ಮಂಗಳೂರು
Tiger Fight ಬಂಟ್ವಾಳದಲ್ಲಿ ಹುಲಿ ತಂಡಗಳ ʼಕೋಳಿ ಜಗಳʼ : ಕೆಲ ವರ್ಷಗಳ ಹಿಂದೆ ಜತೆಯಾಗಿ ಹುಲಿ ಹೆಜ್ಜೆ ಹಾಕುತ್ತಿದ್ದವರ ಮಧ್ಯೆ ಗಲಾಟೆ – ಚೂರಿ ಇರಿತದಿಂದ ಮೂವರಿಗೆ ಗಾಯ
ಕೆಲ ವರ್ಷಗಳ ಹಿಂದೆ ಜೊತೆಯಾಗಿ ಹುಲಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕುತ್ತಿದ್ದ ಯುವಕರ ತಂಡ ಯಾವುದೋ ವಿಚಾರಕ್ಕೆ ಇಬ್ಬಾಗವಾಗಿದ್ದು, ಇದೀಗ ಎರಡು ತಂಡಗಳಾಗಿ ಹುಲಿ ವೇಷವನ್ನು ಹಾಕುತ್ತಿದ್ದಾರೆ.
ಬಂಟ್ವಾಳ: ಮೆಲ್ಕಾರ್ನಲ್ಲಿ ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದ ಜಗಳ, ಚೂರಿ ಇರಿತದ ಹಂತದವರೆಗೆ ಹೊಗಿದೆ. ಮೂರು ಯುವಕರ ಮೇಲೆ ಮತ್ತೊಂದು ತಂಡದ ಸದಸ್ಯರು ಅ 26ರಂದು ರಾತ್ರಿ ಇರಿದು ಗಾಯಗೊಳಿಸಿದ್ದಾರೆ. ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್, ಶಂಕರ್ ಇರಿತಕ್ಕೊಳಗಾದವರು.
ಘಟನೆಯಿಂದ ಗಾಯಗೊಂಡ ಮೂವರನ್ನು ಆರಂಭದಲ್ಲಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಓರ್ವನಿಗೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಮೂವರನ್ನು ಮಂಗಳೂರು ಎ.ಜೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕರೆದುಕೊಂಡು ಹೋಗಾಲಾಯಿತು. ಆ ಪೈಕಿ ಇಬ್ಬರು ಚಿಕಿತ್ಸೆ ಪಡೆದು ತೆರಳಿದ್ದು, ಗಂಭೀರ ಗಾಯಗೊಂಡಿರುವ ದೇವದಾಸ್ ಆಸ್ಫತ್ರೆಗೆ ದಾಖಲಾಗಿ ಒಳ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಸನ್ನ, ಶೋಧನ್ ನರಹರಿ ಪರ್ವತ ಹಾಗೂ ಪ್ರಕಾಶ್ ಯಾನೆ ಮುನ್ನ ಹಾಗೂ ಇತರರ ತಂಡ ಚೂರಿಯಿಂದ ಇರಿದಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಐಪಿಸಿ ಕಲಂ: 504, 506, 324, 323, 307, ಜೊತೆ 34 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಘಟನೆಗೆ ಕಾರಣವೇನು?:
ಕೆಲ ವರ್ಷಗಳ ಹಿಂದೆ ಜೊತೆಯಾಗಿ ಹುಲಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕುತ್ತಿದ್ದ ಯುವಕರ ತಂಡ ಯಾವುದೋ ವಿಚಾರಕ್ಕೆ ಇಬ್ಬಾಗವಾಗಿದ್ದು, ಇದೀಗ ಎರಡು ತಂಡಗಳಾಗಿ ಹುಲಿ ವೇಷವನ್ನು ಹಾಕುತ್ತಿದ್ದಾರೆ. ಬುಧವಾರ ರಾತ್ರಿ ಪಾಣೆಮಂಗಳೂರು ಶಾರದೋತ್ಸವ ಮೆರವಣಿಗೆ ವೇಳೆ ಎರಡು ತಂಡಗಳು ಹುಲಿ ಕುಣಿತ ಪ್ರದರ್ಶನ ನೀಡಿದ್ದು, ಈ ವೇಳೆ ಎರಡು ಹುಲಿ ತಂಡಗಳು ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಪರಚಾಡಿಕೊಂಡಿವೆ.
ಇದರ ಮುಂದುವರಿದ ಭಾಗವಾಗಿ ಗುರುವಾರ ರಾತ್ರಿ ಮೆಲ್ಕಾರ್ ಸೇತುವೆಯ ಬಳಿ, ವೈಭವ್ ಜ್ಯುವೆಲ್ಲರ್ ಮುಂಭಾಗ ಒಂದು ಹುಲಿ ತಂಡದ ಸದಸ್ಯರು ಬ್ಯಾನರ್ ತೆರವು ಮಾಡುತ್ತಿದ್ದ ವೇಳೆ ಇನ್ನೊಂದು ತಂಡ ಸ್ಥಳಕ್ಕೆ ಬಂದು ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ.
ದೂರಿನಲ್ಲಿ ಏನಿದೆ ?
ಆರೋಪಿ ಶೋಧನ್ ಪ್ರಕರಣದ ದೂರುದಾರ ಸಂದೀಪ್ ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಯಿಂದ ಹಲ್ಲೆ ಮಾಡಿರುತ್ತಾನೆ. ಈ ವೇಳೆ ಗಲಾಟೆ ತಡೆಯಲು ಬಂದ ಸಂದೀಪ್ ಸಹೋದರ ದೇವದಾಸನಿಗೆ ಆರೋಪಿ ಶೋಧನ ಚೂರಿಯಿಂದ ತಿವಿದಿದ್ದು, ಸಂದೀಪ್ ಗೂ ಚೂರಿಯಿಂದ ಗಾಯಗೊಳಿಸಿರುತ್ತಾನೆ. ಮತ್ತೋರ್ವ ಆರೋಪಿ ಪ್ರಸನ್ನ ಎಂಬಾತನು, ದೇವದಾಸ್ ಗೆ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ. ಸಂದೀಪ್ ಜೊತೆಗಿದ್ದ ಶಂಕರ ಎಂಬಾತನಿಗೆ ಕೂಡಾ ಆರೋಪಿ ಪ್ರಸನ್ನ ಕಲ್ಲಿನಿಂದ ಹಲ್ಲೆ ನಡೆಸಿರುತ್ತಾನೆ
ಅರೋಪಿಗಳ ಪೈಕಿ ಪ್ರಕಾಶ್ ಯಾನೆ ಮುನ್ನ ಎಂಬಾತನು ಕೂಡಾ ಹಲ್ಲೆಗೆ ಸಾಥ್ ನೀಡಿದ್ದು , ಸ್ಥಳದಲ್ಲಿದ್ದವರು ಬೊಬ್ಬೆ ಹಾಕಿದಾಗ ಆರೋಪಿಗಳು ಓಡಿ ಪರಾರಿಯಾಗಿರುತ್ತಾರೆ. ಚೂರಿ ಇರಿತದಿಂದ ತೀವ್ರವಾಗಿ ಗಾಯಗೊಂಡು ಕುಸಿದು ಬಿದ್ದ ದೇವದಾಸನಿಗೆ ಬಂಟ್ವಾಳ ಸರಕಾರಿ ಆಸ್ವತ್ರೆಗೆ ಆಸ್ವತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ವತ್ರೆಗೆ ದಾಖಲಿಸಲಾಗಿದ್ದು, ಆತನು ಮಾತನಾಡುವ ಸ್ಥಿತಿಯಲ್ಲಿ ಇರುವುದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸ್ಥಳಕ್ಕೆ ಬ೦ಟ್ವಾಳ ನಗರ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು
D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು
Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.
ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು
- ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
- ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
- ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
ಮಂಗಳೂರು
Raghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.
“ಬಿಜೆಪಿಯವರು ಕರೆಯುತ್ತಾರೆ ಎಂದು ಕಾಯುತ್ತಿದ್ದೇನೆ. ಬಿಜೆಪಿ ಸೇರುವ ಬಗ್ಗೆಯೂ ಯೋಚಿಸಬಹುದು. ಆದರೆ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.
ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದು, ಬಿಜೆಪಿಯಲ್ಲಿ ಯುವ ಮೋರ್ಚಾ ಜಿಲ್ಲಾ ಘಟಕ ಹಾಗೂ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿದ್ದೇನೆ. ಹೀಗಿರುವಾಗ ಏಕಾಏಕಿ ಪಕ್ಷ ಬದಲಿಸುವ ನಿರ್ಧಾರ ಕೈಗೊಳ್ಳಲು ನನ್ನ ಮನಸ್ಸು ಒಪ್ಪುತ್ತಿಲ್ಲ. ನನ್ನ ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ತಿಳಿಸಿದರು.
ಕಳೆದ ಚುನಾವಣೆಯ ಸಂದರ್ಭ ತಮಗೆ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದ ರಘುಪತಿ ಭಟ್, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ತಪ್ಪಿದ್ದಕ್ಕಿಂತಲೂ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಹೇಳಿ, ಕೊನೆಗೆ ಅವಕಾಶ ನೀಡದಿರುವುದು ನೋವು ತಂದಿದೆ ಎಂದರು.
ತಮ್ಮದೇ ಪಕ್ಷದ ಕೆಲವು ಶಾಸಕರಿಂದ ವೈಯಕ್ತಿಕ ದಬ್ಬಾಳಿಕೆ ಎದುರಿಸಬೇಕಾಯಿತು ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ಸಂಘದ ಹಿರಿಯರು ಹಾಗೂ ಬಿಜೆಪಿಯ ನಾಯಕರು ತಮ್ಮೊಂದಿಗೆ ಮಾತನಾಡದಿರುವುದು ಬೇಸರ ತಂದಿದೆ ಎಂದು ಹೇಳಿದರು.
“ನನ್ನ ಹತ್ತಿರದ ಕ್ಷೇತ್ರಗಳ ಮಾಜಿ ಶಾಸಕರನ್ನು ಗೌರವದಿಂದ ಕಾಣಲಾಗುತ್ತದೆ. ನನಗೆ ವಿಶೇಷ ಗೌರವ ಬೇಡ. ಕನಿಷ್ಠ ಬಹುವಚನದಲ್ಲಿ ಮಾತನಾಡಿದ್ದರೂ ಸಾಕಿತ್ತು. ಈ ಎಲ್ಲ ಘಟನೆಗಳು ಮಾನಸಿಕವಾಗಿ ನೋವುಂಟುಮಾಡಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
2028ರ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರು ನನ್ನನ್ನು ಸೋಲಿಸಿಲ್ಲ. ಪಕ್ಷವೇ ನನಗೆ ಟಿಕೆಟ್ ತಪ್ಪಿಸಿದೆ ಎಂಬ ಭಾವನೆ ಜನರಲ್ಲಿದೆ. ಜನರು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜನರು ಬೇಡ, ನೀವು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದರೆ ಮನೆಯಲ್ಲೇ ಕುಳಿತುಕೊಳ್ಳುತ್ತೇನೆ. ಜನರ ಕೆಲಸ ಮಾಡಲು ಜನಪ್ರತಿನಿಧಿಯಾಗಲೇಬೇಕೆಂದಿಲ್ಲ. ಚುನಾವಣಾ ರಾಜಕೀಯದಿಂದ ದೂರವಿದ್ದರೂ ಜನರಿಗೆ ಸಹಾಯ ಮಾಡಬಹುದು ಎಂದು ರಘುಪತಿ ಭಟ್ ಹೇಳಿದರು
-
ದಕ್ಷಿಣ ಕನ್ನಡ23 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಅಂತರ ರಾಜ್ಯ21 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಕಾರ್ಯಕ್ರಮಗಳು15 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
ಸುಳ್ಯ22 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
Uncategorized21 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ಕಾರ್ಯಕ್ರಮಗಳು15 hours agoPuttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್
-
ಕಾರ್ಯಕ್ರಮಗಳು14 hours ago‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್ನಲ್ಲಿ ʻಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ʼ ಶುಭಾರಂಭ
-
ಬಿಗ್ ನ್ಯೂಸ್22 hours agoG.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ


















