Connect with us

ಮಂಗಳೂರು

MR Kamat Death Mystry : ಬಹು ಕೋಟಿ ಉದ್ಯಮಿ ಮುಂಡ್ಕೂರು ರಾಮದಾಸ್‌ ಕಾಮತ್‌ ಅಸಹಜ ಸಾವಿನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ – ಪೊಲೀಸರಿಗೆ ಸಿಕ್ಕಿತ್ತು ಸುಳಿವು

Published

on



Ad Widget

Ad Widget

Ad Widget

Ad Widget

ಮಂಗಳೂರಿನ ಪ್ರತಿಷ್ಟಿತ ಉದ್ಯಮಿ ಕೊಡುಗೈ ದಾನಿ, ಜಿಎಸ್‌ಬಿ ಸಮುದಾಯದ ಪ್ರಮುಖ, ಹಲವು ಕೋಟಿಗಳ ಒಡೆಯ ಮುಂಡ್ಕೂರು ರಾಮದಾಸ್‌ ಕಾಮತ್‌ (ಎಂ.ಆರ್‌.ಕಾಮತ್‌) ರವರ ಅಸಹಜ ಸಾವಿನ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮಹತ್ವದ ಸುಳಿವು ಲಭಿಸಿದೆ. ಎಸಿಪಿ ಮಹೇಶ್‌ ಕುಮಾರ್‌ ನೇತ್ರತ್ವದಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರ ತಂಡಕ್ಕೆ ಕಾಮತ್‌ ಸಾವಿಗೂ ಹಣಕಾಸು ವ್ಯವಹಾರವೂ ಥಳಕು ಹಾಕಿಕೊಂಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ.

Ad Widget

Ad Widget

Ad Widget

Ad Widget

‘ಆರಂಭದಲ್ಲಿ ನಾವು ಇದೊಂದು ಆತ್ಮಹತ್ಯೆ ಪ್ರಕರಣವೆಂದು ಭಾವಿಸಿದ್ದೆವು. ಆದರೆ, ಈ ಸಾವಿನ ಬಗ್ಗೆ, ಅವರದೇ ಸಮುದಾಯದ ಕೆಲವರು ಅನುಮಾನ ವ್ಯಕ್ತಪಡಿಸಿದ್ದರು. ಹಾಗಾಗಿ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಎಸಿಪಿ ಮಹೇಶ್‌ ಕುಮಾರ್‌ ಗೆ ವಹಿಸಲಾಗಿದೆ. ಎಂ.ಆರ್‌. ಕಾಮತ್‌ ಅವರ ಜೊತೆ ಸಂಪರ್ಕ ಹೊಂದಿದ್ದ ಅನೇಕರನ್ನು ಎಸಿಪಿಯವರು ವಿಚಾರಣೆಗೆ ಒಳಪಡಿಸಿದ್ದಾರೆ. ಅವರ ಜೊತೆ ಹಣಕಾಸು ವ್ಯವಹಾರ ನಡೆಸಿದ್ದ ಕೆಲವರು ವಂಚಿಸಿರುವ ಕುರಿತೂ ಮಾಹಿತಿ ಸಿಕ್ಕಿದೆ’ ಎಂದು ನಗರ ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ಅವರು ಮಾದ್ಯಮವೊಂದಕ್ಕೆ ತಿಳಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ದುಬೈ ಹಾಗೂ ಅಬುದಾಭಿಯಲ್ಲಿ ಯಶಸ್ವಿ ಉದ್ಯಮಿಯಾಗಿದ್ದ ಎಂ.ಆರ್‌.ಕಾಮತ್‌ ಅವರು ಕೆಲ ವರ್ಷಗಳ ಹಿಂದೆ ಮಂಗಳೂರಿಗೆ ಮರಳಿ ಅಪಾರ್ಟ್‌ಮೆಂಟ್‌ ಸಮುಚ್ಚಯದ ಫ್ಲ್ಯಾಟ್‌ವೊಂದರಲ್ಲಿ ಪತ್ನಿ ಜೊತೆ ವಾಸವಾಗಿದ್ದರು. ಅವರ ಪುತ್ರರಿಬ್ಬರು ವಿದೇಶದಲ್ಲಿ ನೆಲೆಸಿದ್ದಾರೆ. ಕೆಲ ವಾರಗಳ ಹಿಂದೆ ಪತ್ನಿ ಮನೆಯಲ್ಲಿ ಇಲ್ಲದ ವೇಳೆ ಅವರ ಮೃತದೇಹ ಫ್ಲ್ಯಾಟ್‌ನಲ್ಲಿ ಪತ್ತೆಯಾಗಿತ್ತು.

