Uncategorized
Heart Attack: ಕುಂದಾಪುರ: ವಿಧಿ ವಿಲಾಸ : ಹುಟ್ಟುಹಬ್ಬದ ಮರುದಿನವೇ ಬಾಲಕ ಹೃದಯಘಾತಕ್ಕೆ ಬಲಿ – ವರ್ಷದ ಹಿಂದೆ 8ನೇ ತರಗತಿಯಲ್ಲಿದ್ದ ಅಕ್ಕ ಮೃತ್ಯು – ಒಂದೇ ವರ್ಷದಲ್ಲಿ ಇಬ್ಬರು ಮಕ್ಕಳನ್ನು ಕಳಕೊಂಡ ಹೆತ್ತವರು
ಹಿಂದಿನ ದಿನವಷ್ಟೇ ಹುಟ್ಟು ಹಬ್ಬ ಆಚರಿಸಿಕೊಂಡಿದ್ದ 7 ನೇ ವರ್ಷದ ವಿದ್ಯಾರ್ಥಿ ಮರು ದಿನ ಶಾಲೆಗೆ ಹೋಗಲು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಕುಸಿದು ಬಿದ್ದ ಹಾಗೂ ಆಸ್ಫತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ತಲ್ಲೂರಿನಲ್ಲಿ ನಡೆದಿದೆ. ವರ್ಷದ ಹಿಂದೆಯಷ್ಟೆ ಈ ಬಾಲಕನ ಅಕ್ಕ ಕೂಡ ಇದೇ ರೀತಿ ಮೃತಪಟ್ಟಿದ್ದರು. ವರ್ಷದ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳಕೊಂಡ ಹೆತ್ತವರ ಆಕ್ರಂಧನ ಮುಗಿಲು ಮುಟ್ಟಿತ್ತು
ಅಕ್ಷರ ದಾಸೋಹ ಯೋಜನೆ ಕುಂದಾಪುರದ ಸಹಾಯಕ ನಿರ್ದೇಶಕ ಅರುಣ್ ಕುಮಾರ್‌ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢಶಾಲಾ ಶಿಕ್ಷಕಿ ಭಾರತಿ ದಂಪತಿಯ ಪುತ್ರ ಪೃಥ್ವಿರಾಜ್ ಶೆಟ್ಟಿ (12) ಅ.21 ರಂದು ಕುಸಿದು ಬಿದ್ದು ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ.
7ನೇ ತರಗತಿಯ ವಿದ್ಯಾರ್ಥಿ ಪೃಥ್ವಿರಾಜ್ ಶೆಟ್ಟಿ ಶನಿವಾರ ಬೆಳಗ್ಗೆ ಮನೆಯ ಬಳಿ ಶಾಲೆಯ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಪೃಥ್ವಿರಾಜ್ ಪೋಷಕರು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕನನ್ನು ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆಯೇ ಮೃತಪಟ್ಟಿರುವುದಾಗಿ ಪೋಷಕರಿಗೆ ತಿಳಿಸಿದ್ದಾರೆ.
ಹೃದಯಾಘಾತದಿಂದ ಬಾಲಕ ಪೃಥ್ವಿರಾಜ್ ಮೃತಪಟ್ಟಿರಬಹುದು ಎಂದು ವೃದ್ಯರು ಶಂಕೆ ವ್ಯಕ್ತಪಡಿಸಿದ್ದು, ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ಸಾವಿನ ನಿಖರ ಕಾರಣ ತಿಳಿಯಲಿದೆ. ತಂದೆ ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮರುಕಳಿಸಿದ ದುರಂತ
ಅರುಣ್ಕುಮಾರ ಶೆಟ್ಟಿ ಹಾಗೂ ಭಾರತಿ ಶೆಟ್ಟಿ ದಂಪತಿಗೆ ಓರ್ವ ಪುತ್ರಿ ಹಾಗೂ ಪುತ್ರ ಇದ್ದು ಮಗಳು ಕಳೆದ ವರ್ಷ ಹೃದಯಾಘಾತದಿಂದ ಮೃತಪಟ್ಟಿದ್ದು ಇದು ಅವರ ಮನೆಯಲ್ಲಿ ಸಂಭವಿಸಿದ ಎರಡನೇ ದುರಂತ. ಕಳೆದ ವರ್ಷ ಅ.27 ರಂದು 8ನೇ ತರಗತಿಯಲ್ಲಿ ಓದುತ್ತಿದ್ದ ಪುತ್ರಿ ಅನುಶ್ರೀ (14) ಮನೆಯಲ್ಲಿ ಓದುತ್ತಿರುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದರು. ಆಕೆಯ ಸಾವಿನ ವರ್ಷಾಂತಿಕಕ್ಕೆ 6 ದಿನ ಬಾಕಿ ಇರುವಾಗಲೇ ತಮ್ಮ ಬಾರದ ಲೋಕಕ್ಕೆ ತೆರಳಿದ್ದಾನೆ.
ಅ.20 ಪೃಥ್ವಿರಾಜ್ ಶೆಟ್ಟಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಕಳೆದ ವರ್ಷ ತಮ್ಮನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದ ಅಕ್ಕ ಅನುಶ್ರೀ, ಸಂಭ್ರಮ ಮುಗಿದ ಒಂದು ವಾರದ ಒಳಗೆ ಇಹಲೋಕ ತ್ಯಜಿಸಿದ್ದರು. ಅಕ್ಕನ ನೆನಪಿನಲ್ಲೇ ದುಖಃದಿಂದ ಹುಟ್ಟುಹಬ್ಬ ಆಚರಿಸಿದ್ದ ಪ್ರಥ್ವಿ, ಮರುದಿನವೇ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿರುವುದು ದುರದೃಷ್ಟಕರ ಸಂಗತಿಯಾಗಿದೆ
Uncategorized
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿಗೆ ‘ಅಂಬಿಯೋರ- 2026’; ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ
ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ ‘ಅಂಬಿಯೋರ- 2026’ ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ ‘ಅಂಬಿಯೋರ- 2026’ ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.
ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸ್ವಿನಿಕಾ ವಿಯೋಲಾ ಕ್ರಾಸ್ತಾ ಹಾಗೂ ಧ್ಯಾನ್ ಬಿ ಪ್ರಥಮ, ಪ್ರಾಡಕ್ಟ್ ಇನ್ನೊವೇಟಿವ್ ಚಾಲೆಂಜ್ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶಿವಾನಿ ಹಾಗೂ ಗಾನವಿ ಪ್ರಥಮ, ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಅದ್ವಿತಿ ಜಿ ಹಾಗೂ ಎ ಜಿ ಕೃತಿಕಾ ಪ್ರಥಮ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ವೇದಿತಾ ಕೆ ಮತ್ತು ತನುಶ್ರೀ ಬಿ ದ್ವಿತೀಯ, ಬಿಸ್ನೆಸ್ ಮಾಡೆಲ್ ಸ್ಪರ್ಧೆಯಲ್ಲಿ ಹೆಫ್ಜಿಬಾ ಎಂ ರಿನ್ಸಾನ್ ಹಾಗೂ ಪ್ರೀತಾ ಎ ದ್ವಿತೀಯ, ಬೆಸ್ಟ್ ಔಟ್ ಆಫ್ ವೇಸ್ಟ್ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸಜ್ನಾಜ್ ಮತ್ತು ಹಲೀಮತ್ ಸೌಧ ದ್ವಿತೀಯ ಹಾಗೂ ಮಿನಿ ಮಿಲಿಟಿಯ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶಹಾದ್ ಅಜಾರ್ ಮತ್ತು ಮೊಹಮ್ಮದ್ ರಫಾಜ್ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.
Uncategorized
Vivekananda-ವಿವೇಕಾನಂದ ಪದವಿ ಕಾಲೇಜಿನಲ್ಲಿ ‘ಸ್ವಾದಸಂಭ್ರಮ-2026’ ಆಹಾರ ಮೇಳ
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಮಾತನಾಡಿದರು.

ಪುತ್ತೂರು: ಆಹಾರ ಮೇಳ ಕೇವಲ ಆಹಾರ ಮಾರಾಟದ ಬಗ್ಗೆ ಮಾತ್ರವಲ್ಲ. ಇಲ್ಲಿ ವಿದ್ಯಾರ್ಥಿಗಳು ಉದ್ಯಮ ನಡೆಸುವಾಗ ಇರಬೇಕಾದ ಕೌಶಲ್ಯಗಳು, ಗ್ರಾಹಕರ ಮನಸ್ಥಿತಿ ಮತ್ತು ಅವರೊಂದಿಗೆ ವ್ಯವಹರಿಸಬೇಕಾದ ರೀತಿಯನ್ನು ಮೇಳಗಳಿಂದ ತಿಳಿದುಕೊಳ್ಳಬಹುದು. ಇದರ ನಡುವೆ ಬರುವ ಸೋಲು-ಗೆಲುವುಗಳನ್ನು ವಿದ್ಯಾರ್ಥಿಗಳು ಸಮನಾಗಿ ಸ್ವೀಕರಿಸಬೇಕು ಎಂದು ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಗೌರವ ಅತಿಥಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಮಾತನಾಡಿ, ಉದ್ದಿಮೆಯ ಬಗ್ಗೆ ಸೈದ್ಧಾಂತಿಕವಾಗಿ ಕಲಿತ ವಿಚಾರಗಳು ಇಲ್ಲಿ ಪ್ರಾಯೋಗಿಕವಾಗಿ ನಡೆಯುತ್ತಿದೆ. ಒಂದು ಉದ್ದಿಮೆಯನ್ನು ನಡೆಸಬೇಕಾದರೆ ಅದರಲ್ಲಿರುವಂತಹ ಕಷ್ಟ-ಸುಖಗಳನ್ನು ಅರಿಯಲು ಇಂತಹ ಮೇಳಗಳು ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ರೇಖಾ ಪಿ. ಉಪಸ್ಥಿತರಿದ್ದರು.
ಸ್ವಾದಸಂಭ್ರಮ ಆಹಾರ ಮೇಳ-2026ರ ವಿಜೇತರು:
ವ್ಯವಹಾರ ಅಧ್ಯಯನ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಒಟ್ಟು 14 ತಂಡಗಳು ಭಾಗವಹಿಸಿದ್ದು ಫ್ರೋಜನ್ ಡಿಲೈಟ್ ತಂಡ ಪ್ರಥಮ ಸ್ಥಾನ, ಬೈಟ್ ಬೈ ಬೈಟ್ ದ್ವಿತೀಯ ಸ್ಥಾನ ಪಡೆದುಕೊಂಡಿತು. ಉತ್ತಮ ನೈರ್ಮಲ್ಯ ಕಾಪಾಡುವಿಕೆ ವಿಭಾಗದಲ್ಲಿ ಸ್ವದೇಶೀ ಸ್ವಾದ್ ತಂಡ, ಗ್ರಾಹಕರೊಂದಿಗೆ ಉತ್ತಮ ಸಂವಹನ ವಿಭಾಗದಲ್ಲಿ ಫ್ಲೇವರ್ ತಂಡ, ಉತ್ತಮ ಪೋಸ್ಟರ್ ವಿಭಾಗದಲ್ಲಿ ಫ್ಲೇವರ್ ಹಂಟರ್ಸ್ ತಂಡ ಹಾಗೂ ಉತ್ತಮ ರೀಲ್ಸ್ ವಿಭಾಗದಲ್ಲಿ ಸ್ವದ್ಘಾಮ್ ತಂಡ ಪ್ರಶಸ್ತಿ ಪಡೆದಿಕೊಂಡಿದೆ.
ಕಾರ್ಯಕ್ರಮವನ್ನು ತೃತೀಯ ಕಲಾ ವಿಭಾಗದ ಕೆ. ಕೃತಿಕಾ ನಿರ್ವಹಿಸಿದರು.
Uncategorized
Ashok Rai-ಬದ್ಯಾರ್‌ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು ಕರೆಸಿ ಮಾತುಕತೆ ನಡೆಸಿದರು. ಒಂದು ಹಂತದಲ್ಲಿ ಮಾತುಕತೆ ಸಫಲವಾದರೂ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. ಬಳಿಕ ಎರಡನೇ ಸುತ್ತಿನ ಮಾತುಕತೆಯ ವೇಳೆ ಜಾಗದ ಮಾಲಿಕರು ರಸ್ತೆ ನಿರ್ಮಾಣಕ್ಕೆ ಒಪ್ಪಿಗೆಯನ್ನು ನೀಡಿದ್ದರು. ಒಪ್ಪಿಗೆ ಸೂಚಿತವಾದ ಬಳಿಕ ಅನುದಾನವನ್ನು ಇಟ್ಟು ಅಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕಳೆದ ವಾರ ಮಾಡಿ ಮುಗಿಸಲಾಗಿದೆ.

ಪುತ್ತೂರು: ಈ ಭಾಗದ ಜನರು ರಸ್ತೆಯಿಲ್ಲದೆ ಸುಮಾರು 50 ವರ್ಷಗಳಿಂದ ತೊಂದರೆಯಲ್ಲಿದ್ದರು, ಇಲ್ಲಿ ಸುಮಾರು ಹತ್ತು ಮನೆಗಳಿದೆ, ಮನೆ ಕಟ್ಟುವಾಗ ಇವರೆಲ್ಲಾ ಕಲ್ಲನ್ನು ಕಾಲು ದಾರಿಯ ಮೂಲಕ ಹೊತ್ತುಕೊಂಡೇ ಹೋಗಿದ್ದು, ವಾಹನ ಹತ್ತ ಬೇಕಾದರೆ ಒಂದಷ್ಟು ದೂರ ನಡೆದುಕೊಂಡೇ ಬರಬೇಕಾದ ಸ್ಥಿತಿ. ಇದು ಪೆರುವಾಯಿ ಗ್ರಾಮದ ಬದ್ಯಾರಿನ ಕಥೆ.
ಇವರು ರಸ್ತೆಗಾಗಿ ಮನವಿ ಹಾಗೂ ಹೋರಾಟವನ್ನು ಮಾಡುತ್ತಲೇ ಇದ್ದರು. ಆದರೆ ರಸ್ತೆ ನಿರ್ಮಾಣವಾಗುವಲ್ಲಿ ಖಾಸಗಿ ಜಾಗದ ತಕರಾರಿತ್ತು. ಈ ವಿವಾದವನ್ನು ಮಾತುಕತೆ ಮೂಲಕ ಇತ್ಯರ್ಥಪಡಿಸಲು ಅನೇಕ ಜನಪ್ರತಿನಿಧಿಗಳು ಪ್ರಯತ್ನ ಮಾಡಿದ್ದರು ಆದರೆ ಯಾರಿದಂಲೂ ಸಾಧ್ಯವಾಗಿಲ್ಲ, ಕೆಲವರು ಭರವಸೆಯನ್ನು ಮಾತ್ರ ಕೊಟ್ಟಿದ್ದರು.
ಶಾಸಕ ಅಶೋಕ್ ರೈ ಭೇಟಿ
ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು ಕರೆಸಿ ಮಾತುಕತೆ ನಡೆಸಿದರು. ಒಂದು ಹಂತದಲ್ಲಿ ಮಾತುಕತೆ ಸಫಲವಾದರೂ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. ಬಳಿಕ ಎರಡನೇ ಸುತ್ತಿನ ಮಾತುಕತೆಯ ವೇಳೆ ಜಾಗದ ಮಾಲಿಕರು ರಸ್ತೆ ನಿರ್ಮಾಣಕ್ಕೆ ಒಪ್ಪಿಗೆಯನ್ನು ನೀಡಿದ್ದರು. ಒಪ್ಪಿಗೆ ಸೂಚಿತವಾದ ಬಳಿಕ ಅನುದಾನವನ್ನು ಇಟ್ಟು ಅಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕಳೆದ ವಾರ ಮಾಡಿ ಮುಗಿಸಲಾಗಿದೆ.
ಶಾಸಕರಿಗೆ ಸನ್ಮಾನ
ವಿವಾದ ಇತ್ಯರ್ಥಪಡಿಸಿ ೫೦ ವರ್ಷಗಳ ಹಿಂದಿನ ಬಹುದೊಡ್ಡ ಬೇಡಿಕೆಯನ್ನು ಈಡೇರಿಸಿದ ಶಾಸಕರಿಗೆ ಬದ್ಯಾರು ರಸ್ತೆ ಫಲಾನುಭವಿಗಳು ಸನ್ಮಾನವನ್ನು ಮಾಡಿದ್ದಾರೆ.
ಬದ್ಯಾರ್‌ನಿವಾಸಿಗಳು ತಮ್ಮ ಕಷ್ಟವನ್ನು ನನ್ನಲ್ಲಿ ಹೇಳಿಕೊಂಡಿದ್ದರು. ರಸ್ತೆ ಇಲ್ಲದೆ ಹತ್ತು ಕುಟುಂಬಗಳು ಸಂಕಷ್ಟದಲ್ಲಿತ್ತು ಮಾತ್ರವಲ್ಲದೆ ಪಕ್ಕದಲ್ಲೇ ಒಂದು ದೇವಸ್ಥಾನದ ಕಾಮಗಾರಿಯೂ ಅರ್ಧಕ್ಕೆ ನಿಂತಿತ್ತು. ಜಾಗ ಖಾಸಗಿ ವ್ಯಕ್ತಿಗೆ ಸೇರಿದ್ದರಿಂದ ರಸ್ತೆ ನಿರ್ಮಾಣಕ್ಕೆ ತೊಂದರೆಯಾಗಿತ್ತು. ಜಾಗದ ಮಾಲಿಕರನ್ನು ಕರೆಸಿ ಮಾತುಕತೆ ನಡೆಸಿದಾಗ ಅವರು ಮಾನವೀಯ ನೆಲೆಯಲ್ಲಿ ಒಪ್ಪಿಕೊಂಡು ರಸ್ತೆ ನಿರ್ಮಾಣಕ್ಕೆ ಅನುವು ಮಾಡಿಕೊಡುವ ಮೂಲಕ ದೊಡ್ಡ ಪುಣ್ಯದ ಕೆಲಸವನ್ನು ಮಾಡಿದ್ದಾರೆ. ಬೇಡಿಕೆ ಈಡೇರಿಸಿದ್ದೇನೆ, ಅನುದಾನವನ್ನು ನೀಡಿದ್ದೇನೆ ಮುಂದೆ ಅವರೆಲ್ಲರೂ ನನ್ನ ಜೊತೆ ಇರುತ್ತಾರೆ ಎಂಬ ನಂಬಿಕೆಯೂ ಇದೆ
ಅಶೋಕ್ ರೈ, ಶಾಸಕರು ಪುತ್ತೂರು
ರಸ್ತೆ ಸಂಪರ್ಕ ಇಲ್ಲದೆ 50 ವರ್ಷದಿಂದ ಪರದಾಡುತ್ತಿದ್ದೇವೆ, ನಾವು ಬಿಜೆಪಿ ಶಾಸಕರಿಗೆ, ಮುಖಂಡರಿಗಳಿಗೆ ಮನವಿ ಮಾಡಿದ್ದೆವು, ನಾವು ಬಿಜೆಪಿ ಕಾರ್ಯಕರ್ತರಾದರೂ ನಮ್ಮ ಬೇಡಿಕೆಯನ್ನು ಅವರು ಈಡೇರಿಸಿರಲಿಲ್ಲ. ನಾವು ಶಾಸಕ ಅಶೋಕ್ ರೈ ಕಚೇರಿಗೆ ಈ ವಿಚಾರವನ್ನು ತಿಳಿಸಲು ಹೋದಾಗ ಕೆಲವರು ನಮ್ಮನ್ನು ಛೇಡಿಸಿದ್ದರು. ನೀವು ಬಿಜೆಪಿ ಕಾರ್ಯಕರ್ತರಾದ ಕಾರಣ ನಿಮ್ಮ ಕೆಲಸ ಶಾಸಕರು ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ ಶಾಸಕರು ಪಕ್ಷ ರಾಜಕೀಯ ಮಾಡದೆ ನಮ್ಮ ಬೇಡಿಕೆಯನ್ನು ಈಡೇರಿಸಿದ್ದಾರೆ, ನಾವು ಮುಂದೆ ಅಶೋಕ್ ರೈ ಜೊತೆ ಇರುತ್ತೇವೆ, ಶಾಸಕರು ಮಾಡಿದ ಈ ಉಪಕಾರವನ್ನು ಮರೆಯುವುದೇ ಇಲ್ಲ.
ಜಯರಾಮ, ಬದ್ಯಾರ್ ಫಲಾನುಭವಿ
ಯಾವ ಜನಪ್ರತಿನಿಧಿಯಿಂದಲೂ ಮಾಡಲಾಗದ ಕೆಲಸವನ್ನು ಶಾಸಕ ಅಶೋಕ್ ರೈ ಮಾಡಿದ್ದಾರೆ. ಪಕ್ಷ ಬೇದವಿಲ್ಲದೆ ಬೇಡಿಕೆಯನ್ನು ಈಡೇರಿಸಿದ್ದಾರೆ, ಇವರು ಮುಂದೆಯೂ ಶಾಸಕರಾಗಿ ಆಯ್ಕೆಯಾಗುವಲ್ಲಿ ನಾವು ಖಂಡಿತಾ ಕೆಲಸ ಮಾಡುತ್ತೇವೆ.
ಶೀಲಾ ರೈ , ಫಲಾನುಭವಿ
-
ಬಿಗ್ ನ್ಯೂಸ್23 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಬಿಗ್ ನ್ಯೂಸ್23 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್22 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ22 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ21 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ21 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಂತರ ರಾಜ್ಯ22 hours agoCEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ
-
ಮಂಗಳೂರು20 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ


















