ಪುತ್ತೂರು
Pilirang | ಅ.22ಕ್ಕೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಸಾರಥ್ಯದ ‘ಪಿಲಿರಂಗ್ ಸೀಸನ್-2’ – ಪ್ರಥಮ 3,33,333 ಲಕ್ಷ ರೂ , ದ್ವಿತೀಯ 2,22,222 ರೂ ಬಹುಮಾನ : ಕಾರ್ಯಕ್ರಮದ ಸಂಪೂರ್ಣ ವಿವರ ಇಲ್ಲಿದೆ
ಪುತ್ತೂರು: ಹುಲಿ ಕುಣಿತದಂತಹ ಸಾಂಸ್ಕೃತಿಕ ಕಲೆ ನಮ್ಮ ಊರಿಗೂ ಬರಲಿ ಎಂಬ ಉದ್ದೇಶದಿಂದ ಆರಂಭಗೊಂಡಿರುವ ಪುತ್ತರ‍್ದ ಪಿಲಿರಂಗ್‌ನ (Pilirang) ಸೀಸನ್ -2 ಪುತ್ತೂರು ಕಿಲ್ಲೆ ಮೈದಾನದಲ್ಲಿ ಅ. 22ರಂದು ನಡೆಯಲಿದೆ ಎಂದು ಪಿಲಿರಂಗ್ ಸಾರಥ್ಯ ವಹಿಸಿರುವ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರಿಗೆ ಹೆಸರು ಬರಬೇಕು ಎಂಬ ನಿಟ್ಟಿನಲ್ಲಿ ಪಿಲಿರಂಗ್ ಆರಂಭ ಮಾಡಿದ್ದೇವೆ. ಜಾತ್ಯಾತೀತ, ಪಕ್ಷಾತೀತ ನೆಲೆಯಲ್ಲಿ ಎಲ್ಲರ ಒಳಗೊಳ್ಳುವಿಕೆಯೊಂದಿಗೆ ಇದು ನಡೆಯಲಿದೆ ಎಂದರು.
ಬೆಳಗ್ಗೆ ಗಣಹೋಮ, ದುರ್ಗಾಪೂಜೆಯ ಬಳಿಕ ತುಳು ಧ್ವಜಾರೋಹಣವನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ಮಾಡಲಿದ್ದಾರೆ.
10.30ಕ್ಕೆ ಶಾಸಕ ಅಶೋಕ್ ಕುಮಾರ್ ರೈ ಅವರು ಉದ್ಘಾಟನೆಯ ಮೂಲಕ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಒಟ್ಟು 8 ತಂಡವನ್ನು ಆಹ್ವಾನ ಮಾಡಿದ್ದೆವು. ಉಳಿದೆರಡು ತಂಡಗಳು ಬೇಡಿಕೆ ಮುಂದಿಟ್ಟ ಕಾರಣ 10 ತಂಡಗಳು ಪಿಲಿರಂಗಿನಲ್ಲಿ ಭಾಗವಹಿಸಲಿವೆ. ಪ್ರತಿ ತಂಡಕ್ಕೆ ಪ್ರದರ್ಶನಕ್ಕೆ 25 ನಿಮಿಷ ಸಮಯ ನೀಡಲಾಗಿದೆ. ಮೂವರು ತೀರ್ಪುಗಾರರಿದ್ದು, ರಾತ್ರಿವರೆಗೂ ಕಾರ್ಯಕ್ರಮ ನಡೆಯಲಿದೆ ಎಂದರು.
ತಂಡದಲ್ಲಿ 15 ಹುಲಿ ಇರಲೇಬೇಕು. ಇದರೊಂದಿಗೆ ಪಟ್ಟೆ ಹುಲಿ, ಕಪ್ಪು ಹುಲಿ, ಮುಡಿ ಎತ್ತುವುದು ಹೀಗೆ ವಿವಿಧ ಆಯಾಮಗಳು ಇರಲಿವೆ.
ಭರ್ಜರಿ ಬಹುಮನ : ಗೆದ್ದ ತಂಡಗಳಿಗೆ ಬಹುಮಾನವಾಗಿ ಪ್ರಥಮ ರೂ. 3,33,333 ರೂ., ದ್ವಿತೀಯ ರೂ. 2,22,222 ನೀಡಲಾಗುವುದು. ಹಾಗೂ ತೃತೀಯ ಹಾಗೂ ಚತುರ್ಥ ಬಹುಮಾನವಾಗಿ ಟಿವಿ ನೀಡಲಾಗುವುದು. ಅಲ್ಲದೇ, ಭಾಗವಹಿಸುವ ಉಳಿದ ಎಂಟು ತಂಡಗಳಿಗೂ ತಲಾ 50 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿದರು.

ಇಂದು ಆಮಂತ್ರಣ ವಿತರಣೆ
ಅ.20 ರಂದು ಅಪರಾಹ್ನ 3 ಗಂಟೆಗೆ ದರ್ಬೆ ವೃತ್ತದಿಂದ ಬೊಳುವಾರು ತನಕ ಆಮಂತ್ರಣ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪಿಲಿರಂಗ್ ಕ್ರೀಡಾ ಸಮಿತಿ ಗೌರವಾಧ್ಯಕ್ಷ ಚಂದ್ರಹಾಸ್ ಶೆಟ್ಟಿ, ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಕಾರ್ಯಾಧ್ಯಕ್ಷ ಶಿವರಾಮ್ ಆಳ್ವ, ಕೋಶಾಧಿಕಾರಿ ರಂಜಿತ್ ಬಂಗೇರ, ಉಪಾಧ್ಯಕ್ಷ ರೋಶನ್ ರೈ ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.
ಶಿಕ್ಷಣ
Ambika-ಅಂಬಿಕಾ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ
ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು.
ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು
ನೀಡಿದ್ದು, ದೇಶದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯಲ್ಲಿ ತನ್ನದೇ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಹೇಳಿದರು.