Ad Widget

Ad Widget <> Ad Widget

ಎಂ.ಆರ್‌.ಕಾಮತ್‌ ಅವರ ಸಾವಿನ ವಾಸ್ತವಾಂಶ ಪತ್ತೆ ಹಚ್ಚಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಒತ್ತಾಯಿಸಿ, ಕಾಮತ್‌ ಅವರ ಆಪ್ತರಾಗಿದ್ದ ಉದ್ಯಮಿ ಬಿ.ಆರ್‌.ಶೆಟ್ಟಿ ಅವರೂ ಈಚೆಗೆ ಮುಖ್ಯಮಂತ್ರಿ, ಗೃಹಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದಿದ್ದರು.



Ad Widget

‘ಇಬ್ಬರು ಉದ್ಯಮಿಗಳನ್ನು ವಿಚಾರಣೆಗೆ ಒಳಪಡಿಸಿದ್ದು, ಅವರ ಮೊಬೈಲ್‌ಗಳನ್ನೂ ವಶಪಡಿಸಿಕೊಂಡಿದ್ದೇವೆ. ಕಾಮತ್‌ ಅವರ ಸಾವಿಗೂ ಮುನ್ನ ವಾರದ ಅವಧಿಯಲ್ಲಿ ಯಾರೆಲ್ಲ ಅವರನ್ನು ಭೇಟಿಯಾಗಿದ್ದರು, ಅವರು ಯಾರಿಗೆಲ್ಲ ಕರೆ ಮಾಡಿದ್ದರು ಎಂಬುದನ್ನು ಆಧರಿಸಿಯೂ ತನಿಖೆ ನಡೆಸುತ್ತಿದ್ದೇವೆ. ಕರೆ ವಿವರಗಳನ್ನೂ ಸಂಗ್ರಹಿಸಲಾಗುತ್ತಿದೆ’ ಎಂದು ಕಮೀಷನರ್‌ ತನಿಖೆಯ ವಿವರ ಬಿಚ್ಚಿಟ್ಟಿದ್ದಾರೆ.

Ad Widget

Ad Widget

‘ಕಾಮತ್‌ ಅವರು ಯಾರ ಜೊತೆಗೆಲ್ಲ ಹಣಕಾಸಿನ ವ್ಯವಹಾರ ನಡೆಸಿದ್ದರು ಎಂಬ ಮಾಹಿತಿಯನ್ನೂ ಕಲೆಹಾಕುತ್ತಿದ್ದೇವೆ. ಕೆಲವು ಉದ್ಯಮಗಳ ಹೆಸರೂ ಥಳಕು ಹಾಕಿಕೊಂಡಿದ್ದು, ಈ ಆಯಾಮದಲ್ಲೂ ತನಿಖೆ ನಡೆಸುತ್ತಿದ್ದೇವೆ’ ಎಂದು ಪೊಲೀಸ್‌ ಕಮಿಷನರ್‌ ತಿಳಿಸಿದರು.

‘ಹಣಕಾಸಿನ ವಿಚಾರದಲ್ಲಿ ತಾವು ವಿಶ್ವಾಸ ಇಟ್ಟವರೇ ವಂಚನೆ ಮಾಡಿದರಲ್ಲಾ ಎಂಬ ಹತಾಶೆಯಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯೂ ಇದೆ. ಇತರರೂ ಅವರಿಗೆ ಕುಮ್ಮಕ್ಕು ನೀಡಿರುವ ಸಾಧ್ಯತೆಗಳೂ ಇವೆ. ತನಿಖೆ ಪೂರ್ಣಗೊಂಡ ಬಳಿಕವಷ್ಟೇ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ’ ಎಂದರು.

ಬಾಡಿಗೆ ತಕರಾರು :

ಮೂಲಗಳ ಪ್ರಕಾರ ‘ಕಾಮತ್‌ ಅವರು ನಗರದಲ್ಲಿ ಅನೇಕ ರಿಯಲ್‌ ಎಸ್ಟೇಟ್‌ ಯೋಜನೆಗಳಲ್ಲಿ ಬಂಡವಾಳ ಹೂಡಿದ್ದರು. ಕೆಲವು ಕಟ್ಟಡಗಳನ್ನೂ ಖರೀದಿಸಿದ್ದರು. ತಮ್ಮ ಕೆಲವು ಆಸ್ತಿಗಳನ್ನು ಪ್ರತಿ ತಿಂಗಳು ಬಾಡಿಗೆ ರೂಪದಲ್ಲಿ ನನೀಡುವಂತೆ ಪರಿಚಯಸ್ಥರಿಗೆ ನೋಡಿಕೊಳ್ಳಲು ಕೊಟ್ಟಿದ್ದರು. ಅವರ ಪೈಕಿ ಕೆಲವರು ಕಾಮತ್ ಅವರಿಗೆ ಸಂದಾಯ ಮಾಡಬೇಕಿದ್ದ ಹಣವನ್ನು ನೀಡಿರಲಿಲ್ಲ. ಕೋವಿಡ್‌ ಕಾಲದಲ್ಲಿ ಎಲ್ಲ ವಿಧದ ವ್ಯವಹಾರಗಳಿಗೂ ಏಟು ಬಿದ್ದಿದ್ದರಿಂದ ಕಾಮತ್‌ ಇದನ್ನು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಬಳಿಕದ ದಿನಗಳಲ್ಲಿ ವ್ಯವಹಾರಗಳು ಮೊದಲಿನ ಸ್ಥಿತಿಗೆ ಬಂದರೂ ಬಾಡಿಗೆ ಕೊಡಬೇಕಾದವರು ಕೊಟ್ಟಿರಲಿಲ್ಲ. ಇದು ಕಾಮತ್‌ ಅವರನ್ನು ಚಿಂತೆಗೆ ದೂಡಿದೆ ಹಲವು ಎಚ್ಚರಿಕೆಗಳ ಬಳಿಕವು ಬಾಡಿಗೆ ಬಾರದಿದ್ದಾಗ ಕಟ್ಟಡಗಳನ್ನು ತಾವೇ ಸ್ವಾಧೀನಕ್ಕೆ ಪಡೆಯಲು ಮುಂದಾಗಿದ್ದರು. ಈ ನಡುವೆ ಅವರು ಮೃತಪಟ್ಟಿದ್ದಾರೆ’ .

‘ಮೂರು ವರ್ಷಗಳಿಂದಲೂ ತಮಗೆ ಬರಬೇಕಾದ ಹಣ ಬಂದಿಲ್ಲ ಎಂದು ಕಾಮತ್‌ ಹೇಳುತ್ತಿದ್ದರು. . ಲೆಕ್ಕಪರಿಶೋಧಕರೊಬ್ಬರು ಈ ವಿಚಾರವಾಗಿ ಕಾಮತ್‌ ಹಾಗೂ ಅವರ ಆಸ್ತಿಗಳನ್ನು ನೋಡಿಕೊಳ್ಳುತ್ತಿದ್ದವರ ನಡುವೆ ಸಂಧಾನಕ್ಕೆ ಪ್ರಯತ್ನಿಸಿದ್ದರು. ಅದು ವಿಫಲವಾಗಿತ್ತು. ಹಾಗಾಗಿ ಆ ಆಸ್ತಿಗಳನ್ನೇ ಮಾರಾಟ ಮಾಡಲು ಕಾಮತ್‌ ಸಿದ್ಧತೆ ನಡೆಸಿದ್ದರು. ಈ ವಿಚಾರವಾಗಿ ಆ ಆಸ್ತಿಗಳನ್ನು ನಿರ್ವಹಿಸುತ್ತಿದ್ದವರ ನಡುವೆ ಜಗಳವೂ ನಡೆದಿತ್ತು’ ಎಂದು ಮೂಲಗಳಿಂದ ತಿಳಿದು ಬಂದಿದೆ.

ಕುಟುಂಬಸ್ಥರಿಂದ ದೊರಕದ ಸಹಕಾರ :

‘ಎಂ.ಆರ್‌.ಕಾಮತ್ ಅವರು ಬದುಕಿರುವಾಗ ಯಾರಿಗೂ ತೊಂದರೆ ಕೊಟ್ಟವರಲ್ಲ. ಎಲ್ಲರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದವರು. ತಮ್ಮ ಕೈಲಾದಷ್ಟು ದಾನ ಧರ್ಮ ಮಾಡಿಕೊಂಡಿದ್ದವರು. ಅವರು ಇಹಲೋಕ ತ್ಯಜಿಸಿದ ಮೇಲೆ ಅವರ ಸಾವಿನ ವಿಚಾರ ಮುಂದಿಟ್ಟುಕೊಂಡು ಬೇರೆಯವರಿಗೆ ತೊಂದರೆ ಕೊಡುವುದು ಬೇಡ ಎಂಬ ಕುಟುಂಬಸ್ಥರ ನಿಲುವು ತನಿಖೆಯನ್ನು ಜಟಲಗೊಳಿಸಿದೆ. ಹೀಗಾಗಿ ಬೇರೆ ಬೇರೆ ಮೂಲಗಳಿಂದ ಮಾಹಿತಿ ಕಲೆಹಾಕಿ ಈ ಪ್ರಕರಣದ ವಾಸ್ತವ ಅಂಶ ಭೇದಿಸಲು ಪ್ರಯತ್ನಿಸುತ್ತಿದ್ದೇವೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Ad Widget
Click to comment

Leave a Reply

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಮಂಗಳೂರು

MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ

Published

on



Ad Widget

Ad Widget

Ad Widget

Ad Widget

MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.

Ad Widget

Ad Widget <> Ad Widget

ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.



Ad Widget

ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

Ad Widget

Ad Widget

ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.

EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading