Connect with us

ರಾಷ್ಟ್ರೀಯ

“ಹಿಂದೂ ಎದ್ದ ಪರಿಣಾಮ ದೇಶದಲ್ಲಿ INDIA ಮಲಗುತ್ತಿದೆ, ಭಾರತ ಎದ್ದೇಳುತ್ತಿದೆ ” – ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಜ್ಯೇಷ್ಠ ಪ್ರಚಾರಕ್ ಸು. ರಾಮಣ್ಣ

Published

on



Ad Widget

Ad Widget

Ad Widget

Ad Widget

ವಿಶ್ವ ಹಿಂದೂ ಪರಿಷದ್ 60ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿರುವ ಹಿನ್ನಲೆಯಲ್ಲಿ ದೇಶದಾದ್ಯಂತ ಶೌರ್ಯ ಜಾಗರಣಾ ರಥಯಾತ್ರೆ ಹಮ್ಮಿಕೊಳ್ಳಲಾಗಿದ್ದು ಸೆ. 7 ರಂದು ಸಂಜೆ ಉಪ್ಪಿನಂಗಡಿಯ ಮೂಲಕ ಪುತ್ತೂರಿಗೆ ಆಗಮಿಸಿತು. ಬೊಳುವಾರು ಆಂಜನೇಯ ಮಂತ್ರಾಲಯದ ಬಳಿ ಅದನ್ನು ಪುತ್ತೂರು ಭಾಗದ ಸಂಘಟಕರು ಆತ್ಮೀಯವಾಗಿ ಸ್ವಾಗತಿಸಿದರು.

Ad Widget

Ad Widget

Ad Widget

Ad Widget

ಬಳಿಕ ಆಕರ್ಷಕ ಶೋಭಾಯಾತ್ರೆಗೆ ಹಿರಿಯರಾದ ಮೊಗರೋಡಿ ಬಾಲಕೃಷ್ಣ ರೈ ತೆಂಗಿನ ಕಾಯಿ ಒಡೆದು ಚಾಲನೆ ನೀಡಿದರು. ಮಹಿಳೆಯರು ಆರತಿ ಬೆಳಗಿದರು. ರಸ್ತೆಯ ಇಕ್ಕೆಲೆಗಳಲ್ಲಿ ನಿಂತವರು ಪುಷ್ಪ ವೃಷ್ಠಿಯನ್ನು ಮಾಡಿದರು. ರಾಷ್ಟ್ರ ವೀರ ನಾಯಕರ ಭಾವಚಿತ್ರದ ವಾಹನಗಳು, ವಯಲಿನೊಂದಿಗೆ ಚೆಂಡೆ ಮೇಳ ಜಾಥದ ಪ್ರಧಾನ ಆಕರ್ಷಣೆ ಆಗಿತ್ತು. ರಥಯಾತ್ರೆಯು ಚೆಂಡೆ ಮೇಳ, ಶಂಖನಾದ, ಹಲವಾರು ವೀರ ಪರಾಕ್ರಮಿಗಳ ವೇಷವನ್ನು ಧರಿಸಿದವರೊಂದಿಗೆ ಜತೆಗೂಡಿ ಸಾಗಿಬಂದು ಕಿಲ್ಲೆ ಮೈದಾನಕ್ಕೆ ಮುಖ್ಯರಸ್ತೆಯ ಮೂಲಕ ಸಾಗಿತು.

Ad Widget

Ad Widget

Ad Widget alt="Ad Widget"/>

Ad Widget

ಹಿರಿಯರಾದ ಯು. ಪೂವಪ್ಪ, ಭಾಸ್ಕರ್ ಸುಳ್ಯ, ವಿಧಾನ ಪರಿಷತ್ತು ಸದಸ್ಯ ಪ್ರತಾಪಸಿಂಹ ನಾಯಕ್, ಶಾಸಕ ಹರೀಶ್ ಪೂಂಜಾ, ಮಾಜಿ ಶಾಸಕ ಸಂಜೀವ ಮಠಂದೂರು, ವಿಹಿಂಪ ಜಿಲ್ಲಾ ಸಹಸಂಚಾಲಕ ಶ್ರೀಧರ್ ತೆಂಕಿಲ, ಸಂಘಟನೆಯ ಮುಖಂಡರಾದ ಸೀತಾರಾಮ ಶೆಟ್ಟಿ, ಗೋಪಾಲಕೃಷ್ಣ ಹೇರಳೆ, ರಾಜೇಶ್ ಬನ್ನೂರು, ಶಶಿಕುಮಾರ್ ಬಾಲ್ಯಟ್ಟು, ಚಂದ್ರಶೇಖರ್ ಬಪ್ಪಳಿಗೆ, ಸಂಘಟನೆಗಳ ಪ್ರಮುಖರು ಮೆರವಣಿಗೆಯಲ್ಲಿ  ಪಾಲ್ಗೊಂಡರು.

Ad Widget

Ad Widget <> Ad Widget

ಮುಸಲ್ಮಾನರ ತುಷ್ಟಿಕರಣ



Ad Widget

“ಪ್ರಸ್ತುತ ದೇಶದಲ್ಲಿ ಹಿಂದೂ ಮೂರ್ಚೆಯಿಂದ ಎದ್ದಿದ್ದಾನೆ. ಹೀಗಾಗಿ INDIA ಮಲಗುತ್ತಿದೆ ಭಾರತ ಎದ್ದೇಳುತ್ತಿದೆ. ಆದರೇ ಹಿಂದೂಗಳು ಸಂಪೂರ್ಣವಾಗಿ ಮೈಮರೆವಿನ ಸ್ಥಿತಿಯಿಂದ ಹೊರಗೆ ಬಂದಿಲ್ಲ. ಹಿಂದೂ ಎದ್ದರೆ ಹನುಮಂತ, ಮಲಗಿದ್ದರೆ ಕುಂಭಕರ್ಣ. ಹೀಗಾಗಿ ಹಿಂದೂವನ್ನು ಜಾಗೃತ ಸ್ಥಿತಿಯಲ್ಲಿಡಲು ಶೌರ್ಯ ಶೌರ್ಯ ಜಾಗರಣ ರಥಯಾತ್ರೆ ನಡೆಸಲಾಗುತ್ತಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಜ್ಯೇಷ್ಠ ಪ್ರಚಾರಕ್ ಸು. ರಾಮಣ್ಣ ಹೇಳಿದರು.

Ad Widget

Ad Widget

ಅವರು ಶನಿವಾರ ಕಿಲ್ಲೆಮೈದಾನದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ನಡೆದ ಶೌರ್ಯ ಜಾಗರಣ ರಥಯಾತ್ರೆಯ ಅಂಗವಾಗಿ ಬೃಹತ್ ಹಿಂದೂ ಶೌರ್ಯ ಸಂಗಮದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಸ್ವಾತಂತ್ರ್ಯಕ್ಕೆ ಮೊದಲು ರಾಷ್ಟ್ರೀಯತೆಗಾಗಿ ದೇಶದಲ್ಲಿ ರಾಜಕಾರಣ ಮಾಡಲಾಯಿತು. ಆದರೇ ಸ್ವಾತಂತ್ರ್ಯ ಸಿಕ್ಕ ಬಳಿಕ ಅಧಿಕಾರ ರಾಜಕಾರಣ ( ಪವರ್‌ ಪಾಲಿಟಿಕ್ಸ್‌ ) ನಡೆಯಿತು. ರಾಷ್ಟ್ರೀಯತೆಯ ರಾಜಕಾರಣವನ್ನು ಸರ್ದಾರ್‌ ವಲ್ಲಭ ಬಾಯ್‌ ಪಟೇಲ್‌ ಮಾಡಿದರೇ, ಪ್ರಧಾನಿ ನೆಹರು ಅಧಿಕಾರದ ರಾಜಕಾರಣ ಮಾಡಿದರು. ರಾಷ್ಟ್ರೀಯತೆಯ ಪ್ರತಿಪಾದಕ ಭಾರತದ ಮೊದಲ ರಾಷ್ಟ್ರಪತಿ ಡಾ| ರಾಜೇಂದ್ರ ಪ್ರಸಾದ್‌ ಸೋಮನಾಥ ಮಂದಿರಕ್ಕೆ ಭೇಟಿ ನೀಡಲು ಮುಂದಾದರೇ ಅದನ್ನು ಜಾತ್ಯತೀತತೆಯ ಹೆಸರಿನಲ್ಲಿ ತಡೆಯುವ ವಿಫಲ ಪ್ರಯತ್ನ ನೆಹರು ಮಾಡಿದರು.

ಆ ಬಳಿಕ ಕಾಂಗ್ರೆಸ್‌ ಅಧಿಕಾರಕ್ಕಾಗಿ ಮುಸಲ್ಮಾನರ ತುಷ್ಟಿಕರಣ ಮಾಡಿದರು. ಜಾತಿ ಭಾವನೆಯನ್ನು ಕೆರಳಿಸಿ ಹಿಂದೂ ಸಮಾಜವನ್ನು ಒಡೆಯುವ ಕೆಲಸವಾಯಿತು. ಆದರೇ ಮುಸಲ್ಮಾನರು ಒಟ್ಟಾಗಿ ವೋಟು ಮಾಡುತ್ತಾರೆ ಅಲ್ವಾ? ಎಂದು ಪ್ರಶ್ನಿಸಿದ ಅವರು ಸ್ವಾತಂತ್ರ್ಯ ಸಿಕ್ಕ ಬಳಿಕ ಸ್ಥಾಪನೆಯಾದ ಜನ ಸಂಘ ರಾಷ್ಟ್ರೀಯತೆಯ ರಾಜಕಾರಣ ಮಾಡಿತು ಎಂದು ವಿವರಿಸಿದರು.

ಸಿಖ್‌ ಪಂಥವನ್ನು ನಷ್ಟ ಮಾಡಿರುವ ದುಷ್ಟರು ಮುಸಲ್ಮಾನರು

ರಾಜಕೀಯ ಪಕ್ಷಗಳ ಮುಸ್ಲಿಂರ ತುಷ್ಟಿಕರಣ ಎಲ್ಲಿಯವರೆಗೆ ಹೋಯಿತು ಎನ್ನುವುದಕ್ಕೆ ಅರ್ಥ ಶಾಸ್ತ್ರ ತಜ್ಞ ಎಂದು ಕರೆಯಿಸಲ್ಪಡುವ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರು ನೀಡಿದ ಹೇಳಿಕೆ ಒಂದು ಉದಾಹರಣೆ. ಸಿಖ್‌ ಪಂಥವನ್ನು ಸಂಪೂರ್ಣವಾಗಿ ನಷ್ಟ ಮಾಡಿರುವಂತಹ ದುಷ್ಟರು ಮುಸಲ್ಮಾನರು. ಅಂತಹ ಮುಸಲ್ಮಾನರ ಬಗ್ಗೆ ಈ ಸಿಖ್‌ ಪ್ರಧಾನಮಂತ್ರಿ ಹೇಳುತ್ತಾರೆ ” ದೇಶದ ಸಂಪತ್ತಿನ ಮೇಲೆ ಮೊದಲ ಅಧಿಕಾರ ಇರಬೇಕಾದದ್ದು ಮುಸಲ್ಮಾನರಿಗೆಂದು ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ತುಷ್ಟಿಕರಣದ ರಾಜಕಾರಣ

ರಾಜ್ಯದಲ್ಲಿ ನಾಲ್ಕೆ ತಿಂಗಳಲ್ಲಿ ತುಷ್ಟಿಕರಣದ ರಾಜಕಾರಣ ವಿಜ್ರಂಭಿಸುತ್ತಿದೆ. ಶಿವಮೊಗ್ಗದಲ್ಲಿ ಕಲ್ಲೆಸದವರ ಪರ ಸರಕಾರ ನಿಂತಿದೆ ಯಾರೋ ನಾಲ್ಕು ಜನ ಕಲ್ಲೆಸೆದರು, ಅದರಲ್ಲಿ ಒಂದು ಎಸ್ಪಿ ಮೇಲೆ ಬಿದ್ದಿದೆ ಎಂದು ರಾಜ್ಯದ ಸರಕಾರ ಹೇಳುತ್ತಿದೆ. ಕಲ್ಲು ಎಸೆದವರಿಗೆ ಬೇರೆ ಲಾಯರ್‌ ಬೇಡ. ಸರಕಾರವೇ ಅವರಿಗೆ ಲಾಯರ್‌ ಎಂದು ಅವರು ವ್ಯಂಗ್ಯವಾಡಿದರು.

ರಾಷ್ಟ್ರೀಯತೆಗಾಗಿ ಧರ್ಮ ಸಂರಕ್ಷಣೆಯ ಹೋರಾಟಕ್ಕೆ ಹಿಂದು ಮುನ್ನುಗ್ಗಬೇಕಾಗಿದೆ. ರಾಮಾಯಣ ರಾಷ್ಟ್ರೀಯ ಗ್ರಂಥವಾಗಿದ್ದು, ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮನ ಮಂದಿರ ರಾಷ್ಟ್ರ ಮಂದಿರವಾಗುವ ಜತೆಗೆ ರಾಷ್ಟ್ರೀಯ ತೀರ್ಥ ಕ್ಷೇತ್ರವಾಗಿದೆ. ಆಂಜನೇಯನ ಶೌರ್ಯ ಹಾಗೂ ಶೀಲ ವ್ಯಕ್ತಿತ್ವದಲ್ಲಿ ತುಂಬಿಕೊಳ್ಳಬೇಕು. ಶೀಲವಿರುವ ಶೌರ್ಯಯಿಂದ ಕಲ್ಯಾಣ ಕಾರ್ಯ ಸಾಧ್ಯ ಎಂದು ಸು. ರಾಮಣ್ಣ ಹೇಳಿದರು.

ತತ್ವ ಪೂಜೆ ನಡೆಯಲಿ

ತತ್ವ ಪೂಜೆ ನಡೆಯಬೇಕು ಹೊರತು ವ್ಯಕ್ತಿ ಪೂಜೆಯಾಗಬಾರದು. ಶ್ರೀರಾಮ ರಾಷ್ಟ್ರೀಯ ಮೂರ್ತರೂಪನಾಗಿದ್ದು, ರಾಷ್ಟ್ರೀಯತೆಯ ರಾಜಕಾರಣ ನಡೆಯಬೇಕಾಗಿದೆ. ವಿಶ್ವಾಸ, ನಂಬಿಕೆಗೆ ಮುಪ್ಪು ಬರಬಾರದು. ಅದು ಮರಳಿ ಅರಳುವ ಕಾರ್ಯ ನಡೆಯಬೇಕು. ನಿದ್ದೆಯಲ್ಲಿರುವವರನ್ನು ಎಚ್ಚರಿಸುವ ಕೆಲಸವಾಗಬೇಕು. ಮಗ್ಗಲು ಬದಲಿಸುತ್ತಿರುವ ದೇಶದಲ್ಲಿ ಹಿಂದು ಎದ್ದು ನಿಲ್ಲಬೇಕಾಗಿದೆ. ಅಧಿಕಾರಕ್ಕಾಗಿ ಹಪಹಪಿಸಿದ ಹನುಮಂತನನ್ನು ಬಜರಂಗಳದ ಕಾರ್ಯಕರ್ತರು ಆದರ್ಶವಾಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ವಿಶ್ವ ಹಿಂದೂ ಪರಿಷದ್ ಕರ್ನಾಟಕ ಪ್ರಾಂತ ಉಪಾಧ್ಯಕ್ಷ ಯು. ಪೂವಪ್ಪ ವಹಿಸಿದ್ದರು.

ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲೆಯ ಅಧ್ಯಕ್ಷ ಕೃಷ್ಣಪ್ರಸನ್ನ, ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹಸಂಚಾಲಕ ಲತೀಶ್ ಗುಂಡ್ಯ, ಪುತ್ತೂರು ನಗರ ಪ್ರಖಂಡ ಸಂಯೋಜಕ ಜಯಂತ್ ಕುಂಜೂರುಪಂಜ, ಉಪ್ಪಿನಂಗಡಿ ಪ್ರಖಂಡ ಸಂಯೋಜಕ ಸಂತೋಷ್, ಬೆಳ್ತಂಗಡಿ ಪ್ರಖಂಡ ಸಂಯೋಜಕ ಸಂತೋಷ್ ಅತ್ತಾಜೆ, ಶೌರ್ಯ ಜಾಗರಣ ರಥಯಾತ್ರೆಯ ಸ್ವಾಗತ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಬೊಟ್ಯಾಡಿ, ಸಂಚಾಲಕ ಕೃಷ್ಣ ಪ್ರಸಾದ್ ಬೆಟ್ಟ ಉಪಸ್ಥಿತರಿದ್ದರು.

ಶೌರ್ಯ ಜಾಗರಣ ರಥಯಾತ್ರೆ ಕಾರ್ಯದರ್ಶಿ ವಿರೂಪಾಕ್ಷ ಭಟ್ ಮಚ್ಚಿಮಲೆ ಸ್ವಾಗತಿಸಿದರು. ಬಜರಂಗದಳ ಕರ್ನಾಟಕ ದಕ್ಷಿಣಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತ್ತಡ್ಕ ಪ್ರಸ್ತಾವನೆಗೈದರು. ಕಿರಣ್ ಕುಮಾರ್ ಗಾನಸಿರಿ ತಂಡದಿಂದ ವೈಯಕ್ತಿಕ ಗೀತೆ ಹಾಡಿದರು. ಗ್ರಾಮಾಂತರ ಪ್ರಖಂಡ ಸಂಯೋಜಕ ವಿಶಾಖ್ ಸಸಿಹಿತ್ಲು ವಂದಿಸಿದರು. ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು.

Ad Widget
Click to comment

Leave a Reply

ರಾಷ್ಟ್ರೀಯ

Cancer-ಕ್ಯಾನ್ಸರ್ ಔಷಧಿಗಳ ಬೆಲೆಯಲ್ಲಿ ಶೇ.70ರಷ್ಟು ಇಳಿಕೆ ಸಾಧ್ಯತೆ..! MRP ಮೇಲಿನ ಲಾಭಾಂಶ ಮಿತಿಗೆ ಕೇಂದ್ರ ಚಿಂತನೆ

Published

on



Ad Widget

Ad Widget

Ad Widget

Ad Widget

ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಕ್ರಮ ಜಾರಿಯಾದರೆ ಕೆಲವು ಔಷಧಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಕ್ರಮ ಜಾರಿಯಾದರೆ ಕೆಲವು ಔಷಧಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Ad Widget

Ad Widget

Ad Widget alt="Ad Widget"/>

Ad Widget

ಬ್ರಾಂಡೆಡ್, ಜೆನೆರಿಕ್ ಔಷಧಿಗಳಿಗೂ ಅನ್ವಯ
ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ (ನಾನ್‌-ಶೆಡ್ಯೂಲ್ಡ್) ಕ್ಯಾನ್ಸರ್ ಔಷಧಿಗಳಿಗೆ ಈ ಮಿತಿಯನ್ನು ಅನ್ವಯಿಸುವ ಪ್ರಸ್ತಾವನೆ ಸರಕಾರದ ಮುಂದಿದೆ. ಬ್ರಾಂಡೆಡ್, ಜೆನೆರಿಕ್, ದೇಶೀಯವಾಗಿ ತಯಾರಿಸಿದ ಹಾಗೂ ಆಮದು ಮಾಡಿಕೊಳ್ಳುವ ಕ್ಯಾನ್ಸರ್ ಔಷಧಿಗಳೂ ಇದರ ವ್ಯಾಪ್ತಿಗೆ ಬರಲಿವೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget <> Ad Widget

ಜೀವರಕ್ಷಕ ಔಷಧಿಗಳ ಬೆಲೆಯನ್ನು ಕಡಿಮೆ ಮಾಡಿ, ಸಾಮಾನ್ಯ ಜನರಿಗೂ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ. ಪ್ರಸ್ತಾವಿತ ಬೆಲೆ ನಿಯಂತ್ರಣ ಜಾರಿಯಾದರೆ ಕ್ಯಾನ್ಸರ್ ಔಷಧಿಗಳ ಗರಿಷ್ಠ ಮಾರಾಟ ದರದಲ್ಲಿ ಶೇ.70ರಷ್ಟು ಇಳಿಕೆಯಾಗಬಹುದು ಎಂಬ ಅಂದಾಜು ವ್ಯಕ್ತವಾಗಿದೆ. ಇದರಿಂದ ಗ್ರಾಹಕರಿಗೆ ಒಟ್ಟಾರೆ ಸುಮಾರು ₹2,500 ಕೋಟಿ ಉಳಿತಾಯವಾಗುವ ನಿರೀಕ್ಷೆಯಿದೆ.



Ad Widget

ಅಂತಿಮ ನಿರ್ಧಾರದ ನಿರೀಕ್ಷೆ
ಕ್ಯಾನ್ಸರ್ ಔಷಧಿಗಳ ಮಾರಾಟದ ಮೇಲಿನ ಲಾಭಾಂಶಕ್ಕೆ ಮಿತಿ ವಿಧಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಕುರಿತು ಪರಿಶೀಲನೆ ನಡೆಸಲು ಕ್ಯಾನ್ಸರ್ ತಜ್ಞರನ್ನು ಒಳಗೊಂಡ ಸಮಿತಿಯೊಂದನ್ನು ರಚಿಸಲಾಗಿದ್ದು, ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.

Ad Widget

Ad Widget

ಮುಂದಿನ ದಿನಗಳಲ್ಲಿ ಈ ಬೆಲೆ ನಿಯಂತ್ರಣ ಕ್ರಮವನ್ನು ಇನ್ನಷ್ಟು ಕ್ಯಾನ್ಸರ್ ಔಷಧಿಗಳು ಹಾಗೂ ಇತರ ಔಷಧಿಗಳಿಗೂ ವಿಸ್ತರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಸ್ತಾವನೆ ಜಾರಿಯಾದರೆ ಕ್ಯಾನ್ಸರ್ ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡಲು ಮತ್ತು ರೋಗಿಗಳ ಆರ್ಥಿಕ ಹೊರೆಯನ್ನು ತಗ್ಗಿಸಲು ನೆರವಾಗಬಹುದು. ಆದರೆ ಬೆಲೆ ಇಳಿಕೆಯ ಪ್ರಮಾಣ ಹಾಗೂ ಕ್ರಮ ಜಾರಿಯಾಗುವ ದಿನಾಂಕದ ಕುರಿತು ಅಧಿಕೃತ ಘೋಷಣೆ ಹೊರಬಿದ್ದ ಬಳಿಕವೇ ಸ್ಪಷ್ಟ ಚಿತ್ರಣ ದೊರೆಯಲಿದೆ.

Ad Widget
Continue Reading

ಕ್ರೀಡೆ

India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ

Published

on



Ad Widget

Ad Widget

Ad Widget

Ad Widget

ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.

Ad Widget

Ad Widget

Ad Widget

Ad Widget

ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.

Ad Widget

Ad Widget

Ad Widget alt="Ad Widget"/>

Ad Widget

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

Ad Widget

Ad Widget <> Ad Widget

ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.



Ad Widget

ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.

Ad Widget

Ad Widget

ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.

ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.

ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.

ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.

ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.

ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.

Ad Widget
Continue Reading

ರಾಷ್ಟ್ರೀಯ

ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ

Published

on



Ad Widget

Ad Widget

Ad Widget

Ad Widget

ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್‌ ಬಹಿರಂಗಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾ‌ರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.

Ad Widget

Ad Widget

Ad Widget alt="Ad Widget"/>

Ad Widget

‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

Ad Widget

Ad Widget <> Ad Widget

2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾ‌ರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.



Ad Widget

ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

Ad Widget

Ad Widget

ಥಾಮ್ಪನ್ ಹಾಗೂ ಜ್ಞಾನೇಶ್ ಕುಮಾರ್ ಇಬ್ಬರೂ ಕೇರಳಂ ಕೇಡರ್‌ನ ಐಎಎಸ್‌ ಅಧಿಕಾರಿಗಳು. ಥಾಮ್ರನ್ 1980ರ ಹಾಗೂ ಕುಮಾರ್ 1988ರ ಬ್ಯಾಚ್‌ನ ಅಧಿಕಾರಿ. ಕೇರಳಂನ ಲೋಕೋಪಯೋಗಿ ಕಾರ್ಯದರ್ಶಿಯಾಗಿಯೂ ಜ್ಞಾನೇಶ್ ಕುಮಾರ್ ಕಾರ್ಯನಿರ್ವಹಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading