Connect with us

ದಕ್ಷಿಣ ಕನ್ನಡ

ಶ್ರೀಕ್ಷೇತ್ರ ಒಡಿಯೂರಿನಲ್ಲಿ ಭೀಕರ ಅಪಘಾತ – ಲಾರಿ ಉರುಳಿ ಬಿದ್ದು ನಾಲ್ವರಿಗೆ ಗಂಭೀರ ಗಾಯ

Published

on



Ad Widget

Ad Widget

Ad Widget

Ad Widget

ಕನ್ಯಾನ :   ಮಾರ್ಬಲ್‌ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ  ಪ್ರಸಿದ್ದ ತೀರ್ಥ ಕ್ಷೇತ್ರ ಒಡಿಯೂರಿನಲ್ಲಿ ನಡೆದಿದೆ. ಶ್ರೀಕ್ಷೇತ್ರ ಒಡಿಯೂರಿನ ಪ್ರವೇಶ ದ್ವಾರದಲ್ಲಿರುವ ಕಟ್ಟಡಕ್ಕೆ ಅಪಘಾತದಿಂದ ತೀವ್ರ  ಹಾನಿಯಾಗಿದೆ.

Ad Widget

Ad Widget

Ad Widget

Ad Widget

ಅಪಘಾತದ ತೀವ್ರತೆಗೆ  ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದೆ.   ಗಂಭೀರ ಗಾಯಗೊಂಡ ಗಾಯಾಳುಗಳನ್ನು ನಾಲ್ಕು ಆಂಬ್ಯುಲೆನ್ಸ್‌ ಮೂಲಕ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳುಗಳು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದೆ.  ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಒಡಿಯೂರು ಕ್ಷೇತ್ರಕ್ಕೆ ಸಂಬಂಧಿಸಿದ  ಶಾಲೆಯೊಂದಕ್ಕೆ ಹಾಸಲು ತಂದ ಮಾರ್ಬಲನ್ನು  ಅನ್ ಲೋಡ್ ಮಾಡಲು ಲಾರಿಯನ್ನು  ಸರಿಯಾಗಿ ನಿಲ್ಲಿಸುವ  ವೇಳೆ  ಅದು ನಿಯಂತ್ರಣ ತಪ್ಪಿ  ಕೆಳಕ್ಕುರುಳಿದೆ.  ಈ ವೇಳೆ ಲಾರಿಯೂ  ಶ್ರೀಕ್ಷೇತ್ರ ಒಡಿಯೂರಿನ ಪ್ರವೇಶ ದ್ವಾರದ ಪಕ್ಕದ ಕಟ್ಟಡದ ಮೇಲೆ ಬಿದ್ದಿದೆ.  ಕ್ಷೇತ್ರದಲ್ಲಿ ಇತ್ತೀಚೆಗೆ ನಿರ್ಮಾಣವಾದ ಪುಷ್ಕರಣಿ ಸಮೀಪ  ಲಾರಿ ಹಾಗೂ ಕಟ್ಟಡದ  ತುಣುಕುಗಳು ಬಿದ್ದಿವೆ.  ಅಪಘಾತದ ತೀವ್ರತೆಗೆ ಕ್ಷೇತ್ರದ ಸ್ವಾಗತ ಕಮಾನು ಧರಶಾಯಿಯಾಗಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

Ad Widget

Ad Widget <> Ad Widget

ಗಾಯಗೊಂಡವರು ಉತ್ತರ ಬಾರತ ಮೂಲದ ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದೆ.  ಭಾರ ತುಂಬಿದ ಲಾರಿಯನ್ನು ಇಳಿಜಾರು ಪ್ರದೇಶದಲ್ಲಿ ಇಳಿಸಿದ್ದೆ ಘಟನೆಗೆ ಕಾರಣ. ಅಪಘಾತಕ್ಕಿಡಾದ ವಾಹನ  ಕೆ ಎ 19 ಎಬಿ 5458 ದಾಖಲಾತಿ ಹೊಂದಿದ ಲಾರಿಯಾಗಿದ್ದು, ಮಹಮ್ಮದ್‌ ಝಕಾರಿಯ ಎಂಬವರಿಗೆ ಸೇರಿರುವುದಾಗಿ ಹೇಳಲಾಗುತ್ತಿದೆ.  ಲಾರಿಯೂ ಬೈಕಂಪಾಡಿ ಇಂಡಸ್ಟ್ರೀಯಲ್‌ ಏರಿಯಾದಿಂದ ಮಾರ್ಬಲ್‌ ಹೇರಿಕೊಂಡು ಬಂದಿತ್ತು.



Ad Widget

ನಾಲ್ಕು ವರ್ಷದ ಹಿಂದೆ ಕ್ಷೇತ್ರದ ಮುಂಭಾಗ ಅನ್ನ ಛತ್ರ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭ ಅಲ್ಲಿ ಕೆಲಸ ಮಾಡುತ್ತಿದ್ದ  ಕೂಲಿ ಕಾರ್ಮಿಕರ ಮೇಲೆ  ಮೇಲ್ಬಾಗ ಹಾಕಿದ್ದ ಮಣ್ಣಿನ ರಾಶಿ ಕುಸಿದು ಮೂವರು ದುರ್ಮರಣಕ್ಕಿಡಾಗಿದ್ದರು.

Click to comment

Leave a Reply

ಕಾರ್ಯಕ್ರಮಗಳು

‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್‌ನಲ್ಲಿ ʻಹ್ಯಾವೆಲ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್ʼ ಶುಭಾರಂಭ

Published

on



Ad Widget

Ad Widget

Ad Widget

Ad Widget

ಪುತ್ತೂರು ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್‌ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ. ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್‌ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್‌ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್‌ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget <> Ad Widget

ಹ್ಯಾವೆಲ್ಸ್ ಕಂಪನಿಯ ವಿದ್ಯುತ್ ಉಪಕರಣಗಳು ಹಾಗೂ ಗೃಹ ಬಳಕೆಯ ವಿವಿಧ ಉತ್ಪನ್ನಗಳು ಮತ್ತು ಪರಿಹಾರಗಳ ಸಂಪೂರ್ಣ ಶ್ರೇಣಿಯನ್ನು ಗ್ರಾಹಕರು ವೀಕ್ಷಿಸಿ, ಮಾಹಿತಿ ಪಡೆಯಲು ಇಲ್ಲಿ ಅವಕಾಶವಿರಲಿದೆ.



Ad Widget

1997ರಿಂದ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯು ಈ ನೂತನ ಕೇಂದ್ರದ ಮೂಲಕ ಗ್ರಾಹಕರಿಗೆ ಹ್ಯಾವೆಲ್ಸ್ ಉತ್ಪನ್ನಗಳ ಪರಿಚಯ ಹಾಗೂ ಉತ್ತಮ ಖರೀದಿ ಅನುಭವ ಒದಗಿಸುವ ಉದ್ದೇಶ ಹೊಂದಿದೆ.

Ad Widget

Ad Widget

ಹೆಚ್ಚಿನ ಮಾಹಿತಿಗಾಗಿ 94493 24436 ಅನ್ನು ಸಂರ್ಪಕಿಸಬಹುದು.

Ad Widget
Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ‘ಬಿಜ್‌ಫೆಸ್ಟ್ 2K26’

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್‌ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು, ಅ. 7: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್‌ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಪಿಯು ಹಾಗೂ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ, ವ್ಯವಹಾರಿಕ ಸೃಜನಶೀಲತೆ, ಸಂವಹನ ಕೌಶಲ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಿದ ಮೇಳದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ. ಆಂಟನಿ ಪ್ರಕಾಶ್ ಮೊಂತೆರೋ ಅಧ್ಯಕ್ಷತೆ ವಹಿಸಿದ್ದ ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಫಿನ್‌ಸ್ಟ್ರಾಟ್ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್‌ನ ಸೀನಿಯರ್ ಅಸೋಸಿಯೇಟ್ ಜೋಸ್ವಿತಾ ಲೊರೇನ್ ಲೋಬೊ ಉದ್ಘಾಟಕರಾಗಿ ಭಾಗವಹಿಸಿದರು.



Ad Widget

ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಕಲಿಕೆ, ನವೀನ ಚಿಂತನೆ, ಉದ್ಯಮಶೀಲತೆ ಹಾಗೂ ಕೌಶಲಾಭಿವೃದ್ಧಿಯನ್ನು ಬೆಳೆಸುವ ಅಗತ್ಯವನ್ನು ಗಣ್ಯರು ಒತ್ತಿಹೇಳಿದರು. ಸಾಂಪ್ರದಾಯಿಕ ತರಗತಿ ಕಲಿಕೆಯನ್ನು ಮೀರಿ, ನೈಜ ಜಗತ್ತಿನ ವ್ಯವಹಾರಿಕ ಸನ್ನಿವೇಶಗಳಲ್ಲಿ ತಮ್ಮ ಜ್ಞಾನ ಮತ್ತು ಕೌಶಲಗಳನ್ನು ಅನ್ವಯಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವುದು ಬಿಜ್‌ಫೆಸ್ಟ್‌ನ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಲಾಯಿತು.

Ad Widget

Ad Widget

ಮೇಳದಲ್ಲಿ ವಾಣಿಜ್ಯ ಹಾಗೂ ವ್ಯವಹಾರಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳು ವಿದ್ಯಾರ್ಥಿಗಳ ವಿಶ್ಲೇಷಣಾತ್ಮಕ ಸಾಮರ್ಥ್ಯ, ಉದ್ಯಮಶೀಲ ಚಿಂತನೆ, ಸೃಜನಶೀಲತೆ, ಹಣಕಾಸು ಅರಿವು, ಸಂವಹನ ಕೌಶಲ, ನಾಯಕತ್ವ, ತಂಡಭಾವನೆ ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಪರೀಕ್ಷಿಸುವಂತಿದ್ದವು. ವಿವಿಧ ಶಿಕ್ಷಣ ಸಂಸ್ಥೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು, ಆರೋಗ್ಯಕರ ಸ್ಪರ್ಧೆ ಹಾಗೂ ಸಹಕಾರದ ವಾತಾವರಣ ನಿರ್ಮಿಸಿದರು.

ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಪಿಯು ಕಾಲೇಜು, ಪುತ್ತೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ಪಡೆದುಕೊಂಡಿತು. ಅಂಬಿಕಾ ಪಡವಿ ಪೂರ್ವ ವಿದ್ಯಾಲಯ, ಪುತ್ತೂರು ಸಮಗ್ರ ರನ್ನರ್‌ಅಪ್ ಸ್ಥಾನ ಗಳಿಸಿತು.

ಪದವಿ ವಿಭಾಗದಲ್ಲಿ ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರೆ, ತ್ರಿಶಾ ಕಾಲೇಜು, ಮಂಗಳೂರು ಸಮಗ್ರ ರನ್ನರ್‌ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು. ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ತೋರಿದ ಸತತ ಸಾಧನೆ, ಸಿದ್ಧತೆ, ತಂಡಕಾರ್ಯ ಹಾಗೂ ಪ್ರತಿಭೆಗೆ ಈ ಫಲಿತಾಂಶ ಸಾಕ್ಷಿಯಾಯಿತು.

ವಿಜೇತರಿಗೆ ಪ್ರಶಸ್ತಿ ಪ್ರದಾನ

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್ ವಹಿಸಿದ್ದರು. ಪುತ್ತೂರಿನ ಸಿಗ್ನೇಚರ್ ಮೆನ್ಸ್ ವೆಡ್ಡಿಂಗ್ ಸ್ಟುಡಿಯೊದ ಮಾಲೀಕ ಇಶಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವಿವಿಧ ಸ್ಪರ್ಧೆಗಳ ವಿಜೇತರು ಹಾಗೂ ರನ್ನರ್‌ಅಪ್‌ಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೇಳದಲ್ಲಿ ಭಾಗವಹಿಸಿದ ಎಲ್ಲ ಶಿಕ್ಷಣ ಸಂಸ್ಥೆಗಳ ಉತ್ಸಾಹಭರಿತ ಪಾಲ್ಗೊಳ್ಳುವಿಕೆಯನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್

Published

on



Ad Widget

Ad Widget

Ad Widget

Ad Widget

ಪುತ್ತೂರು ನಗರದ ಕೆಎಸ್‌ಆರ್‌ಟಿಸಿ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಮೈ ಡ್ರೆಸ್ ಕೋಡ್’ ಬಟ್ಟೆ ಮಳಿಗೆಯ ಶುಭಾರಂಭ ಸಮಾರಂಭವು ಅ.15 ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ಕೆಎಸ್‌ಆರ್‌ಟಿಸಿ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಮೈ ಡ್ರೆಸ್ ಕೋಡ್’ ಬಟ್ಟೆ ಮಳಿಗೆಯ ಶುಭಾರಂಭ ಸಮಾರಂಭವು ಅ.15 ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ಶುಭಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ದಕ್ಷಿಣ ಕನ್ನಡದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ವಿಜಯ ಸಾಮ್ರಾಟ್ ಪುತ್ತೂರಿನ ಸಂಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಯು.ಆರ್. ಪಾರ್ಪಟೀಸ್ ಸಂಸ್ಥಾಪಕ ಉಜ್ವಲ್ ಪ್ರಭು, ಪುತ್ತೂರು ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಸಿಜ್ಲರ್ಸ್ ಗ್ರೂಪ್ ಮಾಲೀಕ ಪ್ರಸನ್ನ ಕುಮಾರ್ ಶೆಟ್ಟಿ, ಹಿಂದೂ ಮುಖಂಡ ಮುರಳಿ ಕೃಷ್ಣ ಹಸಂತಡ್ಕ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚನಿಲ ಹಾಗೂ ಹಿಂದೂಸ್ಥಾನ್ ಪ್ರೊಮೋಟರ್ಸ್ ಆ್ಯಂಡ್ ಡೆವಲಪರ್ಸ್ ಪ್ರೈ.ಲಿ.ಯ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಇಬ್ರಾಹಿಂ ಮೊಹಿದೀನ್ ಅವರು ಭಾಗವಹಿಸಲಿದ್ದಾರೆ.

Ad Widget

Ad Widget <> Ad Widget

ಮಳಿಗೆಯ ಮಾಲೀಕ ರಮೇಶ್ ಅವರು ಗ್ರಾಹಕರು, ಹಿತೈಷಿಗಳು ಹಾಗೂ ಸಾರ್ವಜನಿಕರನ್ನು ಶುಭಾರಂಭ ಸಮಾರಂಭಕ್ಕೆ ಆತ್ಮೀಯವಾಗಿ ಆಹ್ವಾನಿಸಿದ್ದಾರೆ.



Ad Widget

ಹೆಚ್ಚಿನ ಮಾಹಿತಿಗಾಗಿ 63631 66808 / 95352 47400 ಅನ್ನು ಸಂರ್ಪಕಿಸಬಹುದು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading