Connect with us

ದಕ್ಷಿಣ ಕನ್ನಡ

ಬಂಟ್ವಾಳದ ಕಡೇಶಿವಾಲಯ : ಲವ್‌ ಫೈಲ್ಯೂರ್ – ಯುವಕ ಸೂಸೈಡ್‌

Published

on

Ad Widget

Ad Widget

Ad Widget

Ad Widget

ವಿಟ್ಲ: ಪ್ರೇಮ ವೈಫಲ್ಯಕ್ಕೆ ಒಳಗಾದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್‌ ಠಾಣಾ ವ್ಯಾಪ್ತಿಯ ಕಾಮಾಜೆ ಎಂಬಲ್ಲಿ ನಡೆದಿದೆ. ಕಡೇಶಿವಾಲಯ ಗ್ರಾಮದ ನೆಲ್ಲಿಗುಡ್ಡ ನಿವಾಸಿ ದಿ.ಸುಂದರ ರವರ ಪುತ್ರ ಸಚಿನ್ (24 ವ.)ರವರು ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವಕನ ಜೇಬಿನಲ್ಲಿ ಸೂಸೈಡ್‌ ನೋಟ್‌ ಪತ್ತೆಯಾಗಿದೆ.

Ad Widget

Ad Widget

Ad Widget

Ad Widget

ಸಚಿನ್ ವೃತ್ತಿಯಲ್ಲಿ ಇಲೆಕ್ಟ್ರೀಷಿಯನ್‌ ಆಗಿದ್ದು ಬಂಟ್ವಾಳದ ಲೆವಿನ್ ಇಲೆಕ್ನಿಕಲ್ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ. ಅ.18 ರಂದು ಎಂದಿನಂತೆ ಮನೆಯಿಂದ ಕೆಲಸಕ್ಕೆಂದು ಹೋಗಿದ್ದಾನೆ . ಆದರೆ ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಮೊಬೈಲ್ ಗೆ ಕರೆ ಮಾಡಿದಾಗ ಅದು ರಿಂಗ್ ಆಗುತ್ತಿತ್ತು ವಿನಹ ರಿಸೀವ್ ಮಾಡುತ್ತಿರಲಿಲ್ಲ.

Ad Widget

Ad Widget alt="Ad Widget"/>

Ad Widget

ಹೀಗಾಗಿ ಮನೆಯವರು ಆಪ್ತರ ಜತೆ ಸೇರಿ ಹುಡುಕಲು ಮುಂದಾಗಿದ್ದಾರೆ. ಬಂಟ್ವಾಳದ ಕಾಮಾಜೆಯಲ್ಲಿರುವ ಮಾವನ ಮನೆಯವರಿಗೂ ಫೋನ್‌ ಮಾಡಿ ತಿಳಿಸಿದ್ದಾರೆ. ಅವರು ಹುಡುಕಾಟ ನಡೆಸಿದಾಗ ಮುಂಜಾನೆ ಸುಮಾರು 3 ಗಂಟೆಯ ವೇಳೆ ಈತನ ಸ್ಕೂಟರ್ ಬಿ.ಮೂಡ ಗ್ರಾಮದ ಮಿತ್ತಕೋಡಿ ಎಂಬಲ್ಲಿರುವ ಮೈದಾನದ ಬಳಿ ನಿಲ್ಲಿಸಲಾಗಿತ್ತು.

Ad Widget

Ad Widget <> Ad Widget

ಆದರೆ ಸಚಿನ್ ಅಲ್ಲಿ ಕಾಣದ ಹಿನ್ನೆಲೆಯಲ್ಲಿ ಫೋನ್ ಮಾಡಿದಾಗ ಅಲ್ಲೇ ಸಮೀಪದ ಗುಡ್ಡವೊಂದರಲ್ಲಿ ಫೋನ್ ರಿಂಗ್ ಆಗುತ್ತಿರುವುದು ಕೇಳುತ್ತಿತ್ತು. ಬಳಿಕ ಅಲ್ಲಿಗೆ ಹೋಗಿ ನೋಡಿದಾಗ ಸಚಿನ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.

ಆತ್ಮಹತ್ಯೆ ಮಾಡುವ ಮೊದಲು ಈತ ಚೀಟಿಯನ್ನು ಬರೆದು ಕಿಸೆಯಲ್ಲಿಟ್ಟಿದ್ದು, ಇದೀಗೆ ಚೀಟಿ ಪೋಲೀಸರ ಕೈ ಸೇರಿದೆ. ಇದರಲ್ಲಿ ಪ್ರೇಮ ವೈಫಲ್ಯದಿಂದ ದು:ಖಿತನಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಚೀಟಿಯಲ್ಲಿ ಬರೆದಿರುವುದಾಗಿ ಹೇಳಲಾಗುತ್ತಿದೆ. ಮೃತದೇಹವನ್ನು ಮರಣೋತ್ತಾರ ಪರೀಕ್ಷೆಗೆ ಕಳುಹಿಸಲಾಗಿದೆ.

Ad Widget

Ad Widget

ಬಂಟ್ವಾಳ ನಗರ ಠಾಣಾ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಮತ್ತು ಎಸ್. ಐ.ರಾಮಕೃಷ್ಣ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಪೊಲೀಸ್‌ ತನಿಖೆಯಿಂದ ಹೊರಬರಬೇಕಿದೆ.

Ad Widget
Click to comment

Leave a Reply

ಅಪರಾಧ

Punacha-ಪುಣಚದಲ್ಲಿ ಬೈಕ್‌ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?

Published

on

Ad Widget

Ad Widget

Ad Widget

Ad Widget

ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಬೈಕ್ ಸವಾರ ನಿಧಾನವಾಗಿ ರಸ್ತೆ ಏರುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಾಯಗೊಂಡಿದ್ದು, ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಅಪಘಾತದ ದೃಶ್ಯಗಳು ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಅದರ ಚಾಲಕನ ಪತ್ತೆಗೆ ಈ ದೃಶ್ಯಗಳು ಸಹಕಾರಿಯಾಗುವ ಸಾಧ್ಯತೆಯಿದೆ.

ಇನ್ನು ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕನ ಬಗ್ಗೆ ಸ್ಥಳೀಯವಾಗಿ ವಿವಿಧ ಚರ್ಚೆಗಳು ನಡೆಯುತ್ತಿದ್ದು, ಅಪಘಾತದ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದನೇ ಎಂಬ ಬಗ್ಗೆಯೂ ಆರೋಪಗಳು ಕೇಳಿಬಂದಿವೆ. ಆದರೆ ಈ ಆರೋಪಗಳಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

Ad Widget

Ad Widget

ಅಪಘಾತದ ಕುರಿತು ಸಂಬಂಧಪಟ್ಟ ಪೊಲೀಸ್ ಇಲಾಖೆ ಪರಿಶೀಲನೆ ನಡೆಸಿ, ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಆಧರಿಸಿ ವಾಹನ ಹಾಗೂ ಚಾಲಕನನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಗಾಯಾಳುವಿನ ಆರೋಗ್ಯ ಸ್ಥಿತಿ, ಅಪಘಾತಕ್ಕೆ ನಿಖರ ಕಾರಣ ಹಾಗೂ ಕಾರು ಚಾಲಕನ ಕುರಿತು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

Ad Widget
Continue Reading

ಅಪರಾಧ

Punacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!

Published

on

Ad Widget

Ad Widget

Ad Widget

Ad Widget

ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget

Ad Widget

Ad Widget

ವಿಟ್ಲ: ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget alt="Ad Widget"/>

Ad Widget

2024ರ ಡಿಸೆಂಬರ್ 11ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚದಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಸಂಜೀವ ನಾಯ್ಕ ತನ್ನ ಪತ್ನಿಗೆ ಹೃದಯಾಘಾತವಾಗಿದೆ ಎಂದು ನೆರೆಮನೆಯವರನ್ನು ನಂಬಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಮಹಿಳೆ ಮೃತಪಟ್ಟಿರುವುದಾಗಿ ಘೋಷಿಸಿದ್ದರು.

Ad Widget

Ad Widget <> Ad Widget

ಮೃತದೇಹದ ಮೇಲೆ ಅನುಮಾನಾಸ್ಪದ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸ್ ಠಾಣೆಯ ನಿರೀಕ್ಷಕ ಹೆಚ್.ಇ. ನಾಗರಾಜ್ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎನ್‌ಎಸ್ ಕಲಂ 105 ಭಾಗ-2ರ ಅಡಿಯಲ್ಲಿ ಆರೋಪಿಗೆ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ.

ಅಲ್ಲದೆ, ಬಿಎನ್‌ಎಸ್ ಕಲಂ 240ರ ಅಡಿಯಲ್ಲಿ ಸಾಕ್ಷ್ಯನಾಶ ಹಾಗೂ ಸುಳ್ಳು ಮಾಹಿತಿ ನೀಡಿದ ಅಪರಾಧಕ್ಕೆ 6 ತಿಂಗಳ ಸಾದಾ ಜೈಲು ಶಿಕ್ಷೆಯನ್ನೂ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ ವಾದ ಮಂಡಿಸಿದ್ದರು.

Ad Widget
Continue Reading

ನಿಧನ ವಾರ್ತೆ

Mangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು

Published

on

Ad Widget

Ad Widget

Ad Widget

Ad Widget

ಶಾಲೆ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ 2ನೇ ತರಗತಿಯ ವಿದ್ಯಾರ್ಥಿಯ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ. ಕಂಕನಾಡಿಯ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಮೃತಪಟ್ಟ ದುರ್ದೈವಿ.

Ad Widget

Ad Widget

Ad Widget

Ad Widget

ಮಂಗಳೂರು: ಶಾಲೆ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ 2ನೇ ತರಗತಿಯ ವಿದ್ಯಾರ್ಥಿಯ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕಂಕನಾಡಿಯ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಮೃತಪಟ್ಟ ದುರ್ದೈವಿ.

Ad Widget

Ad Widget <> Ad Widget

ನ.25ರಂದು ಸಂಜೆ ಸುಮಾರು 4.15ರ ವೇಳೆಗೆ ಶಾಲೆ ಮುಗಿದ ಬಳಿಕ ಬಾಲಕ ಮನೆಗೆ ತೆರಳಲು ಶಾಲೆಯ ಮುಂಭಾಗದಲ್ಲಿರುವ ಕಂಕನಾಡಿ–ಫಳ್ನೀರ್ ರಸ್ತೆಯನ್ನು ದಾಟುತ್ತಿದ್ದ. ಈ ವೇಳೆ ಫಳ್ನೀರ್ ಕಡೆಗೆ ತೆರಳಲು ನಿಂತಿದ್ದ ಖಾಸಗಿ ಬಸ್ ಚಾಲಕ ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯಿಂದ ಏಕಾಏಕಿ ಬಸ್ಸನ್ನು ಬಲಕ್ಕೆ ತಿರುಗಿಸಿ ಚಲಾಯಿಸಿದ್ದಾನೆ ಎನ್ನಲಾಗಿದೆ.

ಬಸ್ಸಿನ ಬಲಭಾಗ ಬಾಲಕನಿಗೆ ಡಿಕ್ಕಿಯಾದ ಪರಿಣಾಮ ಆತ ರಸ್ತೆಗೆ ಎಸೆಯಲ್ಪಟ್ಟಿದ್ದು, ಬಸ್ಸಿನ ಬಲ ಹಿಂಬದಿಯ ಚಕ್ರ ಬಾಲಕನ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಬಸ್ ಚಾಲಕ ಹಾಗೂ ಸ್ಥಳೀಯರು ತಕ್ಷಣವೇ ಸಮೀಪದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಂಜೆ 5.50ರ ಸುಮಾರಿಗೆ ಬಾಲಕ ಮೃತಪಟ್ಟಿದ್ದಾನೆ.

Ad Widget

Ad Widget

ಬಸ್ ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಪುತ್ರನ ಸಾವಿಗೆ ಕಾರಣವಾಗಿದ್ದು, ಆತನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಬಾಲಕನ ತಾಯಿ ಲಕ್ಷ್ಮೀ ಕಲಹಾಲ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!