ರಾಜಕೀಯ
IT Raid : ಬಿಜೆಪಿ ವಿರುದ್ದ 40% ಭ್ರಷ್ಟಚಾರದ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷನ ಮನೆಗೆ ಐಟಿ ದಾಳಿ – ಮಂಚದ ಕೆಳಗೆ ಬಾಕ್ಸ್, ಬ್ಯಾಗ್‌ನಲ್ಲಿದ್ದ 20 ಕೋ. ಸಹಿತ 42 ಕೋಟಿ ಜಪ್ತಿ ; ಪಂಚ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಈ ಹಣ ಸಂಗ್ರಹಿಸಿಟಟ್ಟಿತ್ತು : ಪ್ರತಿಪಕ್ಷ ಆರೋಪ
ಬೆಂಗಳೂರು: ರಾಜ್ಯದ ಎರಡು ಗುತ್ತಿಗೆ ಕಂಪನಿಗಳು ಹಾಗೂ 10ಕ್ಕೂ ಹೆಚ್ಚು ಗುತ್ತಿಗೆದಾರರಿಗೆ ಸಂಬಂಧಪಟ್ಟ 45ಕ್ಕೂ ಹೆಚ್ಚು ಸ್ಥಳಗಳ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ಮಾಡಿದ್ದು, ಒಟ್ಟು ₹ 42 ಕೋಟಿ ನಗದು ಜಪ್ತಿ ಮಾಡಿದ್ದಾರೆ. ಗುರುವಾರ ಬೆಳಿಗ್ಗೆ ದಾಳಿ ಮಾಡಿದ್ದ ಅಧಿಕಾರಿಗಳು, ಶುಕ್ರವಾರ ರಾತ್ರಿಯೂ ಶೋಧ ಮುಂದುವರಿಸಿದರು.
ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಆರ್. ಅಂಬಿಕಾಪತಿ ಮನೆ ಹಾಗೂ ಕುಟುಂಬಸ್ಥರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಂಬಿಕಾಪತಿ-ಪತ್ನಿ ಅಶ್ವತಮ್ಮ ವಾಸವಿರುವ ಮಾನ್ಯತಾ ಟೆಕ್‌ಪಾರ್ಕ್ ಬಳಿ ಮನೆ, ಮಗ ಪ್ರದೀಪ್ ವಾಸವಿರುವ ಆರ್.ಟಿ.ನಗರ ಸುಲ್ತಾನ್‌ಪಾಳ್ಯದಲ್ಲಿರುವ ಮನೆ, ಇನ್ನೊಬ್ಬ ಮಗನ ಮನೆ ಹಾಗೂ ಇತರೆ ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ಶೋಧ ನಡೆಸಿದರು
ಅಂಬಿಕಾಪತಿ ಮಗ ಪ್ರದೀಪ್ ಮನೆಯಲ್ಲಿ ₹ 20 ಕೋಟಿ ನಗದು ಜಪ್ತಿ ಮಾಡಿದ್ದಾರೆ. ಅವರ ಮನೆಯ ಮಂಚದ ಅಡಿಯಲ್ಲಿ 21 ರಟ್ಟಿನ ಬಾಕ್ಸ್‌ಗಳಲ್ಲಿ ಇಷ್ಟು ಹಣವನ್ನು ಬಚ್ಚಿಡಲಾಗಿತ್ತು. ಬಾಕ್ಸ್ ಹಾಗೂ ಬ್ಯಾಗ್‌ಗಳಲ್ಲಿ ₹ 500 ಮುಖ ಬೆಲೆಯ ನೋಟುಗಳ ಕಂತೆಗಳು ಇದ್ದವು. ಆದಾಯ ತೆರಿಗೆ ಇಲಾಖೆ ಸಿಬ್ಬಂದಿ ಅದನ್ನು ಹೊರಗೆ ತೆಗೆದಿದ್ದು ಇದರ ಪೋಟೊ ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಜ್ಯದಲ್ಲಿ ಅತಿ ದೊಡ್ಡ ನಗದು ಪತ್ತೆ ಪ್ರಕರಣ
ರಾಜ್ಯದ ಹಲವು ಸರ್ಕಾರಿ ಕಾಮಗಾರಿಗಳನ್ನು ಗುತ್ತಿಗೆ ಪಡೆದಿರುವ ಕಂಪನಿಗೆ ಸಂಬಂಧಪಟ್ಟ ಹೈದರಾಬಾದ್‌ನ ಸ್ಥಳದಲ್ಲೂ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಈ ಸ್ಥಳದಲ್ಲಿ ₹ 15 ಕೋಟಿ ನಗದು ಪತ್ತೆ ಆಗಿರುವುದಾಗಿ ಗೊತ್ತಾಗಿದೆ. ಕಾರ್ಯಾಚರಣೆ ವೇಳೆ ಸಿಕ್ಕ ಕಂತೆ ಕಂತೆ ನೋಟುಗಳನ್ನು ಕಂಡು ಸ್ವತಃ ಐಟಿ ಅಧಿಕಾರಿಗಳೇ ದಂಗಾಗಿದ್ದಾರೆ. ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಐಟಿ ದಾಳಿಗಳ ಪೈಕಿ ಅತಿ ದೊಡ್ಡ ನಗದು ಪತ್ತೆಯಾದ ದಾಳಿ ಇದಾಗಿದೆ ಎ೦ದು ಇಲಾಖೆ ಮೂಲಗಳು ತಿಳಿಸಿವೆ.
‘ಗುರುವಾರ ಬೆಳಿಗ್ಗೆಯಿಂದ ಶುಕ್ರವಾರ ರಾತ್ರಿಯವರೆಗೆ ಅಂಬಿಕಾಪತಿ ಮಗ ಪ್ರದೀಪ್ ಮನೆಯಲ್ಲಿ ₹ 20 ಕೋಟಿ, ಹೈದರಾಬಾದ್‌ನಲ್ಲಿ ₹ 15 ಕೋಟಿ ಸೇರಿದಂತೆ ಒಟ್ಟು ₹ 42 ಕೋಟಿ ನಗದು ಜಪ್ತಿ ಮಾಡಲಾಗಿದೆ’ ಎಂದು ಮೂಲಗಳು ಹೇಳಿವೆ.
‘ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ದಾಳಿಗಳನ್ನು ಮಾಡಲಾಗಿದ್ದೂ ನಗದು ಜೊತೆ
ಸಾಕಷ್ಟು ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ಅವುಗಳ ಪರಿಶೀಲನೆ ನಡೆಸಲಾಗುತ್ತಿದೆ. ಹಲವು ಗುತ್ತಿಗೆದಾರರ ಮನೆಗಳಲ್ಲಿ ಶನಿವಾರವೂ ಶೋಧ ಮುಂದುವರಿಯಲಿದೆ ‘ ಎಂದು ಮೂಲಗಳು ತಿಳಿಸಿವೆ.
ತೆಲಂಗಾಣ ಚುನಾವಣೆಗೆ
ಆದಾಯ ತೆರಿಗೆ ಇಲಾಖೆ ಬಿಬಿಎಂಪಿ ಗುತ್ತಿಗೆದಾರನ ಮಗನ ಮನೆಯಲ್ಲಿ ವಶಪಡಿಸಿಕೊಂಡಿರುವ ₹ 42 ಕೋಟಿ ಸಂಗ್ರಹದ ಹಿಂದೆ ‘ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ’ಯ ಕೈ ಕರಾಮತ್ತು ಇದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಹಣ ತೆಲಂಗಾಣ ಚುನಾವಣೆಗೆ ಕಳುಹಿಸಲು ಸಂಗ್ರಹಿಸಿದ್ದು ಎನ್ನುವ ಮಾಹಿತಿ ಇದೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆ ಪಕ್ಷದ ಹೈಕಮಾಂಡ್‌ಗೆ ಹಬ್ಬ. ಪಂಚರಾಜ್ಯ ಚುನಾವಣೆ ಘೋಷಣೆ ಆಗಿದ್ದೇ ತಡ ಇತರೆ ರಾಜ್ಯಗಳ ಚುನಾವಣಾ ಖರ್ಚಿಗೆ ಬೇಕಾದ ಹಣವನ್ನು ಹೈಕಮಾಂಡ್‌ಗೆ ನೀಡಲು ಕಾಂಗ್ರೆಸ್ ರಾಜ್ಯ ಘಟಕ ಸಂಗ್ರಹ ಮಾಡುತ್ತಿದೆ. ಐಟಿ ದಾಳಿಯಿಂದ ಗುಟ್ಟು ರಟ್ಟಾಗಿದೆ. ಕಾಂಗ್ರೆಸ್ ಪರ್ಸಂಟೇಜ್ ವ್ಯವಹಾರವೂ ಸಾಬೀತಾಗಿದೆ ಎಂದು ದೂರಿದ್ದಾರೆ. ಆಯ್ದ ಗುತ್ತಿಗೆದಾರರಿಗೆ ಬಿಬಿಎಂಪಿ ₹650 ಕೋಟಿ ಬಿಡುಗಡೆ ಮಾಡಿದ ಬೆನ್ನಲೇ ₹ 42 ಕೋಟಿ ಸಿಗುತ್ತದೆ. ಈ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಬಿಐ ಇಡಿ ಸೇರಿದಂತೆ ಯಾವ ತನಿಖೆಗೆ ವಹಿಸುತ್ತಾರೆ ಎಂದು ಕುಟುಕಿದ್ದಾರೆ.
ಚುನಾವಣೆಗೆ ಬಳಕೆ ಸುಳ್ಳು
ರಾಜ್ಯದ ಹಣ ಪಂಚರಾಜ್ಯಗಳ ಚುನಾವಣೆಗೆ ಬಳಕೆ ಮಾಡುತ್ತಾರೆ ಎಂಬ ಆರೋಪ ಸಂಪೂರ್ಣ ಸುಳ್ಳು. ಅದನ್ನು ಅವರು ನೋಡಿದ್ದಾರಾ? ಅಥವಾ ನೀವು ನೋಡಿದ್ದೀರಾ? ಇಂತಹ ಸುಳ್ಳು ಆರೋಪಗಳಿಗೆ ನಾವು ಉತ್ತರ ಕೊಡಬೇಕಾಗಿಲ್ಲ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನ ಜೊತೆ ಶನಿವಾರ ಮಾತಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ರಾಜಕೀಯ ಪ್ರೇರಿತ ದಾಳಿ: ಡಿ.ಕೆ.ಶಿವಕುಮಾರ್
ಕರ್ನಾಟಕದಲ್ಲಷ್ಟೇ ಅಲ್ಲ ಬಿಜೆಪಿಯೇತರ ಪಕ್ಷಗಳು ಅಧಿಕಾರದಲ್ಲಿರುವ ಇತರೆ ರಾಜ್ಯಗಳಲ್ಲೂ ರಾಜಕೀಯ ಪ್ರೇರಿತ ದಾಳಿಗಳು ನಡೆಯುತ್ತಿವೆ ಪ್ರಸ್ತುತ ದೇಶದಲ್ಲಿ ರಾಜಕೀಯ ಉದ್ದೇಶವಿಲ್ಲದೆ ಐಟಿ ದಾಳಿ ನಡೆಯುವುದಿಲ್ಲ. ಪಂಚರಾಜ್ಯಗಳ ಚುನಾವಣೆಗೆ ಕರ್ನಾಟಕದಿಂದ ಹಣ ಕಳಿಸಲಾಗುತ್ತಿದೆ ಎಂಬ ಆರೋಪವೂ ಸತ್ಯವಲ್ಲ. ಹಾದಿಬೀದಿಯಲ್ಲಿ ಹೋಗುವವರ ಮಾತಿಗೆ ಉತ್ತರಿಸುವ ಅಗತ್ಯವೂ ಇಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಅಂಬಿಕಾಪತಿ:
ಈ ಅಂಬಿಕಾಪತಿ ಕಳೆದ ಬಾರಿ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು. ರಾಜ್ಯದಲ್ಲಿ ನಡೆಯುವ ಕಾಮಗಾರಿಗೆ ಶೇಕಡಾ 40ರಷ್ಟು, ಬಿಬಿಎಂಪಿಯಲ್ಲಿ 50 ಪರ್ಸೆಂಟ್ ನೀಡಬೇಕು ಎಂದು ಹೇಳಿ ಕೆಲವು ರಾಜಕೀಯ ನಾಯಕರ ಮೇಲೆ ಗಂಭೀರ ಆರೋಪ ಮಾಡಿದ್ದರು.
ಸ್ಥಳೀಯ
Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ
ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.
ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.
ರಾಜಕೀಯ
U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್
ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಬಿಚ್ಚಿಟ್ಟಿದ್ದಾರೆ
ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.
ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ
ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548
ಅಂತರ ರಾಜ್ಯ
Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್
ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.
ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.
ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.
ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.
ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.
ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.
ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.
ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.
-
ಬಿಗ್ ನ್ಯೂಸ್20 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಪುತ್ತೂರು17 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಮಂಗಳೂರು19 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಅಂತರ ರಾಜ್ಯ23 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಬಿಗ್ ನ್ಯೂಸ್18 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ19 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ರಾಜ್ಯ22 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
-
ಅಪರಾಧ18 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ


















