Connect with us

ದಕ್ಷಿಣ ಕನ್ನಡ

Vitla 400 kv : ವಿಟ್ಲ : 400 ಕೆ.ವಿ ಹೈ ಟೆನ್ಶನ್ ಕಾಮಗಾರಿಗೆ ಖಾಸಗಿ ಕಂಪೆನಿ ಯತ್ನ – ತಡೆದ ಸ್ಥಳೀಯರು; ರೈತರ ಜತೆ ನಿಂತು ಮಠಂದೂರು, ಪುತ್ತಿಲರಿಂದ ಜಿಲ್ಲಾಡಳಿತಕ್ಕೆ ಖಡಕ್‌ ಸೂಚನೆ : ಮುಂದೇನಾಯಿತು ?

Published

on

Ad Widget

Ad Widget

Ad Widget

Ad Widget

ಉಡುಪಿ – ಕಾಸರಗೋಡು 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣ ಕಂಪನಿಗಳ ಸಿಬ್ಬಂದಿ ಯಂತ್ರಗಳ ಸಹಿತವಾಗಿ ಅಡ್ಯನಡ್ಕ ಕೊಲ್ಲಪದವು ಪರಿಸರಕ್ಕೆ ಆಗಮಿಸಿ ವಿದ್ಯುತ್ ಗೋಪುರ ನಿರ್ಮಾಣಕ್ಕೆ ಮುಂದಾದ ವೇಳೆ ರೈತರ ಹಾಗೂ ರಾಜಕೀಯ ಮುಖಂಡರ ಆಕ್ರೋಶ ಹಾಗೂ ಆಕ್ಷೇಪದ ಬಳಿಕ ಕಾಮಾಗಾರಿ ನಡೆಸದೆ ಹಿಂತುರುಗಿದ ಘಟನೆ ಆ 10 ರಂದು ನಡೆದಿದೆ.

Ad Widget

Ad Widget

Ad Widget

Ad Widget

ಕೊಲ್ಲಪದವು ಕೊಡುಂಜಡ್ಕದಲ್ಲಿ ರೈತರ ಕೃಷಿ ಭೂಮಿಯಲ್ಲಿ ವಿದ್ಯುತ್ ಗೋಪುರ ನಿರ್ಮಾಣ ಉದ್ದೇಶದಿಂದ ಕಂಪನಿಯ ಅಧಿಕಾರಿಗಳು ಮಂಗಳವಾರ ಆಗಮಿಸಿದ್ದರು. ಅವರ ಜತೆ ಕೆಲವು ನಿವೃತ್ತ ಪೊಲೀಸ್ ಅಧಿಕಾರಿಗಳು ಇದ್ದರು ಎನ್ನಲಾಗಿದೆ. ಗೋಪುರಕ್ಕೆ ಅಡಿಪಾಯ ನಿರ್ಮಿಸಲು ಮರ ಕಡಿಯುವವರು ಸೇರಿ ಹತ್ತರಿಂದ ಇಪ್ಪತ್ತು ಮಂದಿ ಕಾರ್ಮಿಕರು ಜೆಸಿಬಿ ಸಹಿತವಾಗಿ ಹಲವು ವಾಹನಗಳಲ್ಲಿ ಆಗಮಿಸಿದ್ದರು.

Ad Widget

Ad Widget alt="Ad Widget"/>

Ad Widget

ಆದರೇ ಕಾಮಗಾರಿ ಆರಂಭಿಸುವ ಮೊದಲು ಜಾಗ ಕಳೆದುಕೊಳ್ಳುವ ರೈತರ ಹಾಗೂ ನಾಗಕರೀಕರ ಸಭೆಯನ್ನು ಜಿಲ್ಲಾಡಳಿತ ನಡೆಸುವಂತೆ ಕಂಪನಿಗೆ ಸೂಚನೆಗಳನ್ನು ಈ ಹಿಂದೆಯೇ ನೀಡಲಾಗಿತ್ತು . ಹಾಗಾಗಿಯೂ ಇಂತಹ ಸಭೆ ನಡೆಸದೆ ಕಂಪೆನಿ ಅಧಿಕಾರಿಗಳು ಆತುರಾತುರವಾಗಿ ಕಾಮಗಾರಿ ನಡೆಸಲು ಬಂದಿರುವುದು ರೈತರನ್ನು ಕೆರಳಿಸಿತ್ತು. ಹೀಗಾಗಿ ಸ್ಥಳೀಯ ರೈತರು ಗ್ರಾಮದ ಮುಖಂಡರ ಜತೆ ಸೇರಿ ಕೊಲ್ಲಪದವು ಜಂಕ್ಷನ್ನಲ್ಲಿ ವಾಹನ ಹಾಗೂ ಕಾರ್ಮಿಕರನ್ನು ತಡೆದಿದ್ದಾರೆ.

Ad Widget

Ad Widget <> Ad Widget

ಪುಣಚ ಗ್ರಾಮ ಪಂಚಾಯಿತಿ ಸದಸ್ಯರು ಸ್ಥಳಕ್ಕೆ ಆಗಮಿಸಿ ಕಾಮಗಾರಿಗೆ ಅನುಮತಿಯನ್ನು ಪಂಚಾಯತ್‌ ನೀಡದಿದ್ದಾಗ ಕಾಮಗಾರಿಯನ್ನು ಹೇಗೆ ನಡೆಸಲು ಸಾಧ್ಯ ? ಎಂದು ಪ್ರಶ್ನಿಸಿದ್ದಾರೆ. ಪುತ್ತೂರು ಶಾಸಕರು ಕಾಮಗಾರಿಯನ್ನು ನಡೆಸುವಂತೆ ಹೇಳಿದ ಕಾರಣ ನಾವು ಗುರುತು ಹಾಕುವ ನಿಟ್ಟಿನಲ್ಲಿ ಸ್ಥಳಕ್ಕೆ ಆಗಮಿಸಿದ್ದಾಗಿ ಕಂಪನಿಯವರು ಹೇಳಿಕೊಂಡಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಜಿಲ್ಲಾಡಳಿತದ ಜತೆ ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡುತ್ತಿರುವುದು

ಸ್ಥಳಕ್ಕೆ ಆಗಮಿಸಿದ ಮಠಂದೂರು, ಪುತ್ತಿಲ

Ad Widget

Ad Widget

ಸ್ಥಳದಲ್ಲಿ ಜನ ಸೇರಿ ಸ್ವಲ್ಪ ಸಮಯ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮಾಜಿ ಶಾಸಕ ಸಂಜೀವ ಮಠಂದೂರು ಈ ವೇಳೆ ಸ್ಥಳಕ್ಕೆ ಆಗಮಿಸಿದ್ದು, ಕಂಪೆನಿ ಅಧಿಕಾರಿಗಳಿಗೆ ಕಾಮಾಗಾರಿ ನಡೆಸದಂತೆ ಖಡಕ್‌ ಆಗಿ ಸೂಚಿಸಿದ್ದಾರೆ. ಅಲ್ಲದೇ ದೂರವಾಣಿ ಮೂಲಕ ಜಿಲ್ಲಾಡಳಿತವನ್ನು ಸಂಪರ್ಕಿಸಿ ರೈತರ ಬೇಡಿಕೆಯನ್ನು ಪರಿಗಣಿಸಿ ಬಳಿಕ ಕಾಮಾಗಾರಿ ನಡೆಸುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಕಂಪೆನಿಯವರು ಕೆಲಸ ಸ್ಥಗಿತಗೊಳಿಸಿದ್ದಾರೆ
ಈ ವೇಳೆ ಸ್ಥಳಕ್ಕೆ ಬಂಟ್ವಾಳ ತಹಸೀಲ್ದಾರ್ ಬರುತ್ತಾರೆ ಎಂದು ಕಂಪೆನಿಯವರು ತಿಳಿಸಿದರು . ಯಾರು ಬಂದರೂ ಜಿಲ್ಲಾಡಳಿತ ರೈತರ ಸಭೆಯನ್ನು ನಡೆಸಿ ರೈತರಿಗೆ ಸಮರ್ಪಕ ಮಾಹಿತಿ ನೀಡಿ, ರೈತರ ಸಮಸ್ಯೆಯನ್ನು ದಾಖಲಿಸಿಕೊಳ್ಳದೇ ಹೋದಲ್ಲಿ ಕಾಮಗಾರಿಯನ್ನು ನಡೆಸಲು ಬಿಡುವುದಿಲ್ಲ ಎಂದು ಸ್ಥಳದಲ್ಲಿ ಸೇರಿದ ಹೋರಾಟಗಾರರು ಹೇಳಿದ್ದು ಇದಕ್ಕೆ ಮಠಂದೂರು ಧ್ವನಿಗೂಡಿಸಿದರು.

ರೈತರಿಗೆ ದೈರ್ಯ ತುಂಬುತ್ತಿರುವ ಅರುಣ್‌ ಪುತ್ತಿಲ

ಈ ವೇಳೆ ಅರುಣ್‌ ಕುಮಾರ್‌ ಪುತ್ತಿಲ ನೇತ್ರತ್ವದಲ್ಲಿ ಪುತ್ತಿಲ ಪರಿವಾರದ ಮುಖಂಡರು ಆಗಮಿಸಿ ರೈತರಿಗೆ ತಮ್ಮ ಬೆಂಬಲ ಸೂಚಿಸಿದರು ಹಾಗೂ ಕಾಮಾಗಾರಿ ನಡೆಸದಂತೆ ಒತ್ತಾಯಿಸಿದರು. ಘಟನೆಯ ಮಾಹಿತಿ ಪಡೆದ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿಯವರು ಮಂಗಳೂರಿನಿಂದಲೇ ದೂರವಾಣಿ ಮೂಲಕ ಜಿಲ್ಲಾಡಳಿತಕ್ಕೆ ಕಾಮಗಾರಿ ನಡೆಸದಂತೆ ಸೂಚಿಸಿದ್ದಾರೆ.

ಡಿಸಿಗೆ ತೀವ್ರ ಒತ್ತಡ

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಶ್ರೀಧರ್ ಶೆಟ್ಟಿ ಬೈಲುಗುತ್ತು ಅವರಿಗೆ ಹಾಗೂ 400 ಕೆ.ವಿ. ಉಡುಪಿ ಕಾಸರಗೋಡು ವಿದ್ಯುತ್ ಪ್ರಸರಣ ಮಾರ್ಗ ವಿರೋಧಿ ಹೋರಾಟ ಸಮಿತಿ ವಿಟ್ಲದ ಪದಾಧಿಕಾರಿಗಳು ಮಾಹಿತಿಯನ್ನು ನೀಡಿದ್ದು , ತಕ್ಷಣ ಅವರು ಜಿಲ್ಲಾಡಳಿತವನ್ನು ಸಂಪರ್ಕಿಸಿ ಕಾಮಾಗಾರಿ ನಿಲ್ಲಿಸದಿದ್ದರೇ ಉಗ್ರ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಡಳಿತಕ್ಕೆ ರೈತ ಸಂಘ, ಮಾಜಿ ಶಾಸಕ ಸಂಜೀವ ಮಠಂದೂರು, ಶಕುಂತಳಾ ಟಿ ಶೆಟ್ಟಿ ಹಾಗೂ ಪುತ್ತಿಲ ಪರಿವಾರದಿಂದ ತೀವ್ರ ಒತ್ತಡ ಹಾಕಿದ್ದು ಬಳಿಕ ಕಂಪನಿಯವರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಶಾಸಕ ರೈ ವಿರುದ್ದ ಅಸಮಾಧನ

ಮಾಜಿ ಶಾಸಕ ಸಂಜೀವ ಮಠಂದೂರು, ಅರುಣ್‌ ಪುತ್ತಿಲ, ಬಿಜೆಪಿ ಹಾಗೂ ಪುತ್ತಿಲ ಪರಿವಾರದ ಮುಖಂಡರು, ರೈತ ಮುಖಂಡರು ಸ್ಥಳಕ್ಕಾಗಮಿಸಿ ರೈತರ ಬೆಂಬಲಕ್ಕೆ ನಿಲ್ಲುವ ಕಾರ್ಯವನ್ನು ಮಾಡಿದ್ದಾರೆ. ಆದರೆ ಹಾಲಿ ಶಾಸಕ ಅಶೋಕ್ ಕುಮಾರ್ ರೈ ತಾವು ರೈತರ ಪರ ಇದ್ದೇನೆಂದು ಹೇಳಿಕೆಗಳನ್ನು ನೀಡಿದ್ದು ಬಿಟ್ಟರೆ, ಕಂಪನಿಯವರು ಸ್ಥಳಕ್ಕೆ ಬಂದಾಗ ಕೃಷಿಕರ ಕಷ್ಟಕ್ಕೆ ಸ್ಪಂದಿಸುವ ಕಾರ್ಯ ಮಾಡಿಲ್ಲ ಎಂಬ ಆರೋಪ ಈ ವೇಳೆ ಕೇಳಿ ಬಂದಿದ್ದು, ಕೆಲ ಪ್ರತಿಭಟನಕಾರರು ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಖಾಸಗಿ ವಿದ್ಯುತ್ ಮಾರ್ಗ!

