ವೈರಲ್ ನ್ಯೂಸ್
Mangala Weekly | ಬಾಲಮಂಗಳ ನಂತರ ಮಂಗಳ ಮುದ್ರಣಕ್ಕೂ ಮಂಗಳ ಹಾಡಿದ ಕೇರಳದ ಸಂಸ್ಥೆ – ಕರಾವಳಿಯಲ್ಲಿ 40 ವರ್ಷಗಳ ಕಾಲ ಪಾರುಪತ್ಯ ಮೆರೆದ ಮಂಗಳ ವಾರಪತ್ರಿಕೆ ಸ್ಥಗಿತವಾಗಲು ಕಾರಣವೇನು ಗೊತ್ತೇ..?
ಬೆಂಗಳೂರು: 40 ವರ್ಷಗಳಿಂದ ಕನ್ನಡಿಗರ ಮನೆ ಮಾತಾಗಿದ್ದ ‘ಮಂಗಳ’ ವಾರಪತ್ರಿಕೆ (Mangala Weekly) ತನ್ನ ಪ್ರಕಟಣೆಯನ್ನು ನಿಲ್ಲಿಸಿದೆ. ಈ ಸುದ್ದಿಯನ್ನು ಕೇಳುತ್ತಲೇ ನಾಡಿನ ನೂರಾರು ಲೇಖಕರು, ಓದುಗರು ಬೇಸರ ವ್ಯಕ್ತಪಡಿಸಿದ್ದಾರೆ.
ಕೆಲ ವರ್ಷಗಳ ಹಿಂದೆ ಮಕ್ಕಳ ಜನಪ್ರಿಯ ವಾರಪತ್ರಿಕೆ ಬಾಲಮಂಗಳ ನಿಲ್ಲಿಸಿದ ನಂತರ ಇದೀಗ ಮಂಗಳ ಸಂಚಿಕೆಯನ್ನು ನಿಲ್ಲಿಸಿದೆ.
ಒಂದು ಕಾಲದ ಜನಪ್ರಿಯ ವಾರಪತ್ರಿಕೆ ಲಕ್ಷಾಂತರ ಪ್ರತಿ ಮುದ್ರಣವಾದ ದಿನವೇ ಮನೆಗೆ ಪ್ರವೇಶಿಸುತ್ತಿದ್ದ “ಮಂಗಳ” ತನ್ನ ಕೊನೇ ಪ್ರತಿ ಮುದ್ರಿಸಿದೆ. ಸುಮಾರು 25-30 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳಲ್ಲೇ ಈ ಪ್ರತಿ ಲಕ್ಷಕ್ಕೂ ಅಧಿಕ ಮಾರಾಟವಾಗುತ್ತಿದ್ದುದು ಸಣ್ಣ ಮಾತೇನಲ್ಲ.
ಇನ್ನು ಮಂಗಳೂರಿನಲ್ಲಿ ವಾರದಲ್ಲಿ ಸಾವಿರಾರೂ ಪ್ರತಿಗಳು ಮಾರಾಟವಾಗುತ್ತಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದಕ್ಕೆ ಅತ್ಯಧಿಕ ಪ್ರಸರಣ ಇತ್ತು. ಮಧ್ಯಮ ವರ್ಗದ ಜನರ ಅಭಿರುಚಿಗೆ ಹೇಳಿ ಮಾಡಿಸಿದಂತೆ ಪತ್ರಿಕೆ ರೂಪುಗೊಳ್ಳುತ್ತಿತ್ತು. ಅನೇಕ ಬರಹಗಾರರಿಗೆ ಇದು ಮೊದಲ ಮೆಟ್ಟಿಲಾದ ಪತ್ರಿಕೆ ಎಂದರೆ ಅತಿಶಯೋಕ್ತಿ ಅಲ್ಲ.
ಇದರಲ್ಲಿ ಬರುತಿದ್ದ ಧಾರಾವಾಹಿಗಳನ್ನು ಓದಲು ಓದುಗರು ಕಾಯುತಿದ್ದರು. ವಾರಭವಿಷ್ಯ, ಚಿತ್ರಕಥೆ ಹೀಗೆ ಓದುಗರ ಅಭಿರುಚಿಗೆ ತಕ್ಕಂತೆ ಮಂಗಳ ಮೂಡಿಬರುತಿತ್ತು. ಇನ್ನು ಬಾಲಮಂಗಳ ಸೃಷ್ಟಿಸಿದ್ದ ಕಾರುಬಾರು ಅಷ್ಟಿಷ್ಟಲ್ಲ. ಇದರಲ್ಲಿ ಬರುತಿದ್ದ ಡಿಂಗ ಮತ್ತು ಶಕ್ತಿಮದ್ದು ಚಿತ್ರಕಥೆ ಓದದ 90ದಶಕದ ಮಕ್ಕಳೇ ಇರಲಿಲ್ಲ. ಡಿಂಗ ಚಿತ್ರಕಥೆ ಇತಿಹಾಸವೇ ಸೃಷ್ಟಿಸಿದೆ.


ಆದರೆ ಮುದ್ರಣ ಮಾಧ್ಯಮಗಳ ಓದುಗರು ಕ್ಷೀಣಿಸುತ್ತಿರುವ ಹೊತ್ತಿನಲ್ಲಿ 40 ವರ್ಷ ಪ್ರಕಟಣೆ ಹೊರಡಿಸಿದ್ದ “ಮಂಗಳ” ದ ಕನ್ನಡ ಆವೃತ್ತಿ ಮುದ್ರಣಕ್ಕೆ ಮಂಗಳ ಹಾಡಿದೆ. ಕಳೆದ 14 ವರ್ಷಗಳಿಂದ ಮಂಗಳ ವಾರಪತ್ರಿಕೆಯನ್ನು ಮುನ್ನಡೆಸುತ್ತಿರುವ ಸಂಪಾದಕ ಎನ್ನೇಬಿ ಮೊಗ್ರಾಲ್ ಪುತ್ತೂರು ಅವರು ಭಾವುಕ ವಿದಾಯದ ನುಡಿಗಳನ್ನು ಆಡಿದ್ದಾರೆ. ಉಪಸಂಪಾದಕರಾಗಿ ಮಂಗಳ ಯಾತ್ರೆ ಆರಂಭಿಸಿದ ಎನ್ನೇಬಿ ಅವರ ನೆನಪುಗಳ ಮೆರವಣಿಗೆ ಮಂಗಳ ವಾರ ಪತ್ರಿಕೆಯ ಜೈತ್ರ ಯಾತ್ರೆಯ ಹಲವು ಝಲಕ್ಗಳನ್ನು ತೋರಿಸುತ್ತದೆ. ಕೊನೆಯ ಮಾತು ಒಂದು ಹನಿ ಕಂಬನಿ ಸುರಿಯುವಂತೆ ಮಾಡುತ್ತದೆ.
“ಇದು ಅನಿವಾರ್ಯದ ನೋವು … ಈ ಕ್ಷಣದ ತಲ್ಲಣಗಳಿಗೆ ಒಡ್ಡಿಕೊಂಡೇ ಮುಂದಡಿ ಇಡಬೇಕಾದ ಪರಿಸ್ಥಿತಿ .ಮಂಗಳದ ಓದುಗರ ಪಾಲಿಗೆ ಇದು ಅನಿರೀಕ್ಷಿತವಿರಬಹುದಾದರೂ ನಮ್ಮ ಪಾಲಿಗೆ ನಿರೀಕ್ಷಿತವೇ .ಸತತ ಬಂದಪ್ಪಳಿಸಿದ ಕೊರೋನಾ ಮಹಾಮಾರಿ ಇಡೀ ಪತ್ರಿಕೋದ್ಯಮಕ್ಕೆ ಕೊಟ್ಟ ಹೊಡೆತ ಎಂಥಾದ್ದು ಎನ್ನುವುದು ಎಲ್ಲರಿಗೂ ಗೊತ್ತಿರುವಂಥಾದ್ದೇ. ಹಾಗಿದ್ದೂ ನಾವು ಮತ್ತೆ ಮೂರು ವರ್ಷ ಸಾಹಸ ಮಾಡುತ್ತಲೇ ಬಂದೆವು. ಆದರೆ ಇದೀಗ ಮಂಗಳವನ್ನು ನಿಲ್ಲಿಸಲೇಬೇಕಾದ ಆರ್ಥಿಕ ತುರ್ತು ಎದುರಾಗಿದೆ. ಕೆಳಗೆ ನೀವು ನೋಡುತ್ತಿರುವುದು , ಕಳೆದ ನಲ್ವತ್ತು ವರ್ಷಗಳಿಂದ ಕನ್ನಡಿಗರ ಮನೆಮಾತಾಗಿದ್ದ ‘ಮಂಗಳ’ ವಾರಪತ್ರಿಕೆಯ ಕೊನೆಯ ಸಂಚಿಕೆ ಎಂದು ಬರೆದುಕೊಂಡಿದ್ದಾರೆ.

ಶಿಕ್ಷಣ
ಹವ್ಯಕ ಭಾಷಾ ಸಾಹಿತ್ಯಾಸಕ್ತರಿಗೆ ಸಿಹಿ ಸುದ್ದಿ; ಸಂಕ್ರಾಂತಿ ಹವ್ಯಕ ಸಾಹಿತ್ಯ ಉತ್ಸವ-2027ಕ್ಕೆ ಬರಹಗಳ ಆಹ್ವಾನ

ಪುತ್ತೂರು: ಹವ್ಯಕ ಭಾಷೆಯ ಸಾಹಿತ್ಯವನ್ನು ಬೆಳೆಸುವ ಹಾಗೂ ಹೊಸ ತಲೆಮಾರಿನ ಬರಹಗಾರರಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಆರಂಭಗೊಂಡಿರುವ ‘ಹವ್ಯಕ ವಿಶ್ವ’ ಡಿಜಿಟಲ್ ವೇದಿಕೆಯ ಮೊದಲ ವಾರ್ಷಿಕೋತ್ಸವದ ಅಂಗವಾಗಿ ‘ಸಂಕ್ರಾಂತಿ ಹವ್ಯಕ ಸಾಹಿತ್ಯ ಉತ್ಸವ-2027’ ಆಯೋಜಿಸಲಾಗಿದೆ. ಈ ಪ್ರಯುಕ್ತ ಹವ್ಯಕ ಭಾಷೆಯಲ್ಲಿ ಸಾಹಿತ್ಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಾಹಿತ್ಯಾಸಕ್ತರಿಂದ ಬರಹಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕದ ಕರಾವಳಿ ಭಾಗ (ಕಾಸರಗೋಡು ಸೇರಿದಂತೆ) ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಬಳಕೆಯಲ್ಲಿರುವ ಹವ್ಯಕ ಭಾಷೆಯ ಸಾಹಿತ್ಯಿಕ ಬೆಳವಣಿಗೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಸ್ಪರ್ಧೆ ಆಯೋಜಿಸಲಾಗಿದೆ.
ಕಥೆ, ಕವನ, ಪ್ರಬಂಧ ಹಾಗೂ ಲಘುಬರಹ ಹೀಗೆ ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಕಥೆ ಮತ್ತು ಲಘುಬರಹ ವಿಭಾಗಗಳಲ್ಲಿ ಸ್ಪರ್ಧಿಗಳು ತಮ್ಮ ಇಷ್ಟದ ವಿಷಯವನ್ನು ಆಯ್ಕೆ ಮಾಡಿಕೊಳ್ಳಬಹುದು. ಕವನ ವಿಭಾಗಕ್ಕೆ ‘ಹಳ್ಳಿ ಮನೆಯೋ/ಬದುಕೋ, ಪೇಟೆ ಮನೆಯೋ/ಬದುಕೋ’ ಎಂಬ ವಿಷಯ ನೀಡಲಾಗಿದೆ. ಪ್ರಬಂಧ ವಿಭಾಗದಲ್ಲಿ ‘ಹವ್ಯಕ ಸಂಸ್ಕೃತಿಯ ಸಂರಕ್ಷಣೆಯಲ್ಲಿ ಯುವ ಪೀಳಿಗೆಯ ಜವಾಬ್ದಾರಿ’ ಎಂಬ ವಿಷಯದ ಕುರಿತು ಬರೆಯಬೇಕಾಗಿದೆ.
ಪ್ರತಿ ವಿಭಾಗದಲ್ಲಿ ಆಯ್ಕೆಯಾಗುವ ಬರಹಗಳಿಗೆ ಪ್ರಥಮ ಬಹುಮಾನವಾಗಿ 3,000 ರೂ. ನಗದು, ಫಲಕ ಹಾಗೂ ಪ್ರಮಾಣಪತ್ರ ಮತ್ತು ದ್ವಿತೀಯ ಬಹುಮಾನವಾಗಿ 1,500 ರೂ. ನಗದು, ಫಲಕ ಹಾಗೂ ಪ್ರಮಾಣಪತ್ರ ನೀಡಲಾಗುತ್ತದೆ.
ಸ್ಪರ್ಧೆಗೆ ಸಲ್ಲಿಸುವ ಬರಹಗಳು ಕಡ್ಡಾಯವಾಗಿ ಹವ್ಯಕ ಭಾಷೆಯಲ್ಲಿರಬೇಕು. ಈ ಹಿಂದೆ ಎಲ್ಲಿಯೂ ಪ್ರಕಟವಾಗಿರಬಾರದು. ಬರಹಗಳನ್ನು ಯೂನಿಕೋಡ್ ಅಥವಾ ನುಡಿ ಫಾಂಟ್ನಲ್ಲಿ ಸಿದ್ಧಪಡಿಸಿ ವರ್ಡ್, ಪಿಡಿಎಫ್ ರೂಪದಲ್ಲಿ ಅಥವಾ ಕಾಗದದಲ್ಲಿ ಬರೆದು ಸ್ಕ್ಯಾನ್ ಮಾಡಿ ಕಳುಹಿಸಬಹುದು.
ಬರಹಗಳನ್ನು ಕಳುಹಿಸಲು 2026ರ ಡಿಸೆಂಬರ್ 1 ಕೊನೆಯ ದಿನವಾಗಿದ್ದು, ಸ್ಪರ್ಧೆಯ ಫಲಿತಾಂಶವನ್ನು 2027ರ ಜನವರಿ 14ರ ಸಂಕ್ರಾಂತಿ ದಿನ ಪ್ರಕಟಿಸಲಾಗುವುದು.
ಆಸಕ್ತರು ತಮ್ಮ ಬರಹಗಳನ್ನು editor@havyakavishwa.com ಅಥವಾ havyakavishwa@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು. ವಾಟ್ಸ್ಆ್ಯಪ್ ಮೂಲಕವೂ +91 6360604365 ಸಂಖ್ಯೆಗೆ ಕಳುಹಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ havyakavishwa.com ವೆಬ್ಸೈಟ್ ಸಂಪರ್ಕಿಸಬಹುದು ಎಂದು ಹವ್ಯಕ ವಿಶ್ವ ಬಳಗದ ಪರವಾಗಿ ಕೃಷ್ಣ ಕಿಶೋರ್ ಯೇನಂಕೂಡ್ಲು ತಿಳಿಸಿದ್ದಾರೆ.
ಸ್ಥಳೀಯ
Reels-ರೀಲ್ಸ್ಗಾಗಿ ಮಗುವಿನ ಜೀವದ ಜೊತೆ ಆಟ? ಅಲೆಗಳ ನಡುವೆ ಸಿಲುಕಿದ ಪುಟ್ಟ ಮಗು; ಸಾರ್ವಜನಿಕರೊಬ್ಬರಿಂದ ರಕ್ಷಣೆ..!
ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಚಿತ್ರೀಕರಿಸುವುದರಲ್ಲಿ ದಂಪತಿಯೊಬ್ಬರು ಮಗ್ನರಾಗಿದ್ದ ವೇಳೆ ಅವರ ಪುಟ್ಟ ಮಗು ಸಮುದ್ರದ ಅಲೆಗಳ ನಡುವೆ ಸಿಲುಕಿ ಪರದಾಡಿದ ಘಟನೆಗೆ ಸಂಬಂಧಿಸಿದ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಗುವಿನ ಅಪಾಯವನ್ನು ಗಮನಿಸಿದ ಸಾರ್ವಜನಿಕರೊಬ್ಬರು ತಕ್ಷಣ ಧಾವಿಸಿ ಅದನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಈ ಘಟನೆ ಪೋಷಕರ ನಿರ್ಲಕ್ಷ್ಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಚಿತ್ರೀಕರಿಸುವುದರಲ್ಲಿ ದಂಪತಿಯೊಬ್ಬರು ಮಗ್ನರಾಗಿದ್ದ ವೇಳೆ ಅವರ ಪುಟ್ಟ ಮಗು ಸಮುದ್ರದ ಅಲೆಗಳ ನಡುವೆ ಸಿಲುಕಿ ಪರದಾಡಿದ ಘಟನೆಗೆ ಸಂಬಂಧಿಸಿದ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಗುವಿನ ಅಪಾಯವನ್ನು ಗಮನಿಸಿದ ಸಾರ್ವಜನಿಕರೊಬ್ಬರು ತಕ್ಷಣ ಧಾವಿಸಿ ಅದನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಈ ಘಟನೆ ಪೋಷಕರ ನಿರ್ಲಕ್ಷ್ಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ವೈರಲ್ ಆಗಿರುವ ವಿಡಿಯೊದಲ್ಲಿ ದಂಪತಿ ಮೊಬೈಲ್ ಫೋನ್ ಅಥವಾ ಸೆಲ್ಫಿ ಸ್ಟಿಕ್ ಬಳಸಿ ಕಡಲತೀರದಲ್ಲಿ ರೀಲ್ಸ್ ಚಿತ್ರೀಕರಿಸುತ್ತಿರುವುದು ಕಾಣಿಸುತ್ತದೆ. ನೀರಿನ ಸಮೀಪ ನಡೆಯುವಾಗ ಮಹಿಳೆ ಮಗುವಿನ ಕೈ ಹಿಡಿದಿರುತ್ತಾರೆ. ಆದರೆ, ಕೆಲವೇ ಕ್ಷಣಗಳಲ್ಲಿ ಮಗು ಜಾರಿ ಮರಳಿನ ಮೇಲೆ ಬೀಳುತ್ತದೆ. ಈ ವೇಳೆ ಸಮುದ್ರದ ಅಲೆಗಳು ಮಗುವನ್ನು ಅತ್ತಿತ್ತ ತಳ್ಳಲಾರಂಭಿಸುತ್ತವೆ.
ಮಗು ಅಪಾಯದಲ್ಲಿರುವುದನ್ನು ಗಮನಿಸಿದರೂ ದಂಪತಿ ಚಿತ್ರೀಕರಣದಲ್ಲೇ ತಲ್ಲೀನರಾಗಿರುವಂತೆ ವಿಡಿಯೊದಲ್ಲಿ ಕಾಣಿಸುತ್ತದೆ. ಮಹಿಳೆ ಕ್ಯಾಮೆರಾ ಮುಂದೆ ಪೋಸ್ ನೀಡುತ್ತಿದ್ದರೆ, ಪುರುಷ ಚಿತ್ರೀಕರಣ ಮುಂದುವರಿಸುತ್ತಾನೆ. ಈ ನಡುವೆ ಮಗು ಅಲೆಗಳ ಹೊಡೆತಕ್ಕೆ ಸಿಲುಕಿ ಪರದಾಡುತ್ತದೆ. ಕೊನೆಗೆ ಪರಿಸ್ಥಿತಿಯನ್ನು ಗಮನಿಸಿದ ಸಾರ್ವಜನಿಕರೊಬ್ಬರು ತಕ್ಷಣ ಮಧ್ಯಪ್ರವೇಶಿಸಿ ಮಗುವನ್ನು ನೀರಿನಿಂದ ಹೊರತರುತ್ತಾರೆ.
‘ರೀಲ್ಸ್ಗಾಗಿ ಮಕ್ಕಳ ಸುರಕ್ಷತೆಯನ್ನೂ ಮರೆಯುವರೇ?’
ಎಕ್ಸ್ (X) ಬಳಕೆದಾರರಾದ ಮರಿಯಮ್ ಎಂಬುವವರು ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ತಾವು ಪತಿಯೊಂದಿಗೆ ಕಡಲತೀರಕ್ಕೆ ಭೇಟಿ ನೀಡಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ದಂಪತಿ ರೀಲ್ಸ್ ಚಿತ್ರೀಕರಣದಲ್ಲಿ ಎಷ್ಟು ಮಗ್ನರಾಗಿದ್ದರೆಂದರೆ, ತಮ್ಮ ಮಗಳು ಎದುರಿಸುತ್ತಿದ್ದ ಅಪಾಯವನ್ನೇ ಗಮನಿಸಲಿಲ್ಲ ಎಂದು ಅವರು ಆರೋಪಿಸಿದ್ದಾರೆ. ಸಾರ್ವಜನಿಕರು ಸಮಯಕ್ಕೆ ಸರಿಯಾಗಿ ಮಧ್ಯಪ್ರವೇಶಿಸಿದ್ದರಿಂದ ಮಗು ಅಪಾಯದಿಂದ ಪಾರಾಯಿತು ಎಂದೂ ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯತೆ ಗಳಿಸುವ ಧಾವಂತದ ಬಗ್ಗೆ ಪ್ರಶ್ನಿಸಿರುವ ಮರಿಯಮ್, ರೀಲ್ಸ್ ಮಾಡುವುದು ಅಷ್ಟೊಂದು ಮುಖ್ಯವೇ? ಅದಕ್ಕಾಗಿ ಜನರು ತಮ್ಮ ಸ್ವಂತ ಮಕ್ಕಳ ಸುರಕ್ಷತೆಯನ್ನೂ ನಿರ್ಲಕ್ಷಿಸುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
ಘಟನೆಯ ಸತ್ಯಾಸತ್ಯತೆ ಬಗ್ಗೆ ಚರ್ಚೆ
ಮಂಗಳವಾರ ಸಂಜೆಯಿಂದ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಎನ್ನಲಾಗಿದ್ದು, ಘಟನೆ ನಡೆದ ನಿಖರ ಸ್ಥಳ ಮತ್ತು ಸಮಯದ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ವಿಡಿಯೊದಲ್ಲಿರುವ ವ್ಯಕ್ತಿಗಳ ಗುರುತನ್ನೂ ಸ್ವತಂತ್ರವಾಗಿ ದೃಢಪಡಿಸಲಾಗಿಲ್ಲ.
ವಿಡಿಯೊ ಕುರಿತು ಪ್ರತಿಕ್ರಿಯಿಸಿರುವ ಅನೇಕ ಬಳಕೆದಾರರು, ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ, ವಿಶೇಷವಾಗಿ ಸಮುದ್ರದ ಅಲೆಗಳ ಸಮೀಪ ಮಕ್ಕಳ ಮೇಲೆ ಪೋಷಕರು ನಿರಂತರ ನಿಗಾ ಇರಿಸುವ ಅಗತ್ಯವನ್ನು ಈ ಘಟನೆ ನೆನಪಿಸಿದೆ.
ಇನ್ನೊಂದೆಡೆ, ವಿಡಿಯೊ ನಕಲಿಯಾಗಿರಬಹುದು ಅಥವಾ ವೈರಲ್ ಆಗುವ ಉದ್ದೇಶದಿಂದಲೇ ಯೋಜಿತವಾಗಿ ಚಿತ್ರೀಕರಿಸಿರಬಹುದು ಎಂಬ ಅಭಿಪ್ರಾಯಗಳೂ ವ್ಯಕ್ತವಾಗಿವೆ. ಆದರೆ, ಈ ವಾದಗಳಿಗೆ ಯಾವುದೇ ಸ್ವತಂತ್ರ ದೃಢೀಕರಣ ಲಭ್ಯವಿಲ್ಲ. ಹೀಗಾಗಿ, ವಿಡಿಯೊದಲ್ಲಿನ ಘಟನೆಗೆ ಸಂಬಂಧಿಸಿದ ಸಂಪೂರ್ಣ ವಿವರಗಳು ಇನ್ನೂ ಸ್ಪಷ್ಟವಾಗಿಲ್ಲ.
ವೈರಲ್ ನ್ಯೂಸ್
ಸಿಎಂ ಪುಟದಲ್ಲಿ ಮೊಳಗಿದ ಪುತ್ತೂರಿನ ಕಂಠ – ತುಳುನಾಡಿನ ಸಂಸ್ಕೃತಿ – ಭಾಷಾ ಸೊಗಡಿಗೆ ಧ್ವನಿಯಾದ ದಿವ್ಯಶ್ರೀ ರೈ ವಜ್ರದುಂಬಿ
ಪುತ್ತೂರು: ತುಳುವಿಗೆ ಕರ್ನಾಟಕದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ದೊರೆತ ಸಂಭ್ರಮದ ನಡುವೆಯೇ, ತುಳುನಾಡಿನ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಸೊಬಗನ್ನು ಪರಿಚಯಿಸುವ ವಿಡಿಯೋವೊಂದಕ್ಕೆ ಪುತ್ತೂರಿನ ಕುಂಬ್ರದ ದಿವ್ಯಶ್ರೀ ರೈ ವಜ್ರದುಂಬಿ ಅವರು ನೀಡಿರುವ ಹಿನ್ನಲೆ ಧ್ವನಿ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದೆ.
ಸೆ.18ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ತುಳುವನ್ನು ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಗುರುತಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧಿಕೃತ ಇನ್ಸ್ಟಾಗ್ರಾಂ ಪುಟದಲ್ಲಿ ತುಳು ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿ ಆಚಾರ ವಿಚಾರವನ್ನು ಬಿಂಬಿಸುವ ವಿಡಿಯೋ ಹಂಚಿಕೊಳ್ಳಲಾಗಿದ್ದು, ಅದಕ್ಕೆ ದಿವ್ಯಶ್ರೀ ಅವರ ಕಂಠಸಿರಿ ಹಿನ್ನಲೆ ಧ್ವನಿಯಾಗಿತ್ತು.
ವಿಡಿಯೋದಲ್ಲಿ ತುಳುನಾಡಿನ ಪ್ರಕೃತಿ ಸೌಂದರ್ಯ, ಸಾಹಿತ್ಯ , ಸಂಸ್ಕೃತಿ, ಸಂಪ್ರದಾಯ, ಬದುಕಿನ ವೈವಿಧ್ಯ ಹಾಗೂ ತುಳು ಭಾಷೆಯ ಸೊಗಡನ್ನು ಮನಮುಟ್ಟುವ ರೀತಿಯಲ್ಲಿ ಕಟ್ಟಿಕೊಡಲಾಗಿದ್ದು, ಅದಕ್ಕೆ ದಿವ್ಯಶ್ರೀ ಅವರ ಧ್ವನಿ ಮತ್ತಷ್ಟು ಜೀವ ತುಂಬಿದೆ. ಮಾತುಗಳನ್ನು ಕೇವಲ ಕೇಳಿಸುವುದಕ್ಕಿಂತ, ಅವುಗಳ ಭಾವವನ್ನು ಕೇಳುಗರ ಮನಸ್ಸಿಗೆ ತಲುಪಿಸುವ ರೀತಿಯ ಅವರ ಧ್ವನಿ ನಿರೂಪಣೆ ವಿಡಿಯೋಗೆ ವಿಶೇಷ ಮೆರುಗು ನೀಡಿದೆ.
ಮುಖ್ಯಮಂತ್ರಿಗಳ ಅಧಿಕೃತ ಪುಟದಲ್ಲಿ ಪ್ರಸಾರವಾದ ಈ ವಿಡಿಯೋಗೆ ಅಲ್ಪಾವಧಿಯಲ್ಲೇ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೇವಲ ಎರಡು ದಿನಗಳಲ್ಲಿ ಸುಮಾರು 5 ಲಕ್ಷ ವೀಕ್ಷಣೆ ಪಡೆದುಕೊಂಡಿದೆ. ತುಳುವಿನ ಬಗ್ಗೆ ಭಾವನಾತ್ಮಕವಾಗಿ ಬೆಸೆದುಕೊಂಡಿರುವ ಕರಾವಳಿಯ ಜನರ ನಡುವೆ ಈ ವಿಡಿಯೋ ವಿಶೇಷ ಗಮನ ಸೆಳೆದಿದ್ದು, ದಿವ್ಯಶ್ರೀ ಅವರ ಕಂಠಸಿರಿಯೂ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.
ನಿರೂಪಕಿ ಹಾಗೂ ವಾಯ್ಸ್ಓವರ್ ಆರ್ಟಿಸ್ಟ್ ಆಗಿರುವ ದಿವ್ಯಶ್ರೀ, ತಮ್ಮ ಧ್ವನಿಯ ಏರಿಳಿತ, ಉಚ್ಚಾರಣೆಯ ಸ್ಪಷ್ಟತೆ ಹಾಗೂ ಭಾವಪೂರ್ಣ ನಿರೂಪಣೆಯ ಮೂಲಕ ತುಳುನಾಡಿನ ಮಣ್ಣಿನ ಸೊಗಡನ್ನು ಧ್ವನಿಯಲ್ಲೇ ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ತುಳು ಭಾಷೆಯ ಬಗ್ಗೆ ಹೆಮ್ಮೆ, ಕರಾವಳಿಯ ಸಂಸ್ಕೃತಿಯ ಬಗ್ಗೆ ಅಭಿಮಾನ ಹಾಗೂ ವಿಡಿಯೋದಲ್ಲಿನ ದೃಶ್ಯಗಳಿಗೆ ಹೊಂದಿಕೊಳ್ಳುವ ಧ್ವನಿ ನಿರೂಪಣೆ ಅವರ ವಾಯ್ಸ್ಓವರ್ನ ವಿಶೇಷತೆಯಾಗಿದೆ.
ಪ್ರಸ್ತುತ ಪುತ್ತೂರಿನ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ದಿವ್ಯಶ್ರೀ, ಇದಕ್ಕೂ ಮೊದಲು ಹಲವು ಸುದ್ದಿ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಪತ್ರಿಕೋದ್ಯಮದ ಅನುಭವದ ಜತೆಗೆ ಡಾಕ್ಯುಮೆಂಟರಿ, ವಿಶೇಷ ವರದಿ ಹಾಗೂ ಜಾಹೀರಾತುಗಳಿಗೆ ಧ್ವನಿ ನೀಡಿರುವ ಅವರು ವಾಯ್ಸ್ಓವರ್ ಕ್ಷೇತ್ರದಲ್ಲೂ ತಮ್ಮದೇ ಛಾಪು ಮೂಡಿಸಿದ್ದಾರೆ. “ನಿಖರ ನ್ಯೂಸ್”ನ ಹಲವಾರು ವಿಡಿಯೋಗಳಲ್ಲೂ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದಾರೆ.
2023ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಗಳಿಸಿರುವ ದಿವ್ಯಶ್ರೀ, ಅಧ್ಯಯನ ಹಾಗೂ ವೃತ್ತಿ ಎರಡೂ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಅರಿಯಡ್ಕ ಗ್ರಾಮದ ತ್ಯಾಗರಾಜನಗರ ನಿವಾಸಿ ವಿಠಲ ರೈ ಹಾಗೂ ಶಾಲಿನಿ ರೈ ದಂಪತಿಯ ಪುತ್ರಿಯಾಗಿರುವ ದಿವ್ಯಶ್ರೀ ಅವರ ವೃತ್ತಿ ಬದುಕಿನ ಹೆಜ್ಜೆಗಳಿಗೆ ಸಹೋದರಿ ಮಧುಶ್ರೀ ರೈ ಅವರೂ ಪ್ರೋತ್ಸಾಹ ನೀಡುತ್ತಿದ್ದಾರೆ.
ತುಳುವಿಗೆ ಅಧಿಕೃತ ಮಾನ್ಯತೆ ದೊರೆತ ಸಂಭ್ರಮದ ಕ್ಷಣದಲ್ಲಿ, ತುಳುನಾಡಿನ ಕಥೆಯನ್ನು ತಮ್ಮ ಕಂಠದ ಮೂಲಕ ಸಾವಿರಾರು ಜನರಿಗೆ ತಲುಪಿಸಿದ ದಿವ್ಯಶ್ರೀ ರೈ ವಜ್ರದುಂಬಿ ಅವರ ಧ್ವನಿ ಈಗ ಪುತ್ತೂರಿನಿಂದ ತುಳುನಾಡಿನಾಚೆಗೂ ಕೇಳಿಸುತ್ತಿದೆ.
-
ಮಂಗಳೂರು22 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ22 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಕಾರ್ಯಕ್ರಮಗಳು23 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ17 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
Uncategorized23 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
-
ಶಿಕ್ಷಣ21 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
ಶಿಕ್ಷಣ23 hours agoPhilomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
-
ಮಂಗಳೂರು17 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















