ಧರ್ಮಸ್ಥಳದಲ್ಲಿ ಅನ್ನದಾನ, ವಿದ್ಯಾದಾನ, ಔಷಧಿದಾನ ಮತ್ತು ಅಭಯದಾನ ನಿತ್ಯೋತ್ಸವವಾಗಿದ್ದು ಇದರ ಜೊತೆಗೆ ಹೊಸ ಸೇವಾಕಾರ್ಯಗಳನ್ನು ಯಶಸ್ವಿಯಾಗಿ […]" /> ಧರ್ಮಸ್ಥಳದಲ್ಲಿ ಅನ್ನದಾನ, ವಿದ್ಯಾದಾನ, ಔಷಧಿದಾನ ಮತ್ತು ಅಭಯದಾನ ನಿತ್ಯೋತ್ಸವವಾಗಿದ್ದು ಇದರ ಜೊತೆಗೆ ಹೊಸ ಸೇವಾಕಾರ್ಯಗಳನ್ನು ಯಶಸ್ವಿಯಾಗಿ […]"> ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಷದ ವರ್ಧಂತ್ಯುತ್ಸವ ಸಂಭ್ರಮ- ಸಡಗರ : ಹೊಸ ಯೋಜನೆಗಳ ಪ್ರಕಟಣೆ - Nikhara News | Kannada News Website
Connect with us

Uncategorized

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಷದ ವರ್ಧಂತ್ಯುತ್ಸವ ಸಂಭ್ರಮ- ಸಡಗರ : ಹೊಸ ಯೋಜನೆಗಳ ಪ್ರಕಟಣೆ

Published

on

Ad Widget

Ad Widget

Ad Widget

Ad Widget

ಉಜಿರೆ: ಮೈಸೂರಿನಲ್ಲಿ ವಿಜ್ಞಾನ ಮತ್ತು ಆಧ್ಯಾತ್ಮಿಕತೆಗೆ ಸಂಬಂಧಪಟ್ಟ ಹೊಸ ವಸ್ತುಸಂಗ್ರ‍್ರಹಾಲಯ, ಉಡುಪಿಯಲ್ಲಿ ಆಯುರ್ವೇದ ಕಾಲೇಜಿಗೆ ನೂತನ ಕಟ್ಟಡ ನಿರ್ಮಾಣ, ಧಾರವಾಡದಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಮತ್ತು ಫಾರ್ಮಸಿ ಕಾಲೇಜು ಸದ್ಯದಲ್ಲೇ ಪ್ರಾರಂಭವಾಗಲಿವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

Ad Widget

Ad Widget

Ad Widget

Ad Widget

ಅವರು ಧರ್ಮಸ್ಥಳದಲ್ಲಿ ಮಂಗಳವಾರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಸಮಾರಂಭದಲ್ಲಿ ಮಾತನಾಡಿ ಹೊಸ ಯೋಜನೆಗಳನ್ನು ಪ್ರಕಟಿಸಿದರು.

Ad Widget

Ad Widget alt="Ad Widget"/>

Ad Widget

ಧರ್ಮಸ್ಥಳದಲ್ಲಿ ಅನ್ನದಾನ, ವಿದ್ಯಾದಾನ, ಔಷಧಿದಾನ ಮತ್ತು ಅಭಯದಾನ ನಿತ್ಯೋತ್ಸವವಾಗಿದ್ದು ಇದರ ಜೊತೆಗೆ ಹೊಸ ಸೇವಾಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಧಾರವಾಡದಲ್ಲಿರುವ ಎಸ್.ಡಿ.ಎಮ್. ವೈದ್ಯಕೀಯ ವಿಶ್ವವಿದ್ಯಾಲಯ ದೇಶದಲ್ಲೇ ಶ್ರೇಷ್ಠ ವಿಶ್ವವಿದ್ಯಾಲಯ ಎಂಬ ಮಾನ್ಯತೆ ಪಡೆದಿದೆ. ಅಲ್ಲಿನ ವೈದ್ಯಕೀಯ ಕಾಲೇಜು ದೇಶದಲ್ಲೇ ಒಂಭತ್ತನೇ ಸ್ಥಾನದಲ್ಲಿದೆ. ನರ್ಸಿಂಗ್ ಕಾಲೇಜು, ಫಿಸಿಯೋಥೆರಪಿ ಕಾಲೇಜು ಮತ್ತು ಎಂಜಿನಿಯರಿಂಗ್ ಕಾಲೇಜು ಕೂಡಾ ನಿರ್ವಹಣೆಯ ಗುಣಮಟ್ಟ ಮತ್ತು ಪರೀಕ್ಷಾ ಫಲಿತಾಂಶದಲ್ಲಿ ಉನ್ನತ ಶ್ರೇಣಿಯನ್ನು ಹೊಂದಿವೆ ಎಂದರು.

Ad Widget

Ad Widget <> Ad Widget

ತಮ್ಮ ಸಂಸದರ ನಿಧಿಯಿಂದ ಎರಡೂವರೆ ಕೋಟಿ ರೂ. ಅನುದಾನವನ್ನು ಬೀದರ್ ಜಿಲ್ಲೆಯಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ ವಿನಿಯೋಗಿಸಲಾಗುತ್ತಿದೆ ಎಂದು ಹೆಗ್ಗಡೆಯವರು ತಿಳಿಸಿದರು. ಹಾಲು ಮತ್ತು ಹಣ್ಣು ನಿತ್ಯ ಆದಾಯ ಕೊಡುವ ಮೂಲಗಳಾಗಿದ್ದು ಇವುಗಳ ಉತ್ಪಾದನೆಗೆ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತದೆ ಎಂದು ತಿಳಿಸಿದರು.

ಧರ್ಮಸ್ಥಳದಲ್ಲಿ ಮೂರು ಹೊಸ ಕಲ್ಯಾಣಮಂಟಪಗಳನ್ನು ನಿರ್ಮಿಸಲಾಗುವುದು. ರಜತಾದ್ರಿ ವಸತಿಗೃಹಕ್ಕೆ 200 ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಲಾಗುವುದು. ಅಳಿವಿನಂಚಿನಲ್ಲಿರುವ ಕೆರೆಗಳಿಗೆ ಕಾಯಕಲ್ಪ ನೀಡಲಾಗುತ್ತಿದೆ ಎಂದು ಹೆಗ್ಗಡೆಯವರು ಪ್ರಕಟಿಸಿದರು.

Ad Widget

Ad Widget

ಈಗ ನಾವು ಕ್ಷಿಪ್ರ ಪರಿವರ್ತನಾ ಯುಗದಲ್ಲಿರುವುದರಿಂದ ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಎಲ್ಲಾ ಕೆಲಸಗಳು ವೇಗದ ಗತಿಯಲ್ಲಿ ನಡೆಯುತ್ತಿವೆ,. ಸ್ಫೂರ್ತಿಯ ಚಿಲುಮೆಯಾದ ಶ್ರದ್ಧಾಅಮಿತ್, ಶ್ರೇಯಸ್ ಕುಮಾರ್, ನಿಶ್ವಲ್, ಸಾಕೇತ ಶೆಟ್ಟಿ, ಶ್ರುತಾಜಿತೇಶ್ ಮತ್ತು ಮೈತ್ರಿನಂದೀಶ್ ಅವರು ಬಹಳ ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು.

ಹೇಮಾವತಿ ವಿ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಹರ್ಷೇಂದ್ರ ಕುಮಾರ್, ರಾಜೇಂದ್ರ ಕುಮಾರ್, ಡಾ. ನಿರಂಜನ್ ಕುಮಾರ್ ಮತ್ತು ಪದ್ಮಲತಾ ನಿರಂಜನ್ ಕುಮಾರ್ ಅವರ ಸಹಕಾರವನ್ನು ಹೆಗ್ಗಡೆಯವರು ಉಲ್ಲೇಖಿಸಿದರು.

ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹ, ಕಾರ್ಯಕರ್ತರು ಮತ್ತು ಸಿಬ್ಬಂದಿಯ ನಿಷ್ಠೆ ಮತ್ತು ಕಾರ್ಯತತ್ಪರತೆಯಿಂದ ತನ್ನ ಎಲ್ಲಾ ಯೋಜನೆಗಳು ಮತ್ತು ಯೋಚನೆಗಳು ಯಶಸ್ವಿಯಾಗುತ್ತಿರುವುದಕ್ಕೆ ಸಂತೋಷ ಮತ್ತು ತೃಪ್ತಿ ವ್ಯಕ್ತಪಡಿಸಿದ ಹೆಗ್ಗಡೆಯವರು ಎಲ್ಲವುಗಳ ಕೀರ್ತಿ ಮತ್ತು ಯಶಸ್ಸನ್ನು ಶ್ರೀ ಮಂಜುನಾಥ ಸ್ವಾಮಿ ಮತ್ತು ಧರ್ಮದೇವತೆಗಳ ಸಾನ್ನಿಧ್ಯಕ್ಕೆ ಅರ್ಪಿಸುವುದಾಗಿ ಧನ್ಯತೆಯಿಂದ ನುಡಿದರು.

ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಮತ್ತು ವಿಸ್ತರಣೆಯಲ್ಲಿ ಪ್ರೊ.ಎಸ್. ಪ್ರಭಾಕರ್ ಅವರ ಸಲಹೆ ಮತ್ತು ಸಹಕಾರವನ್ನು ಹೆಗ್ಗಡೆಯವರು ವಿಶೇಷವಾಗಿ ಉಲ್ಲೇಖಿಸಿದರು.

ಧಾರವಾಡದಲ್ಲಿ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಡಾ. ನ. ವಜ್ರಕುಮಾರ್, ಉಜಿರೆಯ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಮತ್ತು ಇತ್ತೀಚೆಗೆ ನಿಧನರಾದ ಕಟ್ಟಡ ಕಾಮಗಾರಿ ವಿಭಾಗದ ಗೋಪಾಲ್ ಮೆನನ್ ಅವರ ಸೇವೆಯನ್ನು ಸ್ಮರಿಸಿದ ಹೆಗ್ಗಡೆಯವರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಶಾಸಕ ಕೆ. ಹರೀಶ್ ಪೂಂಜ ಮಾತನಾಡಿ, ಹೆಗ್ಗಡೆಯವರ ಬಹುಮುಖಿ ಸಮಾಜಸೇವೆಯಿಂದಾಗಿ ಬೆಳ್ತಂಗಡಿ ತಾಲ್ಲೂಕು ರಾಷ್ಟçಮಟ್ಟದಲ್ಲಿ ಗುರುತಿಸುವಂತಾಗಿದೆ. ಹೆಗ್ಗಡೆಯವರ ಎಲ್ಲಾ ಯೋಚನೆಗಳು ಹಾಗೂ ಯೋಜನೆಗಳು ಆದರ್ಶ ಮತ್ತು ಅನುಕರಣೀಯವಾಗಿವೆ ಎಂದು ಹೇಳಿ ಅಭಿನಂದಿಸಿದರು.


ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ ಧರ್ಮಸ್ಥಳದ ಭವ್ಯ ಇತಿಹಾಸ, ಸಂಪ್ರದಾಯ ಮತ್ತು ಧಾರ್ಮಿಕ ಚೌಕಟ್ಟಿನೊಳಗೆ ಹೆಗ್ಗಡೆಯವರು ದೃಢಸಂಕಲ್ಪ ಮಾಡುತ್ತಿರುವ ಸೇವಾಕಾರ್ಯಗಳು ಸಾರ್ವತ್ರಿಕ ಮಾನ್ಯತೆ ಮತ್ತು ಗೌರವ ಹೊಂದಿವೆ ಎಂದು ಹೆಗ್ಗಡೆಯವರು ಅಭಿನಂದಿಸಿದರು.

ಹೇಮಾವತಿ ವಿ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್. ಸುಪ್ರಿಯಾ ಹರ್ಷೇಂದ್ರ ಕುಮಾರ್. ಡಿ. ರಾಜೇಂದ್ರ ಕುಮಾರ್ ಮತ್ತು ನೀತಾ ರಾಜೇಂದ್ರ ಕುಮಾರ್, ಶ್ರದ್ಧಾಅಮಿತ್ ಮತ್ತು ಅಮಿತ್ ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಜಯಶಂಕರ ಶರ್ಮಾ ಸ್ವಾಗತಿಸಿದರು. ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಿತಿಯ ಸಂಚಾಲಕ ಲಕ್ಷ್ಮೀ ನಾರಾಯಣ ರಾವ್ ಧನ್ಯವಾದವಿತ್ತರು. ಎಸ್.ಡಿ.ಎಮ್. ಸನಿವಾಸ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುನಿಲ್‌ಪಂಡಿತ್ ಕಾರ್ಯಕ್ರಮ ನಿರ್ವಹಿಸಿದರು.

ದೇವಸ್ಥಾನ, ಬೀಡು (ಹೆಗ್ಗಡೆಯವರ ನಿವಾಸ), ವಸತಿಛತ್ರಗಳನ್ನು ಆಕರ್ಷಕ ವಿನ್ಯಾಸದಿಂದ ಸಿಂಗರಿಸಲಾಗಿದೆ.

ಎಲ್ಲೆಲ್ಲೂ ಹಬ್ಬದ ವಾತಾವರಣ:

ಊರಿನ ನಾಗರಿಕರು, ಅಭಿಮಾನಿಗಳು ಮತ್ತು ಭಕ್ತರಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ. ಅಭಿಮಾನಿಗಳು ಹಣ್ಣು-ಹಂಪಲು, ಹೂವಿನ ಹಾರ ಅರ್ಪಿಸಿ ಹೆಗ್ಗಡೆಯವರಿಗೆ ಶ್ರದ್ಧಾ-ಭಕ್ತಿಯಿಂದ ಗೌರವಾರ್ಪಣೆ ಮಾಡಿದರು. ಹೆಗ್ಗಡೆಯವರು ಎಲ್ಲರಲ್ಲಿಯೂ ಯೋಗ-ಕ್ಷೇಮ ವಿಚಾರಿಸಿ ಶುಭ ಹಾರೈಸಿದರು.

ಗಣ್ಯರ ಗಡಣ:

ಕನ್ಯಾಡಿ ರಾಮಕ್ಷೇತ್ರದ ಬ್ರಹ್ಮಾನಂದಸರಸ್ವತಿ ಸ್ವಾಮೀಜಿ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಕೆ. ರಾಜವರ್ಮ ಬಳ್ಳಾಲ್, ಮಂಗಳೂರು, ಬ್ಯಾಂಕ್ ಆಫ್ ಬರೋಡಾದ ನಿವೃತ್ತ ಪ್ರಬಂಧಕ ಎಂ. ಜಿನರಾಜ ಶೆಟ್ಟಿ, ದ.ಕ. ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್.ಡಿ. ಸಂಪತ್‌ ಸಾಮ್ರಾಜ್ಯ ಶಿರ್ತಾಡಿ, ಮಂಗಳೂರಿನ ಕೆ. ಪ್ರದೀಪ್ ಕುಮಾರ್ ಕಲ್ಕೂರ, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ಕಿನ್ನಿಗೋಳಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮಂಗಳೂರಿನ ಜೈನ್ ಟ್ರಾವೆಲ್ಸ್ ಮಾಲಕ ಕೆ. ರತ್ನಕಾರ ಜೈನ್, ವಕೀಲ ಎಮ್.ಆರ್. ಬಳ್ಳಾಲ್ ಮೊದಲಾದವರು ಹೆಗ್ಗಡೆಯವರನ್ನು ಭೇಟಿಯಾಗಿ ಗೌರವಾರ್ಪಣೆ ಮಾಡಿದರು.

Ad Widget
Click to comment

Leave a Reply

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!