ಬಂಟ್ವಾಳ
Yakshagana | ಯಕ್ಷ ವೇಷದಲ್ಲಿ ಭಿಕ್ಷಾಟನೆ ಮಾಡುತಿದ್ದವನ ಕಂಡು ಗರಂ ಆದ ಅಸಲಿ ಯಕ್ಷಗಾನ ಕಲಾವಿದ..! ವೇಷ ಕಳಚುವವರೆಗೆ ಪಟ್ಟು ಬಿಡದ ‘ಸರಪಾಡಿ’..! ವಿಡಿಯೋ ನೋಡಿ
ಬಂಟ್ವಾಳ: ನವರಾತ್ರಿ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದ ‘ನಕಲಿ ಕಲಾವಿದ’ನನ್ನು ಯಕ್ಷಗಾನದ (Yakshagana) ಅಸಲಿ ಕಲಾವಿದ ತಡೆದು ನಿಲ್ಲಿಸಿ ವೇಷ ಕಳಚಿಸಿ ಕಳುಹಿಸಿಕೊಟ್ಟ ವಿಶೇಷ ಪ್ರಸಂಗ ಬಿ.ಸಿ. ರೋಡಿನಲ್ಲಿ ಶನಿವಾರ ನಡೆದಿದೆ.
ನಕಲಿ ಯಕ್ಷನ ವೇಷ ಕಳಚಿಸಿದ ಅಸಲಿ ಕಲಾವಿದ ಸರಪಾಡಿ..! ನವರಾತ್ರಿಯ ನೆಪದಲ್ಲಿ ದಾವಣಗೆರೆಯ ವ್ಯಕ್ತಿಯೋರ್ವ ಯಕ್ಷಗಾನದ ‘ವೇಷ’ ಧರಿಸಿ ಬಂಟ್ವಾಳ ಪೇಟೆಯಲ್ಲಿ ಭಿಕ್ಷೆ ಎತ್ತುತಿದ್ದ. ಇದನ್ನು ಗಮನಿಸಿ ಆಕ್ರೋಶಗೊಂಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ ವೇಷಧಾರಿಯನ್ನು ತಡೆದು ನಿಲ್ಲಿಸಿ ಸ್ಥಳದಲ್ಲಿಯೇ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ವೇಷ ಕಳಚುವವರೆಗೂ ಪಟ್ಟು ಬಿಡಲಿಲ್ಲ ಯಕ್ಷಗಾನದ ವೇಷಕ್ಕೆ ತನ್ನದೇ ಆದ ಗೌರವ ಇದೆ. ಅದು ಅನೇಕ ಮಂದಿ ಕಲಾವಿದರಿಗೆ ಬದುಕು ನೀಡಿದೆ. ಯಕ್ಷ ವೇಷ ಧರಿಸಿ ಭಿಕ್ಷೆ ಬೇಡಿ ಯಕ್ಷಗಾನ ಕಲೆಯನ್ನು ಅವಮಾನಿಸುವುದು ಸಮಂಜಸವಲ್ಲ ಎಂದ ಅವರು, ತಕ್ಷಣ ವೇಷ ಕಳಚುವಂತೆ ಒತ್ತಾಯಿಸಿದ್ದಲ್ಲದೆ ವೇಷ ಕಳಚುವವರೆಗೂ ಪಟ್ಟು ಹಿಡಿದರು.ಯಕ್ಷಗಾನ ಬಟ್ಟೆ ಬಾಡಿಗೆ ನೀಡಿದವರ ವಿವರ ಕೇಳಿದರು.
ಯಕ್ಷಗಾನ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿ ಕೊನೆಗೂ ಅಸಲಿ ಯಕ್ಷಗಾನ ಕಲಾವಿದನ ಆಕ್ರೋಶಕ್ಕೆ ಮಣಿದು ವೇಷ ಕಳಚಿದ. ಅಶೋಕ್ ಶೆಟ್ಟಿಯವರ ನಡೆಗೆ ಯಕ್ಷ ಪ್ರೇಮಿಗಳು ಹಾಗೂ ಕಲಾವಿದರಿಂದ ಪ್ರಶಂಸೆ ವ್ಯಕ್ತವಾಗಿದೆ.
