Connect with us

ದಕ್ಷಿಣ ಕನ್ನಡ

ದುರ್ದೈವ ನಡುವೆ ಮೊನ್ನೆ ಒಂದು ಘಟನೆ ನಡೆದು ಹೋಯಿತು – ಪುತ್ತೂರಿನ ರಾಜಕಾರಣದ ಬಗ್ಗೆ RSS ನ ಜ್ಯೇಷ್ಠ ಪ್ರಚಾರಕ್ ಸು. ರಾಮಣ್ಣ ಹೀಗ್ಯಾಕೆ ಹೇಳಿದರು ?

Published

on



Ad Widget

Ad Widget

Ad Widget

Ad Widget

ರಾಷ್ಟ್ರೀಯತೆಯ ರಾಜಕಾರಣ ದೇಶದಲ್ಲಿ ಆಗಬೇಕಾದರೇ ಸಂಘಪರಿವಾರದ ಪ್ರತಿಯೊಬ್ಬ ಕಾರ್ಯಕರ್ತನು ಪರಿವರ್ತನೆಯ ಮಾದ್ಯಮವಾಗಬೇಕು. ಇವತ್ತು ಭಜರಂಗದಲ್ಲಿ ಇದ್ದರೇ ನಾಳೆ ಬಿಜೆಪಿಯಲ್ಲಿ ಟಿಕೆಟ್‌ ಸಿಗಬಹುದು ಎಂಬ ನಿರೀಕ್ಷೆಯಿದ್ದರೇ ಅದು ವಿಷದ ವಿಷಯ. ಅದನ್ನು ಮನಸ್ಸಿನಿಂದ ತೆಗೆದು ಹಾಕಿ. ಸಾಯುವವರೆಗೂ ಹಿಂದೂ ಹಿತಕ್ಕೊಸ್ಕರ ಬಜರಂಗದಳದಲ್ಲಿ ಇರುತ್ತೇನೆಂದು ನಿಶ್ಚಯಿಸಿ ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಜ್ಯೇಷ್ಠ ಪ್ರಚಾರಕ್ ಸು. ರಾಮಣ್ಣ ಬಜರಂಗದಳ ವಿಹಿಂಪ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಅವರು ಶನಿವಾರ ಕಿಲ್ಲೆಮೈದಾನದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ನಡೆದ ಶೌರ್ಯ ಜಾಗರಣ ರಥಯಾತ್ರೆಯ ಅಂಗವಾಗಿ ಬೃಹತ್ ಹಿಂದೂ ಶೌರ್ಯ ಸಂಗಮದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರು ಹಿಂದೂತ್ವದ ರಕ್ಷಾ ಕವಚ

Ad Widget

Ad Widget <> Ad Widget

1950 -60ರ ದಶಕದಿಂದಲೂ ಪುತ್ತೂರು ಹಿಂದೂತ್ವದ ರಕ್ಷಾ ಕವಚವಾಗಿತ್ತು. ರಾಷ್ಟ್ರ ರಾಜಕಾರಣ ಹೇಗೆ ಇರಬೇಕು ಎನ್ನುವುದಕ್ಕೆ ಪುತ್ತೂರಿನ ರಾಜಕಾರಣ ಒಂದು ನಮೂನೆಯಾಗಿತ್ತು. ಪುತ್ತೂರಿನಲ್ಲಿ ರಾಮ್‌ ಭಟ್‌ , ಸುಳ್ಯದಲ್ಲಿ ಅಂಗಾರ ಗೆಲ್ಲುವಾಗ ನಾವು ಎಷ್ಟು ಖರ್ಚು ಮಾಡುತ್ತಿದ್ದೇವು ? ಬೇರೆಯವರಿಗೆ ಹೋಲಿಸಿದರೇ ಅದು ಏನೂ ಅಲ್ಲವೇ ಅಲ್ಲ. ರಾಷ್ಟ್ರೀಯತೆಯ ಆಧಾರದ ಮೇಲೆ ಇಲ್ಲಿ ವೋಟ್‌ ನಡೆಯುತಿತ್ತು ಎಂದು ಹೇಳಿದರು



Ad Widget

ಆದರೇ ದುರ್ದೈವ ನಡುವೆ ಒಂದು ಘಟನೆ ನಡೆದು ಹೋಯಿತು. ನಮ್ಮ ಮನಸ್ಸು ಕೆಟ್ಟು ಹೋಯಿತು. ಯಾರಿಗೂ ದೂಷಿಸುವುದು ಬೇಡ. ಅದರಿಂದ ಹೊರಗೆ ಬರಬೇಕು ನಾವು. ಸೋಲು ಅನ್ನುವುದು ಅಂತಿಮ ಅಲ್ಲ. ಸೋಲು ಅನ್ನುವುದು ಸವಾಲು. ರಾಜಕೀಯದಲ್ಲಿ ಇಂದಿನ ಸೋಲು ನಾಳೆಯ ಗೆಲುವಿಗೆ ಸೋಪಾನ. ನಮ್ಮ ಮೇಲೆ ಯಾರು ಕಲ್ಲೆಸದರೂ ಆ ಕಲ್ಲನ್ನು ತುಳಿದುಕೊಂಡು ನಾವು ಮುಂದೆ ಹೋಗುವಂಥವರು. ಇದು ನಮ್ಮ ಜಾತಕ ಎಂದರು.

Ad Widget

Ad Widget

ಅಧ್ಯಕ್ಷತೆಯನ್ನು ವಿಶ್ವ ಹಿಂದೂ ಪರಿಷದ್ ಕರ್ನಾಟಕ ಪ್ರಾಂತ ಉಪಾಧ್ಯಕ್ಷ ಯು. ಪೂವಪ್ಪ ವಹಿಸಿದ್ದರು.

ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲೆಯ ಅಧ್ಯಕ್ಷ ಕೃಷ್ಣಪ್ರಸನ್ನ, ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹಸಂಚಾಲಕ ಲತೀಶ್ ಗುಂಡ್ಯ, ಪುತ್ತೂರು ನಗರ ಪ್ರಖಂಡ ಸಂಯೋಜಕ ಜಯಂತ್ ಕುಂಜೂರುಪಂಜ, ಉಪ್ಪಿನಂಗಡಿ ಪ್ರಖಂಡ ಸಂಯೋಜಕ ಸಂತೋಷ್, ಬೆಳ್ತಂಗಡಿ ಪ್ರಖಂಡ ಸಂಯೋಜಕ ಸಂತೋಷ್ ಅತ್ತಾಜೆ, ಶೌರ್ಯ ಜಾಗರಣ ರಥಯಾತ್ರೆಯ ಸ್ವಾಗತ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಬೊಟ್ಯಾಡಿ, ಸಂಚಾಲಕ ಕೃಷ್ಣ ಪ್ರಸಾದ್ ಬೆಟ್ಟ ಉಪಸ್ಥಿತರಿದ್ದರು.

ಶೌರ್ಯ ಜಾಗರಣ ರಥಯಾತ್ರೆ ಕಾರ್ಯದರ್ಶಿ ವಿರೂಪಾಕ್ಷ ಭಟ್ ಮಚ್ಚಿಮಲೆ ಸ್ವಾಗತಿಸಿದರು. ಬಜರಂಗದಳ ಕರ್ನಾಟಕ ದಕ್ಷಿಣಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತ್ತಡ್ಕ ಪ್ರಸ್ತಾವನೆಗೈದರು. ಕಿರಣ್ ಕುಮಾರ್ ಗಾನಸಿರಿ ತಂಡದಿಂದ ವೈಯಕ್ತಿಕ ಗೀತೆ ಹಾಡಿದರು. ಗ್ರಾಮಾಂತರ ಪ್ರಖಂಡ ಸಂಯೋಜಕ ವಿಶಾಖ್ ಸಸಿಹಿತ್ಲು ವಂದಿಸಿದರು. ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು.

Ad Widget
Click to comment

Leave a Reply

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading