ದಕ್ಷಿಣ ಕನ್ನಡ
Rohit Sharma: ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ವಿಶಿಷ್ಟ ದಾಖಲೆ ಬರೆದ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ
ಟೀಂ ಇಂಡಿಯಾ (Team India) ಬ್ಯಾಟರ್‌ಗಳ ಅಬ್ಬರಕ್ಕೆ ವಿಶ್ವದಾಖಲೆಗಳು ನುಚ್ಚುನೂರಾಗುತ್ತಿವೆ. ಈ ಸಾಲಿನ ವಿಶ್ವಕಪ್ ಟೂರ್ನಿಯಲ್ಲಿ ರನ್ ಗಳಿಕೆಯ ವೈಯುಕ್ತಿಕ ಸಾಧನೆಯಲ್ಲಿರುವ ಭಾರತ ತಂಡದ ಕಪ್ತಾನ ರೋಹೀತ್ ಶರ್ಮಾ ಮತ್ತೊಂದು ಸಾಧನೆ ಮಾಡಿದ್ದಾರೆ. ಈ ಮಹತ್ವದ ಟೂರ್ನಿಗಿಂತ ಮೊದಲೂ ಕಳಪೆ ಫಾರ್ಮ್ ನಿಂದ ಭಾರತದ ಕ್ರಿಕೆಟ್ ಅಭಿಮಾನಿಗಳಿಂದ ಯಕ್ಕ ಮಕ್ಕಾ ಉಗಿಸಿಕೊಳ್ಳುತ್ತಿದ್ದ ರೋಹಿತ್ ಶರ್ಮಾ ಮೊದಲು ಪಂದ್ಯ ಹೊರತು ಪಡಿಸಿ ಉಳಿದೆಲ್ಲ ಪಂದ್ಯಗಳಲ್ಲಿ ಸ್ಪೋಟಕ ಆರಂಭ ಒದಗಿಸಿ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.
ರೋಹೀತ್ ಶರ್ಮಾ ಬ್ಯಾಂಟಿಗ್ʼಗೆ ಇಳಿದರೇ ಸಿಡಿಲಬ್ಬರದ ಸಿಕ್ಸರ್ ಗಳಿಗೆ ಕೊರತೆಯಿಲ್ಲ . ವೇಗ ಹಾಗೂ ಸ್ಪಿನ್ ಬೌಲಿಂಗ್ ಗೆ ನುಗ್ಗಿ ಬೀಸುವ ಇವರು ಇವರೆಗೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ (ODI) 300ಕ್ಕೂ ಅಧಿಕ ಸಿಕ್ಸರ್ ಸಿಡಿಸಿದ್ದಾರೆ. ಇದು ಭಾರತದ ಪರ ಯಾವುದೇ ಒಬ್ಬ ಬ್ಯಾಟ್ಸ್ ಮ್ಯಾನ್ ಸಿಡಿಸಿರುವ ಅತ್ಯಧಿಕ ಸಿಕ್ಸರ್ ಈಗ ಮತ್ತೊಮ್ಮೆ ಸಿಕ್ಸರ್ ನಿಂದಲೇ ಮತ್ತೊಂದು ದಾಖಲೆ ಮಾಡಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ಭಾನುವಾರ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 40 ಎಸೆತಗಳಲ್ಲಿ 46 ರನ್ ಬಾರಿಸಿದ ರೋಹಿತ್ ಶರ್ಮಾ 4 ಬೌಂಡರಿ, 4 ಸಿಕ್ಸರ್‌ಗಳನ್ನೂ ಸಿಡಿಸಿದರು. ಈ ಮೂಲಕ ಕ್ಯಾಲೆಂಡರ್ ವರ್ಷದಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಭಾರತದ ನಂ.1 ಬ್ಯಾಟರ್ ಹಾಗೂ ವಿಶ್ವದ 3ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

