ಕೊಡಗು
Komodo dragon: ಮಡಿಕೇರಿ: ಮನೆಯೊಂದರ ಪಕ್ಕ ಪತ್ತೆಯಾಯಿತು ಬೃಹತ್ ಗಾತ್ರದ ಉಡ – ಜಗತ್ತಿನಲ್ಲೇ ಅಪರೂಪ ಎನಿಸಿರುವ ಕೊಮೊಡೊ ಡ್ರ್ಯಾಗನ್ ?
ಸುಮಾರು 5ರಿಂದ 6 ಅಡಿ ಉದ್ದದ ಬೃಹತ್ ಗಾತ್ರದ ಉಡವೊಂದು ಕೊಡಗು ಜಿಲ್ಲೆಯ ಪೊನ್ನಂಪೇಟೆಯ ತಾಲ್ಲೂಕಿನ ಕುಂದಾ ಗ್ರಾಮದಲ್ಲಿ ಪತ್ತೆಯಾಗಿದೆ. ಅಳಿವಿನಂಚಿನಲ್ಲಿರುವ ಜೀವಿ ಎಂದೇ ಪರಿಗಣಿತವಾಗಿರುವ ಉಡಗಳು ಸಾಮಾನ್ಯವಾಗಿ ಕಾಡಿನಲ್ಲಿ ಹಾಗೂ ರಕ್ಷಿತಾರಣ್ಯಗಳಲ್ಲಿ ಕಂಡು ಬರುತ್ತದೆ. ಆದರೇ ಇಲ್ಲಿ ಮಾತ್ರ ಅದು ಮನೆ ಸಮೀಪ ಪತ್ತೆಯಾಗಿದೆ
ಇಲ್ಲಿನ ಕೊಡಂದೇರ ದಿಲೀಪ್ ಅವರ ಮನೆ ಸಮೀಪ ಕಂಡು ಬಂದ ಈ ಉಡವು ಅವರ ಮನೆಯ ಕಾಂಪೌಂಡ್‌ಗೆ ಕುತ್ತಿಗೆ ಹಾಕಿ ಇಣುಕಿ ನೋಡುತ್ತ ಕೆಲಹೊತ್ತು ನಿಂತಿದೆ. ಬಳಿಕ ಇದು ಕಾಡಿನಲ್ಲಿ ಮರೆಯಾಗಿದೆ. ಇಷ್ಟೊಂದು ದೊಡ್ಡ ಗಾತ್ರದ ಉಡವನ್ನು ಈ ಹಿಂದೆ ಇಲ್ಲಿ ನೋಡಿರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸ್ಥಳೀಯರು ಉಡದ ಚಲನವಲನದ ವಿಡಿಯೊ ಹಾಗೂ ಚಿತ್ರವನ್ನು ಸೆರೆ ಹಿಡಿದಿದ್ದಾರೆ. ಇಲ್ಲಿಗೆ ಸಮೀಪದಲ್ಲೇ ಕುಂದಾಬೆಟ್ಟ ಹಾಗೂ ದಟ್ಟವಾದ ಅರಣ್ಯವಿದೆ. ಅಲ್ಲಿ ದೊಡ್ಡ ದೊಡ್ಡ ಗವಿಗಳು ಹಾಗೂ ಬಂಡೆಗಳಿವೆ. ಅಲ್ಲಿಂದ ಈ ಉಡ ಬಂದಿರುವ ಸಾಧ್ಯತೆ ಇದೆ ಎಂಬುವುದು ಸಾರ್ವಜನಿಕರ ಅಭಿಪ್ರಾಯ

ಕೊಡಗಿನಲ್ಲಿ ಉಡಗಳು ಇವೆಯಾದರೂ ಇಷ್ಟೊಂದು ದೊಡ್ಡ ಗಾತ್ರದ ಉಡಗಳು ಅಪರೂಪ. ಬಹಳಷ್ಟು ಉಡಗಳು ಬೇಟೆಗೆ ಬಲಿಯಾಗಿವೆ. ಸದ್ಯ, ಕಾಣಿಸಿಕೊಂಡಿರುವ ಉಡವು ಜಗತ್ತಿನಲ್ಲೇ ಅಪರೂಪ ಎನಿಸುವ ಕೊಮೊಡೊ ಡ್ರ್ಯಾಗನ್ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಈ ಬಗ್ಗೆ ಇಲ್ಲಿನ ಡಿಆರ್‌ಎಫ್‌ಒ ದಿವಾಕರ್ ಪ್ರತಿಕ್ರಿಯಿಸಿ ‘ಇಷ್ಟೊಂದು ದೊಡ್ಡ ಗಾತ್ರದ ಉಡವನ್ನು ನಾನು ಸಹ ಈ ಭಾಗದಲ್ಲಿ ನೋಡಿರಲಿಲ್ಲ. ಆದರೆ, ಇದು ಕೊಮೊಡೊ ಡ್ರ್ಯಾಗನ್ ಎಂಬುದು ಖಚಿತವಾಗಿಲ್ಲದೇ ಹೋದರೂ, ಈ ಭಾಗದಲ್ಲಿ ಅಪರೂಪ ಎನಿಸುವಷ್ಟು ದೊಡ್ಡಗಾತ್ರದ ಉಡ ಎಂದು ಹೇಳಬಹುದು. ಈ ಉಡದಿಂದ ಜನರು ಭಯಪಡುವ ಅಗತ್ಯ ಇಲ್ಲ. ಮತ್ತೊಮ್ಮೆ ಕಾಣಸಿಕ್ಕರೆ ವಿಷಯ ತಿಳಿಸುವಂತೆ ಸ್ಥಳೀಯರಿಗೆ ಹೇಳಿದ್ದೇವೆ’ ಎಂದು ತಿಳಿಸಿದರು.
ಕೊಡಗು
Madikeri-ಮಡಿಕೇರಿ: ಅಡಿಕೆ ಹಾಳೆ ತಟ್ಟೆ, ಪೇಪರ್ ಕಪ್ ನಿಷೇಧ: ನಗರಸಭೆ ಆದೇಶಕ್ಕೆ ವ್ಯಾಪಾರಸ್ಥರು ಶಾಕ್..!
ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ ಪೇಪರ್ ಪ್ಲೇಟ್‌ಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆ ಆಡಳಿತ ಮಂಡಳಿ ಮತ್ತು ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.
ಮಡಿಕೇರಿ: ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ ಪೇಪರ್ ಪ್ಲೇಟ್‌ಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆ ಆಡಳಿತ ಮಂಡಳಿ ಮತ್ತು ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.
ನಿಷೇಧಕ್ಕೆ ಕಾರಣವೇನು?:
ನಗರಸಭೆಯ ಮಾಹಿತಿ ಪ್ರಕಾರ, ಪೇಪರ್ ಕಪ್ ಮತ್ತು ಅಡಿಕೆ ಹಾಳೆ ತಟ್ಟೆಗಳು ನೈಸರ್ಗಿಕವಾಗಿ ಕರಗುವ ವಸ್ತುಗಳೇ ಆದರೂ, ಅವುಗಳು ಸಂಪೂರ್ಣವಾಗಿ ಮಣ್ಣಿನಲ್ಲಿ ವಿಲೀನವಾಗಲು ದೀರ್ಘ ಸಮಯ ತೆಗೆದುಕೊಳ್ಳುತ್ತವೆ. ಇದರಿಂದ ನಗರದ ಕಸ ವಿಲೇವಾರಿ ಪ್ರಕ್ರಿಯೆಯಲ್ಲಿ ಸಮಸ್ಯೆಗಳು ಉಂಟಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಗರಸಭೆಯ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಂಡು ಈ ನಿಷೇಧ ಜಾರಿಗೊಳಿಸಲಾಗಿದೆ. ಇತ್ತೀಚೆಗಷ್ಟೇ ನಗರಸಭೆಯು ಒಂದು ಮತ್ತು ಅರ್ಧ ಲೀಟರ್ ನೀರಿನ ಬಾಟಲಿಗಳನ್ನು ನಿಷೇಧಿಸಿ ಗಮನ ಸೆಳೆದಿತ್ತು.
ಸಾರ್ವಜನಿಕರ ಮತ್ತು ವ್ಯಾಪಾರಸ್ಥರ ಆಕ್ರೋಶ:
ನಗರಸಭೆಯ ಈ ಹೊಸ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ನೀರಿನ ಬಾಟಲಿ ನಿಷೇಧಕ್ಕೆ ಬೆಂಬಲ ನೀಡಿದ್ದ ಜನತೆ, ಅಡಿಕೆ ಹಾಳೆ ಮತ್ತು ಪೇಪರ್ ತಟ್ಟೆಗಳ ನಿಷೇಧವನ್ನು ಖಂಡಿಸಿದ್ದಾರೆ.
“ಅಡಿಕೆ ಹಾಳೆ ಮತ್ತು ಪೇಪರ್ ಉತ್ಪನ್ನಗಳು ನೈಸರ್ಗಿಕವಾಗಿದ್ದು, ಮಣ್ಣಿನಲ್ಲಿ ಸುಲಭವಾಗಿ ಕರಗುತ್ತವೆ. ಮದುವೆ, ದೇವಸ್ಥಾನಗಳ ಉತ್ಸವ, ಕ್ರೀಡಾಕೂಟ ಹಾಗೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ಇವುಗಳ ಬಳಕೆಯೇ ಹೆಚ್ಚು. ಇವುಗಳನ್ನು ನಿಷೇಧಿಸುವುದು ಎಷ್ಟರ ಮಟ್ಟಿಗೆ ಸರಿ?” ಎಂದು ವ್ಯಾಪಾರಸ್ಥರು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, “ಸ್ಥಳೀಯವಾಗಿ ಮಾರಾಟ ನಿಷೇಧಿಸಿದರೂ ಪ್ರವಾಸಿಗರು ಹೊರಗಿನಿಂದ ಅಡಿಕೆ ತಟ್ಟೆ, ಪೇಪರ್ ಕಪ್‌ಗಳನ್ನು ತರುತ್ತಾರೆ, ಅವರನ್ನು ತಡೆಯುವುದು ಹೇಗೆ?” ಎಂದು ಜನರು ನಗರಸಭೆಯನ್ನು ಪ್ರಶ್ನಿಸುತ್ತಿದ್ದಾರೆ.
ಉಡುಪಿ
Helpline-ನೇಪಾಲ ಜಲಪ್ರಳಯ: ಉಡುಪಿ, ಕೊಡಗು ಯಾತ್ರಿಕರ ರಕ್ಷಣೆಗೆ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ
ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು ಆರಂಭಿಸಿವೆ.
ಉಡುಪಿ/ಮಡಿಕೇರಿ: ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು ಆರಂಭಿಸಿವೆ.
ಉಡುಪಿ ಜಿಲ್ಲೆಯವರಿಗೆ ಸೂಚನೆ:
ಉಡುಪಿ ಜಿಲ್ಲೆಯಿಂದ ಪ್ರವಾಸ ಅಥವಾ ಯಾತ್ರೆಗೆ ತೆರಳಿ ನೇಪಾಲದ ನೆರೆ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವವರ ವಿವರಗಳನ್ನು ತಕ್ಷಣವೇ ಜಿಲ್ಲಾಡಳಿತಕ್ಕೆ ನೀಡಲು ಕೋರಲಾಗಿದೆ. ಸಂಕಷ್ಟದಲ್ಲಿರುವವರ ಹೆಸರು, ವಿಳಾಸ, ಪ್ರಸ್ತುತ ಇರುವ ನಿಖರ ಸ್ಥಳ ಮತ್ತು ಮೊಬೈಲ್ ಸಂಖ್ಯೆಯನ್ನು ಕೆಳಗಿನ ಸಂಖ್ಯೆಗಳಿಗೆ ತಿಳಿಸಬಹುದು:
ಸಹಾಯವಾಣಿ: 1077
ದೂರವಾಣಿ: 0820-2574802
ಕೊಡಗು ಜಿಲ್ಲೆಯವರಿಗೆ ಸೂಚನೆ:
ಕೊಡಗು ಜಿಲ್ಲೆಯ ಯಾರಾದರೂ ಯಾತ್ರಿಕರು ನೇಪಾಲದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿದ್ದರೆ, ಅವರ ಕುಟುಂಬದವರು ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಬೇಕು. ಮಾಹಿತಿಗಾಗಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಿ:
ದೂರವಾಣಿ ಸಂಖ್ಯೆಗಳು: 08272-221077, 08272-221099
ಮೊಬೈಲ್/ವಾಟ್ಸಾಪ್ ಸಂಖ್ಯೆ: 8550001077
ಸಂಕಷ್ಟದಲ್ಲಿರುವವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಕೊಡಗು
Kodagu-ಕೊಡಗಿನಲ್ಲಿ ವರುಣನ ಅಬ್ಬರ: ಮರಳಿ ಮೈದುಂಬಿದ ಭಾಗಮಂಡಲದ ತ್ರಿವೇಣಿ ಸಂಗಮ..!
ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ವರುಣನ ಆರ್ಭಟ ಮರುಕಳಿಸಿದ್ದು, ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪವಿತ್ರ ಕ್ಷೇತ್ರ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಮೈದುಂಬಿ ಭರ್ತಿಯಾಗಿದೆ.
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ವರುಣನ ಆರ್ಭಟ ಮರುಕಳಿಸಿದ್ದು, ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪವಿತ್ರ ಕ್ಷೇತ್ರ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಮೈದುಂಬಿ ಭರ್ತಿಯಾಗಿದೆ.
ಜಲಾವೃತಗೊಂಡ ತಟದ ಪ್ರದೇಶಗಳು:
ನದಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ತಟದಲ್ಲಿರುವ ಪ್ರವಾಸಿ ಉದ್ಯಾನವನ ಹಾಗೂ ಸುತ್ತಮುತ್ತಲಿನ ಕೃಷಿ ಗದ್ದೆಗಳಿಗೆ ನೀರು ನುಗ್ಗಿದೆ. ನದಿ ಪಾತ್ರದ ನಿವಾಸಿಗಳು ಮತ್ತು ರೈತರಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಮಡಿಕೇರಿ, ವಿರಾಜಪೇಟೆ, ಬಿರುನಾಣಿ ಭಾಗದಲ್ಲಿ ಮಳೆ ಬಿರುಸಾಗಿದ್ದರೆ ಸೋಮವಾರಪೇಟೆ ಭಾಗದಲ್ಲಿ ನಿರಂತರ ಸಾಧಾರಣ ಮಳೆ ಸುರಿಯುತ್ತಿದೆ.
-
Uncategorized11 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized14 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized13 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized15 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized14 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized13 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |




















