ದಕ್ಷಿಣ ಕನ್ನಡ
Harish Poonja | ಕರ್ತವ್ಯ ನಿರತ ಅರಣ್ಯಾಧಿಕಾರಿಗೆ ‘ಅವನು ಯಾರ್ರಿ ಲೋಫರ್ ನನ್ ಮಗ’ ಎಂದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ : ಕರ್ತವ್ಯ ನಿರತ , ಯುನಿಫಾರ್ಮ್ ನಲ್ಲಿದ್ದ ವಲಯ ಅರಣ್ಯಾಧಿಕಾರಿಗಳಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿರುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ದೂರು ದಾಖಲಾದಂತೆ ಧರ್ಮಸ್ಥಳ ಪೊಲೀಸರು ಸೆಕ್ಷನ್ 353 ರಂತೆ ಜಾಮೀನು ರಹಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಇದರೊಂದಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜಾರ ವಿರುದ್ದ ಪುತ್ತೂರು ಸಹಾಯಕ ಆಯುಕ್ತರಿಗೂ ದೂರು ನೀಡಲಾಗಿದೆ.

ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೆ ನಂಬರ್ 309 ರ ನಿಡ್ಲೆ ವಿಕೃತ ಬ್ಲಾಕ್ 2ರಲ್ಲಿ ಅಮ್ಮಿನಡ್ಕ – ಕುದ್ದ ನಿವಾಸಿ ಲೋಲಾಕ್ಷ ಬಿನ್ ದೇವಣ್ಣ ಗೌಡರು ರವರು ಅರಣ್ಯ ಇಲಾಖೆಯ ಜಾಗವನ್ನು ಒತ್ತುವರಿ ಮಾಡಿ ನೂತನ ಮನೆ ನಿರ್ಮಾಣಕ್ಕೆ ಮುಂದಾಗಿರುವ ಬಗ್ಗೆ ಮಂಗಳೂರು ಅರಣ್ಯ ಇಲಾಖೆಗೆ ದೂರು ಬಂದಿತ್ತು. ಈ ಹಿನ್ನೆಲೆ ಅ.6 ರಂದು ಅರಣ್ಯ ಇಲಾಖೆ ಸಿಬ್ಬಂದಿಗಳು ನೂತನ ಮನೆಯ ಫೌಂಡೇಶನ್ ತೆರವುಗೊಳಿಸಿದ್ದರು.
ಶಾಸಕ ಹರೀಶ್ ಪೂಂಜ ಅ.7 ರಂದು ಸ್ಥಳಕ್ಕೆ ಭೇಟಿ ನೀಡಿ ಅರಣ್ಯಾಧಿಕಾರಿಗಳ ಕ್ರಮದ ವಿರುದ್ದ ಪ್ರತಿಭಟನೆ ನಡೆಸಿದ್ದರು. ಸ್ಥಳದಲ್ಲಿ ಯುನಿಫಾರ್ಮ್ ನಲ್ಲಿದ್ದ ಆರ್.ಎಫ್.ಓ ಬಗ್ಗೆ ‘ಅವನು ಯಾರ್ರಿ ಲೋಫರ್ ನನ್ ಮಗ’ ಎಂದು ಎಂದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ವಿಡಿಯೋ ರಾಜ್ಯ ಕಾಂಗ್ರೇಸ್ ತನ್ನ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿತ್ತು.
ರಾಜ್ಯ ಕಾಂಗ್ರೇಸ್ ಪ್ರಕಟಿಸಿದ್ದ ವಿಡಿಯೋ:
https://x.com/INCKarnataka/status/1711620534197502350?t=xulBevGF8KtVZpOHv2lccA&s=08
ಅರಣ್ಯ ಇಲಾಖೆ ಜಾಗವನ್ನು ಒತ್ತುವರಿ ನಡೆಸಿದವರು ಹಾಗೂ ಇದಕ್ಕೆ ಸಹಕರಿಸಿದ 11 ಜನರ ವಿರುದ್ಧ ಅ.7ರಂದು ಧರ್ಮಸ್ಥಳ ಠಾಣೆಯಲ್ಲಿ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ದೂರು ದಾಖಲಿಸಿದ್ದರು.
ಅ.9 ರಂದು ಮತ್ತೆ ಮೇಲಾಧಿಕಾರಿಗಳ ಆದೇಶದಂತೆ ಎಸಿಎಫ್ ಸುಬ್ಬಯ್ಯ ನಾಯ್ಕ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ.ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ದೇವಣ್ಣ ಗೌಡರವರ ಅವರ ಮನೆಯ ಶೆಡ್ ತೆರವಿಗೆ ಮುಂದಾಗಿದ್ದರು. ಜಿಲ್ಲೆಯ ಹಲವು ಶಾಸಕರು ಪ್ರಕರಣದಲ್ಲಿ ದೇವಣ್ಣ ಗೌಡರ ಅವರ ಪರ ನಿಂತು ಶೆಡ್ ತೆರವುಗೊಳಿಸದಂತೆ ನೋಡಿಕೊಂಡರು.
ಈ ಸಂದರ್ಭ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ.ರವರಿಗೆ ಅವಾಚ್ಯ ಪದ ಬಳಸಿ ನಿಂದಿಸಿರುವ ಬಗ್ಗೆ ಅಕ್ಟೋಬರ್ 13ರಂದು ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
-
ನಿಧನ ವಾರ್ತೆ23 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು19 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಮಂಗಳೂರು21 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ರಾಜ್ಯ23 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ23 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ22 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಪರಾಧ18 hours agoBantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
-
ಅಂತರ ರಾಜ್ಯ22 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ


