ಕರಾವಳಿಯ ಗಂಡುಕಲೆ ಎಂದೇ ಖ್ಯಾತಿಯಾದ ಯಕ್ಷಗಾನಕ್ಕೆ ಕರಾವಳಿ ಭಾಗದಲ್ಲಿ ತನ್ನದೇ ಆದ ಮಹತ್ವ, ಗೌರವವಿದೆ. ಈ ಹಿಂದೆ ದೇವರ ವೇಷ ಧರಿಸಿ , ಧರ್ಮಕ್ಕೆ ಅಪಮಾನ ಆಗುವ ರೀತಿ ವೇಷ ಧರಿಸಿ ಬಿಕ್ಷಾಟನೆ ಮಾಡುವುದು ನಿಷೇಧವಾಗಿದೆ. ಇತ್ತಿಚೆಗೆ ಕೊರಗ ವೇಷ ಹಾಕುವುದು ಶಿಕ್ಷಾರ್ಹ ಅಪರಾಧ ಎಂಬ ನಿಯಮ ಜಾರಿಯಾಗಿದೆ.
ಬಿಗ್ ನ್ಯೂಸ್
Bantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದಲ್ಲಿ ಸಿಡಿಲು ಬಡಿದು ಮನೆಯೊಂದು ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಮಹಿಳೆಯೊಬ್ಬರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದಲ್ಲಿ ಸಿಡಿಲು ಬಡಿದು ಮನೆಯೊಂದು ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಮಹಿಳೆಯೊಬ್ಬರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಅನಿಲ್ದಡ್ಡ ಎಂಬಲ್ಲಿ ಮುಂಜಾನೆ ಸುಮಾರು 4 ಗಂಟೆ ವೇಳೆಗೆ ನಾಗೇಶ್ ಕುಲಾಲ್ ಎಂಬುವವರ ಮನೆಗೆ ಸಿಡಿಲು ಬಡಿದಿದೆ.
ಸಿಡಿಲಿನ ತೀವ್ರ ಹೊಡೆತಕ್ಕೆ ಮನೆಯ ಹಂಚು, ಗೋಡೆ ಹಾಗೂ ಕಿಟಕಿಗಳ ಗಾಜುಗಳು ಹಾನಿಗೊಂಡಿದ್ದು, ಮನೆ ಸಂಪೂರ್ಣ ಜಖಂಗೊಂಡಿದೆ. ಘಟನೆಯ ವೇಳೆ ಮನೆಯಲ್ಲಿದ್ದ ನಾಗೇಶ್ ಕುಲಾಲ್ ಅವರ ಪತ್ನಿ ಕುಶಲ ಅವರು ಅಸ್ವಸ್ಥರಾಗಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಸಿಡಿಲಿನ ಆರ್ಭಟದಿಂದ ವಿವಿಧೆಡೆ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿದೆ.
ಬಿಗ್ ನ್ಯೂಸ್
Prabhakar Bhat-ಭರತ್ ಕುಮ್ಡೇಲ್ ಗೆ ಮೊದಲು ಎಸ್ಪಿ ಮಂಪರು ಪರೀಕ್ಷೆ ಮಾಡಿಕೊಳ್ಳಲಿ : ಕಲ್ಲಡ್ಕ ಪ್ರಭಾಕರ ಭಟ್
ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲ್ ಹಾಗೂ ಇತರ ಆರೋಪಿಗಳ ವಿರುದ್ಧ ದಕ್ಷಿಣ ಕನ್ನಡ ಪೊಲೀಸರು ಆರೋಪಪಟ್ಟಿ ಬಿಡುಗಡೆ ಮಾಡಿರುವ ವಿಚಾರಕ್ಕೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲ್ ಹಾಗೂ ಇತರ ಆರೋಪಿಗಳ ವಿರುದ್ಧ ದಕ್ಷಿಣ ಕನ್ನಡ ಪೊಲೀಸರು ಆರೋಪಪಟ್ಟಿ ಬಿಡುಗಡೆ ಮಾಡಿರುವ ವಿಚಾರಕ್ಕೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಆರೋಪಪಟ್ಟಿ ಕುರಿತು ಪ್ರತಿಕ್ರಿಯಿಸಿದ ಅವರು, ಒಟ್ಟು 17 ಪ್ರಕರಣಗಳ ಪೈಕಿ 15 ಪ್ರಕರಣಗಳು ಬಿದ್ದುಹೋಗಿವೆ. ಇನ್ನುಳಿದ ಎರಡು ಪ್ರಕರಣಗಳಿಗೆ ಗೂಂಡಾ ಕಾಯ್ದೆ ಅನ್ವಯಿಸುವುದು ಸರಿಯೇ ಎಂದು ಪ್ರಶ್ನಿಸಿದರು. ನ್ಯಾಯಾಲಯದ ಸೂಚನೆಗಳಿಗೂ ಪೊಲೀಸರಿಗೆ ಒಪ್ಪಿಗೆ ಇಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.
ತಮಗೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎಂದು ತಿಳಿಸಿದ ಪ್ರಭಾಕರ್ ಭಟ್, ತಮ್ಮ ಮೇಲೂ ಗೂಂಡಾ ಕಾಯ್ದೆ ಜಾರಿಗೊಳಿಸುವ ಯೋಚನೆ ಇರಬಹುದೇ ಎಂಬ ಅನುಮಾನ ವ್ಯಕ್ತಪಡಿಸಿದರು. ದೇಶವಿರೋಧಿ ಅಥವಾ ಸಮಾಜವಿರೋಧಿ ಚಟುವಟಿಕೆಗಳಲ್ಲಿ ಯಾರಾದರೂ ತೊಡಗಿದ್ದರೆ ಪ್ರಕರಣ ದಾಖಲಿಸಲಿ ಎಂದು ಹೇಳಿದರು.
“ಹಿಂದೂಗಳ ಮೇಲೆ ದಾಳಿ ಮಾಡುವುದು ಶಾಂತಿಯೇ? ಪೊಲೀಸರು ಅಶಾಂತಿ ನಿರ್ಮಾಣ ಮಾಡುತ್ತಿದ್ದಾರೆಯೇ? ಪೊಲೀಸರು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು” ಎಂದು ಅವರು ಹೇಳಿದರು. ಪ್ರಕರಣದ ವಿಚಾರಣೆಯಲ್ಲಿ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಪೊಲೀಸರಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದೂ ಅವರು ಹೇಳಿದರು.
“ನಾವು ಶಾಂತಿಯಿಂದ ಜೀವನ ನಡೆಸುತ್ತಿದ್ದೇವೆ. ಅವರ ಕ್ರಮಕ್ಕೆ ನಮ್ಮ ಸಣ್ಣ ಪ್ರತಿಕ್ರಿಯೆ” ಎಂದು ಪ್ರಭಾಕರ್ ಭಟ್ ಹೇಳಿದರು.
ಭರತ್ ಕುಮ್ಡೇಲ್ ಗೆ ಮಂಪರು ಪರೀಕ್ಷೆ
ಭರತ್ ಕುಮ್ಡೇಲ್ ಅವರಿಗೆ ಮಂಪರು ಪರೀಕ್ಷೆ ನಡೆಸುವ ಪ್ರಸ್ತಾಪದ ಬಗ್ಗೆಯೂ ಪ್ರಭಾಕರ್ ಭಟ್ ಪ್ರಶ್ನೆ ಎತ್ತಿದರು. “ಮಂಪರು ಪರೀಕ್ಷೆಗೆ ಏಕೆ ಒಪ್ಪಿಕೊಳ್ಳಬೇಕು? ಅದಕ್ಕೆ ಏನು ಆಧಾರವಿದೆ?” ಎಂದು ಪ್ರಶ್ನಿಸಿದ ಅವರು, ಮೊದಲು ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಅವರೇ ಮಂಪರು ಪರೀಕ್ಷೆಗೆ ಒಳಗಾಗಲಿ ಎಂದು ಹೇಳಿದರು.
ತಾವು ಭರತ್ ಕುಮ್ಡೇಲ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿರುವುದನ್ನು ಉಲ್ಲೇಖಿಸಿದ ಅವರು, ಕೇವಲ ಫೋನ್‌ನಲ್ಲಿ ಮಾತನಾಡಿದ್ದಕ್ಕೆ ತಮ್ಮನ್ನು ವಿಚಾರಣೆಗೆ ಕರೆಯಲಾಗುತ್ತದೆಯೇ ಎಂದು ಪ್ರಶ್ನಿಸಿದರು. “ಮಾಧ್ಯಮದವರೂ ಫೋನ್ ಮಾಡುತ್ತೀರಿ; ನಿಮಗೂ ವಿಚಾರಣೆಗೆ ಕರೆಯುತ್ತಾರೆಯೇ?” ಎಂದು ಪ್ರಶ್ನಿಸಿದರು.
ಈ ಹಿಂದೆ ತಾವು ಜೈಲಿಗೆ ಹೋಗಿದ್ದು, ತಮ್ಮ ಪತ್ನಿಯನ್ನೂ ಜೈಲಿಗೆ ಕಳುಹಿಸಲಾಗಿದೆ ಎಂದು ಹೇಳಿದ ಅವರು, “ಇನ್ನು ಏನಿದ್ದರೂ ಗಲ್ಲಿಗೆ ಹಾಕುವುದು ಮಾತ್ರ ಬಾಕಿ. ತಾಕತ್ತಿದ್ದರೆ ನನ್ನನ್ನು ಗಲ್ಲಿಗೆ ಹಾಕಲಿ” ಎಂದು ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಿಗ್ ನ್ಯೂಸ್
Prabhakar Bhat-ನನ್ನ ಮೇಲೆ ಹಾಕಿದ ಕೇಸ್ ನನ್ನ ಕೂದಲಿಗೂ ಸಮ ಅಲ್ಲ : ಗುಡುಗಿದ ಕಲ್ಲಡ್ಕ ಪ್ರಭಾಕರ ಭಟ್
ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ವೈಯಕ್ತಿಕ ಕಾರಣಗಳಿಂದ ನಡೆದಿದ್ದು, ಅದನ್ನು ಸಂಘಟನೆಯ ಮೇಲೆ ಹೊರಿಸುವುದು ಏಕೆ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪ್ರಶ್ನಿಸಿದ್ದಾರೆ. ಬಿ.ಸಿ.ರೋಡ್ ಚಲೋ ಪ್ರತಿಭಟನೆಯ ಬಳಿಕ ಮಾತನಾಡಿದ ಅವರು, ಅಬ್ದುಲ್ ರೆಹಮಾನ್ ಹಾಗೂ ಹತ್ಯೆ ಆರೋಪಿಗಳ ನಡುವಿನ ವೈಯಕ್ತಿಕ ದ್ವೇಷದಿಂದ ಘಟನೆ ನಡೆದಿದೆ ಎಂದು ಹೇಳಿದ್ದಾರೆ.
ಮಂಗಳೂರು: ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ವೈಯಕ್ತಿಕ ಕಾರಣಗಳಿಂದ ನಡೆದಿದ್ದು, ಅದನ್ನು ಸಂಘಟನೆಯ ಮೇಲೆ ಹೊರಿಸುವುದು ಏಕೆ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪ್ರಶ್ನಿಸಿದ್ದಾರೆ.
ಬಿ.ಸಿ.ರೋಡ್ ಚಲೋ ಪ್ರತಿಭಟನೆಯ ಬಳಿಕ ಮಾತನಾಡಿದ ಅವರು, ಅಬ್ದುಲ್ ರೆಹಮಾನ್ ಹಾಗೂ ಹತ್ಯೆ ಆರೋಪಿಗಳ ನಡುವಿನ ವೈಯಕ್ತಿಕ ದ್ವೇಷದಿಂದ ಘಟನೆ ನಡೆದಿದೆ ಎಂದು ಹೇಳಿದ್ದಾರೆ. ಈ ಕುರಿತು ಹೆಚ್ಚಿನ ವಿವರಣೆ ನೀಡುವುದಿಲ್ಲ. ಸಂಬಂಧಪಟ್ಟ ಊರಿಗೆ ಹೋದರೆ ಅಲ್ಲಿನವರೇ ವಿಚಾರವನ್ನು ಹೇಳುತ್ತಾರೆ ಎಂದರು.
“ವೈಯಕ್ತಿಕ ದ್ವೇಷವನ್ನು ಸಂಘಟನೆಯ ಮೇಲೆ ಹಾಕುವುದು ಏಕೆ? ಬೇರೆ ತಪ್ಪು ನಡೆದಿದ್ದರೆ ಪ್ರಕರಣ ದಾಖಲಿಸಿ” ಎಂದು ಅವರು ಹೇಳಿದರು.
ಹತ್ಯೆಯನ್ನು ತಾವು ಪ್ರತಿಪಾದಿಸುವುದಿಲ್ಲ ಎಂದ ಪ್ರಭಾಕರ್ ಭಟ್, ಪ್ರಕರಣದಲ್ಲಿ ಸಂಬಂಧವಿಲ್ಲದ ಭರತ್ ಕುಮ್ಡೇಲ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಆರೋಪಿಸಿದರು. ಭರತ್ ಕುಮ್ಡೇಲ್ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಿರುವುದನ್ನೂ ಅವರು ಪ್ರಶ್ನಿಸಿದರು.
ಭರತ್ ಕುಮ್ಡೇಲ್ ಬಂಧನದ ಬಳಿಕ ಅವರ ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಭರತ್ ಅವರ ಮಗುವಿಗೆ ಅನಾರೋಗ್ಯವಾದಾಗ ರಿಕ್ಷಾದಲ್ಲಿ ಆಸ್ಪತ್ರೆಗೆ ಕರೆದೊಯ್ದ ವ್ಯಕ್ತಿಯ ಮೇಲೂ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಆರೋಪಿಸಿದರು.
ಕುಟುಂಬಕ್ಕೆ ಸಹಾಯ ಮಾಡಿದವರ ಮೇಲೆಯೂ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಹೇಳಿದ ಅವರು, ಕಾನೂನು ಪ್ರಕ್ರಿಯೆ ಬಿಟ್ಟು ಗೃಹ ಸಚಿವರು ಅಥವಾ ಮುಖ್ಯಮಂತ್ರಿಗಳು ಹೇಳುತ್ತಾರೆ ಎಂಬ ಕಾರಣಕ್ಕೆ ಪ್ರಕರಣ ದಾಖಲಿಸಬಾರದು ಎಂದು ಹೇಳಿದರು.
ತಮ್ಮ ಮೇಲೂ ಪ್ರಕರಣ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ ಎಂದು ಹೇಳಿದ ಪ್ರಭಾಕರ್ ಭಟ್, “ಇದು ನನಗೆ ದೊಡ್ಡ ವಿಷಯವಲ್ಲ. ಈ ಪ್ರಕರಣ ನನ್ನ ಕೂದಲಿಗೆ ಸಮ” ಎಂದು ಪ್ರತಿಕ್ರಿಯಿಸಿದರು.
ಭರತ್ ಕುಮ್ದೇಲ್ ಅವರೊಂದಿಗೆ ತಾವು ದೂರವಾಣಿಯಲ್ಲಿ ಮಾತನಾಡಿರುವುದನ್ನು ಒಪ್ಪಿಕೊಂಡ ಅವರು, ʻʻನಾನು ಯಾರ ಹತ್ರ ಬೇಕಾದರೂ ಫೋನ್ ನಲ್ಲಿ ಮಾತನಾಡುತ್ತೇನೆ. ನನಗೆ ಅಂಬೇಡ್ಕರ್ ಕೊಟ್ಟ ಸಂವಿಧಾನ . ಭರತ್ ಜೊತೆ ನಾನು ಫೋನ್ ನಲ್ಲಿ ಮಾತನಾಡಿದ್ದೇನೆ. ನಾನು ಯಾರಿಗಾದರೂ ಹೊಡಿ ಅಥವಾ ಕೊಲ್ಲು ಎಂದು ಹೇಳಿದ್ದೇನಾ? ಅಂತಹ ಸಂಭಾಷಣೆ ಪೊಲೀಸರಿಗೆ ಸಿಕ್ಕಿದೆಯೇ?” ಎಂದು ಪ್ರಶ್ನಿಸಿದರು.
ಪೊಲೀಸರು ಈ ರೀತಿಯ ಕ್ರಮಗಳನ್ನು ಕೈಗೊಳ್ಳುವ ಮುನ್ನ ವಾಸ್ತವಾಂಶಗಳನ್ನು ಪರಿಶೀಲಿಸಬೇಕು. ಪೊಲೀಸರ ಈ ರೀತಿಯ ಹುಚ್ಚು ಸ್ವಲ್ಪ ಇಳಿಯಬೇಕು ಎಂದು ಅವರು ಆಗ್ರಹಿಸಿದರು.
-
Uncategorized17 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ದಕ್ಷಿಣ ಕನ್ನಡ12 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಸಿನೆಮಾ18 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ19 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ಅಪರಾಧ18 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಅಪರಾಧ11 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಬಿಗ್ ನ್ಯೂಸ್17 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ಮಂಗಳೂರು18 hours agoPandamburu-ಪಣಂಬೂರು ಬೀಚ್ನಲ್ಲಿ ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ನೀರುಪಾಲು


















