Uncategorized
koraga Community: ದಸಾರಕ್ಕೆ ಕೊರಗ ವೇಷ ಧರಿಸಿದರೆ 6 ವರ್ಷ ಕಾರಗೃಹ – ಕಂಬಳ, ಸೀಮಂತಗಳಲ್ಲಿ ಶೋಷಿಸಿದರೂ ಜೈಲು; ಸುತ್ತೋಲೆಯಲ್ಲಿ ಏನೇನಿದೆ ಗೊತ್ತೇ ?
ಮಂಗಳೂರು: ದಕ್ಷಿಣ ಕವ್ವಡ ಜಿಲ್ಲೆಯಲ್ಲಿ ದಸರಾ ಆಚರಣೆ ಸಮಯದಲ್ಲಿ ಅನ್ಯ ಸಮುದಾಯದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಜಾತಿ ನಿಂದನೆ ಮಾಡಿದರೆ ಜೈಲು ಶಿಕ್ಷೆ ವಿಧಿಸುವುದಾಗಿ ಜಿಲ್ಲಾಡಳಿತ ಸುತ್ತೋಲೆ ಹೊರಡಿಸಿದೆ. ದಸರಾ ಹಬ್ಬಗಳ ಸಮಯದಲ್ಲಿ ಇಂತಹ ಪ್ರಸಂಗಗಳು ಕಂಡುಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ತಿಳಿಸಲು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕೊರಗ ಸಮುದಾಯ ಕರ್ನಾಟಕದ ಪ್ರಮುಖ ಆದಿವಾಸಿ ಜನಾಂಗ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಹಾಗಾಗಿಯೂ ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಈ ಜನಾಂಗ ಕಂಡು ಬರುತ್ತಿದೆ. ನಾಗರೀಕ ಸಮಾಜದಿಂದ ದೂರವಾಗಿ, ಅರಣ್ಯ ಪ್ರದೇಶಗಳಲ್ಲಿ ತಮ್ಮದೇ ಆದ ರೀತಿಯಲ್ಲಿ ಬದುಕು ಕಟ್ಟಿಕೊಂಡಿದ್ದ ಈ ಜನಾಂಗದ ಮೇಲೆ ನಡೆಯುತ್ತಿದ್ದ ದೌರ್ಜನ್ಯವನ್ನು ತಡೆಯಲು ಸರಕಾರ ಜಾರಿಗೆ ತಂದ ಅತಿ ಪ್ರಮುಖ ಕಾಯಿದೆ ಕೊರಗರ ಅಜಲು ಪದ್ಧತಿ ನಿಷೇಧ.
ಈ ಕಾಯಿದೆ ಬಂದ ಮೇಲೆ ಮೇಲ್ವರ್ಗದ ಜಾತಿಯವರು ಕೊರಗ ಜನಾಂಗದವರ ಮೇಲೆ ಮಾಡುತ್ತಿದ್ದ ಶೋಷಣೆ ಬಹುತೇಕ ಹತೋಟಿಗೆ ಬಂದಿದೆ. ಹಾಗಿದ್ದೂ ದಸಾರ ಹಬ್ಬದ ಸಂದರ್ಭ ಹರಕೆಯ ನೆಪವೊಡ್ಡಿ ಕೊರಗ ಜನಾಂಗದವರ ವೇಷ ಧರಿಸುವ ಪರಿಪಾಠ ಕರಾವಳಿ ಭಾಗದಲ್ಲಿ ಕಂಡು ಬರುತ್ತಿದೆ. ಹೀಗಾಗಿ ಇದಕ್ಕೆ ಸಂಪೂರ್ಣ ನಿಯಂತ್ರಣ ಹೇರುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸುತ್ತೋಲೆ ಹೊರಡಿಸಿದೆ. ಇದರ ಜತೆಗೆ ಕೊರಗ ಸಮುದಾಯದ ಮೇಲೆ ನಡೆಯುತ್ತಿರುವ ಇನ್ನು ಹಲವು ಶೋಷಣೆಗಳಿಗೆ ಕಡಿವಾಣ ಹಾಕಿ ಆದೇಶಿಸಿದೆ.
ಅಮವಾಸ್ಯೆ ದಿನಗಳಲ್ಲಿ ಕೊರಗ ಜನಾಂಗದವರ ಹೆಂಗಸರಿಗೆ ಉಗುರು ತಲೆ ಕೂದಲುಗಳನ್ನು ಊಟದಲ್ಲಿ ಹಾಕಿ ಉಣಲು ನೀಡುವುದು, ಚಿಕ್ಕ ಮಕ್ಕಳಿಗೆ ಕಾಯಿಲೆ ಇದ್ದಾಗ ಕೊರಗ ಜನಾಂಗದ ಮಹಿಳೆಯನ್ನು ಕರೆದು ಆ ಮಗುವಿಗೆ ಹಾಲು ಉಣಿಸಲು ಬಳಸಿಕೊಂಡು ಮಗುವಿನ ಕಾಯಿಲೆಯನ್ನು ಕೊರಗ ಜನಾಂಗದವರಿಗೆ ಹರಡುವಂತೆ ಮಾಡುವುದು ನಿಷೇಧಿಸಲಾಗಿದೆ.
ಜಿಲ್ಲೆಯ ಜಾನಪದ ಕ್ರೀಡೆಯಾದ ಕಂಬಳದಲ್ಲಿ ಕಂಬಳದ ಹಿಂದಿನ ದಿನ ಕಂಬಳದ ಕೆರೆಯಲ್ಲಿ ಕುಪ್ಪಿ ಚೂರು, ಮುಳ್ಳು ಮುಂತಾದವು ಇರುವ ಬಗ್ಗೆ ಕಂಬಳದ ಹಿಂದಿನ ದಿನ ಕಂಬಳದ ಕೆರೆಯಲ್ಲಿ ಕೊರಗ ಜನಾಂಗದವರನ್ನು ಬಳಸಿಕೊಳ್ಳುವುದು, ಜಾತ್ರೆ, ಕಂಬಳ ಮತ್ತಿತರ ಸಾರ್ವಜನಿಕ ಸಮಾರಂಭಗಳಲ್ಲಿ ಕೊರಗ ಜನಾಂಗದವರನ್ನು ಡೋಲು ಬಡಿಸಿ ಕುಣಿತಕ್ಕೆ ಬಳಸಿಕೊಳ್ಳುವುದು ನಿಷೇಧಿಸಲಾಗಿದೆ.
ಬೇರೆ ಜನಾಂಗದವರ ಹೆಂಗಸರಿಗೆ ಸೀಮಂತದ ದಿನ ಕೊರಗ ಜನಾಂಗದ ಮಹಿಳೆಯನ್ನು ಕರೆದು ಎಂಜಲು ಊಟ ಮಾಡಿಸಿ ಸೀಮಂತಳ ಮೇಲಿರುವ ದೃಷ್ಟಿ ತೆಗೆಯಲು ಬಳಸಿಕೊಳ್ಳುವುದು ನಿಷೇಧಿಸಲಾಗಿದೆ.
ಈ ಎಲ್ಲ ಚಟುವಟಿಕೆಗಳು ಕೊರಗರ ಅಜಲು ಪದ್ಧತಿ ನಿಷೇಧ ಕಾಯಿದೆಯಡಿ ಬರುವುದರಿಂದ ಇಂತಹ ಆಚರಣೆಗಳು ಕಂಡು ಬಂದಲ್ಲಿ ಅಂತಹ ಪ್ರಕರಣಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989ರ ಅಡಿಯಲ್ಲಿ ನೋಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು. 5ರಿಂದ 6 ವರ್ಷಗಳ ವರೆಗೆ ಕಾರಾಗೃಹವಾಸ ಮತ್ತು 5000 ರೂ. ದಂಡ ವಿಧಿಸಲಾಗುವುದು
.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
Uncategorized
Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.
ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.
ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.
ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.
ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ಅಪರಾಧ20 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ20 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್19 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ನಿಧನ ವಾರ್ತೆ18 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ದಕ್ಷಿಣ ಕನ್ನಡ17 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ಅಪರಾಧ18 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್23 hours agoMuraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ
-
ಬಿಗ್ ನ್ಯೂಸ್18 hours agoGirish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್ಗೆ ಹೈಕೋರ್ಟ್ನಲ್ಲಿ ಹಿನ್ನಡೆ; ಎಫ್ಐಆರ್ ರದ್ದುಪಡಿಸಲು ನಿರಾಕರಣೆ















