Connect with us

Uncategorized

Tiger Claw Pendant: ಜೈಲಿಗೆ ಹಳ್ಳಿಕಾರ್ ಒಡೆಯ’ ಶಿಪ್ಟ್‌ – ಹುಲಿ ಉಗುರು ವರ್ತೂರು ಸಂತೋಷ್ ಗೆ ಸಿಕ್ಕಿದ್ದು ಹೇಗೆ ಗೊತ್ತೇ ? ದರ್ಶನ್ ರಾಕ್‌ಲೈನ್‌ ಕೊರಳಲ್ಲೂ ಹುಲಿ ಉಗುರಿದೆ ವಿಚಾರಿಸಿ ಎಂದ ನೆಟ್ಟಿಗರು

Published

on

Ad Widget

Ad Widget

Ad Widget

Ad Widget

ಬೆಂಗಳೂರು: ಈ ಬಾರಿ ಬಿಗ್ ಬಾಸ್‌’ ಮನೆಗೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿದ್ದ ‘ಹಳ್ಳಿಕಾರ್ ಒಡೆಯ’ ಖ್ಯಾತಿಯ ವರ್ತೂರು ಸಂತೋಷ್ ಅವರಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಹುಲಿ ಉಗುರಿನ ಪೆಂಡೆಂಟ್ ಇರುವ ಚಿನ್ನದ ಸರವನ್ನು ಧರಿಸುತ್ತಿದ್ದುದರಿಂದ ಸಂತೋಷ್‌ ಅವರನ್ನು ಕಗ್ಗಲೀಪುರ ವಲಯ ಅರಣ್ಯಾಧಿಕಾರಿ ನೇತೃತ್ವದ ತಂಡ ಭಾನುವಾರ ರಾತ್ರಿ ಬಂಧಿಸಿತ್ತು. ನಿನ್ನೆ ಅವರನ್ನು ಪರಪ್ಪನ ಅಗ್ರಹಾರದ ಕಾರಾಗೃಹಕ್ಕೆ ಕಳುಹಿಸಲಾಗಿದ್ದು, ಜೈಲು ಅಧಿಕಾರಿಗಳು ಅವರಿಗೆ ಈಗ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ಕೂಡ ನೀಡಿದ್ದಾರೆ.

Ad Widget

Ad Widget

Ad Widget

Ad Widget

‘ಸಂತೋಷ್ ಹುಲಿಯ ಎರಡು ಉಗುರು ಒಳಗೊಂಡಿದ್ದ ಚಿನ್ನದ ಲಾಕೆಟ್‌ನ್ನು ಧರಿಸಿರುವುದನ್ನು ಗಮನಿಸಿದ ವ್ಯಕ್ತಿಯೊಬ್ಬರು, ಆತ ಹುಲಿಯನ್ನು ಕೊಂದು ಅದರಿಂದ ಉಗುರು ತೆಗೆದು ಬಳಸುತ್ತಿರುವ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಸಂತೋಷ್‌ನನ್ನು ಬಂಧಿಸಲಾಗಿದೆ. ಇದೊಂದು ಜಾಮೀನು ರಹಿತ ಪ್ರಕರಣ’ ಎಂದು ಅರಣ್ಯ ಇಲಾಖೆ ಮೂಲಗಳು ಹೇಳಿವೆ. ಜಾಮೀನು ಕೋರಿ ವಕೀಲರ ಮೂಲಕ ನ್ಯಾಯಾಲಯಕ್ಕೆ ಸಂತೋಷ್ ಅರ್ಜಿ ಸಲ್ಲಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

‘ಆರೋಪಿ ಸಂತೋಷ್‌ ನಿಂದ ಹುಲಿ ಉಗುರುಗಳನ್ನು ಜಪ್ತಿ ಮಾಡಿ, ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಜೊತೆಗೆ, ಉಗುರು ಬಗ್ಗೆ ಸಂತೋಷ್ ಹೇಳಿಕೆ ಪಡೆಯಲಾಗಿದೆ.
‘ಮೂರು ವರ್ಷಗಳ ಹಿಂದೆ ತಮಿಳುನಾಡು ಹೊಸೂರು ಬಳಿಯ ಗ್ರಾಮವೊಂದರ ವ್ಯಕ್ತಿಯೊಬ್ಬರಿಂದ ₹ 20 ಸಾವಿರಕ್ಕೆ ಎರಡು ಉಗುರುಗಳನ್ನು ಖರೀದಿಸಿದ್ದೆ. ವರ್ತೂರಿನ ಚಿನ್ನ ವ್ಯಾಪಾರಿಯೊಬ್ಬರು ಉಗುರಿಗೆ ತಕ್ಕಂತೆ ಲಾಕೆಟ್ ಮಾಡಿಕೊಟ್ಟಿದ್ದರು. ಹುಲಿ ಉಗುರು ಧರಿಸುವುದು ಅಪರಾಧವೆಂಬುದು ನನಗೆ ಗೊತ್ತಿರಲಿಲ್ಲ’ ಎಂದು ಸಂತೋಷ್ ಹೇಳಿಕೆ ನೀಡಿರುವುದಾಗಿ ತಿಳಿದು ಬಂದಿದೆ.

Ad Widget

Ad Widget <> Ad Widget

‘ಚಿನ್ನದ ವ್ಯಾಪಾರಿ ಸ್ನೇಹಿತನಿಗೆ ನೋಟಿಸ್’

‘ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಸಂತೋಷ್ ಸ್ನೇಹಿತ ಹಾಗೂ ಚಿನ್ನದ ವ್ಯಾಪಾರಿಗೆ ನೋಟಿಸ್ ನೀಡಲಾಗಿದೆ’ ಎಂದು ಮೂಲಗಳು ತಿಳಿಸಿವೆ. ‘ಹುಲಿ ಉಗುರು ನೀಡಿದ್ದ ವ್ಯಕ್ತಿ ಹೆಸರು ಗೊತ್ತಿಲ್ಲವೆಂದು ಸಂತೋಷ್ ಹೇಳುತ್ತಿದ್ದಾನೆ. ಹೀಗಾಗಿ ಸ್ನೇಹಿತನನ್ನು ವಿಚಾರಣೆ ನಡೆಸಬೇಕಿದೆ. ಜೊತೆಗೆ ಚಿನ್ನದ ಲಾಕೆಟ್ ಮಾಡಿಕೊಟ್ಟ ವ್ಯಾಪಾರಿಯ ಹೇಳಿಕೆ ಸಹ ಪಡೆಯಬೇಕಿದೆ’ ಎಂದು ಹೇಳಿವೆ.

Ad Widget

Ad Widget

ಬೇಟೆಯಾಡಿ ಕೊಂದಿರುವ ಅನುಮಾನ

‘ಆರೋಪಿ ಹೇಳಿಕೆ ನಿಜವೆಂದು ಹೇಳಲಾಗದು. ಹುಲಿಯನ್ನು ಬೇಟೆಯಾಡಿ ಕೊಂದಿರುವ ಅನುಮಾನ ದಟ್ಟವಾಗಿದೆ. ತನಿಖೆಯಿಂದ ನಿಜಾಂಶ ತಿಳಿಯಬೇಕಿದೆ. ಸಂತೋಷ್ ಹಾಗೂ ಇತರರ ಮೇಲಿನ ಆರೋಪ ಸಾಬೀತಾದರೆ, 7 ವರ್ಷಗಳ ಜೈಲು ಹಾಗೂ ₹5 ಲಕ್ಷದಿಂದ ₹10 ಲಕ್ಷದವರೆಗೆ ದಂಡ ವಿಧಿಸಲು ಅವಕಾಶವಿದೆ’ ಎಂದು ಮೂಲಗಳು ಹೇಳಿವೆ.

‘ದರ್ಶನ್ ರಾಕ್‌ಲೈನ್‌ ಕೊರಳಲ್ಲೂ ಉಗುರು’

ನಟ ದರ್ಶನ್ ಹಾಗೂ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್‌ ಅವರು ಸಹ ಕೊರಳಿನಲ್ಲಿ ಹುಲಿ ಉಗುರಿನ ಲಾಕೆಟ್‌ ಧರಿಸುತ್ತಾರೆಂದು ಹೇಳಲಾಗುತ್ತಿದ್ದು ಅವರಿಬ್ಬರ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ‘ಸಂತೋಷ್ ಹಲವು ವರ್ಷಗಳಿಂದ ಲಾಕೆಟ್ ಧರಿಸಿದ್ದಾರೆ. ಆದರೆ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಅವರನ್ನು ಬಂಧಿಸಲಾಗಿದೆ. ಹುಲಿ ಉಗುರು ಧರಿಸಿದ್ದಾರೆ ಎನ್ನಲಾದ ದರ್ಶನ್ ರಾಕ್‌ಲೈನ್ ವೆಂಕಟೇಶ್‌ ಅವರನ್ನೂ ವಿಚಾರಣೆ ನಡೆಸಿ’ ಎಂದು ಆಗ್ರಹಿಸಿರುವ ನೆಟ್ಟಿಗರು ಬಡವರಿಗೊಂದು ಕಾನೂನು ದೊಡ್ಡವರಿಗೊಂದು ಕಾನೂನು ಇದೆಯೇ ಎಂದು ಅರಣ್ಯ ಅಧಿಕಾರಿಗಳನ್ನು ಪ್ರಶ್ನಿಸುತ್ತಿದ್ದಾರೆ.

ದರ್ಶನ್‌ , ವಿನಯ್​ ಗುರೂಜಿ ವಿರುದ್ದ ದೂರು

ಖ್ಯಾತ ನಟ ದರ್ಶನ್​ ಅವರು ಕೂಡ ಹುಲಿ ಉಗುರಿನ ಲಾಕೆಟ್​ (Tiger Claw Pendant) ಧರಿಸಿದ್ದಾರೆ ವಿನಯ್​ ಗುರೂಜಿ (Vinay Guruji) ಹುಲಿ ಚರ್ಮದ ಮೇಲೆ ಕುಳಿತಿದ್ದಾರೆ ಎಂದು ಆರೋಪಿಸಿ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್​ ಅವರು ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಇದರಿಂದ ದರ್ಶನ್​ (Darshan) ಹಾಗೂ ವಿನಯ್​ ಗುರೂಜಿಗೆ ಕಾನೂನಿನ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಬಂಧನದ ವಿಚಾರ ಗೌಪ್ಯ

ಹಳ್ಳಿಕಾರ್ ದನದ ತಳಿಯನ್ನು ರಕ್ಷಿಸಲು ಸಂತೋಷ್ ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ಅವರು ಅನೇಕ ಬಾರಿ ಹೇಳಿಕೊಂಡಿದ್ದಾರೆ. ಅವರು ಬಿಗ್ ಬಾಸ್​ಗೆ ಬಂದಾಗ ಮೈಮೇಲೆ 400 ಗ್ರಾಂ ಚಿನ್ನ ಇತ್ತು ಎನ್ನಲಾಗಿದೆ. ಬಂಧನ ನಡೆಯುವುದಕ್ಕೂ ಮುನ್ನ ಸಂತೋಷ್ ಬಿಗ್‌ ಬಾಸ್‌ ಮನೆಯಲ್ಲಿ ಮನೆಮಂದಿಗೆಲ್ಲ ಭವಿಷ್ಯ ಹೇಳುತ್ತಿದ್ದರು. ಬಂಧಿಸಲು ಪೊಲೀಸರು ಬಿಗ್‌ ಬಾಸ್‌ ಮನೆಗೆ ಬಂದಾಗ , ಅವರನ್ನು ಕನ್‌ ಫೆಷನ್‌ ರೂಂ ಗೆ ಕರೆಸಿ, ಪೊಲೀಸರ ವಶಕ್ಕೆ ಒಪ್ಪಿಸಲಾಗಿತ್ತು. ಸದ್ಯ ಸಂತೋಷ್ ಬಂಧನದ ವಿಚಾರವನ್ನೂ ಬಿಗ್ ಬಾಸ್ ಮನೆಯಲ್ಲಿ ಗೌಪ್ಯವಾಗಿ ಇಡಲಾಗಿದೆ. ಮನೆಯವರಿಗೆ ಸಂತೋಷ್ ಇಲ್ಲ ಎನ್ನುವ ವಿಚಾರ ಗೊತ್ತಿದೆ. ಆದರೆ, ಅವರು ಯಾವ ಕಾರಣದಿಂದಾಗಿ ಮನೆಯಿಂದ ಆಚೆ ಹೋಗಿದ್ದಾರೆ ಎನ್ನುವುದು ಯಾರಿಗೂ ಗೊತ್ತಿಲ್ಲ.

Ad Widget
Click to comment

Leave a Reply

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

Uncategorized

Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು

Published

on

Ad Widget

Ad Widget

Ad Widget

Ad Widget

ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.

Ad Widget

Ad Widget <> Ad Widget

ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.

ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.

Ad Widget

Ad Widget

ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.

ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!