2015ರಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿಡಿ ವಿಲಿಯರ್ಸ್ (AB de Villiers) ಹಾಗೂ 2019ರ ವರ್ಷದಲ್ಲಿ ವೆಸ್ಟ್ ಇಂಡೀಸ್‌ನ ಮಾಜಿ ಕ್ರಿಕೆಟಿಗ ಕ್ರಿಸ್ ಗೇಲ್ 56 ಸಿಕ್ಸರ್ ಸಿಡಿಸಿ ದಾಖಲೆ ಬರೆದಿದ್ದರು. ಇದೀಗ 2023ರಲ್ಲಿ ರೋಹಿತ್ ಶರ್ಮಾ 53 ಸಿಕ್ಸರ್ ಸಿಡಿಸಿ ವಿಶೇಷ ಸಾಧನೆ ಮಾಡಿದ್ದಾರೆ. ಇನ್ನೂ 4 ಸಿಕ್ಸರ್ ಹೊಡೆರೆ ಕ್ಯಾಲೇಂಡರ್ ವರ್ಷವೊಂದರಲ್ಲಿ ಅತ್ಯಧಿಕ ಸಿಕ್ಸರ್ ಸಿಡಿಸಿದ ಸಾಧನೆ ರೋಹಿತ್ ಅವರದು ಆಗಲಿದೆ. ಈ ವಿಶ್ವಕಪ್ ಟೂರ್ನಿಯಲ್ಲಿ ಒಟ್ಟು 5 ಪಂದ್ಯವಾಡಿದ್ದು, ಒಟ್ಟು 310 ರನ್ ಗಳಿಸಿದ್ದಾರೆ.
ಭಾನುವಾರ ನಡೆದ ರೋಚಕ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ 273 ರನ್‌ಗಳಿಗೆ ಸರ್ವಪತನ ಕಂಡಿತ್ತು. ಈ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ 48 ಓವರ್‌ಗಳಲ್ಲೇ 6 ವಿಕೆಟ್ ನಷ್ಟಕ್ಕೆ 274 ರನ್ ಸಿಡಿಸಿ ದಾಖಲೆ ಬರೆಯಿತು.
ಶಿಕ್ಷಣ
Vidyamata-ಕರಾವಳಿಯ ಯುವಜನತೆಯ ಉದ್ಯೋಗ ಸ್ವಪ್ನಕ್ಕೆ ‘ವಿದ್ಯಾಮಾತಾ’ ಆಸರೆ: ಬರಿ ಅಂಕಗಳಷ್ಟೇ ಅಲ್ಲ, ಬದುಕನ್ನು ಗೆಲ್ಲುವ ಕೌಶಲ್ಯವೇ ನಿಜವಾದ ಶಕ್ತಿ
ಸ್ಪರ್ಧಾತ್ಮಕ ಜಾಗೃತಿಯಿಲ್ಲದ ಇಂತಹ ವಾತಾವರಣದಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಎಪಿಎಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ‘ವಿದ್ಯಾಮಾತಾ ಅಕಾಡೆಮಿ’ ನೂತನ ಪ್ರಯೋಗಗಳ ಮೂಲಕ ಯಶಸ್ಸು ಕಂಡು ಕರಾವಳಿಯಲ್ಲೇ ಪ್ರಥಮವೆನಿಸಿದೆ. ಇತ್ತೀಚೆಗೆ ಪ್ರಖ್ಯಾತ ‘Times of India’ ಇಂಗ್ಲಿಷ್ ದಿನಪತ್ರಿಕೆಯೂ ಸಹ ವಿದ್ಯಾಮಾತಾ ಅಕಾಡೆಮಿಯ ಈ ಶೈಕ್ಷಣಿಕ ಬದಲಾವಣೆಯ ಹಾದಿಯನ್ನು ವಿಶೇಷವಾಗಿ ಶ್ಲಾಘಿಸಿ ವರದಿ ಮಾಡಿದೆ.

ಪುತ್ತೂರು: ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಕರಾವಳಿ ಭಾಗದಲ್ಲಿ ಪದವೀಧರರ ಮಹಾಪೂರವಿದ್ದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಿವಿಲ್ ಸರ್ವೀಸಸ್ ಹಾಗೂ ರಕ್ಷಣಾ ಪಡೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈ ಭಾಗದ ಯುವಕರ ಭಾಗವಹಿಸುವಿಕೆ ಹಿಂದಿನಿಂದಲೂ ಕಡಿಮೆಯಿತ್ತು. ಹೆಚ್ಚಿನ ವಿದ್ಯಾರ್ಥಿಗಳು ಕೇವಲ ಸಾಂಪ್ರದಾಯಿಕ ಉದ್ಯೋಗಗಳು ಅಥವಾ ಗಲ್ಫ್ ದೇಶಗಳ ವಲಸೆಗೆ ಸೀಮಿತರಾಗಿದ್ದರು. ಸ್ಪರ್ಧಾತ್ಮಕ ಜಾಗೃತಿಯಿಲ್ಲದ ಇಂತಹ ವಾತಾವರಣದಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಎಪಿಎಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ‘ವಿದ್ಯಾಮಾತಾ ಅಕಾಡೆಮಿ’ ನೂತನ ಪ್ರಯೋಗಗಳ ಮೂಲಕ ಯಶಸ್ಸು ಕಂಡು ಕರಾವಳಿಯಲ್ಲೇ ಪ್ರಥಮವೆನಿಸಿದೆ. ಇತ್ತೀಚೆಗೆ ಪ್ರಖ್ಯಾತ ‘Times of India’ ಇಂಗ್ಲಿಷ್ ದಿನಪತ್ರಿಕೆಯೂ ಸಹ ವಿದ್ಯಾಮಾತಾ ಅಕಾಡೆಮಿಯ ಈ ಶೈಕ್ಷಣಿಕ ಬದಲಾವಣೆಯ ಹಾದಿಯನ್ನು ವಿಶೇಷವಾಗಿ ಶ್ಲಾಘಿಸಿ ವರದಿ ಮಾಡಿದೆ.
ಸಾಮಾನ್ಯವಾಗಿ ದೊಡ್ಡ ಮಟ್ಟದ ಕೋಚಿಂಗ್ ಸಂಸ್ಥೆಗಳು ನೂರರಲ್ಲಿ ಒಬ್ಬರು IAS ಅಥವಾ KAS ಅಧಿಕಾರಿಯಾದರೆ ಆ ಯಶಸ್ಸನ್ನು ಮಾತ್ರ ದೊಡ್ಡದಾಗಿ ಬಿಂಬಿಸುತ್ತವೆ. ಆದರೆ, ಆ ಪ್ರಕ್ರಿಯೆಯಲ್ಲಿ ಸ್ಪರ್ಧೆಗಿಳಿದು ಸೋತ ಉಳಿದ 99 ವಿದ್ಯಾರ್ಥಿಗಳ ಭವಿಷ್ಯದ ಕಥೆಯೇನು ಎಂಬ ಆಳವಾದ ಸಾಮಾಜಿಕ ಪ್ರಶ್ನೆಯನ್ನು ವಿದ್ಯಾಮಾತಾ ಅಕಾಡೆಮಿಯ ಮ್ಯಾನೇಜಿಂಗ್ ಡೈರೆಕ್ಟರ್ ಭಾಗ್ಯೇಶ್ ರೈ ಮುಂದಿಟ್ಟಿದ್ದಾರೆ. ಒಬ್ಬ ವಿಜೇತನನ್ನು ರೂಪಿಸುವಷ್ಟೇ ಗಂಭೀರವಾಗಿ, ಅಲ್ಲಿ ಹಿನ್ನಡೆ ಅನುಭವಿಸುವ ಉಳಿದ 99 ವಿದ್ಯಾರ್ಥಿಗಳ ಬದುಕಿಗೂ ಭದ್ರತೆ ಮತ್ತು ಆತ್ಮವಿಶ್ವಾಸ ನೀಡುವುದು ನಮ್ಮ ಜವಾಬ್ದಾರಿ ಎಂಬುದು ಸಂಸ್ಥೆಯ ಮೂಲ ಮಂತ್ರವಾಗಿದೆ.
ಇಂದಿನ ಶಿಕ್ಷಣ ಪದ್ಧತಿಯಲ್ಲಿ ಕೇವಲ ಅಂಕಗಳ ಬೆನ್ನೇರುವ ಯುವಜನತೆಗೆ ಪ್ರಾಯೋಗಿಕ ಕೌಶಲ್ಯ, ಸಂವಹನ ಕಲೆ ಹಾಗೂ ವಾಸ್ತವ ಜಗತ್ತಿನ ಸವಾಲುಗಳನ್ನು ಎದುರಿಸುವ ತಾಕತ್ತು ಕೊರತೆಯಿದೆ. ಸ್ನಾತಕೋತ್ತರ ಪದವಿ ಪಡೆದರೂ ಕನಿಷ್ಠ ಸ್ವ-ಪರಿಚಯ ಮಾಡಿಕೊಳ್ಳಲು ಅಥವಾ ಕಂಪ್ಯೂಟರ್ ನಿರ್ವಹಿಸಲು ಬಾರದ ಇಂದಿನ ಸ್ಥಿತಿಯನ್ನು ಬದಲಾಯಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಸ್ವಾವಲಂಬನೆಯನ್ನು ತುಂಬುವ ಕೆಲಸ ಇಲ್ಲಿ ನಡೆಯುತ್ತಿದೆ.
ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಿರ್ಣಾಯಕ ಹಂತದಲ್ಲಿ ಸಮಯವನ್ನು ವ್ಯರ್ಥ ಮಾಡದಂತೆ ಸಂಸ್ಥೆಯು ‘ಕಲಿಕೆಯೊಂದಿಗೆ ಗಳಿಕೆ’ ಎನ್ನುವ ವಿನೂತನ ಯೋಜನೆಯನ್ನು ಜಾರಿಗೆ ತಂದಿದೆ. ಪಿಯುಸಿ (PUC) ಮುಗಿದ ಕೂಡಲೇ ದೂರಶಿಕ್ಷಣದ ಮೂಲಕ ಡಿಗ್ರಿ (ಬಿ.ಎ, ಬಿ.ಕಾಮ್, ಬಿ.ಬಿ.ಎ) ವ್ಯಾಸಂಗಕ್ಕೆ ದಾಖಲಾಗಿ, ಅದೇ ಮೂರು ವರ್ಷಗಳ ಅವಧಿಯಲ್ಲಿ ಐಎಎಸ್, ಕೆಎಎಸ್, ಬ್ಯಾಂಕಿಂಗ್, ಪೊಲೀಸ್ ಹಾಗೂ ರರಣಾ ಪಡೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮಾನಾಂತರ ತರಬೇತಿ ಪಡೆಯಲು ಇಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದರಿಂದ ವಿದ್ಯಾರ್ಥಿಯು ಪದವಿ ಮುಗಿಸುವ ವೇಳೆಗೆ ಸರ್ಕಾರದ ಉದ್ಯೋಗ ಅಥವಾ ಉನ್ನತ ಖಾಸಗಿ ವಲಯದಲ್ಲಿ ನೆಲೆಗೊಳ್ಳಲು ಸಂಪೂರ್ಣ ಸಿದ್ಧನಾಗಿರುತ್ತಾನೆ.
ವಿಶೇಷವಾಗಿ ಭಾರತೀಯ ಭೂಸೇನೆ (Agniveer), ವಾಯುಸೇನೆ, ನೌಕಾಸೇನೆ, ಅರೆಮಿಲಿಟರಿ ಪಡೆಗಳು, ಕರ್ನಾಟಕ ಪೊಲೀಸ್ ಹಾಗೂ ಅರಣ್ಯ ಇಲಾಖೆಗಳ ನೇಮಕಾತಿಗಾಗಿ ಯುವಕರಿಗೆ 17ನೇ ವಯಸ್ಸಿನಿಂದಲೇ ಸುವರ್ಣ ಅವಕಾಶಗಳಿವೆ. ಈ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕೇವಲ ಲಿಖಿತ ಪರೀಕ್ಷೆಯಷ್ಟೇ ಅಲ್ಲದೆ, ನುರಿತ ತರಬೇತುದಾರರಿಂದ ಮೈದಾನದಲ್ಲಿ ದೈಹಿಕ ಕ್ಷಮತೆ ಮತ್ತು ಕಠಿಣ ತರಬೇತಿಯನ್ನು ನೀಡಲಾಗುತ್ತಿದೆ. ಇದರೊಂದಿಗೆ ನವೋದಯ, ಮೊರಾರ್ಜಿ ದೇಸಾಯಿ ಪ್ರವೇಶ ಪರೀಕ್ಷೆಗಳು, KAR-TET, KSET, NET, HSTR, PSTR, GPSTR ನಂತಹ ಶೈಕ್ಷಣಿಕ ಹಾಗೂ ಬೋಧನಾ ಅರ್ಹತಾ ಪರೀಕ್ಷೆಗಳಿಗೂ ಇಲ್ಲಿ ಅತ್ಯುತ್ತಮ ತರಬೇತಿ ಲಭ್ಯವಿದೆ.
ನಿರ್ದೇಶಕಿ ರಮ್ಯಾ ಭಾಗ್ಯೇಶ್ ರೈ ಅವರ ನೇತೃತ್ವದಲ್ಲಿ ಸಂಸ್ಥೆಯು ಅತ್ಯಾಧುನಿಕ ಮೂಲಸೌಕರ್ಯಗಳನ್ನು ಒಳಗೊಂಡಿದೆ. ವಿದ್ಯಾರ್ಥಿಗಳು ದಿನದ 24 ಗಂಟೆಯೂ ನಿರಾಳವಾಗಿ ಓದಲು ‘ದೇವಿದ್ಯಾ’ 24×7 ಸದಾಶಿವ ಅಧ್ಯಯನ ಗ್ರಂಥಾಲಯ ಹಾಗೂ AI ಚಾಲಿತ ಡಿಜಿಟಲ್ ಇಂಟರಾಕ್ಟಿವ್ ಪ್ಯಾನಲ್‌ಗಳನ್ನು ಹೊಂದಿರುವ ‘ಸ್ತುತ್ಯ’ ಸ್ಮಾರ್ಟ್ ಕ್ಲಾಸ್‌ರೂಮ್‌ಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ.
ಇದರೊಂದಿಗೆ ಟ್ಯಾಲಿ ಪ್ರೈಮ್, ಪ್ರಾಯೋಗಿಕ ಅಕೌಂಟಿಂಗ್, ಗಲ್ಫ್ ವ್ಯಾಟ್ (Gulf VAT), ಡೇಟಾ ಅನಾಲಿಟಿಕ್ಸ್, ಕೋಡ್-ಆರ್ಕಿಟೆಕ್ಟ್ ಪ್ರೋಗ್ರಾಮಿಂಗ್ ಮತ್ತು ಸ್ಪೋಕನ್ ಇಂಗ್ಲಿಷ್ ತರಬೇತಿಗಳನ್ನು ನೀಡುವುದರ ಮೂಲಕ ಕರಾವಳಿಯ ಯುವಜನತೆಯನ್ನು ಜಾಗತಿಕ ಮಟ್ಟದ ಉದ್ಯೋಗಗಳಿಗೆ ಸಜ್ಜುಗೊಳಿಸಲಾಗುತ್ತಿದೆ. ಬರಿ ಅಂಕಗಳ ಕಾರ್ಖಾನೆಯಾಗದೆ, ಬದುಕಿನ ಪ್ರತಿ ಹಂತದಲ್ಲೂ ವಿದ್ಯಾರ್ಥಿಗೆ ಭರವಸೆಯ ದಾರಿದೀಪವಾಗುವ ಮೂಲಕ ವಿದ್ಯಾಮಾತಾ ಅಕಾಡೆಮಿಯು ಕರಾವಳಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
-
Uncategorized13 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized16 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized15 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized17 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized16 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized15 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |
-
ಶಿಕ್ಷಣ14 minutes agoVidyamata-ಕರಾವಳಿಯ ಯುವಜನತೆಯ ಉದ್ಯೋಗ ಸ್ವಪ್ನಕ್ಕೆ ‘ವಿದ್ಯಾಮಾತಾ’ ಆಸರೆ: ಬರಿ ಅಂಕಗಳಷ್ಟೇ ಅಲ್ಲ, ಬದುಕನ್ನು ಗೆಲ್ಲುವ ಕೌಶಲ್ಯವೇ ನಿಜವಾದ ಶಕ್ತಿ
-
ಸ್ಥಳೀಯ8 minutes agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ


















