಾಪೂರವಿದ್ದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಿವಿಲ್ ಸರ್ವೀಸಸ್ ಹಾಗೂ ರಕ್ಷಣಾ ಪಡೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈ ಭಾಗದ ಯುವಕರ ಭಾಗವಹಿಸುವಿಕೆ ಹಿಂದಿನಿಂದಲೂ ಕಡಿಮೆಯಿತ್ತು. ಹೆಚ್ಚಿನ ವಿದ್ಯಾರ್ಥಿಗಳು ಕೇವಲ ಸಾಂಪ್ರದಾಯಿಕ ಉದ್ಯೋಗಗಳು ಅಥವಾ ಗಲ್ಫ್ ದೇಶಗಳ ವಲಸೆಗೆ ಸೀಮಿತರಾಗಿದ್ದರು. ಸ್ಪರ್ಧಾತ್ಮಕ ಜಾಗೃತಿಯಿಲ್ಲದ ಇಂತಹ ವಾತಾವರಣದಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಎಪಿಎಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ‘ವಿದ್ಯಾಮಾತಾ ಅಕಾಡೆಮಿ’ ನೂತನ ಪ್ರಯೋಗಗಳ ಮೂಲಕ ಯಶಸ್ಸು ಕಂಡು ಕರಾವಳಿಯಲ್ಲೇ ಪ್ರಥಮವೆನಿಸಿದೆ. ಇತ್ತೀಚೆಗೆ ಪ್ರಖ್ಯಾತ ‘Times of India’ ಇಂಗ್ಲಿಷ್ ದಿನಪತ್ರಿಕೆಯೂ ಸಹ ವಿದ್ಯಾಮಾತಾ ಅಕಾಡೆಮಿಯ ಈ ಶೈಕ್ಷಣಿಕ ಬದಲಾವಣೆಯ ಹಾದಿಯನ್ನು ವಿಶೇಷವಾಗಿ ಶ್ಲಾಘಿಸಿ ವರದಿ ಮಾಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಸಾಮಾನ್ಯವಾಗಿ ದೊಡ್ಡ ಮಟ್ಟದ ಕೋಚಿಂಗ್ ಸಂಸ್ಥೆಗಳು ನೂರರಲ್ಲಿ ಒಬ್ಬರು IAS ಅಥವಾ KAS ಅಧಿಕಾರಿಯಾದರೆ ಆ ಯಶಸ್ಸನ್ನು ಮಾತ್ರ ದೊಡ್ಡದಾಗಿ ಬಿಂಬಿಸುತ್ತವೆ. ಆದರೆ, ಆ ಪ್ರಕ್ರಿಯೆಯಲ್ಲಿ ಸ್ಪರ್ಧೆಗಿಳಿದು ಸೋತ ಉಳಿದ 99 ವಿದ್ಯಾರ್ಥಿಗಳ ಭವಿಷ್ಯದ ಕಥೆಯೇನು ಎಂಬ ಆಳವಾದ ಸಾಮಾಜಿಕ ಪ್ರಶ್ನೆಯನ್ನು ವಿದ್ಯಾಮಾತಾ ಅಕಾಡೆಮಿಯ ಮ್ಯಾನೇಜಿಂಗ್ ಡೈರೆಕ್ಟರ್ ಭಾಗ್ಯೇಶ್ ರೈ ಮುಂದಿಟ್ಟಿದ್ದಾರೆ. ಒಬ್ಬ ವಿಜೇತನನ್ನು ರೂಪಿಸುವಷ್ಟೇ ಗಂಭೀರವಾಗಿ, ಅಲ್ಲಿ ಹಿನ್ನಡೆ ಅನುಭವಿಸುವ ಉಳಿದ 99 ವಿದ್ಯಾರ್ಥಿಗಳ ಬದುಕಿಗೂ ಭದ್ರತೆ ಮತ್ತು ಆತ್ಮವಿಶ್ವಾಸ ನೀಡುವುದು ನಮ್ಮ ಜವಾಬ್ದಾರಿ ಎಂಬುದು ಸಂಸ್ಥೆಯ ಮೂಲ ಮಂತ್ರವಾಗಿದೆ.

Ad Widget

Ad Widget <> Ad Widget

ಇಂದಿನ ಶಿಕ್ಷಣ ಪದ್ಧತಿಯಲ್ಲಿ ಕೇವಲ ಅಂಕಗಳ ಬೆನ್ನೇರುವ ಯುವಜನತೆಗೆ ಪ್ರಾಯೋಗಿಕ ಕೌಶಲ್ಯ, ಸಂವಹನ ಕಲೆ ಹಾಗೂ ವಾಸ್ತವ ಜಗತ್ತಿನ ಸವಾಲುಗಳನ್ನು ಎದುರಿಸುವ ತಾಕತ್ತು ಕೊರತೆಯಿದೆ. ಸ್ನಾತಕೋತ್ತರ ಪದವಿ ಪಡೆದರೂ ಕನಿಷ್ಠ ಸ್ವ-ಪರಿಚಯ ಮಾಡಿಕೊಳ್ಳಲು ಅಥವಾ ಕಂಪ್ಯೂಟರ್ ನಿರ್ವಹಿಸಲು ಬಾರದ ಇಂದಿನ ಸ್ಥಿತಿಯನ್ನು ಬದಲಾಯಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಸ್ವಾವಲಂಬನೆಯನ್ನು ತುಂಬುವ ಕೆಲಸ ಇಲ್ಲಿ ನಡೆಯುತ್ತಿದೆ.



Ad Widget

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಿರ್ಣಾಯಕ ಹಂತದಲ್ಲಿ ಸಮಯವನ್ನು ವ್ಯರ್ಥ ಮಾಡದಂತೆ ಸಂಸ್ಥೆಯು ‘ಕಲಿಕೆಯೊಂದಿಗೆ ಗಳಿಕೆ’ ಎನ್ನುವ ವಿನೂತನ ಯೋಜನೆಯನ್ನು ಜಾರಿಗೆ ತಂದಿದೆ. ಪಿಯುಸಿ (PUC) ಮುಗಿದ ಕೂಡಲೇ ದೂರಶಿಕ್ಷಣದ ಮೂಲಕ ಡಿಗ್ರಿ (ಬಿ.ಎ, ಬಿ.ಕಾಮ್, ಬಿ.ಬಿ.ಎ) ವ್ಯಾಸಂಗಕ್ಕೆ ದಾಖಲಾಗಿ, ಅದೇ ಮೂರು ವರ್ಷಗಳ ಅವಧಿಯಲ್ಲಿ ಐಎಎಸ್, ಕೆಎಎಸ್, ಬ್ಯಾಂಕಿಂಗ್, ಪೊಲೀಸ್ ಹಾಗೂ ರರಣಾ ಪಡೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮಾನಾಂತರ ತರಬೇತಿ ಪಡೆಯಲು ಇಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದರಿಂದ ವಿದ್ಯಾರ್ಥಿಯು ಪದವಿ ಮುಗಿಸುವ ವೇಳೆಗೆ ಸರ್ಕಾರದ ಉದ್ಯೋಗ ಅಥವಾ ಉನ್ನತ ಖಾಸಗಿ ವಲಯದಲ್ಲಿ ನೆಲೆಗೊಳ್ಳಲು ಸಂಪೂರ್ಣ ಸಿದ್ಧನಾಗಿರುತ್ತಾನೆ.

Ad Widget

Ad Widget

ವಿಶೇಷವಾಗಿ ಭಾರತೀಯ ಭೂಸೇನೆ (Agniveer), ವಾಯುಸೇನೆ, ನೌಕಾಸೇನೆ, ಅರೆಮಿಲಿಟರಿ ಪಡೆಗಳು, ಕರ್ನಾಟಕ ಪೊಲೀಸ್ ಹಾಗೂ ಅರಣ್ಯ ಇಲಾಖೆಗಳ ನೇಮಕಾತಿಗಾಗಿ ಯುವಕರಿಗೆ 17ನೇ ವಯಸ್ಸಿನಿಂದಲೇ ಸುವರ್ಣ ಅವಕಾಶಗಳಿವೆ. ಈ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕೇವಲ ಲಿಖಿತ ಪರೀಕ್ಷೆಯಷ್ಟೇ ಅಲ್ಲದೆ, ನುರಿತ ತರಬೇತುದಾರರಿಂದ ಮೈದಾನದಲ್ಲಿ ದೈಹಿಕ ಕ್ಷಮತೆ ಮತ್ತು ಕಠಿಣ ತರಬೇತಿಯನ್ನು ನೀಡಲಾಗುತ್ತಿದೆ. ಇದರೊಂದಿಗೆ ನವೋದಯ, ಮೊರಾರ್ಜಿ ದೇಸಾಯಿ ಪ್ರವೇಶ ಪರೀಕ್ಷೆಗಳು, KAR-TET, KSET, NET, HSTR, PSTR, GPSTR ನಂತಹ ಶೈಕ್ಷಣಿಕ ಹಾಗೂ ಬೋಧನಾ ಅರ್ಹತಾ ಪರೀಕ್ಷೆಗಳಿಗೂ ಇಲ್ಲಿ ಅತ್ಯುತ್ತಮ ತರಬೇತಿ ಲಭ್ಯವಿದೆ.

ನಿರ್ದೇಶಕಿ ರಮ್ಯಾ ಭಾಗ್ಯೇಶ್ ರೈ ಅವರ ನೇತೃತ್ವದಲ್ಲಿ ಸಂಸ್ಥೆಯು ಅತ್ಯಾಧುನಿಕ ಮೂಲಸೌಕರ್ಯಗಳನ್ನು ಒಳಗೊಂಡಿದೆ. ವಿದ್ಯಾರ್ಥಿಗಳು ದಿನದ 24 ಗಂಟೆಯೂ ನಿರಾಳವಾಗಿ ಓದಲು ‘ದೇವಿದ್ಯಾ’ 24×7 ಸದಾಶಿವ ಅಧ್ಯಯನ ಗ್ರಂಥಾಲಯ ಹಾಗೂ AI ಚಾಲಿತ ಡಿಜಿಟಲ್ ಇಂಟರಾಕ್ಟಿವ್ ಪ್ಯಾನಲ್‌ಗಳನ್ನು ಹೊಂದಿರುವ ‘ಸ್ತುತ್ಯ’ ಸ್ಮಾರ್ಟ್ ಕ್ಲಾಸ್‌ರೂಮ್‌ಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ.

ಇದರೊಂದಿಗೆ ಟ್ಯಾಲಿ ಪ್ರೈಮ್, ಪ್ರಾಯೋಗಿಕ ಅಕೌಂಟಿಂಗ್, ಗಲ್ಫ್ ವ್ಯಾಟ್ (Gulf VAT), ಡೇಟಾ ಅನಾಲಿಟಿಕ್ಸ್, ಕೋಡ್-ಆರ್ಕಿಟೆಕ್ಟ್ ಪ್ರೋಗ್ರಾಮಿಂಗ್ ಮತ್ತು ಸ್ಪೋಕನ್ ಇಂಗ್ಲಿಷ್ ತರಬೇತಿಗಳನ್ನು ನೀಡುವುದರ ಮೂಲಕ ಕರಾವಳಿಯ ಯುವಜನತೆಯನ್ನು ಜಾಗತಿಕ ಮಟ್ಟದ ಉದ್ಯೋಗಗಳಿಗೆ ಸಜ್ಜುಗೊಳಿಸಲಾಗುತ್ತಿದೆ. ಬರಿ ಅಂಕಗಳ ಕಾರ್ಖಾನೆಯಾಗದೆ, ಬದುಕಿನ ಪ್ರತಿ ಹಂತದಲ್ಲೂ ವಿದ್ಯಾರ್ಥಿಗೆ ಭರವಸೆಯ ದಾರಿದೀಪವಾಗುವ ಮೂಲಕ ವಿದ್ಯಾಮಾತಾ ಅಕಾಡೆಮಿಯು ಕರಾವಳಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಿದೆ.

Ad Widget
Continue Reading

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading