ಮಂಗಳೂರು
Tiger Dance: ಸೋಜಿಗದ ಸೂಜಿ ಮಲ್ಲಿಗೆ : ಊದು ಕಾರ್ಯಕ್ರಮದ ವೇಳೆ ಹುಲಿ ವೇಷ ಪಾತ್ರದಾರಿಗೆ ಇದ್ದಕ್ಕಿದ್ದಂತೆ ಆವಾಹನೆ – ಅಚ್ಚರಿ ಘಟನೆಗೆ ಸಾಕ್ಷಿಯಾದ ʼಗರುಡಗಮನ ವೃಷಭ ವಾಹನʼ ದ ವೈಲೆಂಟ್ ಶಿವ
ಆ ಸಿನಿಮಾದಲ್ಲಿ ಮಂಗಳೂರಿನ ಕಾರಣೀಕ ಪ್ರಸಿದ್ದ ಶ್ರೀ ಮಂಗಳಾದೇವಿ ದೇವಸ್ಥಾನದ ಎದುರು ಹುಲಿ ವೇಷ ತಂಡದ ಮುಖಂಡ ಕಂ ರೌಡಿಯೊಬ್ಬನ್ನು ಹತ್ಯೆ ಮಾಡಿ ಆವೇಶಭರಿತನಾಗಿ ಟೈಗರ್ ಡ್ಯಾನ್ಸ್ ಮಾಡುವ ಮನೋಜ್ನ ದೃಶ್ಯದಲ್ಲಿ ಸ್ವತ: ರಾಜ್ ಶಿಟ್ಟಿ ನಟಿಸಿದ್ದರು. ಆ ದೃಶ್ಯದಲ್ಲಿ ಹುಲಿಯೇ ಅವರ ಮೇಲೆ ಆವಾಹನೆ ಆದಂತಿತ್ತು
ಹುಲಿ ವೇಷದಾರಿಗೆ ಅವಾಹನೆಯಾದ ವೈರಲ್ ವಿಡಿಯೋ ನೋಡಿ
ತುಳುನಾಡು ದೈವ ಆರಾಧಕರ ನಾಡು. ಇಲ್ಲಿ ಮನೆಗೊಂದು ಅಥಾವ ಕನಿಷ್ಟ ಕುಟುಂಬ ಆಥಾವ ಗ್ರಾಮಕ್ಕೊಂದು ದೈವಗಳು ಕಾಣ ಸಿಗುತ್ತವೆ. ದೈವಗಳ ಪವಾಡ ಇಲ್ಲಿ ಆಗಾಗ ಕಾಣಿಸುವ ಸೋಜಿಗ. ದೇವರಿಗಿಂತಲೂ ಅರೆ ಪಾವು ಹೆಚ್ಚು ಎನಿಸುವಷ್ಟು ಇಲ್ಲಿನ ಜನರು ದೈವಗಳನ್ನು ಆರಾಧಿಸುತ್ತಾರೆ. ಕಷ್ಟಗಳು ಬಂದಾಗ ದು:ಖ ದುಮ್ಮಾನ, ದುಗುಡವನ್ನು ಹೇಳಿ ಪರಿಹಾರ ಯಾಚಿಸುತ್ತಾರೆ. ಇಷ್ಟಾರ್ಥ ಪೂರ್ಣ ಆದಾಗ ಹರಿಕೆ ತೀರಿಸಿ ಪುನೀತರಾಗುತ್ತಾರೆ.
ನೇಮ, ಕೋಲಗಳು ನಡೆಯುವಾಗ ದೈವ ನರ್ತಕರಿಗೆ, ದೈವಗಳ ಚಾಕರಿ ಮಾಡುವವರಿಗೆ ದೈವ ಆವಾಹನೆ ಆಗುವುದು ಸಹಜ ಪ್ರಕ್ರಿಯೆ. ದೈವವು ನರ್ತಕನ ಮೇಲೆ ಆವಾಹನೆಯಾದಗ ಅದು ಮೂರು ಮುಕ್ಕಾಲು ಗಳಿಗೆ ಇರುತ್ತದೆ ಎನ್ನುವುದು ಭಕ್ತರ ನಂಬಿಕೆ. ಹಲವು ಬಾರಿ ಕೋಲವನ್ನು ವೀಕ್ಷಿಸುತ್ತಿರುವ ಭಕ್ತರ ಮೈಮೇಲೂ ದೈವ ಬರುವುದಿದೆ. ಇನ್ನೂ ವೇದಿಕೆಗಳಲ್ಲಿ, ಯಕ್ಷಗಾನ ಪ್ರದರ್ಶನದ ವೇಳೆ ದೈವ ಪಾತ್ರದಾರಿಗಳ ಮೇಲೆ ದೈವ ಆವಾಹನೆ ಆದ ಹಲವು ಪ್ರಸಂಗಗಳು ನಮ್ಮ ಕಣ್ಣ ಮುಂದಿದೆ.
ಆದರೇ ಹುಲಿ ಪಾತ್ರದಾರಿಗೆ ದೈವ ಆವಾಹನೆಯಾದ ಘಟನೆ ಅತ್ಯಾರೂಪ. ಇಂತಾಹದೊಂದು ಅತ್ಯಾರೂಪದ ಘಟನೆ ಈ ಬಾರಿಯ ನವರಾತ್ರಿಯ ಸಂದರ್ಭ ಮಂಗಳೂರಿನಲ್ಲಿ ನಡೆದಿದೆ ಮತ್ತೂ ಅದಕ್ಕೆ ಕನ್ನಡ ಚಲನಚಿತ್ರದ ಪ್ರಖ್ಯಾತ ನಟ ನಿರ್ದೇಶಕ ಮಂಗಳೂರು ಮೂಲದ ರಾಜ್ ಬಿ ಶೆಟ್ಟಿ ಸಾಕ್ಷಿಯಾಗಿರುವುದು ವಿಶೇಷ. ಅವರ ಸಮ್ಮುಖವೇ ಹುಲಿ ಪಾತ್ರದಾರಿ ದೈವ ಆವಾಹನೆಯಾದ ರೀತಿ ಆವೇಶಗೊಂಡ ಘಟನೆ ನಡೆದಿದೆ. ಸುಮಾರು 30 ಸೆಕೆಂಡ್ ಗಳ ಕಾಲ ಪಾತ್ರದಾರಿ ಯುವಕ ಆವೇಶಭರಿತನಾಗಿ ನಡುಗುತ್ತಲೇ ಆರ್ಭಟಿಸಿದ ಹಾಗೂ 4 ರಿಂದ 5 ಯುವಕರು ಆತನನ್ನು ಹಿಡಿದಿಟ್ಟುಕೊಳ್ಳಲು ಕಷ್ಟ ಪಟ್ಟ ದೃಶ್ಯಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಅಪರೂಪದ ಘಟನೆ ಮಂಗಳೂರಿನ ಬೊಕ್ಕಪಟ್ನದಲ್ಲಿ ನವರಾತ್ರಿಯ ಕೊನೆ ದಿನ ನಡೆದಿದೆ. ಅಲ್ಲಿ ಶಿವ ಫ್ರೆಂಡ್ಸ್ ಎಂಬ ಹುಲಿಕುಣಿತ ತಂಡದ ವೇಷ ಹಾಕುವ ಊದು ಕಾರ್ಯಕ್ರಮ ನಡೆದಿತ್ತು. ಊದು ಅಂದರೆ ಹುಲಿ ವೇಷ ಹಾಕೋ ಮೊದಲು ನಡೆಯುವ ದೇವರ ಆರಾಧನೆ. ಈ ವೇಳೆ ಹುಲಿವೇಷ ಹಾಕಲು ತಯಾರಾಗಿದ್ದ ವೇಷಧಾರಿಗೆ ದೈವ ಆವಾಹನೆಯಾಗಿದೆ.

ಈ ಊದು ಕಾರ್ಯಕ್ರಮಕ್ಕೆ ರಾಜ್ ಬಿ ಶೆಟ್ಟಿ ವಿಶೇಷ ಆಹ್ವಾನಿತರಾಗಿದ್ದರು. ಅವರ ಸಮ್ಮುಖದಲ್ಲೇ ದೈವ ಆವಾಹನೆಯಾದ ಘಟನೆ ನಡೆದಿದೆ. ಹುಲಿವೇಷಧಾರಿಗೆ ದೈವ ಆವಾಹನೆಯಾಗಿರುವುದು ತಿಳಿದು ಹಿರಿಯರು ಪುಣ್ಯ ನೀರು ( ಪವಿತ್ರ ತೀರ್ಥ) ಪ್ರೋಕ್ಷಿಸಿ ಕೃಷಿಕನ ದೇಹವನ್ನು ಬಿಟ್ಟು ತೆರಳುವಂತೆ ದೈವದ ಬಳಿ ಪ್ರಾರ್ಥಿಸಿದ್ದಾರೆ. ಬಳಿಕ ಹುಲಿವೇಷಧಾರಿ ಸಹಜ ಸ್ಥಿತಿ ಬಂದಿದ್ದಾನೆ. ಸದ್ಯ ಈ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮೂರು ವರ್ಷಗಳ ಹಿಂದೆ ಬಿಡುಗಡೆಯಾಗಿ ಸೂಪರ್ ಹಿಟ್ ಎನಿಸಿದ ಗರುಡಗಮನ ವೃಷಭ ವಾಹನ ಚಿತ್ರವನ್ನು ರಾಜ್ ಬಿ ಶೆಟ್ಟಿ ನಟಿಸಿ ನಿರ್ದೇಶಿಸಿದ್ದು, ಅದರಲ್ಲಿ ಹುಲಿ ವೇಷ ಕುಣಿತದ ದೃಶ್ಯಗಳನ್ನು ಸುಂದರವಾಗಿ ಪೋಣಿಸಿದ್ದರು. ಆ ಸಿನಿಮಾದಲ್ಲಿ ಮಂಗಳೂರಿನ ಕಾರಣೀಕ ಪ್ರಸಿದ್ದ ಶ್ರೀ ಮಂಗಳಾದೇವಿ ದೇವಸ್ಥಾನದ ಎದುರು ಹುಲಿ ವೇಷ ತಂಡದ ಮುಖಂಡ ಕಂ ರೌಡಿಯೊಬ್ಬನ್ನು ಹತ್ಯೆ ಮಾಡಿ ಆವೇಶಭರಿತನಾಗಿ ಟೈಗರ್ ಡ್ಯಾನ್ಸ್ ಮಾಡುವ ಮನೋಜ್ನ ದೃಶ್ಯದಲ್ಲಿ ಸ್ವತ: ರಾಜ್ ಶಿಟ್ಟಿ ನಟಿಸಿದ್ದರು. ಆ ದೃಶ್ಯದಲ್ಲಿ ಹುಲಿಯೇ ಅವರ ಮೇಲೆ ಆವಾಹನೆ ಆದಂತಿತ್ತು. ಇದೀಗ ಅಂತಹುದೆ ಒಂದು ಘಟನೆಗೆ ಅವರು ಜ್ವಲಂತ ಸಾಕ್ಷಿಯಾಗಿದ್ದು ವಿಶೇಷ
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
ಮಂಗಳೂರು
Mangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಮಂಗಳೂರು, ಅ 9: ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಮಂಗಳೂರಿನ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ (Albert Rego) ಅವರು ಕಳೆದ ಜುಲೈ 19ರಂದು ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ನಡೆಸದೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದೀಗ ಕುಂಟಿಕಾನ ಸಮೀಪದ ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಹೂತು ಹಾಕಿರುವ ಅವರ ಶವವನ್ನು ಹೊರತೆಗೆದು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರ ನೆರವಿನಿಂದ ಪರಿಶೀಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಸ್ನೇಹಿತನ ದೂರಿನಿಂದ ಬಯಲಿಗೆ ಬಂದ ಅನುಮಾನ
ಆಲ್ಬರ್ಟ್ ರೇಗೋ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಅವರ ಸ್ನೇಹಿತ ಹೆರಾಲ್ಡ್ ಪಿರೇರಾ ಅವರು ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಾವಿನ ಬಗ್ಗೆ ಸ್ಥಳೀಯರಿಗೆ ಹಾಗೂ ಕುಟುಂಬದ ಇತರ ಸದಸ್ಯರಿಗೆ ಮಾಹಿತಿ ನೀಡದೆ, ಆಪ್ತರ ಮೂಲಕ ಮಗಳು ಮಾಯಾ ರೇಗೋ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಯಾ ರೇಗೋ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಆಸ್ತಿಗಾಗಿ ಕಿರುಕುಳ ನೀಡಿದ್ದ ಆರೋಪ
ಆಲ್ಬರ್ಟ್ ರೇಗೋ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಸಾಕಷ್ಟು ಆಸ್ತಿ ಸಂಪಾದಿಸಿದ್ದರು ಎನ್ನಲಾಗಿದೆ. ಅವರ ಇಬ್ಬರು ಮಕ್ಕಳು ಬೇರೆ ಬೇರೆ ಕಡೆ ನೆಲೆಸಿದ್ದರೆ, ಮಾಯಾ ರೇಗೋ ಮಾತ್ರ ಅವರೊಂದಿಗೆ ವಾಸವಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಬಲವಂತವಾಗಿ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಳ್ಳಲು ಯತ್ನಿಸಿದ್ದಾಳೆ ಎಂಬುದು ದೂರುದಾರರ ಆರೋಪ. ತನಗೆ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿರುವ ಬಗ್ಗೆ ಆಲ್ಬರ್ಟ್ ಅವರು ಸ್ನೇಹಿತರ ಬಳಿ ಹೇಳಿಕೊಂಡಿದ್ದರು. ತನಗೇನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಮಗಳ ಕಿರುಕುಳವೇ ಕಾರಣವಾಗಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದರು ಎಂದು ಹೆರಾಲ್ಡ್ ಪಿರೇರಾ ದೂರಿನಲ್ಲಿ ತಿಳಿಸಿದ್ದಾರೆ.
ಮಾದಕ ವ್ಯಸನದ ಆರೋಪವನ್ನೂ ಮಾಯಾ ರೇಗೋ ವಿರುದ್ಧ ಮಾಡಲಾಗಿದ್ದು, ಹಣ ಮತ್ತು ಆಸ್ತಿಯ ವಿಚಾರವಾಗಿ ಇತರರ ನೆರವಿನಿಂದ ತಂದೆಯನ್ನು ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕೃತ್ಯಕ್ಕೆ ಬೋಂದೆಲ್‌ನ ವೈದ್ಯರೊಬ್ಬರು ಹಾಗೂ ಪೊಲೀಸ್ ಪೇದೆಯೊಬ್ಬರು ಸಹಕರಿಸಿದ್ದಾರೆ ಎಂದೂ ಆರೋಪಿಸಲಾಗಿದೆ. ಆದರೆ, ಈ ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ.

ಅಸ್ಥಿಪಂಜರದ ಪರೀಕ್ಷೆಯಿಂದ ಸಿಗಲಿದೆಯೇ ಸುಳಿವು?
ಪ್ರಕರಣದ ತನಿಖೆಯಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, ಇದೀಗ ಸಾವಿನ ನೈಜ ಕಾರಣ ಪತ್ತೆಹಚ್ಚಲು ಹೂತು ಹಾಕಿರುವ ಶವವನ್ನು ಹೊರತೆಗೆಯುವ ನಿರ್ಧಾರ ಕೈಗೊಂಡಿದ್ದಾರೆ. ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಜ್ಞರು ಸ್ಥಳಕ್ಕೆ ಆಗಮಿಸಿ ಪ್ರಕ್ರಿಯೆಗೆ ಮುಂದಾಗಿದ್ದಾರೆ.
ಮಾಯಾ ರೇಗೋ ಹಾಗೂ ದೂರುದಾರರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ನಡೆದ ಸಾವು ಕೊಲೆ ಕೃತ್ಯವೇ? ಸಾವಿನ ಹಿಂದಿದೆಯಾ ಆಸ್ತಿ ವಿವಾದ ? ಎಂಬ ಪ್ರಶ್ನೆಗಳಿಗೆ ವಿಧಿವಿಜ್ಞಾನ ಪರೀಕ್ಷೆ ಮತ್ತು ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ. ಸದ್ಯ ಪ್ರಕರಣದ ಆರೋಪಗಳು ತನಿಖಾ ಹಂತದಲ್ಲಿದ್ದು, ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆ ನಿರ್ಣಾಯಕವಾಗಲಿವೆ.
ಅಪರಾಧ
Mangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು: ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅ.8ರಂದು ರಾತ್ರಿ ಸುಮಾರು 10 ಗಂಟೆಗೆ ಉಳ್ಳಾಲ ತಾಲೂಕಿನ ಕುಂಪಲದ ಡಿಮಾರ್ಟ್ ಸಮೀಪ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಎಂಡಿಎಂಎ, ಮೂರು ಮೊಬೈಲ್ ಫೋನ್‌ಗಳು, ಮಾದಕವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಮತ್ತು ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹1,63,84,000 ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳು:
ಅಬ್ದುಲ್ ಹಾಪೀಲ್ (25) ಮಂಗಳಪಾಡಿ, ಕಾಸರಗೋಡು
ಜಿಯಾವುಲ್ ಹಕ್ (30) ಕಸಬಾ ಬೆಂಗ್ರೆ, ಕೂಳೂರು, ಮಂಗಳೂರು
ಅಲ್ತಾಫ್ (28) ಪಾಂಡೇಶ್ವರ, ಮಂಗಳೂರು
ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಬಚ್ಚಿಟ್ಟು ಸಾಗಾಟಕ್ಕೆ ಸಂಚು
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಪಂಜಾಬ್‌ನ ಅಮೃತಸರದಿಂದ ಎಂಡಿಎಂಎ ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್‌ನ ನೀರು ಸಂಗ್ರಹಿಸುವ ಭಾಗದಲ್ಲಿ ಭದ್ರವಾಗಿ ಬಚ್ಚಿಡುತ್ತಿದ್ದರು. ಬಳಿಕ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಿ, ಇಲ್ಲಿಂದ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ.
ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಕಾರ್ಯಾಚರಣೆ ನಡೆಸಿ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ವಿರುದ್ಧ ಈ ಹಿಂದೆಯೂ ಪ್ರಕರಣ
ಬಂಧಿತ ಅಬ್ದುಲ್ ಹಾಪೀಲ್ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಜಿಯಾವುಲ್ ಹಕ್ ದುಬೈನ ರಾಸ್ ಅಲ್ ಖೈಮಾದಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಭಾರತಕ್ಕೆ ಮರಳಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಅಲ್ತಾಫ್ ವಿರುದ್ಧವೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
-
ಸ್ಥಳೀಯ7 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್7 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ7 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಅಪರಾಧ5 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸಿನೆಮಾ6 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಬಿಗ್ ನ್ಯೂಸ್6 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
-
ಮಂಗಳೂರು23 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
-
ಮಂಗಳೂರು2 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು


















