ದಕ್ಷಿಣ ಕನ್ನಡ
ಚಾರ್ಮಾಡಿ ಘಾಟಿಯಲ್ಲಿ ವಿಟ್ಲದ ಬೈಕ್ – ಹಾಸನದ ಕಾರು ಅಪಘಾತ : 1 ಲಕ್ಷಕ್ಕೆ ಬೇಡಿಕೆಯಿಟ್ಟು ಹಲ್ಲೆ ನಡೆಸಿ ಕಾರಿನಲ್ಲಿದ್ದವರು ಬೈಕ್ ಕೊಂಡೊಯ್ದರೇ ? ಇತ್ತಂಡಗಳ ವಿರುದ್ದ ಕೇಸ್ ದಾಖಲಿಸಿ ಪೊಲೀಸ್ ಇಲಾಖೆ ನೀಡಿದ ಸ್ಪಷ್ಟನೆಯೇನು ?
ನೋಂದಣಿಯಾಗದ ಹೊಸ ಮಾರುತಿ ಎರ್ಟಿಗಾ ಕಾರು ಹಾಗೂ ವಿಟ್ಲ ಸಮೀಪದ ನಿವಾಸಿಗಳು ಚಲಾಯಿಸುತ್ತಿದ್ದ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿದ ಘಟನೆ ಅ.19ರಂದು ಚಾರ್ಮಾಡಿ ಘಾಟಿಯಲ್ಲಿ ನಡೆದಿರುವುದಾಗಿ ಹಾಗೂ ಈ ಕುರಿತು ಎರಡು ಪಕ್ಷದವರು, ತಮ್ಮ ಮೇಲೆ ಎದುರಾಳಿ ಪಕ್ಷದವರು ಹಲ್ಲೆ ನಡೆಸಿರುವುದಾಗಿ ದೂರು ನೀಡಿದ್ದಾರೆ. ಅಪಘಾತ ಹಾಗೂ ಹಲ್ಲೆ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಏತನ್ಮಧ್ಯೆ ಕಾರಿನಲ್ಲಿದ್ದವರುತಮ್ಮ ಬಳಿಯಿದ್ದ 10 ಸಾವಿರ ರೂಪಾಯಿ ದುಡ್ಡನ್ನು ಸುಲಿಗೆ ಮಾಡಿ ಬೈಕನ್ನು ಹೊತ್ತುಕೊಂಡು ಪರಾರಿಯಾಗಿರುವುದಾಗಿ ಖಾಸಗಿ ಆಸ್ಫತ್ರೆಯಲ್ಲಿ ದಾಖಲಾಗಿರುವ ಬೈಕ್ ಸವಾರರು ಆರೋಪಿಸಿದ್ದಾರೆ. ಆದರೇ ಇದನ್ನು ನಿರಾಕರಿಸಿರುವ ದಕ ಜಿಲ್ಲಾ ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸ್ಪಷ್ಟನೆ ನೀಡಿದೆ.
ಬೈಕ್ ನಲ್ಲಿದ್ದವರು ಮಾಡುವ ಆರೋಪವೇನು ?
ಪುಣಚ ನೀರ್ಕಜೆ ನಿವಾಸಿ ವೆಲ್ಡಿಂಗ್ ಕೆಲಸ ಮಾಡುತ್ತಿರುವ ಮನೋಜ್ ನೀರ್ಕಜೆ(26) ಮತ್ತು ಅವರೊಂದಿಗೆ ಸಹಾಯಕರಾಗಿರುವ ಪುಣಚದ ಮನೀಶ್ (18) ಅಪಘಾತಕ್ಕಿಡಾದ ಬೈಕಿನಲ್ಲಿದ್ದ ಸವಾರರು. ಮೂಡಿಗೆರೆಯಲ್ಲಿರುವ ಮನೋಜ್ ಅವರ ಅಕ್ಕನ ಮನೆಯಲ್ಲಿ ಪೂಜಾ ಕಾರ್ಯಕ್ರಮವಿದ್ದು, ಹೀಗಾಗಿ ಅ 19 ರಂದು ಬೆಳಿಗ್ಗೆ ಮನೋಜ್ ಮತ್ತು ಮನೀಶ್ ಬೈಕ್‌ನಲ್ಲಿ ವಿಟ್ಲದಿಂದ ಮೂಡಿಗೆರೆಗೆ ತೆರಳಿದ್ದಾರೆ. ಚಾರ್ಮಾಡಿ ಮೂರನೇ ತಿರುವುನಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಹೊಸ ಎರ್ಟಿಗಾ ಕಾರೊಂದು ಅವರ ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಕಮರಿಗೆ ಬಿದ್ದು, ಬೈಕ್ ಮತ್ತು ಕಾರಿಗೆ ಹಾನಿಯಾಗಿದೆ.
ಈ ವೇಳೆ ಕಾರಿನಿಂದ ಇಳಿದ ಅಪರಿಚಿತರು ಕಾರಿಗೆ ಹಾನಿಯಾಗಿರುವದಾಗಿ ಮತ್ತು ಅದರ ದುರಸ್ತಿಗೆ ರೂ.1 ಲಕ್ಷ ಕೊಡುವಂತೆ ಒತ್ತಾಯಿಸಿದ್ದಾರೆ. ಆದರೇ ಬೈಕ್ ಸವಾರರು ಹಣ ನೀಡಲು ನಿರಾಕರಿಸಿದ್ದು, ಪೊಲೀಸ್ ದೂರು ನೀಡುವಂತೆ ತಿಳಿಸಿದ್ದಾರೆ. ಅದಕ್ಕೆ ಕಾರಿನವರು ಪೊಲೀಸ್ ಕೇಸ್ ಬೇಡ ನೀವು ಹಣ ಕೊಡದಿದ್ದರೆ ನಿಮ್ಮ ಬೈಕ್ ಕೊಂಡೊಯ್ಯುತ್ತೇವೆ ಎಂದು ಬೆದರಿಸಿದರು. ಇದಕ್ಕೆ ಆಕ್ಷೇಪಿಸಿದಾಗ, ನಮ್ಮಲ್ಲಿದ್ದ ರೂ.10 ಸಾವಿರ ನಗದನ್ನು ತೆಗೆದುಕೊಂಡು ಬೈಕ್ ಸಮೇತ ಪರಾರಿಯಾಗಿದ್ದಾರೆ ಎಂದು ಮನೀಶ್ ಮತ್ತು ಮನೋಜ್ ಅವರು ಮಾಹಿತಿ ನೀಡಿದ್ದಾರೆ
ಘಟನೆ ಸ್ಥಳದಲ್ಲಿ ಯಾವುದೇ ಮೊಬೈಲ್ ನೆಟ್‌ವರ್ಕ್ ಸಿಗುತ್ತಿರಲಿಲ್ಲ . ಹೀಗಾಗಿ ಸುಮಾರು ಮೂರು ಕಿ.ಮೀನಷ್ಟು ದೂರ ಕೆಳಗೆ ಇಳಿದು ಬಂದು ನೆಟ್‌ವರ್ಕ್ ಲಭಿಸಿದ ಸ್ಥಳದಿಂದ ಪೊಲೀಸ್ ತುರ್ತು ಕರೆಗೆ ಕರೆ ಮಾಡಿದ್ದೇವು. 112 ಪೊಲೀಸರು ಬಂದು ನಮ್ಮನ್ನು ಉಜಿರೆ ಆಸ್ಪತ್ರೆಗೆ ಬಿಟ್ಟರು. ಆಸ್ಪತ್ರೆಯಿಂದ ನಮ್ಮನ್ನು ವೆನ್‌ಲಾಕ್‌ಗೆ ಶಿಫ್ಟ್ ಮಾಡಲು ಬರೆದಿದ್ದರು. ನಾವು ಪುತ್ತೂರು ಸರಕಾರಿ ಆಸ್ಪತ್ರೆಗೆ ಬಂದು ಅಲ್ಲಿಂದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದೇವೆ ಎಂದು ಈ ಇಬ್ಬರು ಮಾದ್ಯಮಗಳಿಗೆ ತಿಳಿಸಿದ್ದಾರೆ
ಪೊಲೀಸ್ ಇಲಾಖೆಯ ಸ್ಪಷ್ಟನೆ ಏನು ?
ಧರ್ಮಸ್ಥಳ ಠಾಣಾ ವ್ಯಾಪ್ತಿಯ ಚಾರ್ಮಾಡಿ ಎಂಬಲ್ಲಿ ಆ 19 ರಂದು ಸಂಜೆ ಬೈಕ್ – ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಬೈಕ್ ಸವಾರರಿಗೆ ಹಲ್ಲೆ ನಡೆಸಿ, ಅವರ ಬೈಕನ್ನು ಹಾಸನದ ಕಡೆಗೆ ತೆಗೆದುಕೊಂಡು ಹೋಗಿರುತ್ತಾರೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಪ್ರಸಾರವಾಗುತ್ತಿರುತ್ತದೆ. ವಾಸ್ತವವಾಗಿ ಚಾರ್ಮಾಡಿಯಲ್ಲಿ ಕಾರು-ಬೈಕ್ ನಡುವೆ ಅಪಘಾತ ನಡೆದ ಬಳಿಕ ಕಾರು ಹಾಗೂ ಬೈಕ್ ನಲ್ಲಿದ್ದವರು ಪರಸ್ಪರ ಜಗಳವಾಡಿಕೊಂಡಿರುತ್ತಾರೆ. ಆ ಬಳಿಕ ಕಾರಿನಲ್ಲಿದ್ದವರು ಸದರಿ ಬೈಕ್ ಅನ್ನು ಅಪಘಾತ ಸ್ಥಳದಿಂದ, ಬೆಳ್ತಂಗಡಿ ಸಂಚಾರ ಠಾಣೆಗೆ ತಂದು ಒಪ್ಪಿಸಿರುತ್ತಾರೆ. ಪ್ರಕರಣ ಮುಂದುವರಿದಂತೆ ಅಪಘಾತ ಪ್ರಕರಣಕ್ಕೆ ಹಾಗೂ ಆ ಬಳಿಕ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಇತ್ತಂಡಗಳಿಂದ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ, ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಈ ಬಗ್ಗೆ ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದಾಗಿ ವಿನಂತಿ ಎಂದು ದಕ ಜಿಲ್ಲಾ ಪೊಲೀಸರು ಪೇಸ್ ಬುಕ್ ನಲ್ಲಿ ಹಾಕಿದ ಸ್ಪಷ್ಟನೆಯಲ್ಲಿ ತಿಳಿಸಿದ್ದಾರೆ.

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಪ್ರಕರಣವೇನು ?
ಪ್ರಕರಣ 1:
ಬಂಟ್ವಾಳ ತಾಲೂಕು ಕೇಪು ಗ್ರಾಮದ ನಿವಾಸಿ ಮನೋಜ್‌ರವರು, ಅ 19 ರಂದು ಸಂಜೆ ಚಾರ್ಮಾಡಿ ಘಾಟಿಯ 3 ನೇ ತಿರುವಿನಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಾಗ, ನೋಂದಣಿಯಾಗದ ಎರಿಟಿಗಾ ಕಾರನ್ನು, ಅದರ ಚಾಲಕ ನಿರ್ಲಕ್ಯತನದಿಂದ ಚಲಾಯಿಸಿ, ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತವೆಸಗಿದ್ದಾನೆ. ಈ ಬಗ್ಗೆ ಬಗ್ಗೆ ಚಾರ್ಮಾಡಿ ಘಾಟಿಯ 1 ನೇ ತಿರುವಿನ ಬಳಿ, ಮಾತುಕತೆ ಮೂಲಕ ಇತ್ಯರ್ಥಪಡಿಸುತ್ತಿದ್ದಾಗ, ಅಪಘಾತಪಡಿಸಿದ ಕಾರಿನಲ್ಲಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ನನಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದಿರುವುದಾಗಿ ಮನೋಝ್ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ. 80/2023 ರಂತೆ ಐಪಿಸಿ ಕಲಂ:279,323,504 ರಡಿ ಪ್ರಕರಣ ದಾಖಲಾಗಿದೆ.
ಪ್ರಕರಣ 2:
ಇನ್ನೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾರಿನಲ್ಲಿದ್ದ ಹಾಸನಜಿಲ್ಲೆಯ ಅರಸಿಕೆರೆ ಬಳಿ ನಿವಾಸಿ ಲೋಲಮ್ಮ (48) ಎಂಬವರು ಮನೋಜ್ ಹಾಗು ಮನೀಶ್ ವಿರುದ್ದ ಅಪಘಾತ ಹಾಗೂ ಹಲ್ಲೆ ನಡೆಸಿದ ಬಗ್ಗೆ ದೂರು ನೀಡಿದ್ದಾರೆ. ಆರೋಪಿಗಳು ಮಗ ಹಾಗೂ ಪತಿಗೆ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿರುವುದಾಗಿ ಆರೋಪಿಸಿದ್ದು, ಐಪಿಸಿ ಕಲಂ:279,341,323, 504,506 ಜೊತೆಗೆ 34 ರಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 81/2023 ಪ್ರಕರಣ ದಾಖಲಾಗಿರುತ್ತದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
-
ನಿಧನ ವಾರ್ತೆ20 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು18 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು15 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ19 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ19 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ19 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ19 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ20 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















