Connect with us

Uncategorized

ಮಂಗಳೂರಿನ 14 ದೈವಸ್ಥಾನ ಹಾಗೂ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ಇಬ್ಬರ ಬಂಧನ -28 ಲ.ರೂ ಸೊತ್ತು ವಶ | 50ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿದ್ದರು ಈ ಖದೀಮರು – ಇವರ ಕುಕೃತ್ಯ ಬಯಲಾದದ್ದು ಹೀಗೆ

Published

on



Ad Widget

Ad Widget

Ad Widget

Ad Widget

ಮಂಗಳೂರು:ಡಿ 10: ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ದೈವಸ್ಥಾನ, ದೇವಸ್ಥಾನ ಹಾಗೂ 3 ಮನೆಗಳು ಸೇರಿದಂತೆ ಒಟ್ಟು 16 ಕಳವು ಪ್ರಕರಣಗಳನ್ನು ಭೇದಿಸಿದ ನಗರ ಅಪರಾಧ ಪತ್ತೆ ದಳ ಪೊಲೀಸರು, ಇಬ್ಬರು ಕುಖ್ಯಾತ ಅಂತರ್‌ ಜಿಲ್ಲಾ ಕಳ್ಳರನ್ನು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಚಿಕ್ಕಮಗಳೂರು ತರಿಕೆರೆಯ ಬೈರಪುರ ನಿವಾಸಿ ನಾಗ ನಾಯ್ಕ (55) ಹಾಗೂ ದಾವಣಗೆರೆ ಚೆನ್ನಗಿರಿ ಕಣದ ಸಾಲು ಬೀದಿಯ ಮಾರುತಿ ಸಿ. ವಿ. (33) ಬಂಧಿತರು.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತರಿಂದ ಒಟ್ಟು 28 ಲಕ್ಷ ರೂ.ಗೂ ಅಧಿಕ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ವಶಪಡಿಸಿಕೊಳ್ಳಲಾಗಿದೆ. ನಗರದ ವಿವಿಧ ಠಾಣೆಗಳಲ್ಲಿ 2018ರಲ್ಲಿ ನಡೆದ ಒಂದು ಪ್ರಕರಣ ಸೇರಿದಂತೆ, ಈವರೆಗೆ ನಡೆದ 13 ದೈವಸ್ಥಾನ, ದೇವಸ್ಥಾನಗಳಲ್ಲಿ ಕಳವು ಹಾಗೂ 3 ಮನೆಗಳ ಕಳ್ಳತನ ಪ್ರಕರಣಗಳಲ್ಲಿ ಈ ಇಬ್ಬರು ಆರೋಪಿಗಳು ಭಾಗಿಯಾಗಿರುವುದು ಬೆರಳಚ್ಚುವಿನಿಂದಲೂ ಸಾಬೀತಾಗಿದೆ ಎಂದು ನಗರ ಪೊಲೀಸ್‌ ಕಮಿಷನರ್‌ ಎನ್‌. ಶಶಿಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Ad Widget

Ad Widget <> Ad Widget

50 ಪ್ರಕರಣಗಳಲ್ಲಿ ಭಾಗಿ



Ad Widget

ಪ್ರಮುಖ ಆರೋಪಿ ನಾಗ ನಾಯ್ಕ ಕುಖ್ಯಾತ ಆರೋಪಿಯಾಗಿದ್ದು, ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ  2018ರಲ್ಲಿ ನಡೆದ 1 ಪ್ರಕರಣ ಹಾಗೂ ಆ ಬಳಿಕ ನಡೆದ 13 ದೈವಸ್ಥಾನ, ದೇವಸ್ಥಾನಗಳಲ್ಲಿ ಕಳವು ಹಾಗೂ 3 ಮನೆಗಳ ಕಳ್ಳತನ ಸಹಿತ. ಪ್ರಮುಖ ಆರೋಪಿ ನಾಗ ನಾಯ್ಕ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಅಜಂಪುರ, ಕಡೂರು ಹಾಗೂ ಶಿವಮೊಗ್ಗ ಜಿಲ್ಲೆಯ ತುಂಗಾನಗರ ಪೊಲೀಸ್‌ ಠಾಣೆ ಸೇರಿದಂತೆ 50ಕ್ಕೂ ಅಧಿಕ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ.

Ad Widget

Ad Widget

ದೇವಸ್ಥಾನಗಳಲ್ಲಿ ಈ ಆರೋಪಿಗಳು ಮಾಡಿದ ಕಳ್ಳತನ

* 2018ರಲ್ಲಿ ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಅಶೋಕನಗರದ ಮಾತಾ ಚೌಡೇಶ್ವರಿ ದೇವಸ್ಥಾನ

*2019ರಲ್ಲಿ ಎಡಪದವು ರಾಮಮಂದಿರ

*2020ರಲ್ಲಿ ಸುರತ್ಕಲ್‌ನ ಕುಳಾಯಿ ಪಾಂಡುರಂಗ ಭಜನಾ ಮಂದಿರದ ಸಮೀಪದ ಸತ್ಯ ದೇವತಾ ದೈವಸ್ಥಾನ

* 2020ರಲ್ಲಿ ಸುರತ್ಕಲ್ ಠಾಣೆ ವ್ಯಾಪ್ತಿಯ ಕುಳಾಯಿ ಕಲ್ಲುಟ್ಟಿ ಪಂಜುರ್ಲಿ ದೈವಸ್ಥಾನ

*2021ರಲ್ಲಿ ಸುರತ್ಕಲ್ ಠಾಣಾ ವ್ಯಾಪ್ತಿಯ ಹೊಸೆಟ್ಟು ಕಲ್ಲುಟ್ಟಿ ಪಂಜುರ್ಲಿ ದೈವಸ್ಥಾನ

*ಹೊಸಬೆಟ್ಟು ವರ್ತೇಶ್ವರಿ ಕಲ್ಲುರ್ಟ್ಟಿ ದೈವಸ್ಥಾನ

*ಕುಳಾಯಿ ಕಾವಿನಕಲ್ಲು ಕಲ್ಲುಟ್ಟಿ ದೈವಸ್ಥಾನ

*ಕಾವಿನಕಲ್ಲು ಸತ್ಯದೇವತಾ ದೇವಸ್ಥಾನ, ಬೈಕಂಪಾಡಿ ಮೀನಕಳಿಯ ಕಲ್ಲುರ್ಟಿ ಪಂಜುರ್ಲಿ ದೈವಸ್ಥಾನ

*ಮುಲ್ಕಿ ಠಾಣೆ ವ್ಯಾಪ್ತಿಯ ಹಳೆಯಂಗಡಿ ದುರ್ಗಾ ಪರಮೇಶ್ವರಿ ದೇವಸ್ಥಾನ

*ಕಾವೂರು ಠಾಣೆ ವ್ಯಾಪ್ತಿಯ ದೇರೆಬೈಲ್ ರೇಣುಕ ಎಲ್ಲಮ್ಮ ದೇವಸ್ಥಾನ

*ಉಳ್ಳಾಲದ ಮಾಡೂರು ಕೋಟೆಕಾರು ಅಯ್ಯಪ್ಪ ಸ್ವಾಮಿ ಭಜನಾ ಮಂದಿರ

*ಸುರತ್ಕಲ್‌ನ ಕುಳಾಯಿ ಧೂಮಾವತಿ ಮೈಸಂದಾಯ ದೈವಸ್ಥಾನಗಳಲ್ಲಿ ನಡೆದ ಕಳ್ಳತನ

* 2020ರಲ್ಲಿ ಕಾವೂರು ಪಂಜಿಮೊಗರು ಬಳಿಯ ಮನೆ ಕಳ್ಳತನ,

*2021ರಲ್ಲಿ ಬಪ್ಪನಾಡು ಬಳಿಯ ಮನೆ ಕಳ್ಳತನ,

*ಉರ್ವ ಠಾಣೆ ವ್ಯಾಪ್ತಿಯ ಅಶೋಕನಗರದ ಮನೆ ಕಳ್ಳತನ

ಬಯಲಿಗೆ ಬಂದದ್ದು ಹೇಗೆ?:

ಅಶೋಕ ನಗರ ನಿವಾಸಿಯೊಬ್ಬರು ನವೆಂಬರ್ 10 ರಂದು ತನ್ನ ಮಗಳ ಮದುವೆ ಮಾತುಕತೆಗಾಗಿ ಮನೆಗೆ ಬೀಗ ಹಾಕಿ ತಮಿಳುನಾಡಿನ ತಂಜಾವೂರಿಗೆ ಹೋಗಿದ್ದು, ನವೆಂಬರ್ 12ರಂದು ಬೆಳಗ್ಗೆ ಬಂದಾಗ ಮನೆಯ ಗೇಟ್‌ ತೆರೆದು ಮುಂಬಾಗಿಲನ್ನು ತೆರೆಯಲು ಪ್ರಯತ್ನಿಸಿ ಹಾನಿಗೊಳಿಸಿರುವುದು ಕಂಡು ಬಂದಿತ್ತು. ಕಿಟಕಿ ಮೂಲಕ ಮನೆಯ ಬೆಡ್‌ ರೂಂ ಕಪಾಟುಗಳನ್ನು ಬಲಾತ್ಕಾರವಾಗಿ ತೆರೆದು ಕಾಪಾಟಿನಲ್ಲಿ ಇರಿಸಿದ್ದ 6,86,000 ರೂ. ಮೌಲ್ಯದ ಚಿನ್ನದ ಆಭರಣ ಕಳವು ಮಾಡಿಕೊಂಡು ಹೋಗಿದ್ದ ಬಗ್ಗೆ ದೂರು ನೀಡಲಾಗಿತ್ತು. ಈ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಪತ್ತೆಗಾಗಿ ಮಾಹಿತಿ ಸಂಗ್ರಹಿಸಿದ ಮಂಗಳೂರು ಸಿಸಿಬಿ ಪೊಲೀಸರು ಈ ಇಬ್ಬರು ಆರೋಪಿಗಳನ್ನು ಡಿಸೆಂಬರ್ 3 ರಂದು ದಸ್ತಗಿರಿ ಮಾಡಿದ್ದರು ಎಂದರು.

ಆರೋಪಿಗಳನ್ನು ಕೂಲಂಕಷವಾಗಿ ವಿಚಾರಿಸಿದ ವೇಳೆ ನಾಗ ನಾಯ್ಕ ಈ ಹಿಂದೆ ನಗರದ ನಾನಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿನ ದೈವಸ್ಥಾನ, ದೇವಸ್ಥಾನಗಳಲ್ಲಿ ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ ಎಂದರು.

ಆರೋಪಿಗಳು ಕಳ್ಳತನ ಮಾಡಿದ ಪ್ರಕರಣಗಳಲ್ಲಿ 18 ಲಕ್ಷ ರೂ. ಮೌಲ್ಯದ 406 ಗ್ರಾಂ ಚಿನ್ನಾಭರಣ, 10.40 ಲಕ್ಷ ರೂ. ಮೌಲ್ಯದ 16 ಕೆಜಿ ಬೆಳ್ಳಿ ಆಭರಣ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಒಟ್ಟು ಸೊತ್ತಿನ ಅಂದಾಜು 28.40 ಲಕ್ಷ ರೂ.ಗಳಾಗಿವೆ. ಸೊತ್ತನ್ನು ದಾವಣಗೆರೆಯ ಜುವೆಲ್ಲರಿ ಹಾಗೂ ಆರೋಪಿ ಮಾರುತಿ ಎಂಬಾತನ ಚೆನ್ನಗಿರಿಯ ಜುವೆಲ್ಲರಿ ಹಾಗೂ ನಾಗ ನಾಯ್ಕನ ಮನೆಯಿಂದ ವಶಪಡಿಸಿಕೊಳ್ಳಲಾಗಿದೆ.

ಭದ್ರತೆ, ಸಿಸಿ ಕ್ಯಾಮರಾ ಇಲ್ಲದ ದೇವಸ್ಥಾನ, ದೈವಸ್ಥಾನ ಹಾಗೂ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವೇ ಆರೋಪಿಯ ಟಾರ್ಗೆಟ್ ಆಗಿರುತ್ತಿತ್ತು. ಆರೋಪಿ ಮಾರುತಿ ಈ ಹಿಂದೆ ಆಟೋ ಚಾಲಕನಾಗಿ ಕೆಲ ಮಾಡಿಕೊಂಡಿದ್ದು, ನಾಗ ನಾಯ್ಕನ ಜತೆ ಸೇರಿ ಸ್ವಂತ ಜುವೆಲ್ಲರಿ ಅಂಗಡಿ ಮಾಡಿಕೊಂಡು ಆರೋಪಿ ಜತೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಆರೋಪಿ ತನ್ನ ಜುವೆಲ್ಲರಿಯಲ್ಲಿ ಕಳ್ಳತನದ ಸಾಮಗ್ರಿ ಇರಿಸಿಕೊಂಡು ದಾವಣಗೆರೆಯ ಜುವೆಲ್ಲರಿಗೆ ಮಾರಾಟ ಮಾಡುತ್ತಿದ್ದ.                                                                                                                                                                                                                - ಎನ್. ಶಶಿಕುಮಾರ್, ಪೊಲೀಸ್ ಕಮಿಷನರ್, ಮಂಗಳೂರು

Ad Widget
Click to comment

Leave a Reply

Uncategorized

Philomena-ವಿಶ್ವವಿದ್ಯಾನಿಲಯ ಮಟ್ಟದ ಯೂತ್ ರೆಡ್‌ಕ್ರಾಸ್ ಪ್ರೇರಣಾ ಶಿಬಿರ-2026: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಗರಿ

Published

on



Ad Widget

Ad Widget

Ad Widget

Ad Widget

ಪುತ್ತೂರು, ಅ. 8: ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್‌ಕ್ರಾಸ್ ಘಟಕ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ (ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಶಾಖೆ) ಹಾಗೂ ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನ ಸಹಯೋಗದಲ್ಲಿ, ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನಲ್ಲಿ ಅಕ್ಟೋಬರ್ 8ರಿಂದ 10ರವರೆಗೆ ನಡೆದ ಮೂರು ದಿನಗಳ ಪ್ರೇರಣಾ ಶಿಬಿರದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿ ಅಹಮ್ಮದ್ ಜೌಹರ್ ಹಾಗೂ ಪ್ರಥಮ ಬಿ.ಎಸ್ಸಿ ವಿದ್ಯಾರ್ಥಿನಿ ಮನೋನ್ಮಯಿ ಭಾಗವಹಿಸಿ ಆಶುಭಾಷಣ ಸ್ಪರ್ಧೆಯಲ್ಲಿ ಅಹಮ್ಮದ್ ಜೌಹರ್ ದ್ವಿತೀಯ ಬಹುಮಾನ ಗಳಿಸಿ, ಇಬ್ಬರು ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಇವರು ಪ್ರತಿನಿಧಿಸಿದ್ದ ತಂಡವು ಸ್ಪರ್ಧೆಯಲ್ಲಿ ‘ಅತ್ಯುತ್ತಮ ತಂಡ’ (Best Team Award) ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

Ad Widget

Ad Widget

Ad Widget

Ad Widget

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಆಡಳಿತ ಮಂಡಳಿ ಹಾಗೂ ಪ್ರಾಧ್ಯಾಪಕರು ಶುಭ ಹಾರೈಸಿದ್ದಾರೆ

Ad Widget

Ad Widget

Ad Widget alt="Ad Widget"/>

Ad Widget
Ad Widget
Continue Reading

Uncategorized

Inspection-ರಾಜ್ಯದಲ್ಲಿ 80 ಸಿಹಿ ತಯಾರಿಕಾ ಘಟಕಗಳ ತಪಾಸಣೆ, 10 ಘಟಕಗಳಿಗೆ ನೋಟಿಸ್

Published

on



Ad Widget

Ad Widget

Ad Widget

Ad Widget

ರಾಜ್ಯಾದ್ಯಂತ ಸಿಹಿ ತಿಂಡಿ ತಯಾರಿಕಾ ಘಟಕಗಳು ಹಾಗೂ ಮಾರಾಟ ಮಳಿಗೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣಾ ಅಭಿಯಾನ ನಡೆಸಿದೆ. ಈ ವೇಳೆ ಒಟ್ಟು 125 ಆಹಾರ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 10 ಸಿಹಿ ತಯಾರಿಕಾ ಘಟಕಗಳು ಹಾಗೂ ಆಹಾರ ವಹಿವಾಟುದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ಅ.15: ರಾಜ್ಯಾದ್ಯಂತ ಸಿಹಿ ತಿಂಡಿ ತಯಾರಿಕಾ ಘಟಕಗಳು ಹಾಗೂ ಮಾರಾಟ ಮಳಿಗೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣಾ ಅಭಿಯಾನ ನಡೆಸಿದೆ. ಈ ವೇಳೆ ಒಟ್ಟು 125 ಆಹಾರ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 10 ಸಿಹಿ ತಯಾರಿಕಾ ಘಟಕಗಳು ಹಾಗೂ ಆಹಾರ ವಹಿವಾಟುದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಆಯುಕ್ತ ಕೆ. ಶ್ರೀನಿವಾಸ್ ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಆರೋಗ್ಯ ಸಚಿವರ ನಿರ್ದೇಶನದ ಮೇರೆಗೆ ರಾಜ್ಯದಾದ್ಯಂತ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Ad Widget

Ad Widget <> Ad Widget

ಅನೈರ್ಮಲ್ಯ, ಪರವಾನಗಿ ಕೊರತೆ ಪತ್ತೆ
ರಾಜ್ಯದ ವಿವಿಧೆಡೆ ಒಟ್ಟು 80 ಸಿಹಿ ತಯಾರಿಕಾ ಹಾಗೂ ಮಾರಾಟ ಘಟಕಗಳನ್ನು ಪರಿಶೀಲಿಸಲಾಗಿದೆ. ಈ ಸಂದರ್ಭದಲ್ಲಿ ಕೆಲವು ಘಟಕಗಳಲ್ಲಿ ಆಹಾರ ತಯಾರಿಕೆ ಮತ್ತು ಸಂಗ್ರಹಣಾ ಸ್ಥಳಗಳನ್ನು ಅನೈರ್ಮಲ್ಯಕರವಾಗಿ ನಿರ್ವಹಿಸುತ್ತಿರುವುದು ಪತ್ತೆಯಾಗಿದೆ.



Ad Widget

ಇದಲ್ಲದೆ, ಆಹಾರ ನಿರ್ವಹಣೆಯಲ್ಲಿ ತೊಡಗಿರುವ ಸಿಬ್ಬಂದಿ ವೈದ್ಯಕೀಯ ಪ್ರಮಾಣಪತ್ರಗಳನ್ನು ಹೊಂದಿರದಿರುವುದು ಹಾಗೂ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಪರವಾನಗಿ ಅಥವಾ ನೋಂದಣಿ ಪಡೆಯದಿರುವುದೂ ಕಂಡುಬಂದಿದೆ.

Ad Widget

Ad Widget

ಪ್ರಯೋಗಾಲಯಕ್ಕೆ 125 ಆಹಾರ ಮಾದರಿ
ತಪಾಸಣೆ ವೇಳೆ ಸಂಗ್ರಹಿಸಿದ 125 ಆಹಾರ ಮಾದರಿಗಳನ್ನು ಗುಣಮಟ್ಟ ಹಾಗೂ ಆಹಾರ ಸುರಕ್ಷತಾ ಮಾನದಂಡಗಳ ಪಾಲನೆಯನ್ನು ಪರಿಶೀಲಿಸಲು ಸರ್ಕಾರಿ ಆಹಾರ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.

ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ಸಂಬಂಧಿತ 2011ರ ನಿಯಮಾವಳಿಗಳ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು. ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸುವ ಸಿಹಿ ತಯಾರಿಕಾ ಘಟಕಗಳು ಮತ್ತು ಮಾರಾಟ ಮಳಿಗೆಗಳ ವಿರುದ್ಧ ನಿರಂತರ ತಪಾಸಣೆ ನಡೆಸಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆಯುಕ್ತ ಕೆ. ಶ್ರೀನಿವಾಸ್ ಎಚ್ಚರಿಕೆ ನೀಡಿದ್ದಾರೆ.

Ad Widget
Continue Reading

Uncategorized

Ambika Vidyalaya-ಅಂಬಿಕಾ ವಿದ್ಯಾಲಯ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ರಾಷ್ಟ್ರ ಮಟ್ಟದಲ್ಲಿ‌ ಬಹುಮಾನ

Published

on



Ad Widget

Ad Widget

Ad Widget

Ad Widget

ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪೆರ್ನೆಯ ನಿವಾಸಿ ಗಿರೀಶ ಗೌಡ ಮತ್ತು ಸುಮಿತ್ರ ದಂಪತಿಯ ಪುತ್ರಿ 8ನೇ ತರಗತಿಯ ಸಾನ್ವಿ ಜಿ, ದರ್ಬೆಯ ನಿವಾಸಿ ಕೆ ಜಿ ಮುರಳೀಧರ ಮತ್ತು ಕೆ ಉಷಾ ಮುರಳೀಧರ ದಂಪತಿಯ ಪುತ್ರಿ 8ನೇ ತರಗತಿಯ ಕೆ ಎಂ ಶಮಿತ ಭಟ್ ಹಾಗೂ  ಪಡೀಲ್ ನ ನಿವಾಸಿ ಸಂಜೀವ ರಂಜನ್ ಮತ್ತು ಅರ್ಪಣಾ ಕುಮಾರಿ ದಂಪತಿಯ ಪುತ್ರಿ 8ನೇ ತರಗತಿಯ ಶಾಂಭವಿ ರಂಜನ್,

Ad Widget

Ad Widget <> Ad Widget

ಸಂಪ್ಯದ ನಿವಾಸಿ ರವಿಕುಮಾರ ಕೆ ಮತ್ತು ಸುಮಿತ್ರ ಕೆ ದಂಪತಿಯ ಪುತ್ರಿ 8ನೇ ತರಗತಿಯ ನೈನಿಕ ಎ ಆರ್ ಪ್ರಥಮ ಸ್ಥಾನವನ್ನು ಗಳಿಸಿ, ಮಧ್ಯ ಪ್ರದೇಶದಲ್ಲಿ ನಡೆಯಲಿರುವ ಎಸ್ ಜಿ  ಎಫ್ ಐ ( ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ) ಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.



Ad Widget

14ರ ವಯೋಮಾನದ ಬಾಲಕರ ವಿಭಾಗದಲ್ಲಿ ಉಪ್ಪಿನಂಗಡಿ  ನೆಕ್ಕಿಲಾಡಿಯ ನಿವಾಸಿ ಡಾ.ಸುಪ್ರೀತ್ ಜೋಯಲ್ ಲೋಬೋ ಮತ್ತು ಡಾ. ಶೈನಿ ಪಾಯಸ್  ದಂಪತಿಯ ಪುತ್ರ 7ನೇ ತರಗತಿಯ ಸಂಹಿತ್ ಜೊಸ್ಸಿ ಲೋಬೋ, ಕಾಣಿಯೂರಿನ ನಿವಾಸಿ ಅರವಿಂದ ಕುಮಾರ್ ಕೆ ಮತ್ತು ಜ್ಯೋತಿ ಕುಮಾರಿ ಕೆ ದಂಪತಿಯ ಪುತ್ರ 7ನೇ ತರಗತಿಯ ರತುಲ್ ಅದ್ವೈತ್, ಕುಂಜುರ್ ಪಂಜದ ನಿವಾಸಿ ಶ್ರೀನಿವಾಸ ಮಯ್ಯ ಡಿ  ಮತ್ತು ಜಯಲಕ್ಷ್ಮೀ ಎಸ್ ಮಯ್ಯ ದಂಪತಿಯ ಪುತ್ರ 7ನೇ ತರಗತಿಯ ಮಯೂರ್ ಎಸ್ ಮಯ್ಯ ಹಾಗೂ ಕಲ್ಲಾರೆಯ ನಿವಾಸಿ ಪ್ರವೀಣ್ ರೈ ಸಿ ಮತ್ತು ತೃಪ್ತಿ ರೈ ದಂಪತಿಯ ಪುತ್ರ 7ನೇ ತರಗತಿಯ ತ್ರಿನಯ್ ರೈ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading