ಸುಳ್ಯ
Sullia Tragedy ಸುಳ್ಯ : ಮನೆ ಬಿಟ್ಟ ಹೋದ ತಂದೆಯ ಕೊರಗಿನಲ್ಲಿ ಬೆಂಕಿ ಹಚ್ಚಿಕೊಂಡು ಪ್ರಾಣ ಕಳಕೊಂಡ ಪುತ್ರ – ಮಗನ ಸಾವಿನ ವಾರ್ತೆ ತಿಳಿದು 3 ತಿಂಗಳ ಬಳಿಕ ಊರಿಗೆ ಬಂದ ತಂದೆ
ಸುಬ್ರಹ್ಮಣ್ಯ: ಒಣಗಿದ ಅಡಕೆ ರಾಶಿ ಮಧ್ಯೆ ಯುವಕನ ಅರೆಬೆಂದ ಮೃತದೇಹ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯ ಎಂಬವರ ಪುತ್ರ ಸೈಬಿನ್ ಮೃತರು. ಮೃತದೇಹ ಅರೆಬೆಂದ ರೀತಿಯಲ್ಲಿ ಮನೆಯ ಕೊಟ್ಟಿಗೆಯಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆಗೆ ಪತ್ತೆಯಾಗಿತ್ತು.
ಸೈಬಿನ್ ಸಿರಿಯಾಕ್ ಅವರ ಮೃತದೇಹದ ಅಂತ್ಯಸಂಸ್ಕಾರ ಇನ್ನಷ್ಟೇ ನಡೆಯಬೇಕಾಗಿದೆ. ಈ ಮಧ್ಯೆ ಮೂರು ತಿಂಗಳ ಹಿಂದೆ ಮನೆಬಿಟ್ಟು ಹೋಗಿದ್ದ ಸಿರಿಯಾಕ್ ಮ್ಯಾಥ್ಯ ಗುತ್ತಿಗಾರಿಗೆ ಬಂದಿರುವುದಾಗಿ ತಿಳಿದುಬಂದಿದೆ
ಸಿರಿಯಾಕ್ ಮಾಥ್ ಅವರು 3 ತಿಂಗಳ ಹಿಂದೆ ಮನೆಬಿಟ್ಟು ಹೋಗಿದ್ದರು. ಇದರಿಂದ ಸೈಬಿನ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆನ್ನಲಾಗಿದೆ. ತಂದೆ ಮನೆಬಿಟ್ಟು ಹೋದ ಪ್ರಕರಣದಲ್ಲಿ ತನ್ನನ್ನು ಸಮಾಜ ಅಪರಾಧಿಯಂತೆ ನೋಡುತ್ತಿರುವುದಾಗಿ ಅವರು ಕೆಲವರಲ್ಲಿ ಹೇಳಿಕೊಂಡಿದ್ದರನ್ನಲಾಗಿದ. ಸಬಿನ್ ಅವರ ಪತ್ನಿ ತಿಂಗಳ ಹಿಂದೆ ತವರು ಮನೆಗೆ ತೆರಳಿದ್ದರು. ಹೀಗಾಗಿ ಮನೆಯಲ್ಲಿ ಅವರೊಬ್ಬರೇ ಇದ್ದರು.
ಮೃತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಪೋಸ್ಟ್ ಮಾರ್ಟಂಗಾಗಿ ಸುಳ್ಯ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಲ್ಲಿಂದ ಮೃತದೇಹ ಬಂದ ಬಳಿಕ ಗುತ್ತಿಗಾರು ಚರ್ಚ್ನಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ.
ಮಗನ ಸಾವಿನ ಸುದ್ದಿ ತಿಳಿದು ಸಿರಿಯಾಕ್ ಮ್ಯಾಥ್ಯ ಅವರು ಗುತ್ತಿಗಾರಿಗೆ ಬಂದಿರುವುದಾಗಿ ಮಾಹಿತಿ ಲಭಿಸಿದೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿರಿಯಾಕ್ ಮ್ಯಾಥ್ಯ ಇದ್ದಕ್ಕಿದ್ದಂತೆ ಮನೆ ಬಿಟ್ಟು ಹೋಗಲು ಅಸಲಿ ಕಾರಣ ಏನೂ ಎಂದು ತಿಳಿದು ಬಂದಿಲ್ಲ. ಆದರೆ ತಂದೆ ಮನೆ ಬಿಟ್ಟು ಹೋದ ಬಳಿಕ ಮಗ ಖಿನ್ನತೆಗೆ ಒಳಗಾಗಿದಂತೂ ಸತ್ಯ.
ಸುಳ್ಯ
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ

ನವದೆಹಲಿ: ನಿಷೇಧಿತ ಪ್ರದೇಶವಾದ ಜಂತರ್ ಮಂತರ್ ಪ್ರವೇಶಿಸಿ, ಪೊಲೀಸ್ ಬ್ಯಾರಿಕೇಡ್ ಉಲ್ಲಂಘಿಸಿದ ಹಾಗೂ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಾಯಕರು ಮಂಗಳವಾರ ಮುಂಜಾನೆ ಜಂತರ್ ಮಂತರ್ ಬಳಿ ಪ್ರತಿಭಟನೆಗೆ ಯತ್ನಿಸಿದ್ದರು. ಈ ವೇಳೆ ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್ಗಳನ್ನು ಭೇದಿಸಿ ಒಳಪ್ರವೇಶಿಸಿದ ಅವರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿತ್ತು.
ಬಂಧಿತ ನಾಯಕರನ್ನು ಇಂದು (ಬುಧವಾರ) ವಿಶೇಷ ಕಾರ್ಯಕಾರಿ ಮ್ಯಾಜಿಸ್ಟ್ರೇಟ್ (ಎಸ್ಇಎಂ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು, ಬಳಿಕ ಅವರನ್ನು ತಿಹಾರ್ ಜೈಲಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪೊಲೀಸರ ವಿರುದ್ಧ ಸಿಜೆಪಿ ಆರೋಪ:
ಸಿಜೆಪಿ ಕಾನೂನು ಘಟಕದ ಮುಖ್ಯಸ್ಥೆ ರತ್ನಾ ಸಿಂಗ್ ಅವರು ‘ಎಕ್ಸ್’ (ಟ್ವಿಟರ್) ಮೂಲಕ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.
“ಜಂತರ್ ಮಂತರ್ ಘಟನೆಗೆ ಸಂಬಂಧಿಸಿದಂತೆ ನಮ್ಮ ನಾಯಕರಾದ ಸೌರವ್ ದಾಸ್, ಅಶುತೋಷ್ ಹಾಗೂ ಅಜಿಂಕ್ಯ ಅವರನ್ನು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ಅವರ ಮೇಲೆ ಅಕ್ರಮ ಪ್ರವೇಶ, ಬಾಂಡ್ ಉಲ್ಲಂಘನೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿದೆ. ತಡರಾತ್ರಿಯವರೆಗೂ ವಕೀಲರನ್ನು ಭೇಟಿ ಮಾಡಲು ಪೊಲೀಸರು ಅವಕಾಶ ನೀಡಿರಲಿಲ್ಲ.
ಮುಂಜಾನೆ 3 ಗಂಟೆ ಸುಮಾರಿಗೆ ಖಾಸಗಿ ವ್ಯಾನ್ ಮೂಲಕ ಅವರನ್ನು ಪಾರ್ಲಿಮೆಂಟ್ ಸ್ಟ್ರೀಟ್ ಠಾಣೆಗೆ ಕರೆತರಲಾಗಿದೆ. ಈ ಎಲ್ಲ ಕಾನೂನುಬಾಹಿರ ಕ್ರಮಗಳ ನಡುವೆಯೂ ನಮ್ಮ ನಾಯಕರ ನೈತಿಕ ಸ್ಥೈರ್ಯ ಕುಗ್ಗಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿನ್ನೆಲೆ ಏನು?
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸಿಜೆಪಿ ಹಾಗೂ ಇತರ ಕೆಲವು ಸಂಘಟನೆಗಳು ದೆಹಲಿಯಲ್ಲಿ ಪ್ರತಿಭಟನೆಗಳನ್ನು ತೀವ್ರಗೊಳಿಸಿವೆ. ಈ ಹಿನ್ನೆಲೆಯಲ್ಲಿ ರಾಜಧಾನಿಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಕಳೆದ ಅಕ್ಟೋಬರ್ 11ರಂದು ನೂತನ ಆದೇಶ ಹೊರಡಿಸಿದ್ದ ದೆಹಲಿ ಪೊಲೀಸ್ ಕಮಿಷನರ್ ಅನುರಾಗ್ ಕುಮಾರ್ ಅವರು, ಯಾವುದೇ ಧರಣಿ ಮತ್ತು ಪ್ರತಿಭಟನೆಗಳಿಗೆ ಕೇವಲ ರಾಮ್ಲೀಲಾ ಮೈದಾನ, ಬುರಾರಿ ಗ್ರೌಂಡ್ ಹಾಗೂ ಸಿಬಿಡಿ ಗ್ರೌಂಡ್ಗಳನ್ನು ಮಾತ್ರ ನಿಗದಿಪಡಿಸಿದ್ದರು. ಈ ಆದೇಶದ ಅನ್ವಯ ಜಂತರ್ ಮಂತರ್ ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಕೈಬಿಡಲಾಗಿದ್ದು, ಅಲ್ಲಿ ಜಮಾವಣೆಯನ್ನು ನಿಷೇಧಿಸಲಾಗಿದೆ. ನಿಷೇಧದ ನಡುವೆಯೂ ಪ್ರತಿಭಟನೆ ನಡೆಸಿದ್ದರಿಂದ ಈ ಬಂಧನ ಕಾರ್ಯಾಚರಣೆ ನಡೆದಿದೆ.
ನಿಧನ ವಾರ್ತೆ
Kalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
ಮೀನು ಹಿಡಿಯಲು ತೆರಳಿದ್ದ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅ.12ರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಬಾವ–ಬಾಮೈದ ಸಂಬಂಧಿಗಳಾಗಿದ್ದು, ಅವರೊಂದಿಗೆ ತೆರಳಿದ್ದ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ.
ಕಲ್ಮಡ್ಕ: ಮೀನು ಹಿಡಿಯಲು ತೆರಳಿದ್ದ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅ.12ರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಬಾವ–ಬಾಮೈದ ಸಂಬಂಧಿಗಳಾಗಿದ್ದು, ಅವರೊಂದಿಗೆ ತೆರಳಿದ್ದ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ.
ಕಲ್ಮಡ್ಕದ ಬೊಮ್ಮೆಟ್ಟಿ ನಿವಾಸಿಗಳಾದ ಬಾಬು–ಸೀತಾ ದಂಪತಿಯ ಪುತ್ರ ಭರತ್ (28) ಹಾಗೂ ಭರತ್ ಅವರ ಸಹೋದರಿ ಭವ್ಯಾ ಅವರ ಪತಿ, ಬೆಳ್ತಂಗಡಿ ತಾಲೂಕಿನ ಮುಂಗೆಲು ನಿವಾಸಿಗಳಾದ ವೀರಪ್ಪ–ಸೀತಮ್ಮ ದಂಪತಿಯ ಪುತ್ರ ರಮೇಶ್ (34) ಮೃತಪಟ್ಟವರು. ಗಾಯಗೊಂಡ ಯುವಕನನ್ನು ಅವರ ಸಂಬಂಧಿ ಸಿಂಚನ್ ಎಂದು ಗುರುತಿಸಲಾಗಿದೆ.
ಅ.12ರಂದು ರಾತ್ರಿ ಸುಮಾರು 10.30ರ ವೇಳೆಗೆ ಭರತ್, ರಮೇಶ್ ಹಾಗೂ ಸಿಂಚನ್ ಅವರು ಮನೆಯಿಂದ ಸುಮಾರು ಒಂದೂವರೆ ಕಿ.ಮೀ. ದೂರದಲ್ಲಿರುವ ತೋಡಿಗೆ ಮೀನು ಹಿಡಿಯಲು ತೆರಳಿದ್ದರು ಎನ್ನಲಾಗಿದೆ. ತೋಡಿನ ಮೇಲ್ಭಾಗದಲ್ಲಿ ತಂತಿ ಅಳವಡಿಸಿ ಅದಕ್ಕೆ ವಿದ್ಯುತ್ ಸಂಪರ್ಕ ನೀಡಲಾಗಿತ್ತು ಎಂದು ತಿಳಿದುಬಂದಿದೆ.
ಈ ತಂತಿಯನ್ನು ದಾಟುವ ವೇಳೆ ಭರತ್ ಮತ್ತು ರಮೇಶ್ ಅವರಿಗೆ ವಿದ್ಯುತ್ ಸ್ಪರ್ಶಿಸಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವರೊಂದಿಗೆ ಇದ್ದ ಸಿಂಚನ್ ಅವರಿಗೂ ವಿದ್ಯುತ್ ತಗುಲಿ ಎಸೆಯಲ್ಪಟ್ಟಿದ್ದು, ಕೈ, ಎದೆ ಹಾಗೂ ಕಾಲುಗಳಿಗೆ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ನಿಧನ ವಾರ್ತೆ
Sullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅ.12ರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸುಳ್ಯ: ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅ.12ರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನು ಬೊಮ್ಮೆಟ್ಟಿ ನಿವಾಸಿಗಳಾದ ಗಣೇಶ್ ಹಾಗೂ ಭರತ್ ಎಂದು ಗುರುತಿಸಲಾಗಿದೆ. ತಡರಾತ್ರಿ ಸಂಭವಿಸಿದ ಈ ದುರಂತದಿಂದ ಸ್ಥಳೀಯರಲ್ಲಿ ಆತಂಕ ಹಾಗೂ ಶೋಕದ ವಾತಾವರಣ ನಿರ್ಮಾಣವಾಗಿದೆ.
ವಿದ್ಯುತ್ ಶಾಕ್ ತಗುಲಲು ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
-
ದಕ್ಷಿಣ ಕನ್ನಡ23 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಅಂತರ ರಾಜ್ಯ21 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಕಾರ್ಯಕ್ರಮಗಳು15 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
ಸುಳ್ಯ22 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
Uncategorized21 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ಕಾರ್ಯಕ್ರಮಗಳು15 hours agoPuttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್
-
ಕಾರ್ಯಕ್ರಮಗಳು14 hours ago‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್ನಲ್ಲಿ ʻಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ʼ ಶುಭಾರಂಭ
-
ಬಿಗ್ ನ್ಯೂಸ್22 hours agoG.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ


