ಅವರು ನವೆಂಬರ್ 20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತ,
ರೆ. ಫಾ. ಪತ್ರವೋ ಇವರ ದೂರದರ್ಶಿ ಚಿಂತನೆಯ ಫಲವಾಗಿ ಈ ಕಾಲೇಜು ಜನ್ಮತಾಳಿದ್ದು, ಇಂದು ಮತ್ತಷ್ಟು ಮೂಲ ಸೌಕರ್ಯಗಳ ವಿಸ್ತರಣೆಯೊಂದಿಗೆ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಅಣಿಯಾಗಿದೆ. ಸುಸಜ್ಜಿತ ಮೂಲ ಸೌಕರ್ಯಗಳ ವಿಸ್ತರಣೆಗೆ ಕಾರಣೀಕರ್ತರಾದ ಎಲ್ಲರನ್ನೂ ಅಭಿನಂದಿಸಿ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

ಇನ್ನೋರ್ವ ಮುಖ್ಯ ಅತಿಥಿಗಳಾದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಕಾರ್ಯದರ್ಶಿಗಳಾದ ರೆ. ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಳೆದ ಹಲವಾರು ದಶಕಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿದೆ. ಇಂದು ಬದಲಾದ ಪರಿಸ್ಥಿತಿಯಲ್ಲಿ ಮೂಲ ಸೌಕರ್ಯಗಳ ವಿಸ್ತರಣೆಯನ್ನು ಮನಗಂಡು ದಾನಿಗಳ ಸಹಾಯದಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಉತ್ತಮ ಸೌಕರ್ಯಗಳನ್ನು ನಿರ್ಮಿಸಿದ್ದೇವೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಉಪಾಧ್ಯಕ್ಷರಾದ ಮೊನ್ಸಿಂಜೋರ್ ಮ್ಯಾಕ್ಸಿಮ್ ಎಲ್ ನೋರೋನ್ಹ ಮಾತನಾಡಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬೆಳವಣಿಗೆಗಳು ತುಂಬಾ ಸಂತೋಷವನ್ನು ನೀಡುತ್ತಿದ್ದು, ಇಂದು ವಿದ್ಯಾರ್ಥಿಗಳಿಗೆ ನೀಡಿದ ಹೆಚ್ಚುವರಿ ಸೌಲಭ್ಯಗಳು ಸಂಸ್ಥೆಯ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲೂ ಕಾಲೇಜು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲಿ ಎಂದು ಆಶಿಸಿದರು.
ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಮೇಲ್ವಿಚಾರಣೆಯನ್ನು ನಿರ್ವಹಿಸಿದ ಓಸ್ವಾಡ್ಡ್ ಲೂಯಿಸ್ ಹಾಗೂ ಜೋಸೆಫ್ ಸೆರವೋರನ್ನು ಸನ್ಮಾನಿಸಲಾಯಿತು.
ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ಅ್ಯಂಟೋನಿ ಒಲಿವೆರಾ, ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ರೆ. ಫಾ. ಮ್ಯಾಕ್ಸಿಮ್ ಡಿ’ ಸೋಜಾ, ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಪ್ಯಾರಿಸ್ ಧರ್ಮ ಗುರುಗಳಾದ ರೆ.ಫಾ ಮಾರ್ವಿನ್ ಪ್ರವೀಣ್ ಲೋಬೋ ಹಾಗೂ ಚ್ಯಾರಿಟಿ ಟೀಮ್ ನ ಸದಸ್ಯರಾದ ಸ್ಟೀಫನ್ ಪಿಂಟೋ, ಓಸ್ವಾಲ್ಡ್ ರೋಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ದಾನಿಗಳು, ಗಣ್ಯರು, ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ನೂತನ ಕಟ್ಟಡದಲ್ಲಿ ವಿಸ್ತೃತ ಸಭಾಂಗಣ, ವಿಜ್ಞಾನ ಪ್ರಯೋಗಾಲಯಗಳು, ಉಪನ್ಯಾಸಕರ ಕೊಠಡಿಗಳು, ತರಗತಿ ಕೋಣೆಗಳು ಹಾಗೂ ಸುಸಜ್ಜಿತ ಶೌಚಾಲಯಗಳು ವಿಧ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಿದೆ.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ, ಉಪನ್ಯಾಸಕರಾದ ಸುಮಾ ಡಿ ವಂದಿಸಿ, ಡಾ. ಆಶಾ ಸಾವಿತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.
-
ರಾಜಕೀಯ24 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್23 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ದಕ್ಷಿಣ ಕನ್ನಡ21 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ನಿಧನ ವಾರ್ತೆ22 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ಅಪರಾಧ22 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್6 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಮಂಗಳೂರು22 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ
-
ನಿಧನ ವಾರ್ತೆ6 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ















