ದಕ್ಷಿಣ ಕನ್ನಡ
Pili Gobbu : ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ವಿಜಯ ಸಾಮ್ರಾಟ್ ಪುತ್ತೂರು ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ ಸಾರಥ್ಯದ ‘ಪಿಲಿಗೊಬ್ಬು’ ಸ್ಪರ್ಧೆ ಹಾಗೂ ಫುಡ್ ಫೆಸ್ಟ್ ಗೆ ಚಪ್ಪರ ಮುಹೂರ್ತ
ಪುತ್ತೂರು : ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ದ.ಕ ಜಿಲ್ಲೆಯ ಆಹ್ವಾನಿತ ಹತ್ತು ತಂಡಗಳ ‘ಪಿಲಿಗೊಬ್ಬು’ ಸ್ಪರ್ಧೆ ಹಾಗೂ ಫುಡ್ ಫೆಸ್ಟ್ ಗೆ ಭರದ ಸಿದ್ದತೆ ನಡೆಯುತ್ತಿದೆ. ವಿಜಯ ಸಾಮ್ರಾಟ್ ಪುತ್ತೂರು ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ ನೇತೃತ್ವದಲ್ಲಿ ಅ.22 ರಂದು ನಡೆಯಲಿದೆ. ಈಗಾಗಲೇ ಈ ಕುರಿತು ಸಮಿತಿ ರಚಿಸಲಾಗಿದ್ದು, ಇತ್ತೀಚೆಗೆ ಆಮಂತ್ರಣ ಪತ್ರಿಕೆ ಬಿಡುಗಡೆಯೂ ನಡೆದಿತ್ತು.
ಸೆ 30 ರಂದು ವಿಜಯ ಸಾಮ್ರಾಟ್ (ರಿ.) ಆಶ್ರಯದಲ್ಲಿ ಕಾರ್ಯಕ್ರಮ ನಡೆಯುವ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಚಪ್ಪರ ಮುಹೂರ್ತ ನಡೆಯಿತು. ‘ಪಿಲಿಗೊಬ್ಬು’ ಇದರ ಗೌರವಾಧ್ಯಕ್ಷ ಸಹಜ್ ರೈ ಬಳಜ್ಜ ರವರ ಮುಂದಾಳತ್ವದಲ್ಲಿ ನಡೆದ ಚಪ್ಪರ ಮುಹೂರ್ತದ ಧಾರ್ಮಿಕ ವಿದಿ – ವಿಧಾನಗಳನ್ನು ಪುರೋಹಿತರಾದ ಉದಯ ಕೃಷ್ಣ ಭಟ್ ನೆರವೇರಿಸಿದರು
ಈ ವೇಳೆ ನಾಗರಾಜ್ ನಡುವಡ್ಕ ಶರತ್ ಕುಮಾರ್ ಮಾಡಾವು, ಶಂಕರ್ ಭಟ್ ಈಶಾನ್ಯ, ರಾಜೇಶ್ ಗೌಡ, ಅಶೋಕ್ ಅಡೂರು, ಪ್ರೀತಮ್ ರೈ ಪೆರ್ನೆ, ಮಧು ಕುಮಾರ್, ರಾಜೇಶ್ ಬನ್ನೂರು, ರಾಧಾಕೃಷ್ಣ ಬೋರ್ಕರ್, ಅಜಿತ್ ರೈ ಹೊಸಮನೆ ಸಹಿತ ಹಲವರು ಉಪಸ್ಥಿತರಿದ್ದರು.
ವಿಶೇಷತೆ
ಈ ಪಿಲಿ ಗೊಬ್ಬು ಕಾರ್ಯಕ್ರಮದಲ್ಲಿ ಆಹ್ವಾನಿತ 10 ತಂಡಗಳಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ. 15 ಹುಲಿಗಳಿಗೆ ಮಾತ್ರ ಒಂದು ತಂಡದಲ್ಲಿ ಅವಕಾಶವಿದ್ದು, ಪ್ರತಿ ತಂಡಕ್ಕೆ 23 ನಿಮಿಷಗಳ ಅವಕಾಶ ನೀಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ತಾರ ಮೆರಗು ಇರಲಿದ್ದು, ಸ್ಯಾಂಡಲ್‌ವುಡ್ ಮತ್ತು ಕೋಸ್ಟಲ್‌ವುಡ್ ನ ನಟ ನಟಿಯರು ಭಾಗವಹಿಸಲಿದ್ದಾರೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
-
ನಿಧನ ವಾರ್ತೆ8 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು7 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ8 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ8 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ8 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಮಂಗಳೂರು4 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ9 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?
-
Uncategorized10 hours agoCJP protest-ಇಂದು CJP ಪ್ರತಿಭಟನೆ : ದೆಹಲಿಗೆ ಬರಬೇಕಾಗಿದ್ದ 250 ರೈಲು ರದ್ದು, ಹಲವು ರೈಲಿನ ವೇಳಾಪಟ್ಟಿ ಬದಲಾವಣೆ : ಮೆಟ್ರೋ ಸಂಚಾರ ಸ್ಥಗಿತ – ಇಂಟರ್ ನೆಟ್ ಬಂದ್..! ‘ಹೆದರಿದ್ರಾ ಮೋದಿಜೀ..?’ ಎಂದ CJP




















