Uncategorized
Puttur Piligobbu ʼಪುತ್ತೂರುದ ಪಿಲಿಗೊಬ್ಬು – 2023 ಹಾಗೂ ಫುಡ್ ಫೆಸ್ಟ್ʼ ರಾಜ್ಯದ ಗಮನ ಸೆಳೆಯುವ ರೀತಿ ಆಯೋಜನೆ – 25 ಸಾವಿರ ಮಂದಿ ಭಾಗಿ : ಗೌರವಾಧ್ಯಕ್ಷ ಸಹಜ್ ರೈ
ಪುತ್ತೂರು: ತುಳು ನಾಡಿನ ಧಾರ್ಮಿಕ ಹಿನ್ನೆಲೆ ಇರುವ ಜಾನಪದ ಕಲೆಯಾದ ಹುಲಿವೇಷ ಕುಣಿತವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅ. 22 ರಂದು ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ ರಾಜ್ಯದ ಗಮನ ಸೆಳೆಯುವಂತಹ ಪುತ್ತೂರುದ ಪಿಲಿಗೊಬ್ಬು -೨೦೨೩ ಹಾಗೂ ಫುಡ್ ಫೆಸ್ಟ್ ಕಾರ್ಯಕ್ರಮವನ್ನು ಹಮ್ಮಿಕೊಳಲಾಗಿದೆ ಎಂದು ಪುತ್ತೂರುದ ಪಿಲಿಗೊಬ್ಬು ಸಮಿತಿಯ ಗೌರವಾಧ್ಯಕ್ಷ ಸಹಜ್ ರೈ ಬಳಜ್ಜ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಲಿಗೊಬ್ಬು ಕಾರ್ಯಕ್ರಮದ ಉದ್ಘಾಟನೆಯು ಅ. 22 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟನೆ ನೆರವೇರಿಸಲಿದ್ದಾರೆ. ಪಿಲಿಗೊಬ್ಬು ವೇದಿಕೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ನೆರವೇರಿಸಲಿದ್ದು, ಪುತ್ತೂರಿನ ಹಿರಿಯ ವೈದ್ಯರಾದ ಡಾ. ಎಂ.ಕೆ. ಪ್ರಸಾದ್ ಭಂಡಾರಿ ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದರು.
25 ಸಾವಿರ ಮಂದಿ ಭಾಗಿ
ಕಳೆದ 3 ವರ್ಷಗಳ ಹಿಂದೆ ಆರಂಭಗೊಂಡು ಸಾಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ವಿಜಯ ಸಾಮ್ರಾಟ್ ಪುತ್ತೂರು ಆಶ್ರಯದಲ್ಲಿ ಪ್ರಥಮ ಬಾರಿಗೆ ಈ ಅಭೂತಪೂರ್ವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸುಮಾರು25 ಸಾವಿರಕ್ಕೂ ಮಿಕ್ಕಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಪ್ರಥಮ ಬಹುಮಾನ 3 ಲಕ್ಷ
ಪುತ್ತೂರುದ ಪಿಲಿಗೊಬ್ಬಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಆಯ್ದ 10 ಹುಲಿವೇಷ ತಂಡಗಳನ್ನು ಆಹ್ವಾನಿಸಿ ಅವರೊಳಗೆ ಉತ್ತಮ ನಿರ್ವಹಣೆ ಮಾಡಿದ ತಂಡಕ್ಕೆ ಪ್ರಥಮ ಬಹುಮಾನ ರೂ.3 ಲಕ್ಷ, ದ್ವಿತೀಯ ಬಹುಮಾನ2 ಲಕ್ಷ ಹಾಗೂ ತೃತೀಯ ಬಹುಮಾನ 1 ಲಕ್ಷ ಹಾಗೂ ಪ್ರೋತ್ಸಾಹಕ ಬಹುಮಾನ ನೀಡಿ ಗೌರವಿಸಲಾಗುವುದು. ಭಾಗಿಯಾದ ತಂಡಗಳಿಗೂ ಗೌರವ ಸಂಭಾವನೆಯನ್ನು ನೀಡಿ ಗೌರವಿಸಲಾಗುವುದು.

ಹಲವು ಪುರಸ್ಕರ
ಜೊತೆಗೆ ಸಮಗ್ರ ತಂಡ ಪ್ರಶಸ್ತಿ, ಸಮಗ್ರ ಶಿಸ್ತಿನ ತಂಡ, ಗುಂಪು ಪ್ರಶಸ್ತಿ ವಿಭಾಗದಲ್ಲಿ ಉತ್ತಮ ತಾಸೆ, ಉತ್ತಮ ಬಣ್ಣ, ಉತ್ತಮ ಧರಣಿ ಮಂಡಲ ಕುಣಿತ, ವೈಯುಕ್ತಿಕ ಪ್ರಶಸ್ತಿ ವಿಭಾಗದಲ್ಲಿ ಕಪ್ಪು ಹುಲಿ, ಮರಿ ಹುಲಿ, ಪುತ್ತೂರುದ ಹುಲಿ ಮುಡಿ ಹಾರಿಸುವುದು, ನಾಣ್ಯ ತೆಗೆಯುವುದಕ್ಕೆ ವಿಶೇಷ ಬಹುಮಾನವಿದೆ. ಪ್ರತಿ ತಂಡದಲ್ಲಿ15 ಹುಲಿವೇಷ ಹಾಗೂ ಪ್ರತಿ ತಂಡಕ್ಕೆ ಹುಲಿ ವೇಷ ಕುಣಿತದ ಕಲಾ ಪ್ರದರ್ಶನ ನೀಡಲು 23 ನಿಮಿಷದ ಕಾಲಾವಕಾಶವಿರುತ್ತದೆ ಎಂದು ಮಾಹಿತಿ ನೀಡಿದರು.
ಕ್ಷೇತ್ರದಲ್ಲಿ ಉತ್ತಮ ಪರಿಣತಿ ಹೊಂದಿದ ಜಿಲ್ಲೆಯ ಖ್ಯಾತ ತೀರ್ಪುಗಾರರು ಭಾಗವಹಿಸಲಿದ್ದಾರೆ. ಕಾರ್ಯಕ್ರಮ ವೀಕ್ಷಿಸಲು ತುಳುನಾಡಿನ ಹೆಸರಾಂತ ಕೋಸ್ಟಲ್ ವುಡ್ ಹಾಗೂ ರಾಜ್ಯದ ಹೆಸರಾಂತ ಸ್ಯಾಂಡಲ್ವುಡ್ ನಟ-ನಟಿಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಪುತ್ತೂರು ಫುಡ್ ಫೆಸ್ಟ್
ಅ. 21 ಸಂಜೆ 4 ಗಂಟೆಗೆ ಫುಡ್ ಫೆಸ್ಟ್ ಕಾರ್ಯಕ್ರಮದ ಉದ್ಘಾಟನೆಯನ್ನು ಶಂಕರ್ ಗ್ರೂಪ್ನ ಆಡಳಿತ ನಿರ್ದೇಶಕ ಸತ್ಯಶಂಕರ್ ಭಟ್ ನೆರವೇರಿಸಲಿದ್ದಾರೆ. ಆಹಾರ ಮೇಳವು ಅ. 21 ರ ಸಂಜೆ 4 ರಿಂದ ರಾತ್ರಿ 11 ರ ತನಕ ಹಾಗೂ ಅ. 22 ರ ಬೆಳಗ್ಗೆ 10 ಗಂಟೆಯಿಂದ ರಾತ್ರಿ 11 ಗಂಟೆ ತನಕ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ತಿಳಿಸಿದರು.

ಪಗೋಡ ಮಾದರಿಯ ಸುಂದರ ಸುಸಜ್ಜಿತ ಆಹಾರ ಮಳಿಗೆಯಲ್ಲಿ ಬರ್ಗರ್, ಸ್ಯಾಂಡ್ ವಿಚ್, ವಿವಿಧ ಬಗೆಯ ದೋಸೆಗಳು, ವಿವಿಧ ಬಗೆಯ ಐಸ್ ಕ್ರೀಮ್ಗಳು, ಮೊಕ್ ಟೈಲ್ ಜ್ಯೂಸ್, ಮಟ್ಕಾ ಸೋಡಾ, ಕರಾವಳಿಯ ರುಚಿಕರ ಖಾದ್ಯಗಳ ಸಹಿತ ನಲವತ್ತಕ್ಕೂ ಅಧಿಕ ವಿವಿಧ ಖಾದ್ಯಗಳ ಮಳಿಗೆಗಳು ವಿಜ್ರಂಭಿಸಲಿವೆ ಎಂದು ಅವರು ತಿಳಿಸಿದರು.
ವಿಶೇಷ ಆಕರ್ಷಣೆ
ಕಲಾಭಿಮಾನಿಗಳಿಗೆ ಕಾರ್ನರ್ನಲ್ಲಿ ತಮ್ಮ ಭಾವಚಿತ್ರವನ್ನು ತಗೆದು ಸಂಭ್ರಮಿಸಲು ಆಕರ್ಷಕ ವಿನ್ಯಾಸದ ಸೆಲ್ಫಿ ಕಾರ್ನರ್ ರಚಿಸಲಾಗಿದೆ. ರಾಜಕೀಯ ರಹಿತವಾಗಿ ನಡೆಯುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ವಿನಂತಿಸಿದರು.

ಸುದ್ದಿಗೋಷ್ಠಿಯಲ್ಲಿ ಪುತ್ತೂರುದ ಪಿಲಿಗೊಬ್ಬು ಸಮಿತಿ ಸಂಚಾಲಕ ನಾಗರಾಜ ಭಟ್ ನಡುವಡ್ಕ, ಕಾಯಾಧ್ಯಕ್ಷ ಸುಜಿತ್ ರೈ ಪಾಲ್ತಾಡಿ, ಪ್ರಧಾನ ಕಾರ್ಯದರ್ಶಿ ಶರತ್ ಆಳ್ವ ಕೂರೇಲು ಉಪಸ್ಥಿತರಿದ್ದರು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
-
ಮಂಗಳೂರು21 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ20 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಕಾರ್ಯಕ್ರಮಗಳು21 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ15 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
Uncategorized22 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
-
ಶಿಕ್ಷಣ20 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
ಶಿಕ್ಷಣ22 hours agoPhilomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
-
ಮಂಗಳೂರು16 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















