ಬಂಟ್ವಾಳ
ಬಂಟ್ವಾಳ ಬಂಟರ ಸಂಘದಲ್ಲಿ ‘ಬೊಲ್ಪುದ ಐಸಿರ-2’ ಅದ್ದೂರಿ ಕಾರ್ಯಕ್ರಮದ ಸಂಚಾಲಕರಾಗಿ ವಿಕ್ರಮ್ ಶೆಟ್ಟಿ ಸರಪಾಡಿ
ಬಂಟ್ವಾಳ: ಬಂಟ್ವಾಳ ಬಂಟರ ಸಂಘದ ಯುವ ವಿಭಾಗದ ವತಿಯಿಂದ ದೀಪಾವಳಿ ಪ್ರಯುಕ್ತ ಜರಗುವ 2 ನೇ ವರ್ಷದ ‘ಬೊಲ್ಪುದ ಐಸಿರ-2’ ಅದ್ದೂರಿ ಕಾರ್ಯಕ್ರಮದ ಸಂಚಾಲಕರಾಗಿ ವಿಕ್ರಮ್ ಶೆಟ್ಟಿ ಸರಪಾಡಿ ಆಯ್ಕೆಯಾಗಿದ್ದಾರೆ.
ನವೆಂಬರ್ 11 ರಂದು ಸಂಜೆ 5ಕ್ಕೆ ಬಂಟ್ವಾಳ ಬಂಟರ ಸಂಘದಲ್ಲಿ ದೀಪಾವಳಿ ಪ್ರಯುಕ್ತ ಜರಗುವ ಬೊಲ್ಪುದ ಐಸಿರ 2 ಅದ್ದೂರಿ ಕಾರ್ಯಕ್ರಮದಲ್ಲಿ ದೇಶ ಹಾಗೂ ರಾಜ್ಯದ ಪ್ರಮುಖ ಕಲಾವಿದರ ಭಾಗವಹಿಸುವಿಕೆಯಲ್ಲಿ ವಿವಿಧ ಕಾರ್ಯಕ್ರಮ ಜರುಗಲಿದೆ.
ಬಂಟಾವಳ ಬಂಟರ ಸಂಘದ ಅಧ್ಯಕ್ಷರಾದ ಚಂದ್ರಹಾಸ ಡಿ. ಶೆಟ್ಟಿ ಹಾಗೂ ಯುವ ವಿಭಾಗದ ಅಧ್ಯಕ್ಷರಾದ ನಿಶಾನ್ ಆಳ್ವ ನೇತೃತ್ವದಲ್ಲಿ ಈ ಸಮಿತಿ ರಚಿಸಲಾಗಿದೆ.
ಬಂಟರ ಸಂಘದ ಯುವ ವಿಭಾಗ ನಡೆಸಿಕೊಡುವ ಈ ಕಾರ್ಯಕ್ರಮದ ಸ್ವಾಗತ ಸಮಿತಿ ಸಂಚಾಲಕರಾಗಿ, ವೇದಿಕೆ ಸಮಿತಿ,ಆಹಾರ ಸಮಿತಿ, ಸುಡುಮದ್ದು ಸಮಿತಿ, ಕೌಂಟರ್ ಸಮಿತಿ ಎಂಬ ಹಲವು ಸಮಿತಿ ರಚಿಸಲಾಗಿದೆ.
ಆಮಂತ್ರಣ ಪತ್ರಿಕೆ ಬಿಡುಗಡೆಯಲ್ಲಿ ಚಂದ್ರಹಾಸ ಶೆಟ್ಟಿ, ನಿಶಾನ್ ಆಳ್ವ, ತರುಣ್ ಶೆಟ್ಟಿ, ಗೋಕುಲ್ ಭಂಡಾರಿ, ದೀಪಕ್ ಶೆಟ್ಟಿ ಹಾಗೂ ವಿಕ್ರಮ್ ಶೆಟ್ಟಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Prabhakar Bhat-ಭರತ್ ಕುಮ್ಡೇಲ್ ಗೆ ಮೊದಲು ಎಸ್ಪಿ ಮಂಪರು ಪರೀಕ್ಷೆ ಮಾಡಿಕೊಳ್ಳಲಿ : ಕಲ್ಲಡ್ಕ ಪ್ರಭಾಕರ ಭಟ್
ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲ್ ಹಾಗೂ ಇತರ ಆರೋಪಿಗಳ ವಿರುದ್ಧ ದಕ್ಷಿಣ ಕನ್ನಡ ಪೊಲೀಸರು ಆರೋಪಪಟ್ಟಿ ಬಿಡುಗಡೆ ಮಾಡಿರುವ ವಿಚಾರಕ್ಕೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲ್ ಹಾಗೂ ಇತರ ಆರೋಪಿಗಳ ವಿರುದ್ಧ ದಕ್ಷಿಣ ಕನ್ನಡ ಪೊಲೀಸರು ಆರೋಪಪಟ್ಟಿ ಬಿಡುಗಡೆ ಮಾಡಿರುವ ವಿಚಾರಕ್ಕೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಆರೋಪಪಟ್ಟಿ ಕುರಿತು ಪ್ರತಿಕ್ರಿಯಿಸಿದ ಅವರು, ಒಟ್ಟು 17 ಪ್ರಕರಣಗಳ ಪೈಕಿ 15 ಪ್ರಕರಣಗಳು ಬಿದ್ದುಹೋಗಿವೆ. ಇನ್ನುಳಿದ ಎರಡು ಪ್ರಕರಣಗಳಿಗೆ ಗೂಂಡಾ ಕಾಯ್ದೆ ಅನ್ವಯಿಸುವುದು ಸರಿಯೇ ಎಂದು ಪ್ರಶ್ನಿಸಿದರು. ನ್ಯಾಯಾಲಯದ ಸೂಚನೆಗಳಿಗೂ ಪೊಲೀಸರಿಗೆ ಒಪ್ಪಿಗೆ ಇಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.
ತಮಗೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎಂದು ತಿಳಿಸಿದ ಪ್ರಭಾಕರ್ ಭಟ್, ತಮ್ಮ ಮೇಲೂ ಗೂಂಡಾ ಕಾಯ್ದೆ ಜಾರಿಗೊಳಿಸುವ ಯೋಚನೆ ಇರಬಹುದೇ ಎಂಬ ಅನುಮಾನ ವ್ಯಕ್ತಪಡಿಸಿದರು. ದೇಶವಿರೋಧಿ ಅಥವಾ ಸಮಾಜವಿರೋಧಿ ಚಟುವಟಿಕೆಗಳಲ್ಲಿ ಯಾರಾದರೂ ತೊಡಗಿದ್ದರೆ ಪ್ರಕರಣ ದಾಖಲಿಸಲಿ ಎಂದು ಹೇಳಿದರು.
“ಹಿಂದೂಗಳ ಮೇಲೆ ದಾಳಿ ಮಾಡುವುದು ಶಾಂತಿಯೇ? ಪೊಲೀಸರು ಅಶಾಂತಿ ನಿರ್ಮಾಣ ಮಾಡುತ್ತಿದ್ದಾರೆಯೇ? ಪೊಲೀಸರು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು” ಎಂದು ಅವರು ಹೇಳಿದರು. ಪ್ರಕರಣದ ವಿಚಾರಣೆಯಲ್ಲಿ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಪೊಲೀಸರಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದೂ ಅವರು ಹೇಳಿದರು.
“ನಾವು ಶಾಂತಿಯಿಂದ ಜೀವನ ನಡೆಸುತ್ತಿದ್ದೇವೆ. ಅವರ ಕ್ರಮಕ್ಕೆ ನಮ್ಮ ಸಣ್ಣ ಪ್ರತಿಕ್ರಿಯೆ” ಎಂದು ಪ್ರಭಾಕರ್ ಭಟ್ ಹೇಳಿದರು.
ಭರತ್ ಕುಮ್ಡೇಲ್ ಗೆ ಮಂಪರು ಪರೀಕ್ಷೆ
ಭರತ್ ಕುಮ್ಡೇಲ್ ಅವರಿಗೆ ಮಂಪರು ಪರೀಕ್ಷೆ ನಡೆಸುವ ಪ್ರಸ್ತಾಪದ ಬಗ್ಗೆಯೂ ಪ್ರಭಾಕರ್ ಭಟ್ ಪ್ರಶ್ನೆ ಎತ್ತಿದರು. “ಮಂಪರು ಪರೀಕ್ಷೆಗೆ ಏಕೆ ಒಪ್ಪಿಕೊಳ್ಳಬೇಕು? ಅದಕ್ಕೆ ಏನು ಆಧಾರವಿದೆ?” ಎಂದು ಪ್ರಶ್ನಿಸಿದ ಅವರು, ಮೊದಲು ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಅವರೇ ಮಂಪರು ಪರೀಕ್ಷೆಗೆ ಒಳಗಾಗಲಿ ಎಂದು ಹೇಳಿದರು.
ತಾವು ಭರತ್ ಕುಮ್ಡೇಲ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿರುವುದನ್ನು ಉಲ್ಲೇಖಿಸಿದ ಅವರು, ಕೇವಲ ಫೋನ್‌ನಲ್ಲಿ ಮಾತನಾಡಿದ್ದಕ್ಕೆ ತಮ್ಮನ್ನು ವಿಚಾರಣೆಗೆ ಕರೆಯಲಾಗುತ್ತದೆಯೇ ಎಂದು ಪ್ರಶ್ನಿಸಿದರು. “ಮಾಧ್ಯಮದವರೂ ಫೋನ್ ಮಾಡುತ್ತೀರಿ; ನಿಮಗೂ ವಿಚಾರಣೆಗೆ ಕರೆಯುತ್ತಾರೆಯೇ?” ಎಂದು ಪ್ರಶ್ನಿಸಿದರು.
ಈ ಹಿಂದೆ ತಾವು ಜೈಲಿಗೆ ಹೋಗಿದ್ದು, ತಮ್ಮ ಪತ್ನಿಯನ್ನೂ ಜೈಲಿಗೆ ಕಳುಹಿಸಲಾಗಿದೆ ಎಂದು ಹೇಳಿದ ಅವರು, “ಇನ್ನು ಏನಿದ್ದರೂ ಗಲ್ಲಿಗೆ ಹಾಕುವುದು ಮಾತ್ರ ಬಾಕಿ. ತಾಕತ್ತಿದ್ದರೆ ನನ್ನನ್ನು ಗಲ್ಲಿಗೆ ಹಾಕಲಿ” ಎಂದು ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಿಗ್ ನ್ಯೂಸ್
Prabhakar Bhat-ನನ್ನ ಮೇಲೆ ಹಾಕಿದ ಕೇಸ್ ನನ್ನ ಕೂದಲಿಗೂ ಸಮ ಅಲ್ಲ : ಗುಡುಗಿದ ಕಲ್ಲಡ್ಕ ಪ್ರಭಾಕರ ಭಟ್
ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ವೈಯಕ್ತಿಕ ಕಾರಣಗಳಿಂದ ನಡೆದಿದ್ದು, ಅದನ್ನು ಸಂಘಟನೆಯ ಮೇಲೆ ಹೊರಿಸುವುದು ಏಕೆ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪ್ರಶ್ನಿಸಿದ್ದಾರೆ. ಬಿ.ಸಿ.ರೋಡ್ ಚಲೋ ಪ್ರತಿಭಟನೆಯ ಬಳಿಕ ಮಾತನಾಡಿದ ಅವರು, ಅಬ್ದುಲ್ ರೆಹಮಾನ್ ಹಾಗೂ ಹತ್ಯೆ ಆರೋಪಿಗಳ ನಡುವಿನ ವೈಯಕ್ತಿಕ ದ್ವೇಷದಿಂದ ಘಟನೆ ನಡೆದಿದೆ ಎಂದು ಹೇಳಿದ್ದಾರೆ.
ಮಂಗಳೂರು: ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ವೈಯಕ್ತಿಕ ಕಾರಣಗಳಿಂದ ನಡೆದಿದ್ದು, ಅದನ್ನು ಸಂಘಟನೆಯ ಮೇಲೆ ಹೊರಿಸುವುದು ಏಕೆ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪ್ರಶ್ನಿಸಿದ್ದಾರೆ.
ಬಿ.ಸಿ.ರೋಡ್ ಚಲೋ ಪ್ರತಿಭಟನೆಯ ಬಳಿಕ ಮಾತನಾಡಿದ ಅವರು, ಅಬ್ದುಲ್ ರೆಹಮಾನ್ ಹಾಗೂ ಹತ್ಯೆ ಆರೋಪಿಗಳ ನಡುವಿನ ವೈಯಕ್ತಿಕ ದ್ವೇಷದಿಂದ ಘಟನೆ ನಡೆದಿದೆ ಎಂದು ಹೇಳಿದ್ದಾರೆ. ಈ ಕುರಿತು ಹೆಚ್ಚಿನ ವಿವರಣೆ ನೀಡುವುದಿಲ್ಲ. ಸಂಬಂಧಪಟ್ಟ ಊರಿಗೆ ಹೋದರೆ ಅಲ್ಲಿನವರೇ ವಿಚಾರವನ್ನು ಹೇಳುತ್ತಾರೆ ಎಂದರು.
“ವೈಯಕ್ತಿಕ ದ್ವೇಷವನ್ನು ಸಂಘಟನೆಯ ಮೇಲೆ ಹಾಕುವುದು ಏಕೆ? ಬೇರೆ ತಪ್ಪು ನಡೆದಿದ್ದರೆ ಪ್ರಕರಣ ದಾಖಲಿಸಿ” ಎಂದು ಅವರು ಹೇಳಿದರು.
ಹತ್ಯೆಯನ್ನು ತಾವು ಪ್ರತಿಪಾದಿಸುವುದಿಲ್ಲ ಎಂದ ಪ್ರಭಾಕರ್ ಭಟ್, ಪ್ರಕರಣದಲ್ಲಿ ಸಂಬಂಧವಿಲ್ಲದ ಭರತ್ ಕುಮ್ಡೇಲ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಆರೋಪಿಸಿದರು. ಭರತ್ ಕುಮ್ಡೇಲ್ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಿರುವುದನ್ನೂ ಅವರು ಪ್ರಶ್ನಿಸಿದರು.
ಭರತ್ ಕುಮ್ಡೇಲ್ ಬಂಧನದ ಬಳಿಕ ಅವರ ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಭರತ್ ಅವರ ಮಗುವಿಗೆ ಅನಾರೋಗ್ಯವಾದಾಗ ರಿಕ್ಷಾದಲ್ಲಿ ಆಸ್ಪತ್ರೆಗೆ ಕರೆದೊಯ್ದ ವ್ಯಕ್ತಿಯ ಮೇಲೂ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಆರೋಪಿಸಿದರು.
ಕುಟುಂಬಕ್ಕೆ ಸಹಾಯ ಮಾಡಿದವರ ಮೇಲೆಯೂ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಹೇಳಿದ ಅವರು, ಕಾನೂನು ಪ್ರಕ್ರಿಯೆ ಬಿಟ್ಟು ಗೃಹ ಸಚಿವರು ಅಥವಾ ಮುಖ್ಯಮಂತ್ರಿಗಳು ಹೇಳುತ್ತಾರೆ ಎಂಬ ಕಾರಣಕ್ಕೆ ಪ್ರಕರಣ ದಾಖಲಿಸಬಾರದು ಎಂದು ಹೇಳಿದರು.
ತಮ್ಮ ಮೇಲೂ ಪ್ರಕರಣ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ ಎಂದು ಹೇಳಿದ ಪ್ರಭಾಕರ್ ಭಟ್, “ಇದು ನನಗೆ ದೊಡ್ಡ ವಿಷಯವಲ್ಲ. ಈ ಪ್ರಕರಣ ನನ್ನ ಕೂದಲಿಗೆ ಸಮ” ಎಂದು ಪ್ರತಿಕ್ರಿಯಿಸಿದರು.
ಭರತ್ ಕುಮ್ದೇಲ್ ಅವರೊಂದಿಗೆ ತಾವು ದೂರವಾಣಿಯಲ್ಲಿ ಮಾತನಾಡಿರುವುದನ್ನು ಒಪ್ಪಿಕೊಂಡ ಅವರು, ʻʻನಾನು ಯಾರ ಹತ್ರ ಬೇಕಾದರೂ ಫೋನ್ ನಲ್ಲಿ ಮಾತನಾಡುತ್ತೇನೆ. ನನಗೆ ಅಂಬೇಡ್ಕರ್ ಕೊಟ್ಟ ಸಂವಿಧಾನ . ಭರತ್ ಜೊತೆ ನಾನು ಫೋನ್ ನಲ್ಲಿ ಮಾತನಾಡಿದ್ದೇನೆ. ನಾನು ಯಾರಿಗಾದರೂ ಹೊಡಿ ಅಥವಾ ಕೊಲ್ಲು ಎಂದು ಹೇಳಿದ್ದೇನಾ? ಅಂತಹ ಸಂಭಾಷಣೆ ಪೊಲೀಸರಿಗೆ ಸಿಕ್ಕಿದೆಯೇ?” ಎಂದು ಪ್ರಶ್ನಿಸಿದರು.
ಪೊಲೀಸರು ಈ ರೀತಿಯ ಕ್ರಮಗಳನ್ನು ಕೈಗೊಳ್ಳುವ ಮುನ್ನ ವಾಸ್ತವಾಂಶಗಳನ್ನು ಪರಿಶೀಲಿಸಬೇಕು. ಪೊಲೀಸರ ಈ ರೀತಿಯ ಹುಚ್ಚು ಸ್ವಲ್ಪ ಇಳಿಯಬೇಕು ಎಂದು ಅವರು ಆಗ್ರಹಿಸಿದರು.
ಬಿಗ್ ನ್ಯೂಸ್
Prabhakar Bhat-ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ: ಆರೋಪಿತರ ಜೊತೆ ನಿರಂತರ ಫೋನ್ ಸಂಪರ್ಕ ಆರೋಪ – ವಿಚಾರಣೆಗೆ ಕಲ್ಲಡ್ಕ ಪ್ರಭಾಕರ ಭಟ್ ಗೆ ನೋಟೀಸ್
ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸುವಂತೆ ಸೂಚಿಸಿದ್ದಾರೆ.
ಬಂಟ್ವಾಳ: ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸುವಂತೆ ಸೂಚಿಸಿದ್ದಾರೆ.
2025ರ ಮೇ 25ರಂದು ಬಂಟ್ವಾಳ ತಾಲೂಕಿನ ಕುರಿಯಾಲ ಗ್ರಾಮದ ಇರಾಕೋಡಿ ಬಳಿ ಅಬ್ದುಲ್ ರಹ್ಮಾನ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪಿಕಪ್ ವಾಹನದಿಂದ ಮರಳು ಇಳಿಸುತ್ತಿದ್ದ ವೇಳೆ ಅವರ ಮೇಲೆ ಮಾರಣಾಂತಿಕ ದಾಳಿ ನಡೆದಿತ್ತು. ಘಟನೆಯಲ್ಲಿ ರಹ್ಮಾನ್ ಅವರೊಂದಿಗೆ ಇದ್ದ ಕಲಂದರ್ ಶಾಫಿ ಅವರ ಮೇಲೂ ಗಂಭೀರ ಹಲ್ಲೆ ನಡೆದಿತ್ತು.
ಸುಹಾಸ್ ಶೆಟ್ಟಿ ಹತ್ಯೆಯಾದ ಕೆಲವೇ ದಿನಗಳ ಬಳಿಕ ಅಬ್ದುಲ್ ರಹ್ಮಾನ್ ಹತ್ಯೆ ನಡೆದಿದ್ದರಿಂದ, ಪ್ರಕರಣವು ಪ್ರತೀಕಾರದ ಹತ್ಯೆಯಾಗಿರಬಹುದೇ ಎಂಬ ಅನುಮಾನವೂ ವ್ಯಕ್ತವಾಗಿತ್ತು. ಈ ಘಟನೆ ರಾಜ್ಯಾದ್ಯಂತ ಗಮನ ಸೆಳೆದಿತ್ತು.
ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಹತ್ಯೆಯ ಸಂದರ್ಭದಲ್ಲಿ ಆರೋಪಿಗಳೊಂದಿಗೆ ಕಲ್ಲಡ್ಕ ಪ್ರಭಾಕರ್ ಭಟ್ ನಿರಂತರವಾಗಿ ಫೋನ್ ಸಂಪರ್ಕದಲ್ಲಿದ್ದರು ಎಂಬ ಅಂಶದ ಹಿನ್ನೆಲೆಯಲ್ಲಿ ಅವರ ಹೇಳಿಕೆ ಪಡೆಯಲು ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಪ್ರತಿಕ್ರಿಯಿಸಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆಯ ಅ.ಕ್ರ. 54/2025ರ ಪ್ರಕರಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಹೇಳಿಕೆ ದಾಖಲಿಸುವುದು ಬಾಕಿಯಿದೆ. ಹೇಳಿಕೆ ಪಡೆಯುವ ಉದ್ದೇಶದಿಂದ ಸಾಕ್ಷಿದಾರರ ನೋಟಿಸ್ ಜಾರಿ ಮಾಡಲಾಗಿದೆ. ಅವರ ಹೇಳಿಕೆ ದಾಖಲಿಸಿಕೊಂಡ ಬಳಿಕ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.


