ಪ್ರಸರಣ ಮಾರ್ಗ ಖಾಸಗೀ ಕಂಪನಿಯ ವಿದ್ಯುತ್ ಮಾರಾಟ ಮಾಡಲು ಸಹಕಾರಿಯಾಗುವ ನಿಟ್ಟಿನಲ್ಲಿ ನಿರ್ಮಾಣವಾಗುತ್ತಿದೆ. ಕಳೆದ ಮೂರು ವರ್ಷಗಳಿಂದ ಕಂಪನಿ ಸರ್ಕಾರದ ಕಾಮಗಾರಿ ಎಂದು ಹೇಳಿಕೊಳ್ಳುತ್ತಿದೆಯಾದರೂ, ವಾಸ್ತವದಲ್ಲಿ ಇದು ಖಾಸಗೀ ಮಾರ್ಗ ಎಂಬುದು ಜಿಲ್ಲಾಡಳಿತಕ್ಕೂ ತಿಳಿದಿದೆ. ಈ ಕಾರಣದಿಂದಲೇ ಜಿಲ್ಲಾಡಳಿತ ರೈತರ ಸಭೆಯನ್ನು ನಡೆಸುತ್ತಿಲ್ಲ ಎನ್ನಲಾಗಿದೆ. ಕೆಲವು ದಿನಗಳಿಂದ ಕಂಪನಿಗೆ ಶಾಸಕರ ಅಭಯವೂ ಸಿಕ್ಕಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಹೀಗಾಗಿಯೇ ಪುಣಚ ಭಾಗದಲ್ಲಿ ಕಂಪೆನಿ ಟವರ್ ನಿರ್ಮಾಣಕ್ಕೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ʼವಿದ್ಯುತ್ ಮಾರ್ಗದಿಂದ ರೈತರ ಕೃಷಿ ಜಮೀನಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ಹಾಗೂ ಈಗಾಗಲೇ ನೀಡಲಾದ ಆದೇಶವನ್ನು ಹಿಂಪಡೆಯುವ ವಿಚಾರದಲ್ಲಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದಾಗ ಎಡಿಸಿ ಅವರಲ್ಲಿ ಮಾತನಾಡುವಂತೆ ತಿಳಿಸಿದ್ದಾರೆ. ಅವರಲ್ಲಿ ಮಾತನಾಡಿದಾಗ ಸ್ಥಳಕ್ಕೆ ಬರುವ ತಹಸೀಲ್ದಾರರು ಹೋಗದಂತೆ ಹೇಳುವ ಜತೆಗೆ ರೈತರ ಕಷ್ಟಕ್ಕೆ ಸ್ಪಂದಿಸುವ ವಿಚಾರವನ್ನು ತಿಳಿಸಿದ್ದಾರೆ. ರೈತರ ಕೃಷಿ ಭೂಮಿಗೆ ಅಧಿಕಾರಿಗಳು ಸೂಚನೆ ಕೊಡದೆ ಆಗಮಿಸುವ ಕಾರ್ಯ ಮಾಡಿದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ.ʼ

ಶ್ರೀಧರ ಶೆಟ್ಟಿ ಬೈಲುಗುತ್ತು
ಅಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ದ. ಕ. ಜಿಲ್ಲೆ

ʼಜಿಲ್ಲಾಧಿಕಾರಿಗಳಲ್ಲಿ ಮಾತುಕತೆಯನ್ನು ನಡೆಸಿದ್ದು, ಕಂಪನಿಯರು ಹಿಂದಿರುಗಿ ಹೋಗಲು ಸೂಚನೆಯನ್ನು ನೀಡುವುದಾಗಿ ಹೇಳಿದ್ದಾರೆ. ವಿಟ್ಲದಲ್ಲಿ ಜಿಲ್ಲಾಧಿಕಾರಿಗಳ ಸಭೆಯಾಗದೆ, ಕಾಮಗಾರಿಯನ್ನು ನಡೆಸಲು ಬಿಡುವುದು ಬೇಡ. ನಾನು ಶಾಸಕನಾಗಿರುವ ಸಂದರ್ಭದಲ್ಲಿಯೂ ಇದನ್ನು ಹೇಳಿದ್ದೆ. ರವಿಕುಮಾರ್, ರಾಜೇಂದ್ರ ಜಿಲ್ಲಾಧಿಕಾರಿಗಳು ಇದ್ದ ಸಂದರ್ಭದಲ್ಲಿ ಮಾತನಾಡುವ ಕಾರ್ಯ ಮಾಡಿದ್ದೆ. ಆಗ ನಮ್ಮದೇ ಪವರ್ ಮಂತ್ರಿ ಇದ್ದು, ಅವರು ಯೋಜನೆ ಬಿಡುವುದಿಲ್ಲ ಎಂದು ಹೇಳಿದ್ದರು. ಸಭೆಯ ಮೊದಲು ಕಂಪನಿ ಯಾವುದೇ ಕಾರಣಕ್ಕೂ ರೈತರ ಜಾಗವನ್ನು ಮುಟ್ಟುವಂತಿಲ್ಲ.ʼ

ಸಂಜೀವ ಮಠಂದೂರು
ಮಾಜಿ ಶಾಸಕರು, ಪುತ್ತೂರು

ʼಗ್ರಾಮದ ಆಗುಹೋಗುಗಳ ಬಗ್ಗೆ ಅಂತಿಮ ನಿರ್ಧಾರ ಪಂಚಾಯಿತಿಯಾಗಿದ್ದು, ಅಲ್ಲಿ ನಿರ್ಣಯಗಳಾದ ಸಂದರ್ಭ ಅದನ್ನು ಮೀರಿ ಬರುವ ವ್ಯವಸ್ಥೆಗಳಿಲ್ಲ. ಸಾರ್ವಜನಿಕರ ವಿರೋಧ ಇದ್ದ ಸಂದರ್ಭದಲ್ಲಿ ಅದಕ್ಕೆ ಬೇಕಾದ ದಾಖಲಾತಿಗಳನ್ನು ಮಾಡಬೇಕಾಗಿದೆ. ಯೋಜನೆಯ ಬಗ್ಗೆ ತಿಳಿಸದೆ, ಜಾಗಗಳಿಗೆ ಬರುವುದು ಸರಿಯಲ್ಲ. ಸಾರ್ವಜನಿಕರು ಒಗ್ಗಟ್ಟಿನಿಂದ ಇದ್ದಾಗ ಈ ವ್ಯವಸ್ಥೆಯಾಗಲು ಸಾಧ್ಯವಿಲ್ಲ. ಜನರನ್ನು ಗುಟ್ಟಿನಿಂದ ಖರೀದಿಗೆ ಮುಂದಾಗದಂತೆ ನೋಡಿಕೊಳ್ಳಬೇಕಾಗಿದ್ದು, ರೈತರ ಪರವಾಗಿ ನಾವು ಇದ್ದೇವೆ.ʼ

ಅರುಣ್ ಕುಮಾರ್ ಪುತ್ತಿಲ
ಸಂಸ್ಥಾಪಕರು, ಪುತ್ತಿಲ ಪರಿವಾರ
Ad Widget
Click to comment

Leave a Reply

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಶಿಕ್ಷಣ

Ambika-ಅಂಬಿಕಾ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ

Published

on

Ad Widget

Ad Widget

Ad Widget

Ad Widget

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Ad Widget

Ad Widget <> Ad Widget

ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು
ನೀಡಿದ್ದು, ದೇಶದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯಲ್ಲಿ ತನ್ನದೇ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ನವೆಂಬರ್ 20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತ,
ರೆ. ಫಾ. ಪತ್ರವೋ ಇವರ ದೂರದರ್ಶಿ ಚಿಂತನೆಯ ಫಲವಾಗಿ ಈ ಕಾಲೇಜು ಜನ್ಮತಾಳಿದ್ದು, ಇಂದು ಮತ್ತಷ್ಟು ಮೂಲ ಸೌಕರ್ಯಗಳ ವಿಸ್ತರಣೆಯೊಂದಿಗೆ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಅಣಿಯಾಗಿದೆ. ಸುಸಜ್ಜಿತ ಮೂಲ ಸೌಕರ್ಯಗಳ ವಿಸ್ತರಣೆಗೆ ಕಾರಣೀಕರ್ತರಾದ ಎಲ್ಲರನ್ನೂ ಅಭಿನಂದಿಸಿ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಮುಖ್ಯ ಅತಿಥಿಗಳಾದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಕಾರ್ಯದರ್ಶಿಗಳಾದ ರೆ. ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಳೆದ ಹಲವಾರು ದಶಕಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿದೆ. ಇಂದು ಬದಲಾದ ಪರಿಸ್ಥಿತಿಯಲ್ಲಿ ಮೂಲ ಸೌಕರ್ಯಗಳ ವಿಸ್ತರಣೆಯನ್ನು ಮನಗಂಡು ದಾನಿಗಳ ಸಹಾಯದಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಉತ್ತಮ ಸೌಕರ್ಯಗಳನ್ನು ನಿರ್ಮಿಸಿದ್ದೇವೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಉಪಾಧ್ಯಕ್ಷರಾದ ಮೊನ್ಸಿಂಜೋರ್ ಮ್ಯಾಕ್ಸಿಮ್ ಎಲ್ ನೋರೋನ್ಹ ಮಾತನಾಡಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬೆಳವಣಿಗೆಗಳು ತುಂಬಾ ಸಂತೋಷವನ್ನು ನೀಡುತ್ತಿದ್ದು, ಇಂದು ವಿದ್ಯಾರ್ಥಿಗಳಿಗೆ ನೀಡಿದ ಹೆಚ್ಚುವರಿ ಸೌಲಭ್ಯಗಳು ಸಂಸ್ಥೆಯ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲೂ ಕಾಲೇಜು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲಿ ಎಂದು ಆಶಿಸಿದರು.

Ad Widget

Ad Widget

ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಮೇಲ್ವಿಚಾರಣೆಯನ್ನು ನಿರ್ವಹಿಸಿದ ಓಸ್ವಾಡ್ಡ್ ಲೂಯಿಸ್ ಹಾಗೂ ಜೋಸೆಫ್ ಸೆರವೋರನ್ನು ಸನ್ಮಾನಿಸಲಾಯಿತು.

ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ಅ್ಯಂಟೋನಿ ಒಲಿವೆರಾ, ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ರೆ. ಫಾ. ಮ್ಯಾಕ್ಸಿಮ್ ಡಿ’ ಸೋಜಾ, ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಪ್ಯಾರಿಸ್ ಧರ್ಮ ಗುರುಗಳಾದ ರೆ.ಫಾ ಮಾರ್ವಿನ್ ಪ್ರವೀಣ್ ಲೋಬೋ ಹಾಗೂ ಚ್ಯಾರಿಟಿ ಟೀಮ್ ನ ಸದಸ್ಯರಾದ ಸ್ಟೀಫನ್ ಪಿಂಟೋ, ಓಸ್ವಾಲ್ಡ್ ರೋಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ದಾನಿಗಳು, ಗಣ್ಯರು, ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ನೂತನ ಕಟ್ಟಡದಲ್ಲಿ ವಿಸ್ತೃತ ಸಭಾಂಗಣ, ವಿಜ್ಞಾನ ಪ್ರಯೋಗಾಲಯಗಳು, ಉಪನ್ಯಾಸಕರ ಕೊಠಡಿಗಳು, ತರಗತಿ ಕೋಣೆಗಳು ಹಾಗೂ ಸುಸಜ್ಜಿತ ಶೌಚಾಲಯಗಳು ವಿಧ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಿದೆ.

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ, ಉಪನ್ಯಾಸಕರಾದ ಸುಮಾ ಡಿ ವಂದಿಸಿ, ಡಾ. ಆಶಾ ಸಾವಿತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!