Uncategorized
ಪುತ್ತೂರು ಸರ್ಕಾರಿ ಆಸ್ಪತ್ರೆಗೆ 9 ಲಕ್ಷದ ಕೊಡುಗೆ ಹಸ್ತಾಂತರಿಸಿದ ರೆಡ್ ಕ್ರಾಸ್
ಪುತ್ತೂರು: ಸಮಾಜ ಮುಖಿ ಕಾರ್ಯದಲ್ಲಿ ತೊಡಗಿರುವ ರೆಡ್ ಕ್ರಾಸ್ ಸಂಸ್ಥೆ ಮಾಡುತ್ತಿರುವುದು ದೇವರ ಕೆಲಸ. ಇದು ಅನಾರೋಗ್ಯ ಪೀಡಿತರ, ಅಶಕ್ತರ ಆರೈಕೆಗೆ ಮನೆಗೆ ನರ್ಸ್ ಗಳನ್ನು ಕಳುಹಿಸಿ ಸೇವೆ ನೀಡುತ್ತಿರುವ ಏಕೈಕ ಸಂಸ್ಥೆಯಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.
ಅವರು ಸೋಮವಾರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು ವತಿಯಿಂದ ಪುತ್ತೂರು ಸರ್ಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರಕ್ಕೆ ಒಂದು ಡಯಾಲಿಸಿಸ್ ಯಂತ್ರ, ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಒಂದು ಮಲ್ಟಿ ಪ್ಯಾರಾ ಮಾನಿಟರ್, ಹೊರಪ್ರಾಂಗಣದ ನಿರೀಕ್ಷಣಾ ಕೊಠಡಿಗೆ ಒಂದು ದೊಡ್ಡ ಟೆಲಿವಿಷನ್ ಸೇರಿ 9ಲಕ್ಷದ ಕೊಡುಗೆ ಹಸ್ತಾಂತರ ನಡೆಸಿ ಮಾತನಾಡಿದರು.
ಸರ್ಕಾರದ್ದು ಆಮೆ ನಡಿಗೆಯಾಗಿದ್ದು, ಅನುದಾನಗಳು, ಉಪಕರಣಗಳು ನಿಧಾನಕ್ಕೆ ಬರುತ್ತಿರುತ್ತದೆ. ಇಂತಹ ಸಂದರ್ಭದಲ್ಲಿ ರೆಡ್ ಕ್ರಾಸ್ ನಂತಹ ಸಂಸ್ಥೆಗಳು ನೀಡುವ ಕೊಡುಗೆಗಳು ರೋಗಿಗಳ ನೋವನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗುತ್ತದೆ. ಸಮಾಜಕ್ಕಾಗಿ ಸಮಯ ಕೊಟ್ಟು ಕೆಲಸ ಮಾಡುವವರ ಪಡೆಯೊಂದು ಪುತ್ತೂರಿನ ರೆಡ್ ಕ್ರಾಸ್ ನಲ್ಲಿದ್ದು ಇಂತಹವರ ಕೊರತೆ ಸಮಾಜದಲ್ಲಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಸಂಜೀವಿನಿ ಎಂಬ ಉತ್ತರ ಭಾರತದ ಕಂಪೆನಿ ಈ ಹಿಂದೆ ರಾಜ್ಯದಲ್ಲಿ ಡಯಾಲಿಸಿಸ್ ಯಂತ್ರಗಳ ಮೆಯಿಂಟೆನೆನ್ಸ್ ಮಾಡುತಿತ್ತು. ಅವರು ಹೆಚ್ಚು ಮುತುವರ್ಜಿ ಹಾಗೂ ಆಸಕ್ತಿಯಿಂದ ಕೆಲಸ ಮಾಡುತ್ತಿರಲಿಲ್ಲ. ಹೀಗಾಗಿ ಈ ವಿಚಾರವನ್ನು ಆರೋಗ್ಯ ಮಂತ್ರಿ ಹಾಗೂ ಆರೋಗ್ಯ ಕಾರ್ಯದರ್ಶಿರವರ ಗಮನಕ್ಕೆ ತಂದಿದೆ. ತತ್ ಪರಿಣಾಮ ಅವಧಿ ಪೂರ್ವ ಟೆಂಡರ್ ಕರೆದು ನೆಪ್ರೋ ಎಂಬ ಸಂಸ್ಥೆಗೆ ಮೆಯಿಂಟೆನೆನ್ಸ್ ನೀಡಲಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಡಯಾಲಿಸಿಸ್ ಕೇಂದ್ರದಲ್ಲಿ ಉತ್ತಮ ಸಿಗಲಿದೆ. ಅಲ್ಲದೇ ಹಳೆ ಸಿಬ್ಬಂದಿಗಳನ್ನೇ ಮುಂದುವರಿಸಿಕೊಂಡುಹೋಗಬೇಕೆಂದು ಸೂಚಿಸಲಾಗಿದೆ ಎಂದರು
ಪುತ್ತೂರು ಸರಕಾರಿ ಆಸ್ಫತ್ರೆಯಲ್ಲಿ 2 ಡಯಾಲಿಸಿಸ್ ಯಂತ್ರಗಳ ಕೊರತೆಯಿದೆ. ಜಿಲ್ಲೆಯಲ್ಲೆ ಅತ್ಯುತ್ತಮ ಸೇವೆ ನೀಡುವ ಸರಕಾರಿ ಆಸ್ಫತ್ರೆ ಇದು. ಇಲ್ಲಿಗೆ ಅಗತ್ಯವಿರುವ ಬೇಡಿಕೆಯ ಪಟ್ಟಿಯನ್ನು ಕೊಟ್ಟರೆ ಅದಕ್ಕೆ ಅನುದಾನ ತರಿಸುವ ಕೆಲಸ ಮಾಡುತ್ತೇನೆ. ಸರ್ಕಾರಿ ಕಛೇರಿಗಳಲ್ಲಿ ಸಿಬ್ಬಂದಿಯ ಕೊರತೆಯಿದ್ದು , ಕಡಿಮೆ ಇರುವ ಸಿಬ್ಬಂದಿಗಳನ್ನೆ ಹೆಚ್ಚು ಬಳಸಿಕೊಳ್ಳುವ ಕಾರ್ಯವಾಗಬೇಕು. .ಅತ್ಯುತ್ತಮ ಸೇವೆ ನೀಡುವ ಮೂಲಕ ಹೆಸರು ಎತ್ತರಕ್ಕೆ ಕೊಂಡೊಯ್ಯುವ ಕಾರ್ಯ ಮಾಡಿ . ಇಲ್ಲಿ ಜನರು ಚಿಕಿತ್ಸೆಗೆ ಕ್ಯೂ ನಿಲ್ಲುತ್ತಿರುವುದು ಕಂಡು ಬರುತ್ತಿದ್ದು, ಇದು ಕಮ್ಮಿಯಾಗಬೇಕು ಎಂದು ಅವರು ಹೇಳಿದರು
ಪ್ರತಿದಿನ 90-100 ರೋಗಿಗಳಿಗೆ ಡಯಾಲಿಸಿಸ್
4 ವರ್ಷದ ಹಿಂದೆ ನಮ್ಮಲ್ಲಿ ಕೇವಲ 5 ಡಯಾಲಿಸಿಸ್ ಯಂತ್ರವಿತ್ತು. ಹೀಗಾಗಿ ರೋಟರಿಯವರು ಡಯಾಲಿಸಿಸ್ ಯಂತ್ರ ಕೊಡುವ ಪ್ರಸ್ತಾವನೆಯನ್ನು ನೀಡಿದ್ದರು . ಸ್ಥಳಾವಕಾಶದ ಕೊರತೆಯಿಂದ ಆಗ ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ. ಡಾ| ರಾಜೇಂದ್ರರವರು ಜಿಲ್ಲಾಧಿಕಾರಿಗಳಾಗಿ ಬಂದ ಬಳಿಕ ಅಗತ್ಯ ಅನುದಾನ ಒದಗಿಸಿದ್ದು ಸ್ಥಳಾವಕಾಶ ಕೊರತೆಯನ್ನು ನೀಗಿಸಲಾಯಿತು. ಬಳಿಕ ರೋಟರಿಯವರು 6 ಡಯಾಲಿಸಿಸ್ ಯಂತ್ರ ಕೊಟ್ಟಿದ್ದಾರೆ ಎಂದು ಪುತ್ತೂರು ಸರಕಾರಿ ಆಸ್ಫತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ಆಶಾ ಜ್ಯೋತಿ ತಿಳಿಸಿದರು
ಹಿಂದೆ ಪ್ರತಿದಿನ 45-50 ರೋಗಿಗಳಿಗೆ ಡಯಾಲಿಸಿಸ್ ಮಾಡಲಾಗುತಿತ್ತು .ಈಗ ಅದು 90 ರಿಂದ 100 ರೋಗಿಗಳಿಗೆ ತಲುಪಿದೆ. ಇನ್ನು ಎರಡು ಡಯಾಲಿಸಿಸ್ ಯಂತ್ರಗಳನ್ನು ಹಾಕಲು ಸ್ಥಳಾವಕಾಶವಿದೆ. ಸರಕಾರಿ ಆಸ್ಫತ್ರೆಯಲ್ಲಿ ರೆಡ್ ಕ್ರಾಸ್ ಸಂಸ್ಥೆಯವರ ಜನೌಷಧಿ ಕೇಂದ್ರವಿದ್ದು, ಇದರಿಂದ ಬಂದ ಲಾಭದ ಹಣದಿಂದ ಈಗ 9 ಲ ರೂ ವೆಚ್ಚದಲ್ಲಿ ವಿವಿಧ ಕೊಡುಗೆಗಳನ್ನು ಆ ಸಂಸ್ಥೆ ಮಾಡಿದೆ ಎಂದರು
ರೆಡ್ ಕ್ರಾಸ್ ಪುತ್ತೂರು ಘಟಕದ ಸಭಾಪತಿ ಸಂತೋಷ್ ಕುಮಾರ್ ಶೆಟ್ಟಿ, ಉಪಸಭಾಪತಿ ಪದ್ಮನಾಭ ಶೆಟ್ಟಿ, ಕಾರ್ಯದರ್ಶಿ ಆಸ್ಕರ್ ಆನಂದ, ಕೋಶಾಧಿಕಾರಿ ಯುನಿಕ್ ಅಬ್ದುಲ್ ರಹಿಮಾನ್ ಉಪಸ್ಥಿತರಿದ್ದರು. ಪ್ಯಾಟ್ರಿಕ್ ಸುಪ್ರಿಯಾ ಮಸ್ಕರೆಂಜಸ್ ಕಾರ್ಯಕ್ರಮ ನಿರೂಪಿಸಿದರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
Uncategorized
Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.
ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.
ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.
ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.
ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ಅಪರಾಧ20 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ20 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್19 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ನಿಧನ ವಾರ್ತೆ18 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ದಕ್ಷಿಣ ಕನ್ನಡ17 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ಅಪರಾಧ18 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್23 hours agoMuraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ
-
ಬಿಗ್ ನ್ಯೂಸ್18 hours agoGirish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್ಗೆ ಹೈಕೋರ್ಟ್ನಲ್ಲಿ ಹಿನ್ನಡೆ; ಎಫ್ಐಆರ್ ರದ್ದುಪಡಿಸಲು ನಿರಾಕರಣೆ















