ಬೆಂಗಳೂರು
ಬೆಂಗಳೂರು ಕಂಬಳ ಕರೆ ಮುಹೂರ್ತಕ್ಕೆ ಡಿಕೆ-ಡಿವಿ ಯಿಂದ ಗುದ್ದಲಿ ಪೂಜೆ : ಅಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಗೌರವಾಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್, ಪ್ರಕಾಶ್ ಶೆಟ್ಟಿ ಆಯ್ಕೆ
ಬೆಂಗಳೂರು : ರಾಜಧಾನಿಯಲ್ಲಿ ನವೆಂಬರ್ 25/26 ರಂದು ನಡೆಯಲಿರುವ ಕರಾವಳಿಯ ಜನಪ್ರಿಯ ಕ್ರೀಡೆ ಬೆಂಗಳೂರು ಕಂಬಳದ ಕರೆ ಪೂಜೆ ಇಂದು ನೆರವೇರಿತು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಡಿವಿ ಸದಾನಂದ ಗೌಡ ಕರೆ ಮುಹೂರ್ತಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಬೆಳಿಗ್ಗೆಯಿಂದ ಪೂಜಾ ವಿಧಿವಿಧಾನಗಳು ನಡೆದಿದ್ದು
ನಂತರ ಕರೆ ಪೂಜೆ ಕಾರ್ಯಕ್ರಮ ನೆರವೇರಿತು.
ಬಳಿಕ ಗಣ್ಯಾತಿ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.
ಬೆಂಗಳೂರು ಕಂಬಳ ಸಮಿತಿಯ ಗೌರವಧ್ಯಕ್ಷರಾಗಿ ಕರ್ನಾಟಕ ಸರಕಾರದ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಮತ್ತು ಎಂ. ಆರ್. ಜಿ. ಗ್ರೂಪ್ಸ್ ನ ಕೆ. ಪ್ರಕಾಶ್ ಶೆಟ್ಟಿ ಯವರನ್ನು ಗೌರವಪೂರ್ವಕವಾಗಿ ಆಯ್ಕೆ ಮಾಡಲಾಯಿತು.
ಕರೆಮುಹೂರ್ತ ನಂತರ ವೇದಿಕೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ, ಮಾಜಿ ಮಂತ್ರಿ ಅಶ್ವಥ್ ನಾರಾಯಣ್, ಶಾಸಕ ರಿಸ್ವಾನ್ ಹರ್ಷದ್, ಶಾಸಕ ಎನ್ ಎ ಹಾರಿಸ್, ಉದ್ಯಮಿ ಉಮ್ಮರ್ ಟಿ ಕೆ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷರಾಗಿ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ, ಕಾರ್ಯಾಧ್ಯಕ್ಷರಾಗಿ ಭಾರತದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ , ಉಪಾಧ್ಯಕ್ಷರಾಗಿ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು , ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಯವರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಯಿತು.
ಸಂಘಟನಾ ಅಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷರಾದ ಬೆಳಪು ದೇವಿಪ್ರಸಾದ್ ಶೆಟ್ಟಿ ಮತ್ತು ಕಾರ್ಪೊರೇಟರ್ ಉಮೇಶ್ ಶೆಟ್ಟಿ ಯವರನ್ನು ಆಯ್ಕೆ ಮಾಡಲಾಯಿತು.
ಸಂಯೋಜಕರಾಗಿ ತುಳು ಕೂಟ ಬೆಂಗಳೂರು ಇದರ ಅಧ್ಯಕ್ಷರಾದ ಸುಂದರ್ ರಾಜ್ ರೈ ಮತ್ತು ಅಕ್ಷಯ್ ರೈ ದಂಬೆಕಾನ ಇವರು ಆಯ್ಕೆಯಾದರು.
ಇನ್ನು ಬೆಂಗಳೂರು ಕಂಬಳದ ವಿವಿದ ಸಮಿತಿ ಗಳು ರಚನೆಯಾಗಲಿದ್ದು ಬೆಂಗಳೂರು ಕಂಬಳದ ಮೆರುಗನ್ನು ಹೆಚ್ಚಿಸಲಿದೆ.
ರಾಜಕೀಯ
Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.
1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಅಪರಾಧ
Gym protein powder-ಸ್ಟೆರಾಯ್ಡ್, ಹಾನಿಕಾರಕ ರಾಸಾಯನಿಕ ಬೆರೆಸಿರುವ ಶಂಕೆ; ಜಿಮ್ ಪ್ರೊಟೀನ್ ಪೌಡರ್ ಗುಣಮಟ್ಟ ಪರೀಕ್ಷೆಗೆ ಸರ್ಕಾರ ಸಿದ್ಧತೆ
ಜಿಮ್‌ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್‌ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು, ನ.25: ಜಿಮ್‌ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್‌ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜಿಮ್‌ಗೆ ಹೋಗುವವರು ಸೇವಿಸುವ ಪ್ರೊಟೀನ್ ಉತ್ಪನ್ನಗಳ ಮೇಲೆ ಆರೋಗ್ಯ ಇಲಾಖೆ ನಿಗಾ ಇರಿಸಲಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಕೆಲವು ಪ್ರೊಟೀನ್ ಉತ್ಪನ್ನಗಳು ಗುಣಮಟ್ಟದಿಂದ ಕೂಡಿದ್ದರೆ, ಇನ್ನು ಕೆಲವು ಉತ್ಪನ್ನಗಳು ಎಲ್ಲಿಂದ ಪೂರೈಕೆಯಾಗುತ್ತವೆ ಎಂಬುದೇ ಸ್ಪಷ್ಟವಾಗಿಲ್ಲ. ಹೀಗಾಗಿ ರಾಜ್ಯಾದ್ಯಂತ ಮಾರಾಟವಾಗುತ್ತಿರುವ ಪ್ರೊಟೀನ್ ಪೌಡರ್ ಮತ್ತು ಸಪ್ಲಿಮೆಂಟ್‌ಗಳನ್ನು ಪರೀಕ್ಷಿಸಲು ನಿರ್ಧರಿಸಲಾಗಿದೆ. ಮೆಡಿಕಲ್ ಸ್ಟೋರ್‌ಗಳು, ಜಿಮ್ ಕೇಂದ್ರಗಳು ಸೇರಿದಂತೆ ವಿವಿಧೆಡೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
ಯಾಕೆ ಈ ಪರೀಕ್ಷೆ?
ಮಾರುಕಟ್ಟೆಯಲ್ಲಿ ಅನಧಿಕೃತವಾಗಿ ಮಾರಾಟವಾಗುವ ಕೆಲವು ಪ್ರೊಟೀನ್ ಪೌಡರ್‌ಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪ್ರೊಟೀನ್ ಅಂಶವಿರುವುದು ಹಾಗೂ ಅವುಗಳಿಗೆ ಸ್ಟೆರಾಯ್ಡ್‌ಗಳು ಮತ್ತು ಹಾನಿಕಾರಕ ರಾಸಾಯನಿಕಗಳನ್ನು ಬೆರೆಸುವ ಸಾಧ್ಯತೆಗಳ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ಈ ಹಿಂದೆಯೇ ಕಳವಳ ವ್ಯಕ್ತಪಡಿಸಿತ್ತು.
ಅಲ್ಲದೆ, ಅಗತ್ಯ ಪರವಾನಗಿ ಇಲ್ಲದೆ ಜಿಮ್‌ಗಳಲ್ಲಿ ನೇರವಾಗಿ ಸಪ್ಲಿಮೆಂಟ್‌ಗಳನ್ನು ಮಾರಾಟ ಮಾಡುವುದು ಕಾನೂನುಬಾಹಿರವಾಗಿದೆ. ಹಲವು ಪ್ರೊಟೀನ್ ಸಪ್ಲಿಮೆಂಟ್‌ಗಳ ಪ್ಯಾಕೆಟ್‌ಗಳ ಮೇಲೆ ನಮೂದಿಸಿರುವ ಪ್ರೊಟೀನ್ ಪ್ರಮಾಣಕ್ಕೂ, ಉತ್ಪನ್ನದಲ್ಲಿರುವ ನೈಜ ಪ್ರಮಾಣಕ್ಕೂ ವ್ಯತ್ಯಾಸವಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಉತ್ಪನ್ನಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಪರಿಶೀಲಿಸಲು ಸರ್ಕಾರ ಮುಂದಾಗಿದೆ.
ಬಿಗ್ ನ್ಯೂಸ್
Tulu language-ತುಳು ಭಾಷೆ ಅನುಷ್ಠಾನಕ್ಕೆ ಸರ್ಕಾರದಿಂದ ಅಧಿಕೃತ ಆದೇಶ; ಸರ್ಕಾರಿ ಕಚೇರಿಗಳಲ್ಲೂ ತುಳುವಿಗೆ ಮನ್ನಣೆ..!
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯಾಗಿ ಪರಿಗಣಿಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಷ್ಠಾನಕ್ಕೆ ಅಧಿಕೃತ ಆದೇಶ ಹೊರಡಿಸಿದೆ.
ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯಾಗಿ ಪರಿಗಣಿಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಷ್ಠಾನಕ್ಕೆ ಅಧಿಕೃತ ಆದೇಶ ಹೊರಡಿಸಿದೆ.
ಕಳೆದ ತಿಂಗಳು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ರಾಜ್ಯದ ಎರಡನೇ ಭಾಷೆಯ ಸ್ಥಾನಮಾನ ನೀಡಲು ಅನುಮೋದನೆ ನೀಡಲಾಗಿತ್ತು. ಇದರ ಮುಂದುವರಿದ ಭಾಗವಾಗಿ ಬುಧವಾರ ಸರ್ಕಾರ ಅನುಷ್ಠಾನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಹೊಸ ಆದೇಶದ ಪ್ರಕಾರ, ತುಳು ಭಾಷೆಯನ್ನು ಕನ್ನಡ ಲಿಪಿಯಲ್ಲಿ ಬಳಸಬೇಕಾಗಿದೆ. ಜಿಲ್ಲಾಡಳಿತ ಕಚೇರಿಗಳಲ್ಲಿ ತುಳು ಭಾಷೆ ಅನುಷ್ಠಾನಕ್ಕಾಗಿ ಪ್ರತ್ಯೇಕ ಘಟಕ ಸ್ಥಾಪಿಸುವುದರ ಜೊತೆಗೆ ತುಳು ಭಾಷಾಂತರಕಾರರನ್ನು ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ.
ಇದಲ್ಲದೆ, ಸಾರ್ವಜನಿಕರು ಸಲ್ಲಿಸುವ ಮನವಿ ಹಾಗೂ ಅರ್ಜಿಗಳನ್ನು ತುಳು ಭಾಷೆಯಲ್ಲಿಯೂ ಸ್ವೀಕರಿಸಬೇಕು. ಅವುಗಳಿಗೆ ನೀಡುವ ಉತ್ತರಗಳನ್ನು ಕನ್ನಡದ ಜೊತೆಗೆ ತುಳು ಭಾಷೆಯಲ್ಲಿಯೂ ಒದಗಿಸಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.
-
ನಿಧನ ವಾರ್ತೆ17 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಬಿಗ್ ನ್ಯೂಸ್11 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಅಪರಾಧ16 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಂತರ ರಾಜ್ಯ17 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ17 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ಬಿಗ್ ನ್ಯೂಸ್11 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ರಾಜಕೀಯ17 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಅಪರಾಧ15 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು















